ಮುಂದಿನ ಮೂರು ತಿಂಗಳಲ್ಲಿ 2.5 ಕೋಟಿ ಭಕ್ತರಿಗೆ ರಾಮಮಂದಿರ ದರ್ಶನ: ಲೋಕಸಭೆಗೆ ರಣತಂತ್ರ ಹೆಣೆದೆ ಬಿಜೆಪಿ

ಅಯೋಧ್ಯೆಯ ರಾಮಮಂದಿರದಲ್ಲಿ ಬಾಲರಾಮನ ಪ್ರಾಣ ಪ್ರತಿಷ್ಠೆಯ ನಂತರ ಅಯೋಧ್ಯೆಗೆ ವಿಶೇಷ ರೈಲುಗಳು ವಿವಿಧ ರಾಜ್ಯಗಳಿಂದ ಸಂಚರಿಸಲಿವೆ. ಭೇಟಿ ನೀಡಿದ ಜನರು ಹಿಂತಿರುಗಿ ತಮ್ಮ ಗ್ರಾಮದಲ್ಲಿ ರಾಮಮಂದಿರದ ಬಗ್ಗೆ ಚರ್ಚಿಸುತ್ತಾರೆ. ಇದನ್ನು ವರವಾಗಿ ಮಾಡಿಕೊಳ್ಳಲು ಬಿಜೆಪಿ ತಂತ್ರ ಹೆಣೆದಿದೆ.

ಮುಂದಿನ ಮೂರು ತಿಂಗಳಲ್ಲಿ 2.5 ಕೋಟಿ ಭಕ್ತರಿಗೆ ರಾಮಮಂದಿರ ದರ್ಶನ: ಲೋಕಸಭೆಗೆ ರಣತಂತ್ರ ಹೆಣೆದೆ ಬಿಜೆಪಿ
ಮುಂದಿನ ಮೂರು ತಿಂಗಳಲ್ಲಿ 2.5 ಕೋಟಿ ಭಕ್ತರಿಗೆ ರಾಮಮಂದಿರ ದರ್ಶನ: ಲೋಕಸಭೆಗೆ ರಣತಂತ್ರ ಹೆಣೆದೆ ಬಿಜೆಪಿ
Follow us
| Updated By: ಗಣಪತಿ ಶರ್ಮ

Updated on: Jan 02, 2024 | 11:12 AM

ನವದೆಹಲಿ, ಜನವರಿ 2: ಲೋಕಸಭಾ ಚುನಾವಣೆಯಲ್ಲಿ (Lok Sabha elections) ರಾಮಮಂದಿರ (Ayodhya Ram Mandir) ನಿರ್ಮಾಣದ ಲಾಭ ಪಡೆಯಲು ಬಿಜೆಪಿ ಸಜ್ಜಾಗಿದೆ. ಜನವರಿ 22 ರಂದು ಅಯೋಧ್ಯೆಯ ರಾಮಜನ್ಮಭೂಮಿಯಲ್ಲಿ ಬಾಲರಾಮ ಮೂರ್ತಿಯ ಪಟ್ಟಾಭಿಷೇಕ ನಡೆಯಲಿದೆ. ಬಾಲರಾಮನ ಪ್ರಾಣ ಪ್ರತಿಷ್ಠಾಪನೆಯ ಬಳಿಕ ಏಪ್ರಿಲ್ ತಿಂಗಳೊಳಗೆ ದೇಶಾದ್ಯಂತ 2.5 ಕೋಟಿ ಜನರಿಗೆ ದರ್ಶನ ಸೌಲಭ್ಯಗಳನ್ನು ಒದಗಿಸಲು ಬಿಜೆಪಿ ಯೋಜಿಸಿದೆ.

ವಿಶ್ವ ಹಿಂದೂ ಪರಿಷತ್ ಮತ್ತು ರಾಷ್ಟ್ರೀಯ ಸ್ವಯಂಸೇವಕ ಸಂಘದ ಅಕ್ಷತ ಆಹ್ವಾನ ಕಾರ್ಯಕ್ರಮದಡಿ 10 ಕೋಟಿ ಜನರೊಂದಿಗೆ ನೇರವಾಗಿ ಸಂವಹನ ನಡೆಸಲು ಪಕ್ಷವು ಯೋಜಿಸಿದೆ. ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಮತ್ತು ಗೃಹ ಸಚಿವ ಅಮಿತ್ ಶಾ ಇಂದು ಮ್ಯಾರಥಾನ್ ಸಭೆ ನಡೆಸಿ ಈ ನಿಟ್ಟಿನಲ್ಲಿ ವಿವರವಾದ ರೂಪುರೇಷೆ ಸಿದ್ಧಪಡಿಸಲಿದ್ದಾರೆ.

