40% ಕಮಿಷನ್​​ ಆರೋಪ ಕೇಸ್​: ಬಿಜೆಪಿ, ಕಾಂಗ್ರೆಸ್​ ಸರ್ಕಾರದ ವಿರುದ್ಧ ದಾಖಲೆ ಸಲ್ಲಿಸಿದ ಕೆಂಪಣ್ಣ

| Updated By: ಗಂಗಾಧರ​ ಬ. ಸಾಬೋಜಿ

Updated on: Dec 07, 2023 | 4:36 PM

ಬಿಜೆಪಿ ಸರ್ಕಾರದ ವಿರುದ್ಧ 40% ಕಮಿಷನ್​​ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮತ್ತು ಕಾಂಗ್ರೆಸ್​ ಸರ್ಕಾರದ ವಿರುದ್ಧ 6 ಸಾವಿರ ಪುಟಗಳ ಭ್ರಷ್ಟಾಚಾರದ ದಾಖಲೆಗಳನ್ನು ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಸಲ್ಲಿಸಿದ್ದಾರೆ. ಲೋಕೋಪಯೋಗಿ ಇಲಾಖೆ ಕಚೇರಿಯಲ್ಲಿ ನಿವೃತ್ತ ನ್ಯಾ.ಹೆಚ್‌.ಎನ್.ನಾಗಮೋಹನ್ ದಾಸ್‌ ಸಮಿತಿಗೆ ಭ್ರಷ್ಟಾಚಾರದ ಆಡಿಯೋ, ವಿಡಿಯೋ ಹಾಗೂ ದಾಖಲೆಗಳ ಸಲ್ಲಿಕೆ ಮಾಡಲಾಗಿದೆ.

40% ಕಮಿಷನ್​​ ಆರೋಪ ಕೇಸ್​: ಬಿಜೆಪಿ, ಕಾಂಗ್ರೆಸ್​ ಸರ್ಕಾರದ ವಿರುದ್ಧ ದಾಖಲೆ ಸಲ್ಲಿಸಿದ ಕೆಂಪಣ್ಣ
ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ
Follow us on

ಬೆಂಗಳೂರು, ಡಿಸೆಂಬರ್​​ 07: ಬಿಜೆಪಿ ಸರ್ಕಾರದ ವಿರುದ್ಧ 40% ಕಮಿಷನ್​​ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮತ್ತು ಹಾಲಿ ಸರ್ಕಾರದ ವಿರುದ್ಧ 6 ಸಾವಿರ ಪುಟಗಳ ಭ್ರಷ್ಟಾಚಾರದ ದಾಖಲೆಯನ್ನು ನಿವೃತ್ತ ನ್ಯಾ.ಹೆಚ್‌.ಎನ್.ನಾಗಮೋಹನ್ ದಾಸ್‌ ಸಮಿತಿಗೆ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ (Kempanna) ಸಲ್ಲಿದ್ದಾರೆ. ಬಿಜೆಪಿ, ಹಾಲಿ ಸರ್ಕಾರದಲ್ಲಿ ನಡೆದ ಅವ್ಯವಹಾರಗಳ ಬಗ್ಗೆ ಲೋಕೋಪಯೋಗಿ ಇಲಾಖೆ ಕಚೇರಿಗೆ ಆಡಿಯೋ, ವಿಡಿಯೋ ಹಾಗೂ ದಾಖಲೆಗಳನ್ನು ಸಲ್ಲಿಕೆ ಮಾಡಲಾಗಿದೆ.

