ಸಿದ್ದರಾಮಯ್ಯ ನೂರಕ್ಕೆ 99%ರಷ್ಟು ವರುಣಾ ಕ್ಷೇತ್ರದಿಂದಲೇ ನಿಲ್ತಾರೆ: ಬಿಜೆಪಿ ಹಿರಿಯ ನಾಯಕ ಭವಿಷ್ಯ

ಸಿದ್ದರಾಮಯ್ಯ ನೂರಕ್ಕೆ 99%ರಷ್ಟು ವರುಣಾ ಕ್ಷೇತ್ರದಿಂದಲೇ ಸ್ಪರ್ಧೆ ಮಾಡುತ್ತಾರೆ ಎಂದು ಬಿಜೆಪಿ ಹಿರಿಯ ನಾಯಕರೊಬ್ಬರು ಭವಿಷ್ಯ ನುಡಿದಿದ್ದಾರೆ.

ಸಿದ್ದರಾಮಯ್ಯ ನೂರಕ್ಕೆ 99%ರಷ್ಟು ವರುಣಾ ಕ್ಷೇತ್ರದಿಂದಲೇ ನಿಲ್ತಾರೆ: ಬಿಜೆಪಿ ಹಿರಿಯ ನಾಯಕ ಭವಿಷ್ಯ
ವಿಪಕ್ಷ ನಾಯಕ ಸಿದ್ದರಾಮಯ್ಯ
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on: Nov 27, 2022 | 2:31 PM

ಹುಬ್ಬಳ್ಳಿ: ಒಂದೆಡೆ ಕರ್ನಾಟಕದಲ್ಲಿ ಮುಂಬರುವ ವಿಧಾನಸಭೆ ಕಾವು ದಿನದಿಂದ ದಿನಕ್ಕೆ ಏರುತ್ತಿದೆ. ಮತ್ತೊಂದೆಡೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಯಾವ ಕ್ಷೇತ್ರದಿಂದ ಸ್ಪರ್ಧೆ ಮಾಡುತ್ತಾರೆ ಎನ್ನುವ ಚರ್ಚೆ ಜೋರಾಗಿದೆ. ಅಲ್ಲದೇ ಇದು ಭಾರೀ ಕುತೂಹಲ ಮೂಡಿಸಿದೆ. ಸಿದ್ದರಾಮಯ್ಯ ಅವರು ಕೋಲಾರದಿಂದ ಸ್ಪರ್ಧೆ ಮಾಡುತ್ತಾರೆ ಎನ್ನುವ ಕೇವಲ ಸುಳಿವು ಮಾತ್ರ ಕೊಟ್ಟಿದ್ದಾರೆ. ಆದ್ರೆ, ಸಿದ್ದರಾಮಯ್ಯ ನೂರಕ್ಕೆ 99%ರಷ್ಟು ವರುಣಾ ಕ್ಷೇತ್ರದಿಂದಲೇ ಸ್ಪರ್ಧೆ ಮಾಡುತ್ತಾರೆ ಎಂದು ಬಿಜೆಪಿ ಹಿರಿಯ ನಾಯಕರೊಬ್ಬರು ಭವಿಷ್ಯ ನುಡಿದಿದ್ದಾರೆ.

ಹುಬ್ಬಳ್ಳಿಯಲ್ಲಿ ಇಂದು)ನ.27) ಸುದ್ದಿಗಾರರೊಂದಿಗೆ ಮಾತನಾಡಿದ ಬಿಜೆಪಿ ನಾಯಕ ಬಸವರಾಜ್ ಹೊರಟ್ಟಿ, ನನಗೆ ಬಹಳ ಚೆನ್ನಾಗಿ ರಾಜಕಾರಣ ಗೊತ್ತಿದೆ. ಸಿದ್ದರಾಮಯ್ಯ ನೂರಕ್ಕೆ 99%ರಷ್ಟು ವರುಣಾ ಕ್ಷೇತ್ರದಿಂದಲೇ ನಿಲ್ಲುತ್ತಾರೆ. ಬಹಳ ಪಾಪ್ಯುಲರ್ ಆದ್ರೆ ಹೀಗೆ ಆಗತ್ತೆ. ಸಿದ್ದರಾಮಯ್ಯ ಬದಾಮಿಗೆ ಜಾತಿ ಮೇಲೆ ಬಂದು ನಿಂತ್ರು ಎಂದು ಹೇಳಿದರು.

