AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆಬ್ಬಾಳ ಕ್ಷೇತ್ರದಲ್ಲೇ 38 ಸಾವಿರ ಮತದಾರರ ಹೆಸರು ಡಿಲೀಟ್: ಶಾಸಕ ಭೈರತಿ ಸುರೇಶ್ ಸ್ಫೋಟಕ ಆರೋಪ

ಹೆಬ್ಬಾಳ ಕ್ಷೇತ್ರದ ಒಂದರಲ್ಲೇ 38 ಸಾವಿರ ಜನರ ಹೆಸರು ಡಿಲೀಟ್ ಆಗಿದ್ದು, ಇದು ಬಿಜೆಪಿ ಸರ್ಕಾರದ ಕುತಂತ್ರ ಎಂದು ಶಾಸಕ ಭೈರತಿ ಸುರೇಶ್ ಸ್ಫೋಟಕ ಆರೋಪ ಮಾಡಿದ್ದಾರೆ.

ಹೆಬ್ಬಾಳ ಕ್ಷೇತ್ರದಲ್ಲೇ 38 ಸಾವಿರ ಮತದಾರರ ಹೆಸರು ಡಿಲೀಟ್: ಶಾಸಕ ಭೈರತಿ ಸುರೇಶ್ ಸ್ಫೋಟಕ ಆರೋಪ
byrathi suresh
TV9 Web
| Updated By: ರಮೇಶ್ ಬಿ. ಜವಳಗೇರಾ|

Updated on:Nov 18, 2022 | 2:40 PM

Share

ಬೆಂಗಳೂರು: ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಅಕ್ರಮ(Voter ID Scam) ಆರೋಪ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಇದು ಕಾಂಗ್ರೆಸ್ ಹಾಗೂ ಬಿಜೆಪಿ ನಾಯಕರ ಕೆಸರೆರಚಾಟಕ್ಕೆ ಕಾರಣವಾಗಿದೆ. ಇನ್ನು ಹೆಬ್ಬಾಳ ಕ್ಷೇತ್ರದ ಒಂದರಲ್ಲೇ 38 ಸಾವಿರ ಜನರ ಹೆಸರು ಡಿಲೀಟ್ ಮಾಡಲಾಗಿದೆ ಎಂದು ಶಾಸಕ ಭೈರತಿ ಸುರೇಶ್ (byrathi suresh) ಸ್ಫೋಟಕ ಆರೋಪ ಮಾಡಿದ್ದಾರೆ.

ಬೆಂಗಳೂರಿನಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಅಕ್ರಮ ಆರೋಪ: ಬಿಬಿಎಂಪಿ ವಿಶೇಷ ಆಯುಕ್ತ ರಂಗಪ್ಪ ಹೇಳಿದ್ದಿಷ್ಟು

ಬೆಂಗಳೂರಿನಲ್ಲಿ ಈ ಬಗ್ಗೆ ಇಂದು(ನ.18) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೆಬ್ಬಾಳ ಕ್ಷೇತ್ರದಲ್ಲಿ 38 ಸಾವಿರ ಮತದಾರರ ಹೆಸರು ಡಿಲೀಟ್ ಮಾಡಲಾಗಿದೆ. ಮತ್ತೆ 33 ಸಾವಿರ ಮತದಾರರನ್ನು ಸೇರ್ಪಡೆ ಮಾಡಲಾಗಿದೆ. ಇತಿಹಾಸದಲ್ಲಿ ಇಷ್ಟೊಂದು ಡಿಲೀಟ್​ ಮತ್ತು ಸೇರ್ಪಡೆ ಆಗಿರಲಿಲ್ಲ.ಈ ನಡೆ ಚಿಲುಮೆ ಸಂಸ್ಥೆ ವಿರುದ್ಧ ಅನುಮಾನ ಹುಟ್ಟಿಸುತ್ತಿದೆ ಎಂದು ಹೇಳಿದರು.

