ಮೂವರನ್ನು ಡಿಸಿಎಂ ಮಾಡುವ ಕೆಎನ್​ ರಾಜಣ್ಣ ಹೇಳಿಕೆಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ಹೀಗಿದೆ

ಮೂರು ಜನರನ್ನು ಉಪಮುಖ್ಯಮಂತ್ರಿ ಮಾಡುವ ವಿಚಾರವಾಗಿ ಮುಖ್ಯಮಂತ್ರಿಗಳೇ ಉತ್ತರ ಕೊಡುತ್ತಾರೆ. ಮುಖ್ಯಮಂತ್ರಿಗಳ ಕೆಳಗೆ ಕೆಲಸ ಮಾಡುತ್ತಿದ್ದೇವೆ. ಅವರೇ ಉತ್ತರ ಕೊಡಬೇಕು. ಮೂರು ಉಪಮುಖ್ಯಮಂತ್ರಿ ಸ್ಥಾನಗಳ ಬಗ್ಗೆ ಅವರನ್ನೇ ಕೇಳಬೇಕು ಎಂದು ಡಿಸಿಎಂ ಡಿಕೆ ಶಿವಕುಮಾರ್​ ಜಾರಿಕೊಂಡರು.

ಮೂವರನ್ನು ಡಿಸಿಎಂ ಮಾಡುವ ಕೆಎನ್​ ರಾಜಣ್ಣ ಹೇಳಿಕೆಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ಹೀಗಿದೆ
ಡಿಕೆ ಶಿವಕುಮಾರ್
Follow us
| Updated By: ವಿವೇಕ ಬಿರಾದಾರ

Updated on: Sep 18, 2023 | 1:50 PM

ಬೆಂಗಳೂರು ಸೆ.18: ಲೋಕಸಭೆ ಚುನಾವಣೆ (Loksabha Election) ಸಂಬಂಧ ಎಸ್ಸಿ, ಅಲ್ಪಸಂಖ್ಯಾ ಮತ್ತು ವೀರಶೈವ ಲಿಂಗಾಯತ ಸಮುದಾಯಗಳ ಓರ್ವ ಮುಖಂಡನನ್ನು ಉಪಮುಖ್ಯಮಂತ್ರಿ (DCM) ಮಾಡಬೇಕೆಂಬ ಸಹಕಾರ ಸಚಿವ ಕೆ.ಎನ್​ ರಾಜಣ್ಣ (KN Rajanna) ಆಗ್ರಹ ಬಹಳ ಸಂತೋಷ ತಂದಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ (DK Shivakumar)​ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಎಲ್ಲರ ಮನಸ್ಸಿಗೆ ಸಂತೋಷವಾಗಬೇಕು. ಮುಖ್ಯಮಂತ್ರಿಗಳೇ ಇದಕ್ಕೆ ಉತ್ತರ ಕೊಡುತ್ತಾರೆ. ಮುಖ್ಯಮಂತ್ರಿಗಳ ಕೆಳಗೆ ಕೆಲಸ ಮಾಡುತ್ತಿದ್ದೇವೆ. ಅವರೇ ಉತ್ತರ ಕೊಡಬೇಕು. ಮೂರು ಉಪಮುಖ್ಯಮಂತ್ರಿ ಸ್ಥಾನಗಳ ಬಗ್ಗೆ ಅವರನ್ನೇ ಕೇಳಬೇಕು ಎಂದು ಜಾರಿಕೊಂಡರು.

ತಮಿಳುನಾಡಿಗೆ ಕಾವೇರಿ ನೀರು ಬಿಡುವ ವಿಚಾರವಾಗಿ ಮಾತನಾಡಿದ ಅವರು ಸಂಸತ್​ ಅಧಿವೇಶನದ ವೇಳೆ ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಲು ಚಿಂತಿಸಲಾಗಿದೆ. ಪ್ರಧಾನಿ ಅವರ ಬಳಿ ಸರ್ವಪಕ್ಷ ನಿಯೋಗ ಕರೆದುಕೊಂಡು ಹೋಗಬೇಕು. ಆದರೆ ಪ್ರಧಾನಿ ಮೋದಿಯವರು ಇನ್ನೂ ಭೇಟಿಗೆ ಅವಕಾಶ ಕೊಟ್ಟಿಲ್ಲ. ಕಾವೇರಿ ನೀರಿನ ಬಗ್ಗೆ ನ್ಯಾಯಾಲಯಕ್ಕೆ ವಾಸ್ತವಾಂಶ ತಿಳಿಸುತ್ತಿದ್ದೇವೆ ಎಂದು ತಿಳಿಸಿದರು.