ಸೋಲು ಗೆಲವು ಮುಖ್ಯ ಅಲ್ಲ ಎಂದು ಸಿದ್ದರಾಮಯ್ಯಗೆ ನಾನು ಹೇಳಿದ್ದೆ. ಒಂದು ಕ್ಷೇತ್ರ ಆಯ್ಕೆ ಮಾಡಕೊಬೇಕು. ಹೀಗಾಗಿ ಅವರು ವರುಣಾಗೆ ನಿಲ್ಲುತ್ತಾರೆ. ಸಿದ್ದರಾಮಯ್ಯ ,ಡಿಕೆಶಿವಕುಮಾರ್ ಇಬ್ಬರು ಮುಖ್ಯಮಂತ್ರಿ ಆಗಬೇಕು ಅಂತಿದ್ದಾರೆ. ಏನಾದ್ರೂ ಮಾಡಿ ಸಿದ್ದರಾಮಯ್ಯ ಹೋಗಲಿ‌ ಅಂತಾ ಡಿಕೆಶಿವಕುಮಾರ್, ಡಿಕೆ ಶಿವಕುಮಾರ್ ಹೋಗಲಿ ಅಂತಾ ಸಿದ್ದರಾಮಯ್ಯ. ಆ ಕಾರಣಕ್ಕೆ ಹೀಗೆ ಆಗ್ತಿದೆ ಎಂದು ಹೊರಟ್ಟಿ ಲೇವಡಿ ಮಾಡಿದರು.

ಸಭಾಪತಿ ಸ್ಥಾನ ಕೊಡುವುದಾಗಿ ಬಿಜೆಪಿ ಹೇಳಿತ್ತು. ಬಿಜೆಪಿಯವರು ನನಗೆ ಕೊಟ್ಟ ಮಾತು ಉಳಸಿಕೊಂಡಿಲ್ಲ. ಮಾತು ಕೊಟ್ಟಂಗೆ nಡೆಯಬೇಕಿತ್ತು.ಇದೀಗ ನನಗೆ ಅದರ ಮೇಲೆ ಅಸೆನೇ ಹೋಗಿದೆ ಎಂದ ಬಸವರಾಜ ಹೊರಟ್ಟಿ ಅಸಮಾಧಾನ ಹೊರಹಾಕಿದರು.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ
ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ
ಉಗ್ರಂ ಮಂಜು ತಲೆ ಮೇಲೆ ಬಾಟಲಿ ಹೊಡೆದ ಮೋಕ್ಷಿತಾ
ಉಗ್ರಂ ಮಂಜು ತಲೆ ಮೇಲೆ ಬಾಟಲಿ ಹೊಡೆದ ಮೋಕ್ಷಿತಾ
ವಾಟ್ ಎ ಬಾಲ್... ಡೇಂಜರಸ್ ಟ್ರಾವಿಸ್ ಹೆಡ್ ಕ್ಲೀನ್ ಬೌಲ್ಡ್
ವಾಟ್ ಎ ಬಾಲ್... ಡೇಂಜರಸ್ ಟ್ರಾವಿಸ್ ಹೆಡ್ ಕ್ಲೀನ್ ಬೌಲ್ಡ್
ವೀರಸೌಧದಲ್ಲಿ ಗಾಂಧಿ ಪ್ರತಿಮೆ ಅನಾವರಣಗೊಳಿಸಿದ ಸಿದ್ದರಾಮಯ್ಯ, ಡಿಕೆಶಿ
ವೀರಸೌಧದಲ್ಲಿ ಗಾಂಧಿ ಪ್ರತಿಮೆ ಅನಾವರಣಗೊಳಿಸಿದ ಸಿದ್ದರಾಮಯ್ಯ, ಡಿಕೆಶಿ