ಇಂದು ನಡೆಯುವ ಸಭೆಯಲ್ಲಿ ದೇಶದ ಎಲ್ಲ ರಾಜ್ಯಗಳಿಂದ ಸಂಘಪರಿವಾರದ ನಾಯಕರು ಹಾಗೂ ವಿಹೆಚ್​​​ಪಿ ನಾಯಕರು ಭಾಗವಹಿಸಲಿದ್ದಾರೆ‌.‌ ಸಭೆಯಲ್ಲಿ ವಿಹೆಚ್​​​ಪಿ ಮತ್ತು ಆರ್​​ಎಸ್​​ಎಸ್​​ನ ಕಾರ್ಯಕ್ರಮಗಳನ್ನು ಯಶಸ್ವಿಗೊಳಿಸಲು ರೂಪುರೇಷೆ ಸಿದ್ಧಗೊಳ್ಳಲಿದೆ. ಪ್ರಾಣ ಪ್ರತಿಷ್ಠೆಯ ದಿನದಂದು ಇಡೀ ದೇಶವೇ ಸಂತಸ ಪಡುವಂತೆ ಮಾಡಲು ಕಾರ್ಯಕ್ರಮ ರೂಪಿಸಲಿದ್ದಾರೆ. ರಾಮಮಂದಿರ ಆಂದೋಲನದಲ್ಲಿ ಪ್ರತಿಪಕ್ಷಗಳ ಋಣಾತ್ಮಕ ಪಾತ್ರವನ್ನು ಹೆಚ್ಚು ಪ್ರಚಾರ ಮಾಡುವ ಬಗ್ಗೆಯೂ ಚರ್ಚೆ ನಡೆಯಲಿದೆ.

ಪ್ರತಿಪಕ್ಷಗಳ ಅಡ್ಡಗಾಲಿನ ಬಗ್ಗೆ ಕಿರುಪುಸ್ತಕ ಸಿದ್ಧ

ಈ ನಿಟ್ಟಿನಲ್ಲಿ ಬಿಜೆಪಿ ಕಿರುಪುಸ್ತಕವನ್ನು ಸಿದ್ಧಪಡಿಸಿದೆ. ಇದರಲ್ಲಿ ರಾಮಮಂದಿರ ನಿರ್ಮಾಣದ ಹಾದಿಯಲ್ಲಿ ಪ್ರತಿಪಕ್ಷಗಳು ಕಾಲಕಾಲಕ್ಕೆ ಒಡ್ಡುತ್ತಿರುವ ಅಡೆತಡೆಗಳ ಬಗ್ಗೆ ವಿವರವಾಗಿ ಬರೆಯಲಾಗಿದೆ.

ರಾಮಮಂದಿರ ಉದ್ಘಾಟನೆಗೂ ಮುನ್ನವೇ ಇಡೀ ದೇಶವನ್ನು ರಾಮಮಯ ಮಾಡಬೇಕೆಂಬುದು ಬಿಜೆಪಿಯ ತಂತ್ರವಾಗಿದ್ದು ಸೋಮವಾರದಿಂದಲೇ ಆರ್​​ಎಸ್​ಎಸ್ ಮತ್ತು ವಿಎಚ್‌ಪಿ ಪೂಜಿತ್ ಅಕ್ಷತ್, ಪತ್ರಕ್ ಮತ್ತು ರಾಮಲಲ್ಲಾ ಚಿತ್ರಗಳನ್ನು ವಿತರಿಸುವ ಪ್ರಕ್ರಿಯೆಯನ್ನು ಪ್ರಾರಂಭಿಸಿವೆ. ಕನಿಷ್ಠ ಹತ್ತು ಕೋಟಿ ಜನರನ್ನು ತಲುಪುವ ಯೋಜನೆ ಇದಾಗಿದೆ. ಪ್ರಾಣ ಪ್ರತಿಷ್ಠೆಯ ನಂತರ, ದೇಶದಾದ್ಯಂತ 2.5 ಕೋಟಿ ಜನರು ಏಪ್ರಿಲ್ ತಿಂಗಳವರೆಗೆ ರಾಮ ಮಂದಿರಕ್ಕೆ ಭೇಟಿ ನೀಡಬೇಕು. ಇದರಲ್ಲಿ ಪ್ರತಿ ಲೋಕಸಭೆ ಕ್ಷೇತ್ರದಿಂದ ಕನಿಷ್ಠ ಐದು ಸಾವಿರ ಜನರು ರಾಮಮಂದಿರಕ್ಕೆ ಭೇಟಿ ನೀಡಬೇಕು ಎಂಬ ರಣತಂತ್ರ ಹೆಣೆಯಲಾಗಿದೆ.

ಇದನ್ನೂ ಓದಿ: ಅಯೋಧ್ಯೆ ರಾಮಮಂದಿರಕ್ಕೆ ಮೈಸೂರಿನ ಶಿಲ್ಪಿ ಕೆತ್ತಿದ ವಿಗ್ರಹ, ಯಾರು ಅರುಣ್ ಯೋಗಿರಾಜ್?

