ಡಿಕೆ ಶಿವಕುಮಾರ್​ ನಾಳೆ ಸಿಎಂ ಆಗೋದಾದ್ರೆ ಜೆಡಿಎಸ್​ನ 19 ಶಾಸಕರ ಬೆಂಬಲ: ಹೆಚ್​ಡಿ ಕುಮಾರಸ್ವಾಮಿ ಓಪನ್ ಆಫರ್​

ಜೆಡಿಎಸ್ ಕಚೇರಿಯಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ, ಡಿಸಿಎಂ ಡಿ.ಕೆ.ಶಿವಕುಮಾರ್​ ನಾಳೆ ಸಿಎಂ ಆಗುವುದಾದರೆ ಜೆಡಿಎಸ್​ನ 19 ​​ ಶಾಸಕರ ಬೆಂಬಲ ಇದೆ ಎಂದು ಹೇಳಿದ್ದಾರೆ. ಆ ಮೂಲಕ ಡಿ.ಕೆ.ಶಿವಕುಮಾರ್​ಗೆ ಹೆಚ್​ಡಿ ಕುಮಾರಸ್ವಾಮಿ ಓಪನ್ ಆಫರ್ ನೀಡಿದ್ದಾರೆ.

Follow us
| Updated By: ಗಂಗಾಧರ​ ಬ. ಸಾಬೋಜಿ

Updated on:Nov 04, 2023 | 4:06 PM

ಬೆಂಗಳೂರು, ನವೆಂಬರ್​​​​​ 04: ಡಿಸಿಎಂ ಡಿ.ಕೆ.ಶಿವಕುಮಾರ್​ ನಾಳೆ ಸಿಎಂ ಆಗುವುದಾದರೆ ಜೆಡಿಎಸ್​ನ 19 ​​ ಶಾಸಕರ ಬೆಂಬಲ ಇದೆ ಎಂದು ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ (HD Kumaraswamy) ಹೇಳಿದ್ದಾರೆ. ಜೆಡಿಎಸ್ ಕಚೇರಿಯಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಡಿ.ಕೆ.ಶಿವಕುಮಾರ್ ನಾಳೆ ಬೆಳಗ್ಗೆ ಸಿಎಂ ಆದರೆ ನಾವು ಬೆಂಬಲ ನೀಡುತ್ತೇವೆ ಎಂದು ಓಪನ್ ಆಫರ್​ ನೀಡಿದ್ದಾರೆ. ಕಾಂಗ್ರೆಸ್ ಪರಿಸ್ಥಿತಿ ನೋಡಿದರೆ ಎಷ್ಟು ಜನ ಸಿಎಂ ಆಗುತ್ತಾರೆ ಗೊತ್ತಿಲ್ಲ. ಇದನ್ನು ನೋಡಿದರೆ ಈ ಸರ್ಕಾರಕ್ಕೆ ಒಂದು ಹೆಸರು ಇಡಬಹುದು. ಟಿಸಿಎಂ, ಡಿಸಿಎಂ ಸರ್ಕಾರ ಎಂದು ಕರೆಯಬಹುದು. ಟಿಸಿಎಂ ಅಂದರೆ ಟೆಂಪ್ರವರಿ ಸಿಎಂ, ಡಿಸಿಎಂ ಅಂದ್ರೆ ಡೂಪ್ಲಿಕೇಟ್ ಸಿಎಂ ಎಂದು ಕಾಂಗ್ರೆಸ್ ಬಗ್ಗೆ ವ್ಯಂಗ್ಯವಾಡಿದ್ದಾರೆ.

ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ 

ಮೊನ್ನೆ ಸಿಎಂ ಸಿದ್ದರಾಮಯ್ಯ ಗದಗ ಜಿಲ್ಲೆಗೆ ಹೋಗಿ ಡ್ಯಾನ್ಸ್ ಮಾಡಿ ಬಂದಿದ್ದಾರೆ. ಆ ಜಿಲ್ಲೆಯಲ್ಲೂ ಬರ ಇದೆ, ಏನು ಪರಿಹಾರ ಕೊಟ್ಟು ಬಂದಿದ್ದೀರಿ ಎಂದು ವಾಗ್ದಾಳಿ ಮಾಡಿದ್ದಾರೆ. ಗ್ಯಾರಂಟಿ ಕಾರ್ಯಕ್ರಮಕ್ಕಾಗಿ ಕೇಂದ್ರದ ಯೋಜನೆ ನಿಲ್ಲಿಸಿದ್ದಾರೆ. ರಾಯಚೂರು ಜಿಲ್ಲೆಯಲ್ಲಿ ರೈತರು ಬೆಳೆದ ಭತ್ತ ಒಣಗಿ ಹೋಗಿದೆ. ಕಲಬುರಗಿ ಜಿಲ್ಲೆಯಲ್ಲಿ ತೊಗರಿ ಸಂಪೂರ್ಣ ನಾಶವಾಗಿದೆ. ಬಿಜೆಪಿ ಲೀಡರ್ ಲೆಸ್, ಜೆಡಿಎಸ್ ಪೀಪಲ್ ಲೆಸ್ ಎಂದಿದ್ದಾರೆ. ಯಾವುದು ಪೀಪಲ್ ಲೆಸ್ ಅಂತಾ ಮುಂದೆ ಎಲ್ಲವೂ ಗೊತ್ತಾಗುತ್ತೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಕಿಡಿಕಾರಿದ್ದಾರೆ.

