ಹರಿಯಾಣ ಸರ್ಕಾರಕ್ಕೆ ಕೈ ಕೊಟ್ಟು ಕಾಂಗ್ರೆಸ್​ಗೆ ಬೆಂಬಲ ನೀಡಿದ ಮೂವರು ಸ್ವತಂತ್ರ ಶಾಸಕರು

|

Updated on: May 07, 2024 | 9:37 PM

ಹರಿಯಾಣದ ಮಾಜಿ ಮುಖ್ಯಮಂತ್ರಿ ಭೂಪಿಂದರ್ ಸಿಂಗ್ ಹೂಡಾ ಮತ್ತು ರಾಜ್ಯ ಕಾಂಗ್ರೆಸ್ ಮುಖ್ಯಸ್ಥ ಉದಯ್ ಭಾನ್ ಅವರ ಸಮ್ಮುಖದಲ್ಲಿ ರೋಹ್ಟಕ್‌ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮೂವರು ಶಾಸಕರಾದ ಸೋಂಬಿರ್ ಸಾಂಗ್ವಾನ್, ರಣಧೀರ್ ಗೊಲ್ಲೆನ್ ಮತ್ತು ಧರಂಪಾಲ್ ಗೊಂಡರ್ ಕಾಂಗ್ರೆಸ್​ಗೆ ತಮ್ಮ ಬೆಂಬಲ ಘೋಷಿಸಿದರು.

ಹರಿಯಾಣ ಸರ್ಕಾರಕ್ಕೆ ಕೈ ಕೊಟ್ಟು ಕಾಂಗ್ರೆಸ್​ಗೆ ಬೆಂಬಲ ನೀಡಿದ ಮೂವರು ಸ್ವತಂತ್ರ ಶಾಸಕರು
ನಯಾಬ್ ಸಿಂಗ್ ಸೈನಿ
Follow us on

ನವದೆಹಲಿ: ಹರಿಯಾಣ ಸರ್ಕಾರಕ್ಕೆ (Haryana Government) ನೀಡಿದ್ದ ಬೆಂಬಲವನ್ನು ಹಿಂಪಡೆದಿರುವ ಮೂವರು ಸ್ವತಂತ್ರ ಶಾಸಕರು (Independent MLAs) ಕಾಂಗ್ರೆಸ್ ಪಕ್ಷವನ್ನು ಸೇರುವ ಮೂಲಕ ಕಾಂಗ್ರೆಸ್​ಗೆ ತಮ್ಮ ಬೆಂಬಲ ಸೂಚಿಸಿದ್ದಾರೆ. ಹರಿಯಾಣದ ಮಾಜಿ ಮುಖ್ಯಮಂತ್ರಿ ಭೂಪಿಂದರ್ ಸಿಂಗ್ ಹೂಡಾ ಮತ್ತು ರಾಜ್ಯ ಕಾಂಗ್ರೆಸ್ ಮುಖ್ಯಸ್ಥ ಉದಯ್ ಭಾನ್ ಅವರ ಸಮ್ಮುಖದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮೂವರು ಸ್ವತಂತ್ರ ಶಾಸಕರಾದ ಸೋಂಬಿರ್ ಸಾಂಗ್ವಾನ್, ರಣಧೀರ್ ಗೊಲ್ಲೆನ್ ಮತ್ತು ಧರಂಪಾಲ್ ಗೊಂಡರ್ ಅವರು ಈ ಕುರಿತು ಘೋಷಣೆ ಮಾಡಿದರು.

ಹರಿಯಾಣದಲ್ಲಿ ನಯಾಬ್ ಸಿಂಗ್ ಸೈನಿ ಸರ್ಕಾರವನ್ನು ಬೆಂಬಲಿಸುತ್ತಿದ್ದ ಮೂವರು ಸ್ವತಂತ್ರ ಶಾಸಕರು ತಮ್ಮ ಬೆಂಬಲವನ್ನು ಹಿಂತೆಗೆದುಕೊಂಡಿದ್ದಾರೆ. ಇದೀಗ ನಡೆಯುತ್ತಿರುವ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪರ ಪ್ರಚಾರ ಮಾಡಲು ನಿರ್ಧರಿಸಿದ್ದಾರೆ.