ಇದನ್ನೂ ಓದಿ: ಗುತ್ತಿಗೆದಾರರ 20 ಸಾವಿರ ಕೋಟಿ ರೂ. ಬಾಕಿ, 30 ದಿನದಲ್ಲಿ ಬಗೆಹರಿಸದಿದ್ದರೆ ರಾಜ್ಯಾದ್ಯಂತ ಧರಣಿ: ಕೆಂಪಣ್ಣ ಎಚ್ಚರಿಕೆ

ಹಿಂದಿನ ಬಿಜೆಪಿ ಸರ್ಕಾರದಲ್ಲಿ ನೀರಾವರಿ, ಕೃಷಿ, ಜಲಸಂಪನ್ಮೂಲ, ಆರೋಗ್ಯ ಇಲಾಖೆ ಸೇರಿ ಇತರೆ ಇಲಾಖೆಗಳ ಭ್ರಷ್ಟಾಚಾರದ ದಾಖಲೆಗಳನ್ನು ನೀಡಲಾಗಿದೆ. ಹಿರಿತನ‌ ಆಧಾರದಲ್ಲಿ ಬಾಕಿ ಬಿಲ್ ಪಾವತಿ, ಕಮಿಷನ್ ನೀಡಿದವರಿಗೆ ಮಾತ್ರ ಬಾಕಿ ಹಣ ಪಾವತಿ ಆರೋಪ ಮಾಡಲಾಗಿತ್ತು.

ಸಿದ್ದರಾಮಯ್ಯ ಸರ್ಕಾರದಲ್ಲೂ ಭ್ರಷ್ಟಾಚಾರ ನಡೆಯುತ್ತಿದೆ-ಕೆಂಪಣ್ಣ

ಗುತ್ತಿಗೆದಾರರ ಸಂಘದ ರಾಜ್ಯಾಧ್ಯಕ್ಷ ಕೆಂಪಣ್ಣ ಮಾತನಾಡಿ, ಸಿದ್ದರಾಮಯ್ಯ ಸರ್ಕಾರದಲ್ಲೂ ಭ್ರಷ್ಟಾಚಾರ ನಡೆಯುತ್ತಿದೆ ಎಂದು ಆರೋಪಿಸಿದ್ದಾರೆ. ಬಿಜೆಪಿ ಸರ್ಕಾರ, ಹಾಲಿ ಸರ್ಕಾರದ ವಿರುದ್ಧ ದಾಖಲೆಗಳನ್ನ ಸಲ್ಲಿಸಿದ್ದೇನೆ. ಎಲ್ಲಾ ಇಲಾಖೆಯ ಕಾಮಗಾರಿಗೆ ಸಂಬಂಧಿಸಿದ ದಾಖಲೆ ಸಲ್ಲಿಸಿದ್ದೇನೆ. ಎಲ್ಲಾ ಜಿಲ್ಲೆಗಳ ಕಾಮಗಾರಿ ಅಕ್ರಮದ ಬಗ್ಗೆ ಮಾಹಿತಿ ನೀಡಿದ್ದೇನೆ ಎಂದು ಹೇಳಿದ್ದಾರೆ.

ಕಾಂಗ್ರೆಸ್​ ಆಡಳಿತಕ್ಕೆ ಬಂದಿದ್ದು, ಬಾಕಿ ಇರುವ ಬಿಲ್​ ಅನ್ನು ಬಿಡುಗಡೆ ಮಾಡುವಂತೆ ಮುಖ್ಯಮಂತ್ರಿಗಳಿಗೆ ಹಲವು ಬಾರಿ ಮನವಿ ಸಲ್ಲಿಸಲಾಗಿತ್ತು. ಮನವಿಗೆ ಸರ್ಕಾರ ಕಿವಿಗೊಡದ ಹಿನ್ನೆಲೆಯಲ್ಲಿ ಗುತ್ತಿಗೆದಾರರು ಸಂಘವು ಸಿಡಿದೆದ್ದಿತ್ತು.

ನೂತನ ಕಾಂಗ್ರೆಸ್ ಸರ್ಕಾರ ಕಾಮಗಾರಿಗಳ ಬಿಲ್ ಬಿಡುಗಡೆ ಮಾಡುತ್ತಿಲ್ಲ. ಬಿಲ್ ಬಿಡುಗಡೆ ಮಾಡಲು ಕಮಿಷನ್ ಕೇಳಲಾಗುತ್ತಿದೆ ಎಂದು ಕೆಲವು ಮಂದಿ ಗುತ್ತಿಗೆದಾರರು ಆರೋಪ ಮಾಡಿದ್ದರು. ಇದು ರಾಜಕೀಯ ಸ್ವರೂಪ ಪಡೆದುಕೊಂಡಿತ್ತು.