17 ಸಾವಿರ ಕೋಟಿ ರೂ. ಬರ ಪರಿಹಾರ ಹಣಕ್ಕೆ ಮನವಿ

ಮುಂಗಾರು ‌ಕೊರತೆಯಿಂದ 60 ಲಕ್ಷ ಹೆಕ್ಟೇರ್ ಬೆಳೆಹಾನಿಯಾಗಿದೆ. ಜಿಲ್ಲಾ ಪ್ರವಾಸ ಮಾಡಿ ಸಿಎಂ, ಸಚಿವರು ಕೂಡ ವರದಿ ಕೊಟ್ಟಿದ್ದಾರೆ. ಬರಪರಿಹಾರ ಕೊಡಿಸಿ ಎಂದು ಬಿಜೆಪಿಯವರಿಗೆ ಸಿಎಂ ಹೇಳಿದ್ದಾರೆ. ಕೇಂದ್ರ ಬರ ಅಧ್ಯಯನ ತಂಡ ಕೂಡ ವರದಿ ಪಡೆದು ಹೋಗಿದೆ. 17 ಸಾವಿರ ಕೋಟಿ ರೂ. ಬರ ಪರಿಹಾರ ಹಣಕ್ಕೆ ಮನವಿ ಮಾಡಿದ್ದಾರೆ. ಇವರು‌ ಕೇಳಿದಷ್ಟು ನೆರವು ರಾಜ್ಯದಲ್ಲಿ ‌ಯಾವತ್ರೂ‌ ಬಂದಿಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಉಪಹಾರಕೂಟ ನೆಪದಲ್ಲಿ ಸಚಿವರೊಂದಿಗೆ ಸಿಎಂ, ಡಿಸಿಎಂ ಮಹತ್ವದ ಸಭೆ: ಇಲ್ಲಿದೆ ಸಭೆಯ ಇನ್​ಸೈಡ್ ಡಿಟೇಲ್ಸ್

ನಾನು ನನ್ನ ರಾಜಕೀಯ ಅನುಭವದಲ್ಲಿ ಹೇಳುವುದಾದರೆ. ಇಷ್ಟು ದೊಡ್ಡ ಮೊತ್ತದ ನೆರವನ್ನ ಯಾವ ರಾಜ್ಯಗಳು ಕೇಳಿಲ್ಲ. ಪರಿಹಾರ ಕೇಳುವುದಕ್ಕೂ ಹಲವು ನಿಯಮಗಳಿವೆ. ಅದರ ಗಂಭೀರತೆ ಸರ್ಕಾರಕ್ಕೆ ಇಲ್ಲ. ಕೇಂದ್ರ ಸರ್ಕಾರದ ವಿರುದ್ಧ ರಾಜ್ಯ ಸರ್ಕಾರ ಬೊಟ್ಟು ಮಾಡುತ್ತಿದೆ. ವಿದ್ಯುತ್ ವಿಚಾರ, ಅಕ್ಕಿ ವಿಚಾರದಲ್ಲೂ ಕೇಂದ್ರದ ಕಡೆ ಬೊಟ್ಟು ಮಾಡುತ್ತಾರೆ.

ಪದೇ ಪದೇ ಕಾಂಗ್ರೆಸ್​ನವರು ಹೇಳುತ್ತಾರೆ ನಾವು ಗುಲಾಮರಲ್ಲ ಅಂತ. ನಾವೆಲ್ಲರು ಜನರ ಗುಲಾಮರು ಅನ್ನೋದನ್ನ ಮರೆಯಬಾರದು. ರಾಜ್ಯದಲ್ಲಿ ಕಷ್ಟದ ಪರಿಸ್ಥಿತಿ ಇರುವಾಗ, ಸಿಎಂ ಆದವರು ಹೇಗೆಲ್ಲ ಮಾತನಾಡುತ್ತಾರೆ ಅನ್ನೋದನ್ನು ನಾನು ನೋಡಿದ್ದೇನೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಬಹಿರಂಗ ಹೇಳಿಕೆ ನೀಡಿ ಭವಿಷ್ಯ ಹಾಳು ಮಾಡಿಕೊಳ್ಳಬೇಡಿ: ನಾಯಕರಿಗೆ ಡಿಕೆ ಶಿವಕುಮಾರ್​ ಖಡಕ್​ ಎಚ್ಚರಿಕೆ