ಅಲ್ಪಸಂಖ್ಯಾತರಿರುವ ಕ್ಷೇತ್ರಗಳಲ್ಲಿ ಅತೀ ಹೆಚ್ಚು ಹೆಸರುಗಳನ್ನು ಡಿಲೀಟ್ ಮಾಡಲಾಗಿದೆ. ಬಿಜೆಪಿ ಸರ್ಕಾರ ಅಡ್ಡದಾರಿ ಹಿಡಿಯುತ್ತಿದೆ. ಪ್ರತಿ ಬೂತ್​ನಲ್ಲೂ 150ಕ್ಕೂ ಹೆಚ್ಚು ಜನರ ಹೆಸರು ಡಿಲೀಟ್ ಮಾಡಿದ್ದಾರೆ. 30-40 ವರ್ಷಗಳಿಂದ ಅದೇ ಮನೆಯಲ್ಲಿ ವಾಸವಾಗಿದ್ದರು. 1 ಮನೆಯಲ್ಲಿ 10 ಮತದಾರರಿದ್ರೆ 8 ಜನರ ಹೆಸರು ಡಿಲೀಟ್ ಮಾಡಿದ್ದಾರೆ.

ಒಂದು ಮನೆಯಲ್ಲಿ ಕೇವಲ ಎರಡು ಮತಗಳನ್ನು ಉಳಿಸಿದ್ದಾರೆ ಎಂದು ಆರೋಪಿಸಿದರು. ಇದು ಬಿಜೆಪಿ ಸರ್ಕಾರದ ಕುತಂತ್ರ. ಚುನಾವಣೆ ಗೆಲ್ಲಲು ಅಡ್ಡದಾರಿ ಹಿಡಿದುಕೊಂಡು ಬಂದಿದ್ದಾರೆ. ನಾಳೆ ಬೆಂಗಳೂರಿನಲ್ಲಿ ಕಾಂಗ್ರೆಸ್​​ನಿಂದ ಪ್ರತಿಭಟನೆ ಮಾಡುತ್ತೇವೆ ಎಂದು ತಿಳಿಸಿದರು.

ವರದಿ ಕೇಳಿದ ಚುನಾವಣಾ ಆಯೋಗ

ಬೆಂಗಳೂರಿನಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಅಕ್ರಮ ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ ಚುನಾವಣಾ ಆಯೋಗವು ಬಿಬಿಎಂಪಿಯಿಂದ ವರದಿ ಕೇಳಿದೆ. ಚುನಾವಣಾ ಆಯೋಗದಿಂದ ಬೆಂಗಳೂರು ಜಿಲ್ಲಾ ಚುನಾವಣಾಧಿಕಾರಿಗೆ ನೋಟೀಸ್ ನೀಡಲಾಗಿದೆ. ಕಾಂಗ್ರೆಸ್ ಆರೋಪ, ಮಾಧ್ಯಮಗಳಲ್ಲಿ ಬಂದ ಸುದ್ದಿ ಆಧಾರದ ಮೇಲೆ ಚುನಾವಣಾ ಆಯೋಗ ವರದಿ ಕೇಳಿದೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 2:38 pm, Fri, 18 November 22

