Gruha Jyothi Scheme: ಗೃಹಜ್ಯೋತಿ ಯೋಜನೆಗೆ ಜನರಿಂದ ಉತ್ತಮ ಪ್ರತಿಕ್ರಿಯೆ: ಮೊದಲ ದಿನವೇ 55 ಸಾವಿರ ಗ್ರಾಹಕರು ಅರ್ಜಿ ಸಲ್ಲಿಕೆ

ಕಾಂಗ್ರೆಸ್​ ಸರ್ಕಾರದ 5 ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಭಾನುವಾರದಿಂದ ಆಂಭವಾಗಿದೆ. ಮೊದಲ ದಿನವೇ ರಾಜ್ಯದಲ್ಲಿ 55,000 ಅರ್ಜಿಗಳು ಸಲ್ಲಿಕೆ ಆಗಿದ್ದು ಆ ಮೂಲಕ ಜನರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

Gruha Jyothi Scheme: ಗೃಹಜ್ಯೋತಿ ಯೋಜನೆಗೆ ಜನರಿಂದ ಉತ್ತಮ ಪ್ರತಿಕ್ರಿಯೆ: ಮೊದಲ ದಿನವೇ 55 ಸಾವಿರ ಗ್ರಾಹಕರು ಅರ್ಜಿ ಸಲ್ಲಿಕೆ
ಪ್ರಾತಿನಿಧಿಕ ಚಿತ್ರ

Updated on: Jun 18, 2023 | 9:25 PM

ಬೆಂಗಳೂರು: ರಾಜ್ಯ ಕಾಂಗ್ರೆಸ್​ ಸರ್ಕಾರ ಚುನಾವಣೆ ವೇಳೆ ಘೋಷಿಸಿದ್ದ ಪಂಚ ಯೋಜನೆಗಳಲ್ಲಿ ಒಂದಾದ ಗೃಹಜ್ಯೋತಿ ಯೋಜನೆ (Gruha Jyothi Scheme) ಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಭಾನುವಾರದಿಂದ ಆಂಭವಾಗಿದೆ. ಬೆಸ್ಕಾಂ ಕಚೇರಿ ಮತ್ತು ಹಾಗೂ ನಾಡ ಕಚೇರಿಗಳಲ್ಲಿ ಇಂದು ಕಾರ್ಯನಿರ್ವಹಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿತ್ತು. ಹಾಗಾಗಿ ಗೃಹಜ್ಯೋತಿ ಯೋಜನೆಗೆ ಮೊದಲ ದಿನವೇ ರಾಜ್ಯದಲ್ಲಿ 55,000 ಅರ್ಜಿಗಳು ಸಲ್ಲಿಕೆ ಆಗಿದ್ದು ಆ ಮೂಲಕ ಜನರಿಂದ ಉತ್ತಮ ಪ್ರತಿಕ್ರಿಯೆ ನೀಡಿದ್ದಾರೆ ಎಂದು ರಾಜ್ಯ ಸರ್ಕಾರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

ರಾಜ್ಯದ ಎಲ್ಲಾ ಗೃಹ ಬಳಕೆ ಗ್ರಾಹಕರಿಗೆ 200 ವರೆಗೆ ಉಚಿತ ವಿದ್ಯುತ್ ನೀಡುವ ಗೃಹ ಜ್ಯೋತಿ ಯೋಜನೆ
ಯೋಜನೆ ನೋಂದಣಿಯು ಸೇವಾ ಸಿಂಧು ಪೋರ್ಟಲ್​ನಲ್ಲಿ ಜೂನ್‌ 18 ರಿಂದ ಆರಂಭವಾಗಿದೆ. ಭಾನುವಾರ ಸಂಜೆ 6 ಗಂಟೆ ವೇಳೆಗೆ ರಾಜ್ಯದಲ್ಲಿ ಒಟ್ಟು 55000 ಗ್ರಾಹಕರು ಯೋಜನೆಗೆ ನೋಂದಾಯಿಸಿಕೊಂಡಿದ್ದಾರೆ.