ಇದನ್ನೂ ಓದಿ: ಪರಿಶಿಷ್ಟ ಜಾತಿ, ಅಲ್ಪಸಂಖ್ಯಾತ ಹಾಗೂ ವೀರಶೈವ 3 ಸಮುದಾಯದವರನ್ನು ಡಿಸಿಎಂ ಮಾಡಿ: ಸಚಿವ ಕೆಎನ್ ರಾಜಣ್ಣ

ಬೆಂಗಳೂರಲ್ಲಿ ಈ ಹಿಂದಿನಿಂದಲೂ ಬಹಳ ಸಮಸ್ಯೆ ಬಹಳ ಇದೆ. ಸಮಸ್ಯೆ ಬಗ್ಗೆ ಯಾರನ್ನೂ ದೋಷಿಸಲ್ಲ. ಬೆಂಗಳೂರಿನ ಕಸದ ಸಮಸ್ಯೆಗೆ ಪರಿಹಾರ ಬೇಕಿದೆ. ಯಶವಂತಪುರ ಮಧ್ಯ ಭಾಗದಲ್ಲಿ ಈಗ ಕಸದ ಸಮಸ್ಯೆ ಹೆಚ್ಚಿದೆ. ಕೃಷ್ಣಬೈರೇಗೌಡ ಕ್ಷೇತ್ರ ಮಹದೇವಪುರದಲ್ಲೂ ಸಮಸ್ಯೆ ಇದೆ. ಅದಕ್ಕೆ ಪರಿಹಾರ ತರಲು ಹೈದರಾಬಾದ್​ನಲ್ಲಿರು ವೇಸ್ಟ್ ಮ್ಯಾನೇಜ್ಮೆಂಟ್ ನೋಡಲು ಹೋಗಿದ್ದೆ. ಕಸ ಸುಡುವವರೆಗೂ ಪರಿಹಾರ ಇಲ್ಲ ಎಂದು ಹೇಳಿದರು.

ಕಾಂಗ್ರೆಸ್​​ನಲ್ಲಿ ಒಳ ಬಣದ ಬಗ್ಗೆ ಮಾತನಾಡಿದ ಅವರು ಬಣ ನಿಮ್ಮ ಹತ್ತಿರ ಇರಬೇಕು. ನಮ್ಮ ಹತ್ತಿರ ಯಾವುದೇ ಬಣ ಇಲ್ಲ. ಯಾರಿಗೊ ತಲೆಕೆಟ್ಟಿರಬೇಕು. ಯಾವುದೇ ಬಣಕ್ಕೆ ಬೆಂಬಲ ನಾನು ಕೊಟ್ಟಿಲ್ಲ. ನಾನು ಬಣದ ರಾಜಕೀಯ ಮಾಡಲ್ಲ. ಹಾಗೇನಾದರೂ ಬಣ ಮಾಡುವುದಿದ್ದರೇ ಈ ಹಿಂದೆಯೇ ಮಾಡುತ್ತಿದ್ದೆ. ಎಸ್. ಎಂ. ಕೃಷ್ಣ, ಬಂಗಾರಪ್ಪ ಅವರ ಕಾಲದಲ್ಲೇ ಬಣ ಮಾಡುತ್ತಿದ್ದೆ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ತಾಜಾ ಸುದ್ದಿ
MLC 2024: ಅದ್ಭುತ... ಅತ್ಯದ್ಭುತ ಕ್ಯಾಚ್ ಹಿಡಿದ ಕೋರಿ ಅ್ಯಂಡರ್ಸನ್
MLC 2024: ಅದ್ಭುತ... ಅತ್ಯದ್ಭುತ ಕ್ಯಾಚ್ ಹಿಡಿದ ಕೋರಿ ಅ್ಯಂಡರ್ಸನ್
ಜಿಯೋ ಏರ್​ಫೈಬರ್ ಗ್ರಾಹಕರಿಗೆ ಶೇ 30 ಡಿಸ್ಕೌಂಟ್ ಆಫರ್
ಜಿಯೋ ಏರ್​ಫೈಬರ್ ಗ್ರಾಹಕರಿಗೆ ಶೇ 30 ಡಿಸ್ಕೌಂಟ್ ಆಫರ್
ಮೊದಲ ಮಳೆ,ಕತ್ತೆಗಳಿಗೆ ಗುಲಾಬ್​​​ ಜಾಮೂನು ತಿನಿಸಿ ಸಂಭ್ರಮಿಸಿದ ಗ್ರಾಮಸ್ಥರು
ಮೊದಲ ಮಳೆ,ಕತ್ತೆಗಳಿಗೆ ಗುಲಾಬ್​​​ ಜಾಮೂನು ತಿನಿಸಿ ಸಂಭ್ರಮಿಸಿದ ಗ್ರಾಮಸ್ಥರು
ಬೂಜು ಕುಂಬಳಕಾಯಿ ಆರೋಗ್ಯ ಪ್ರಯೋಜನಗಳು ತಿಳಿದರೆ ಇಂದಿನಿಂದ ಬಳಸುತ್ತೀರಿ!
ಬೂಜು ಕುಂಬಳಕಾಯಿ ಆರೋಗ್ಯ ಪ್ರಯೋಜನಗಳು ತಿಳಿದರೆ ಇಂದಿನಿಂದ ಬಳಸುತ್ತೀರಿ!
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್​ನಲ್ಲಿ ಗುಡ್ಡ ಕುಸಿತ
Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್​ನಲ್ಲಿ ಗುಡ್ಡ ಕುಸಿತ
‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ?
‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ?
Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ
Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