ಒಂದು ಲಕ್ಷ ಹಳ್ಳಿಗಳಲ್ಲಿ ಪ್ರಾಣ ಪ್ರತಿಷ್ಠಾಪನೆಯ ನೇರಪ್ರಸಾರ

ಅಯೋಧ್ಯೆಯ ರಾಮಮಂದಿರದಲ್ಲಿ ಬಾಲರಾಮನ ಪ್ರಾಣ ಪ್ರತಿಷ್ಠೆಯ ನಂತರ ಅಯೋಧ್ಯೆಗೆ ವಿಶೇಷ ರೈಲುಗಳು ವಿವಿಧ ರಾಜ್ಯಗಳಿಂದ ಸಂಚರಿಸಲಿವೆ. ಭೇಟಿ ನೀಡಿದ ಜನರು ಹಿಂತಿರುಗಿ ತಮ್ಮ ಗ್ರಾಮದಲ್ಲಿ ರಾಮಮಂದಿರದ ಬಗ್ಗೆ ಚರ್ಚಿಸುತ್ತಾರೆ. ಪ್ರಾಣ ಪ್ರತಿಷ್ಠೆಯ ದಿನದಂದು ಕನಿಷ್ಠ ಒಂದು ಲಕ್ಷ ಹಳ್ಳಿಗಳಲ್ಲಿ ಈ ಕಾರ್ಯಕ್ರಮ ನೇರ ಪ್ರಸಾರವಾಗಲಿದೆ. ಇದಲ್ಲದೆ ಐದು ಲಕ್ಷ ದೇವಾಲಯಗಳಲ್ಲಿ ಪ್ರಾಣ ಪ್ರತಿಷ್ಠಾ ಉತ್ಸವವನ್ನು ಆಚರಿಸಲು ಪ್ಲಾನ್ ಮಾಡಲಾಗಿದೆ. ಜನವರಿ 22ರ ದಿನವನ್ನು ದೀಪಾವಳಿಯ ರೀತಿ ಆಚರಿಸಲು ಪಕ್ಷ ಯೋಚಿಸಿದೆ. ರಾಮಮಂದಿರ ಉದ್ಘಾಟನೆಯ ನಂತರದ ಕಾರ್ಯಕ್ರಮಗಳು ಹೆಚ್ಚಿರುವ ಕಾರಣ, ಆರ್​ಎಸ್​ಎಸ್, ವಿಎಚ್‌ಪಿಯ ಕಾರ್ಯಕ್ರಮಗಳಿಗೆ ರಾಜ್ಯ, ಜಿಲ್ಲಾ ಮತ್ತು ಬ್ಲಾಕ್ ಮಟ್ಟದಲ್ಲಿ ಬಿಜೆಪಿ ಕಾರ್ಯಕರ್ತರು ಬೆಂಬಲ ನೀಡುವಂತೆ ಸೂಚಿಸಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ
ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ
ಮನೆಯೆದುರು ಇಟ್ಟಿದ್ದ ಚಪ್ಪಲಿಯೇ ಮಾಯ; ಈ ಕಳ್ಳನ ಕೆಲಸ ನೋಡಿ
ಮನೆಯೆದುರು ಇಟ್ಟಿದ್ದ ಚಪ್ಪಲಿಯೇ ಮಾಯ; ಈ ಕಳ್ಳನ ಕೆಲಸ ನೋಡಿ
ಜಮ್ಮುವಿನ ಕತ್ರಾದಲ್ಲಿ ಭಾರೀ ಬಸ್‌ ಬೆಂಕಿ ದುರಂತ
ಜಮ್ಮುವಿನ ಕತ್ರಾದಲ್ಲಿ ಭಾರೀ ಬಸ್‌ ಬೆಂಕಿ ದುರಂತ
ಬೆಂಗಳೂರು: ಭೂಮಿ ಪೂಜೆಗೂ ಮುನ್ನ ಜಮೀರ್ ಪ್ರಾರ್ಥನೆ ಹೇಗಿತ್ತು ನೋಡಿ
ಬೆಂಗಳೂರು: ಭೂಮಿ ಪೂಜೆಗೂ ಮುನ್ನ ಜಮೀರ್ ಪ್ರಾರ್ಥನೆ ಹೇಗಿತ್ತು ನೋಡಿ
ಕೀ ವಿಚಾರಕ್ಕೆ ಸ್ವರ್ಗದ ಮಂದಿ ಜತೆ ನರಕದವರ ಕಿರಿಕ್; ದೊಡ್ಡ ಜಗಳದ ಮುನ್ಸೂಚನೆ
ಕೀ ವಿಚಾರಕ್ಕೆ ಸ್ವರ್ಗದ ಮಂದಿ ಜತೆ ನರಕದವರ ಕಿರಿಕ್; ದೊಡ್ಡ ಜಗಳದ ಮುನ್ಸೂಚನೆ