Gruha Jyothi Scheme: ಗೃಹಜ್ಯೋತಿ ಯೋಜನೆಗೆ ಜನರಿಂದ ಉತ್ತಮ ಪ್ರತಿಕ್ರಿಯೆ: ಮೊದಲ ದಿನವೇ 55 ಸಾವಿರ ಗ್ರಾಹಕರು ಅರ್ಜಿ ಸಲ್ಲಿಕೆ
ಕಾಂಗ್ರೆಸ್ ಸರ್ಕಾರದ 5 ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಭಾನುವಾರದಿಂದ ಆಂಭವಾಗಿದೆ. ಮೊದಲ ದಿನವೇ ರಾಜ್ಯದಲ್ಲಿ 55,000 ಅರ್ಜಿಗಳು ಸಲ್ಲಿಕೆ ಆಗಿದ್ದು ಆ ಮೂಲಕ ಜನರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರ ಚುನಾವಣೆ ವೇಳೆ ಘೋಷಿಸಿದ್ದ ಪಂಚ ಯೋಜನೆಗಳಲ್ಲಿ ಒಂದಾದ ಗೃಹಜ್ಯೋತಿ ಯೋಜನೆ (Gruha Jyothi Scheme) ಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಭಾನುವಾರದಿಂದ ಆಂಭವಾಗಿದೆ. ಬೆಸ್ಕಾಂ ಕಚೇರಿ ಮತ್ತು ಹಾಗೂ ನಾಡ ಕಚೇರಿಗಳಲ್ಲಿ ಇಂದು ಕಾರ್ಯನಿರ್ವಹಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿತ್ತು. ಹಾಗಾಗಿ ಗೃಹಜ್ಯೋತಿ ಯೋಜನೆಗೆ ಮೊದಲ ದಿನವೇ ರಾಜ್ಯದಲ್ಲಿ 55,000 ಅರ್ಜಿಗಳು ಸಲ್ಲಿಕೆ ಆಗಿದ್ದು ಆ ಮೂಲಕ ಜನರಿಂದ ಉತ್ತಮ ಪ್ರತಿಕ್ರಿಯೆ ನೀಡಿದ್ದಾರೆ ಎಂದು ರಾಜ್ಯ ಸರ್ಕಾರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.
ರಾಜ್ಯದ ಎಲ್ಲಾ ಗೃಹ ಬಳಕೆ ಗ್ರಾಹಕರಿಗೆ 200 ವರೆಗೆ ಉಚಿತ ವಿದ್ಯುತ್ ನೀಡುವ ಗೃಹ ಜ್ಯೋತಿ ಯೋಜನೆ ಯೋಜನೆ ನೋಂದಣಿಯು ಸೇವಾ ಸಿಂಧು ಪೋರ್ಟಲ್ನಲ್ಲಿ ಜೂನ್ 18 ರಿಂದ ಆರಂಭವಾಗಿದೆ. ಭಾನುವಾರ ಸಂಜೆ 6 ಗಂಟೆ ವೇಳೆಗೆ ರಾಜ್ಯದಲ್ಲಿ ಒಟ್ಟು 55000 ಗ್ರಾಹಕರು ಯೋಜನೆಗೆ ನೋಂದಾಯಿಸಿಕೊಂಡಿದ್ದಾರೆ.
ಇದನ್ನೂ ಓದಿ: Gruha Jyothi Scheme: ಗೃಹಜ್ಯೋತಿ ಯೋಜನೆ ಅಡಿ ಅರ್ಜಿ ಸಲ್ಲಿಕೆಗೆ ಆರಂಭಿಕ ವಿಘ್ನ, ಸರ್ವರ್ ಫುಲ್ ಬ್ಯುಸಿ
ನೋಂದಣಿ ಪ್ರಕ್ರಿಯೆ ರಾಜ್ಯದ ಎಲ್ಲಾ ಕರ್ನಾಟಕ ಒನ್, ಗ್ರಾಮ ಒನ್ ಹಾಗೂ ಬೆಂಗಳೂರು ಒನ್ ಕೇಂದ್ರಗಳಲ್ಲಿ ಏಕಕಾಲದಲ್ಲಿ ಆರಂಭ ಮಾಡಲಾಗಿತ್ತು. ನೋಂದಣಿಯನ್ನು ಸೇವಾ ಸಿಂಧು ಪೋರ್ಟಲ್ sevasindhugs.karnataka.gov.in ಮೂಲಕ ಮಾಡಲು ಅವಕಾಶ ಕಲ್ಪಿಸಲಾಗಿತ್ತು.
ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಗ್ರಾಹಕರು ವಿದ್ಯುತ್ ಬಿಲ್ನಲ್ಲಿರುವ ಖಾತೆ ಸಂಖ್ಯೆ, ತಮ್ಮ ಆಧಾರ್ ಸಂಖ್ಯೆ ಹಾಗೂ ಮೊಬೈಲ್ ಸಂಖ್ಯೆಯನ್ನು ನಮೂದಿಸಿ ಯೋಜನೆಗೆ ನೋಂದಣಿ ಮಾಡಿಕೊಳ್ಳಬಹುದು ಎಂದು ತಿಳಿಸಿದೆ.
ಇದನ್ನೂ ಓದಿ: ಗೃಹ ಜ್ಯೋತಿಗೆ ಅರ್ಜಿ ಸಲ್ಲಿಕೆ; ಇಂದು ಕೂಡ ಕಾರ್ಯನಿರ್ವಹಿಸಲಿವೆ ಬೆಸ್ಕಾಂ, ನಾಡಕಚೇರಿಗಳು
ಆರಂಭವಾದ ದಿನದಂದೇ ಸರ್ವರ್ ಸಮಸ್ಯೆ
ಜುಲೈ 1 ರಿಂದ 200 ಯೂನಿಟ್ವರೆಗೆ ಉಚಿತ ವಿದ್ಯುತ್ ನೀಡುವ ಗೃಹಜ್ಯೋತಿ ಗ್ಯಾರಂಟಿಯನ್ನು ಸರ್ಕಾರ ಜಾರಿ ಮಾಡಲಿದೆ. ಗೃಹಜ್ಯೋತಿ ಯೋಜನೆಯ ಲಾಭ ಪಡೆಯಲು ಇಂದಿನಿಂದಲೇ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿತ್ತು. ಆದರೆ ಅರ್ಜಿ ಸಲ್ಲಿಕೆ ಆರಂಭವಾದ ದಿನದಂದೇ ಸರ್ವರ್ ಸಮಸ್ಯೆ ಕೂಡ ಎದುರಾಗಿತ್ತು.
ಬೆಂಗಳೂರಿನ ಎಂ.ಜಿ.ರಸ್ತೆಯಲ್ಲಿರುವ ಬೆಸ್ಕಾಂ ಪ್ರಾದೇಶಿಕ ಕಚೇರಿಯಲ್ಲಿ ವೆಬ್ಸೈಟ್ ಕ್ಲೋಸ್ ಆಗಿತ್ತು. ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾದ ಬೆನ್ನಲ್ಲೇ ಸೇವಾಸಿಂಧು ಸರ್ವರ್ ಬ್ಯುಸಿ ಎಂದು ತೋರಿಸಿತ್ತು. ಇದರಿಂದ ಕಾದು ಕುಳಿತಿದ್ದ ಸಾರ್ವಜನಿಕರು ಅಧಿಕಾರಿಗಳ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 9:19 pm, Sun, 18 June 23