ಇದನ್ನೂ ಓದಿ: ಡಿಕೆ ಶಿವಕುಮಾರ್ ಪರ ವಹಿಸಿದ ಸಣ್ಣ, ಮಧ್ಯಮ ಗುತ್ತಿಗೆದಾರರು! ಡಿಸಿಎಂ ಬಗ್ಗೆ ಹೇಳಿದ್ದೇನು?

ಮೊದಲಿಗೆ ಕರ್ನಾಟಕ ಬಿಜೆಪಿ ಸರ್ಕಾರದ ವಿರುದ್ಧ 40% ಕಮಿಷನ್ ಆರೋಪ ಮಾಡಿದ್ದ ಕೆಂಪಣ್ಣ, ಬಳಿಕ MLAಗಳಿಗೆ 10 ಪರ್ಸೆಂಟ್​ ಕಮಿಷನ್​ ಕೊಡಬೇಕು, ಮಂತ್ರಿ​​ಗಳಿಗೆ ಶೇಕಡಾ 5ರಷ್ಟು ಪರ್ಸೆಂಟೇಜ್​ ಕೊಡಬೇಕು ಎಂದು ಆರೋಪಿಸಿದ್ದರು. ಬಿಜೆಪಿ ಸರ್ಕಾರದಲ್ಲಿ 40% -50% ಕಮಿಷನ್​ ವಸೂಲಿ ಆಗುತ್ತಿದ್ದು, 2019ರ ನಂತರ ಸರ್ಕಾರದಲ್ಲಿ ಪರ್ಸೆಂಟೇಜ್​ ಹೆಚ್ಚಾಗಿದೆ. ಕಾಂಟ್ರಾಕ್ಟರ್​​​ಗಳಿಂದ ಹೆಜ್ಜೆ-ಹೆಜ್ಜೆಗೂ ಕಮಿಷನ್​ ವಸೂಲಿ ಆಗ್ತಿದೆ, ನಾನು ಈಗಾಗಲೇ ಪ್ರಧಾನಿ ಮೋದಿಯವರಿಗೂ ದೂರು ನೀಡಿದ್ದೇನೆ ಎಂದು ಹೇಳಿದ್ದರು.

ಕರ್ನಾಟಕದಲ್ಲಿ 1 ಲಕ್ಷ ಮಂದಿ ಕಾಂಟ್ರಾಕ್ಟರ್​​ಗಳು ಇದ್ದಾರೆ. KRIDL ಗುತ್ತಿಗೆಯಲ್ಲಿ ಕೆಲಸ ಮಾಡದೇ ಹಣ ಪಡೆಯುತ್ತಿದ್ದಾರೆ, ಏಪ್ರಿಲ್​​​ನಲ್ಲಿ 50 ಸಾವಿರ ಕಾಂಟ್ರಾಕ್ಟರ್​ಗಳು ಹೋರಾಟ ಮಾಡಿದ್ದೇವೆ. ರಸ್ತೆಗಳೂ ಕಳಪೆ ಕಾಮಗಾರಿಯಿಂದ ನಿರ್ಮಾಣ ಆಗ್ತಾ ಇವೆ, 20 ರಿಂದ 25 ಸಾವಿರ ಕೋಟಿ ರೂ. ರಾಜಕಾರಣಿಗಳ ಜೇಬು ಸೇರ್ತಿದೆ. ಭ್ರಷ್ಟಾಚಾರದ ಬಗ್ಗೆ ಯಾರೂ ಕ್ರಮ ಕೈಗೊಳ್ತಿಲ್ಲಎಂದು ಕೆಂಪಣ್ಣ ಕಿಡಿಕಾರಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 3:51 pm, Thu, 7 December 23