18 ಶಾಸಕರಿಗೆ ಮಂತ್ರಿಗಿರಿ, ಸಂಭವನೀಯ ಸಚಿವರ ಪಟ್ಟಿ ಇಲ್ಲಿದೆ

|

Updated on: May 25, 2023 | 4:39 PM

ದೆಹಲಿಯಲ್ಲಿ ಕರ್ನಾಟಕ ಕಾಂಗ್ರೆಸ್ ಸರ್ಕಾರದ ಸಂಪುಟ ರಚನೆ ಕಸರತ್ತು ನಡೆಯುತ್ತಿದ್ದು, ಸಂಭವನೀಯ ಸಚಿವರ ಪಟ್ಟಿ ಟಿವಿ9ಗೆ ಲಭ್ಯವಾಗಿದೆ.

18 ಶಾಸಕರಿಗೆ ಮಂತ್ರಿಗಿರಿ, ಸಂಭವನೀಯ ಸಚಿವರ ಪಟ್ಟಿ ಇಲ್ಲಿದೆ
ಕರ್ನಾಟಕ ಸಂಭವನೀಯ ಸಚಿವರ ಪಟ್ಟಿ
Follow us on

ನವದೆಹಲಿ: ದೆಹಲಿಯಲ್ಲಿ ಕರ್ನಾಟಕ ಕಾಂಗ್ರೆಸ್ ಸರ್ಕಾರದ ಸಂಪುಟ ರಚನೆ ಕಸರತ್ತು ನಡೆಯುತ್ತಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಅವರು ಕಾಂಂಗ್ರೆಸ್ ವಾರ್​ ರೂಮ್​ನಲ್ಲಿ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ (KC Venugopal) ಜೊತೆ ಸಭೆ ನಡೆಸುತ್ತಿದ್ದಾರೆ. ಅಂತಿಮವಾಗಿ ಎಐಸಿಸಿ ಅಧ್ಯಕ್ಷ ಖರ್ಗೆ ಭೇಟಿ ಬಳಿಕ ಪಟ್ಟಿ ಫೈನಲ್​ ಆಗಮಿದೆ. ಇದಕ್ಕೂ ಮುನ್ನ ಟಿವಿ9ಗೆ ಸಂಭವನೀಯ ಸಚಿವರ ಪಟ್ಟಿ ಲಭ್ಯವಾಗಿದೆ. ಹಾಗಿದ್ದರೆ ಯಾರಿಗೆಲ್ಲ ಮಂತ್ರಿಗಿರಿ ಸಿಗುವ ಸಾಧ್ಯತೆ ಇದೆ? ಇಲ್ಲಿದೆ ಪಟ್ಟಿ:

ಈಶ್ವರ ಖಂಡ್ರೆ, ಲಕ್ಷ್ಮೀ ಹೆಬ್ಬಾಳ್ಕರ್​, ಶಿವಾನಂದ ಪಾಟೀಲ್, ಶರಣಬಸಪ್ಪ ದರ್ಶನಾಪುರ, ಬಸವರಾಜ ರಾಯರೆಡ್ಡಿ, ಡಾ.ಹೆಚ್.ಸಿ.ಮಹದೇವಪ್ಪ, ಕೆ.ವೆಂಕಟೇಶ್, ಎಸ್​ಎಸ್​ ಮಲ್ಲಿಕಾರ್ಜುನ, ಶಿವರಾಜ ತಂಗಡಗಿ, ಭೈರತಿ ಸುರೇಶ್, ಕೃಷ್ಣ ಭೈರೇಗೌಡ, ರಹೀಂ ಖಾನ್​, ಡಾ.ಅಜಯ್ ಸಿಂಗ್, ಸಿ.ಪುಟ್ಟರಂಗಶೆಟ್ಟಿ​, ಪಿ.ಎಂ.ನರೇಂದ್ರಸ್ವಾಮಿ, ಎಂ.ಸಿ.ಸುಧಾಕರ್​, ಡಿ.ಸುಧಾಕರ್, ಹೆಚ್.ಕೆ.ಪಾಟೀಲ್, ಎನ್.ಚಲುವರಾಯಸ್ವಾಮಿ, ಕೆ.ಎನ್.ರಾಜಣ್ಣ ಅಥವಾ ಬಿ.ನಾಗೇಂದ್ರ ಅವರಿಗೆ ಸಚಿವ ಸ್ಥಾನ ಸಿಗುವ ಸಾಧ್ಯತೆ ಇದ್ದು, ನಾಳೆ ಅಥವಾ ನಾಡಿದ್ದು ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆ ಇದೆ.

ಇದನ್ನೂ ಓದಿ: ದಿಲ್ಲಿಯಲ್ಲಿ ಸಚಿವ ಸಂಪುಟ ಸರ್ಕಸ್‌: ಇಂದು ಹೈಕಮಾಂಡ್ ಜೊತೆ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಫೈನಲ್ ಸಭೆ!

ಮಲ್ಲಿಕಾರ್ಜುನ ಖರ್ಗೆ ಮೇಲೆ ನಿಂತಿದೆ ಸಂಭವನೀಯ ಸಚಿವರ ಪಟ್ಟಿಯ ಭವಿಷ್ಯ

ಸಂಭವನೀಯ ಸಚಿವರ ಪಟ್ಟಿಯ ಭವಿಷ್ಯ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಮೇಲೆ ನಿಂತಿದೆ. ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ನೇತೃತ್ವದಲ್ಲಿ ನಡೆಯುತ್ತಿರುವ ಸಭೆಯಲ್ಲಿ ಸಂಭವನೀಯ ಸಚಿವರ ಪಟ್ಟಿ ಸಿದ್ಧಪಡಿಸಲಾಗಿದ್ದು, ನಂತರ ಈ ಪಟ್ಟಿ ಮಲ್ಲಿಕಾರ್ಜುನ ಖರ್ಗೆ ಅವರ ಕೈ ಸೇರಲಿದೆ. ಬಳಿಕ ಮೂರ್ನಾಲ್ಕು ಹೆಸರುಗಳು ಬದಲಾಗುವ ಸಾಧ್ಯತೆಯೂ ಇದೆ.

ಶರಣ ಪ್ರಕಾಶ್ ಪಾಟೀಲ್, ದಿನೇಶ್ ಗುಂಡೂರಾವ್, ಆರ್ ವಿ ದೇಶಪಾಂಡೆ, ಬಿಕೆ ಹರಿಪ್ರಸಾದ್ ಸಚಿವ ಸಂಪುಟಕ್ಕೆ ಸೇರ್ಪಡೆ ಬಗ್ಗೆ ಮಲ್ಲಿಕಾರ್ಜುನ ಖರ್ಗೆ ಅವರು ನಿರ್ಧಾರ ಕೈಗೊಳ್ಳಲುವ ಸಾಧ್ಯತೆ ಇದೆ. ಇಂದು ಸಂಜೆ 5 ಗಂಟೆಗೆ ಸಿದ್ದರಾಮಯ್ಯ ಡಿಕೆಶಿವಕುಮಾರ್ ಹಾಗೂ ಎಐಸಿಸಿ ಪ್ರಧಾನ ಕಾರ್ಯದರ್ಶಿಗಳು ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಲಿದ್ದಾರೆ.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