ಪ್ರಾರಂಭದ‌ ಹಂತದಲ್ಲಿ ಸುಮಾರು 4 ಸಾವಿರ ಕೋಟಿ ರೂ. ಕೇಂದ್ರ ಕೊಡಬೇಕು‌ ಅಂತಾ ಮನವಿ ಮಾಡಿದ್ದರು. ಮೂವರು‌ ಮಂತ್ರಿಗಳು‌ ಕೇಂದ್ರ ಸಚಿವರನ್ನ ‌ಭೇಟಿಯಾಗಲು ಹೋಗಿದ್ದರು. ಕೇಂದ್ರ ಸಚಿವರು ಸಿಗದೇ ಕಾರ್ಯದರ್ಶಿಗಳನ್ನ ಭೇಟಿಯಾಗಿದ್ದೇವೆ ಅಂದಿದಾರೆ. ಕೇಂದ್ರ ಸಚಿವರು‌ ಸಿಗ್ತಿಲ್ಲ ಅಂತಾ‌ ಹೇಳಿದಾರೆ ಎಂದರು.

ಜೆಡಿಎಸ್​​​ ಸಭೆಯಲ್ಲೂ ಸಿಎಂ ಸಿದ್ದರಾಮಯ್ಯ ಬ್ರೇಕ್​ಫಾಸ್ಟ್​ ಮೀಟಿಂಗ್ ಬಗ್ಗೆ ಚರ್ಚೆ ಆಗಿದ್ದು, ಸಭೆ ಆರಂಭ ಆಗ್ತಿದ್ದಂತೆ ಬ್ರೇಕ್​ಫಾಸ್ಟ್ ಮೀಟಿಂಗ್ ಆಯಿತಾ ಎಂದಿದ್ದು, ಹೆಚ್​.ಡಿ.ಕುಮಾರಸ್ವಾಮಿ ಮಾತಿಗೆ ಸಭೆಯಲ್ಲಿದ್ದ ಶಾಸಕರು ನಕ್ಕರು. ಇನ್ನೂ ಎಲ್ಲೆಲ್ಲಿ ಮೀಟಿಂಗ್ ಮಾಡುತ್ತಾರೆ ಮಾಡಲಿ ಎಂದಿದ್ದಾರೆ.

ಬರ ಅಧ್ಯಯನ ತಂಡ ರಚನೆ ಮಾಡಿದ ಜೆಡಿಎಸ್​

ರಾಜ್ಯದ 31 ಜಿಲ್ಲೆಗಳ ಬರ ಅಧ್ಯಯನಕ್ಕೆ 24 ತಂಡ ರಚನೆ ಮಾಡಲಾಗಿದೆ. ಮೈಸೂರಿನಲ್ಲಿ ಜಿ.ಟಿ.ದೇವೇಗೌಡ, ಸಾ.ರಾ.ಮಹೇಶ್​, ಮಹದೇವ್​, ಅಶ್ವಿನ್​ ಕುಮಾರ್​, ಮಂಜುನಾಥ್​ ನೇತೃತ್ವದಲ್ಲಿ ಬರ ಅಧ್ಯಯನ ನಡೆಸಲಿದೆ.

ಮಂಡ್ಯದಲ್ಲಿ ಟಿ.ಸಿ.ತಮಣ್ಣ, ರಮೇಶ್ ಗೌಡ, ಸುರೇಶ್​ಗೌಡ, ಡಾ.ರವೀಂದ್ರ ಶ್ರೀಕಂಠಯ್ಯ ನೇತೃತ್ವದಲ್ಲಿ ಬರ ಅಧ್ಯಯನ.

ಹಾಸನ-ಶಾಸಕರಾದ ಎ.ಮಂಜು, ಸ್ವರೂಪ್, ಸಿ.ಎನ್.ಬಾಲಕೃಣ್ಣ.

ಶಿವಮೊಗ್ಗ-ಶಾಸಕರಾದ‌ ಶಾರದ ಪಿ ನಾಯ್ಕ್, ಪ್ರಸನ್ನ ಕುಮಾರ್.

ಚಿಕ್ಕಮಗಳೂರು-ವೈಎಸ್​ವಿ ದತ್ತಾ, ಬೋಜೆಗೌಡ, ಸುಧಾಕರ್ ಶೆಟ್ಟಿ

ಬೆಂಗಳೂರು-ರಮೇಶ್​ಗೌಡ, ಮಂಜುನಾಥ್, ಶರವಣ, ಜವರಾಯಿಗೌಡ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 3:41 pm, Sat, 4 November 23

‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ
ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