ಭಾರತದ ಪ್ರಧಾನಿ ಮೋದಿಯನ್ನು ತಬ್ಬಿ ಸ್ವಾಗತಿಸಿದ ಅರ್ಜೆಂಟಿನಾ ಅಧ್ಯಕ್ಷ
ಭಾರತದ ಪ್ರಧಾನಿ ಮೋದಿಯನ್ನು ತಬ್ಬಿ ಸ್ವಾಗತಿಸಿದ ಅರ್ಜೆಂಟಿನಾ ಅಧ್ಯಕ್ಷ
ಭತ್ತದ ಗಿಡ ನೆಟ್ಟು ಗಮನಸೆಳೆದ ಉತ್ತರಾಖಂಡ ಸಿಎಂ ಪುಷ್ಕರ್ ಸಿಂಗ್ ಧಾಮಿ
ಭತ್ತದ ಗಿಡ ನೆಟ್ಟು ಗಮನಸೆಳೆದ ಉತ್ತರಾಖಂಡ ಸಿಎಂ ಪುಷ್ಕರ್ ಸಿಂಗ್ ಧಾಮಿ
ಮದುವೆಯಾಗದೆ ಗರ್ಭಿಣಿ, ಭಾವನ ರಾಮಣ್ಣ ತಂದೆ ಪ್ರತಿಕ್ರಿಯೆ ಏನಿತ್ತು?
ಮದುವೆಯಾಗದೆ ಗರ್ಭಿಣಿ, ಭಾವನ ರಾಮಣ್ಣ ತಂದೆ ಪ್ರತಿಕ್ರಿಯೆ ಏನಿತ್ತು?
ಮತ್ತೊಮ್ಮೆ ಬ್ಯಾಟ್ ಕೈಬಿಟ್ಟ ರಿಷಭ್ ಪಂತ್
ಮತ್ತೊಮ್ಮೆ ಬ್ಯಾಟ್ ಕೈಬಿಟ್ಟ ರಿಷಭ್ ಪಂತ್
ಹತ್ತು ನಿಮಿಷಗಳಲ್ಲಿ ಅನುಮತಿ ತರುತ್ತೇನೆಂದವರು ಯಾಕೆ ಸುಮ್ಮನಿದ್ದಾರೆ?ಸುರೇಶ್
ಹತ್ತು ನಿಮಿಷಗಳಲ್ಲಿ ಅನುಮತಿ ತರುತ್ತೇನೆಂದವರು ಯಾಕೆ ಸುಮ್ಮನಿದ್ದಾರೆ?ಸುರೇಶ್
ನನ್ನದು ಶಿಸ್ತು ಬದ್ಧ ಬದುಕು, ಊಟದಲ್ಲಿ ಬಹಳ ಕಟ್ಟುನಿಟ್ಟು: ಭಾವನಾ
ನನ್ನದು ಶಿಸ್ತು ಬದ್ಧ ಬದುಕು, ಊಟದಲ್ಲಿ ಬಹಳ ಕಟ್ಟುನಿಟ್ಟು: ಭಾವನಾ
ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ ಕುಸಿತ
ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ ಕುಸಿತ
ಕುಮಾರಸ್ವಾಮಿ ಕುರಿತ ಪ್ರಶ್ನೆಯನ್ನು ಶಿವಕುಮಾರ್ ಅಸಡ್ಡೆ ಮಾಡಿದರು!
ಕುಮಾರಸ್ವಾಮಿ ಕುರಿತ ಪ್ರಶ್ನೆಯನ್ನು ಶಿವಕುಮಾರ್ ಅಸಡ್ಡೆ ಮಾಡಿದರು!
ವಿಡಿಯೋ: ಪೊಲೀಸರೆದುರೇ ಗಾಳಿಯಲ್ಲಿ ಗುಂಡು ಹಾರಿಸಿದ ರಮೇಶ್ ಜಾರಕಿಹೊಳಿ ಪುತ್ರ
ವಿಡಿಯೋ: ಪೊಲೀಸರೆದುರೇ ಗಾಳಿಯಲ್ಲಿ ಗುಂಡು ಹಾರಿಸಿದ ರಮೇಶ್ ಜಾರಕಿಹೊಳಿ ಪುತ್ರ
ಮದುವೆಯಾಗದೆ ತಾಯಿ ಆಗಲಿರುವ ಭಾವನ, ನಿರ್ಧಾರದ ಬಗ್ಗೆ ಮೊದಲ ಪ್ರತಿಕ್ರಿಯೆ
ಮದುವೆಯಾಗದೆ ತಾಯಿ ಆಗಲಿರುವ ಭಾವನ, ನಿರ್ಧಾರದ ಬಗ್ಗೆ ಮೊದಲ ಪ್ರತಿಕ್ರಿಯೆ