ಇದನ್ನೂ ಓದಿ: Gruha Jyothi Scheme: ಗೃಹಜ್ಯೋತಿ ಯೋಜನೆ ಅಡಿ ಅರ್ಜಿ ಸಲ್ಲಿಕೆಗೆ ಆರಂಭಿಕ ವಿಘ್ನ, ಸರ್ವರ್ ಫುಲ್ ಬ್ಯುಸಿ

ನೋಂದಣಿ ಪ್ರಕ್ರಿಯೆ ರಾಜ್ಯದ ಎಲ್ಲಾ ಕರ್ನಾಟಕ ಒನ್, ಗ್ರಾಮ ಒನ್ ಹಾಗೂ ಬೆಂಗಳೂರು ಒನ್ ಕೇಂದ್ರಗಳಲ್ಲಿ ಏಕಕಾಲದಲ್ಲಿ ಆರಂಭ ಮಾಡಲಾಗಿತ್ತು. ನೋಂದಣಿಯನ್ನು ಸೇವಾ ಸಿಂಧು ಪೋರ್ಟಲ್ sevasindhugs.karnataka.gov.in ಮೂಲಕ ಮಾಡಲು ಅವಕಾಶ ಕಲ್ಪಿಸಲಾಗಿತ್ತು.

ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಗ್ರಾಹಕರು ವಿದ್ಯುತ್ ಬಿಲ್​ನಲ್ಲಿರುವ ಖಾತೆ ಸಂಖ್ಯೆ, ತಮ್ಮ ಆಧಾರ್ ಸಂಖ್ಯೆ ಹಾಗೂ ಮೊಬೈಲ್ ಸಂಖ್ಯೆಯನ್ನು ನಮೂದಿಸಿ ಯೋಜನೆಗೆ ನೋಂದಣಿ ಮಾಡಿಕೊಳ್ಳಬಹುದು ಎಂದು ತಿಳಿಸಿದೆ.

ಇದನ್ನೂ ಓದಿ: ಗೃಹ ಜ್ಯೋತಿಗೆ ಅರ್ಜಿ ಸಲ್ಲಿಕೆ; ಇಂದು ಕೂಡ ಕಾರ್ಯನಿರ್ವಹಿಸಲಿವೆ ಬೆಸ್ಕಾಂ, ನಾಡಕಚೇರಿಗಳು

ಆರಂಭವಾದ ದಿನದಂದೇ ಸರ್ವರ್ ಸಮಸ್ಯೆ

ಜುಲೈ 1 ರಿಂದ 200 ಯೂನಿಟ್​ವರೆಗೆ ಉಚಿತ ವಿದ್ಯುತ್ ನೀಡುವ ಗೃಹಜ್ಯೋತಿ ಗ್ಯಾರಂಟಿಯನ್ನು ಸರ್ಕಾರ ಜಾರಿ ಮಾಡಲಿದೆ. ಗೃಹಜ್ಯೋತಿ ಯೋಜನೆಯ ಲಾಭ ಪಡೆಯಲು ಇಂದಿನಿಂದಲೇ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿತ್ತು. ಆದರೆ ಅರ್ಜಿ ಸಲ್ಲಿಕೆ ಆರಂಭವಾದ ದಿನದಂದೇ ಸರ್ವರ್ ಸಮಸ್ಯೆ ಕೂಡ ಎದುರಾಗಿತ್ತು.

ಬೆಂಗಳೂರಿನ ಎಂ.ಜಿ.ರಸ್ತೆಯಲ್ಲಿರುವ ಬೆಸ್ಕಾಂ ಪ್ರಾದೇಶಿಕ ಕಚೇರಿಯಲ್ಲಿ ವೆಬ್​​ಸೈಟ್ ಕ್ಲೋಸ್​ ಆಗಿತ್ತು. ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾದ ಬೆನ್ನಲ್ಲೇ ಸೇವಾಸಿಂಧು ಸರ್ವರ್​ ಬ್ಯುಸಿ ಎಂದು ತೋರಿಸಿತ್ತು. ಇದರಿಂದ ಕಾದು ಕುಳಿತಿದ್ದ ಸಾರ್ವಜನಿಕರು ಅಧಿಕಾರಿಗಳ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:19 pm, Sun, 18 June 23

Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More
Follow Us