ಇದನ್ನೂ ಓದಿ: Lok Sabha Elections: ಅಂತಿಮ ಹಂತದ ಲೋಕಸಭಾ ಚುನಾವಣೆ; ಮೇ 14ಕ್ಕೆ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ

“ನಾವು ಸರ್ಕಾರಕ್ಕೆ ನೀಡಿದ್ದ ಬೆಂಬಲವನ್ನು ಹಿಂಪಡೆಯುತ್ತಿದ್ದೇವೆ. ನಾವು ನಮ್ಮ ಬೆಂಬಲವನ್ನು ಕಾಂಗ್ರೆಸ್‌ಗೆ ನೀಡುತ್ತೇವೆ. ನಾವು ರೈತರಿಗೆ ಸಂಬಂಧಿಸಿದ ವಿವಿಧ ವಿಷಯಗಳ ಕಾರಣದಿಂದ ನಾವು ಈ ನಿರ್ಧಾರವನ್ನು ತೆಗೆದುಕೊಂಡಿದ್ದೇವೆ” ಎಂದು ಗೊಂಡರ್ ಹೇಳಿದ್ದಾರೆ.

ಸೈನಿ ಸರ್ಕಾರದಲ್ಲಿ ಸಚಿವ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಈ ಮೂವರು ಸ್ವತಂತ್ರ ಶಾಸಕರು ಅತೃಪ್ತರಾಗಿದ್ದರು ಎಂದು ಮೂಲಗಳು ತಿಳಿಸಿವೆ. ಇದರ ನಡುವೆ ಅಧಿಕಾರದಲ್ಲಿರುವ ಬಿಜೆಪಿ ಸರ್ಕಾರವು ಮ್ಯಾಜಿಕ್ ಸಂಖ್ಯೆಯನ್ನು ಕಳೆದುಕೊಂಡಿದೆ ಎಂದು ಆರೋಪಿಸಿ ಕಾಂಗ್ರೆಸ್ ಹರಿಯಾಣದಲ್ಲಿ ರಾಷ್ಟ್ರಪತಿ ಆಳ್ವಿಕೆಗೆ ಒತ್ತಾಯಿಸಿದೆ.

“90 ಸದಸ್ಯರಿರುವ ಹರಿಯಾಣ ವಿಧಾನಸಭೆಯ ಪ್ರಸ್ತುತ ಬಲವು 88 ಆಗಿದೆ. ಅದರಲ್ಲಿ ಬಿಜೆಪಿ 40 ಸದಸ್ಯರನ್ನು ಹೊಂದಿದೆ. ಬಿಜೆಪಿ ಸರ್ಕಾರವು ಮೊದಲು JJP ಶಾಸಕರು ಮತ್ತು ಸ್ವತಂತ್ರರ ಬೆಂಬಲವನ್ನು ಹೊಂದಿತ್ತು. ಆದರೆ, JJP ಸಹ ಬೆಂಬಲವನ್ನು ಹಿಂಪಡೆದಿದೆ. ಈಗ ಸ್ವತಂತ್ರರು ಸಹ ನಿರ್ಗಮಿಸುತ್ತಿದ್ದಾರೆ ಎಂದು ಉದಯ್ ಭಾನ್ ಹೇಳಿದ್ದಾರೆ.

ಇದನ್ನೂ ಓದಿ: ಲಾಲು ಪ್ರಸಾದ್ ಯಾದವ್ ನೀಡಿದ ಮುಸ್ಲಿಂ ಮೀಸಲಾತಿ ಹೇಳಿಕೆಗೆ ಪ್ರಧಾನಿ ಮೋದಿ ತಿರುಗೇಟು

ನಯಾಬ್ ಸಿಂಗ್ ಸೈನಿ ಸರ್ಕಾರವು ಈಗ ಅಲ್ಪಸಂಖ್ಯಾತ ಸರ್ಕಾರವಾಗಿದೆ. ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಉದಯ್ ಭಾನ್ ಒತ್ತಾಯಿಸಿದ್ದಾರೆ.

ಈ ಬೆಳವಣಿಗೆಯ ಬಗ್ಗೆ ಪ್ರತಿಕ್ರಿಯಿಸಿದ ನಯಾಬ್ ಸಿಂಗ್ ಸೈನಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು. ಕಾಂಗ್ರೆಸ್ ಪಕ್ಷವು ಕೆಲವರ ಆಸೆಗಳನ್ನು ಈಡೇರಿಸುತ್ತಿದೆ ಮತ್ತು ಸಾರ್ವಜನಿಕರೊಂದಿಗೆ ಅವರಿಗೆ ಯಾವುದೇ ಸಂಬಂಧವಿಲ್ಲ ಎಂದು ಹೇಳಿದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