ಗದಗ ಜಿಲ್ಲೆಯ ಪ್ರವಾಸೋದ್ಯಮ ಅಭಿವೃದ್ಧಿಗೆ ತಳಮಟ್ಟದ ಅಧ್ಯಯನ ಅಗತ್ಯ: ಸಚಿವ ಎಚ್​ಕೆ ಪಾಟೀಲ

ಪ್ರವಾಸೋದ್ಯಮ ಸಮಗ್ರ ಅಭಿವೃದ್ಧಿಗಾಗಿ ಪೂರಕ ವಾತಾವರಣ ನಿರ್ಮಿಸಲು ಯೋಜನೆಗಳನ್ನು ರೂಪಿಸುವ ಕುರಿತು ಆಳವಾದ ಅಧ್ಯಯನ ಮಾಡಿ ಸರಕಾರಕ್ಕೆ ವರದಿ ಸಲ್ಲಿಸುವಂತೆ ಕಾನೂನು ನ್ಯಾಯ ಹಾಗೂ ಪ್ರವಾಸೋದ್ಯಮ ಸಚಿವರು ಸಚಿವ ಎಚ್.ಕೆ.ಪಾಟೀಲ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಗದಗ ಜಿಲ್ಲೆಯ ಪ್ರವಾಸೋದ್ಯಮ ಅಭಿವೃದ್ಧಿಗೆ ತಳಮಟ್ಟದ ಅಧ್ಯಯನ ಅಗತ್ಯ: ಸಚಿವ ಎಚ್​ಕೆ ಪಾಟೀಲ
ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ ಸಭೆಯಲ್ಲಿ ಸಚಿವ ಎಚ್.ಕೆ.ಪಾಟೀಲ ಭಾಗಿ
Follow us
ಸಂಜೀವ ಕುಮಾರ್​ ಪಾಂಡ್ರೆ, ಗದಗ
| Updated By: ಗಂಗಾಧರ​ ಬ. ಸಾಬೋಜಿ

Updated on:Jun 19, 2023 | 6:58 PM

ಗದಗ: ಜಿಲ್ಲೆಯಲ್ಲಿ ಪ್ರವಾಸೋದ್ಯಮ ಸಮಗ್ರ ಅಭಿವೃದ್ಧಿಗಾಗಿ ಪೂರಕ ವಾತಾವರಣ ನಿರ್ಮಿಸಲು ಯೋಜನೆಗಳನ್ನು ರೂಪಿಸುವ ಕುರಿತು ಆಳವಾದ ಅಧ್ಯಯನ ಮಾಡಿ ಸರಕಾರಕ್ಕೆ ವರದಿ ಸಲ್ಲಿಸುವಂತೆ ಕಾನೂನು ನ್ಯಾಯ ಹಾಗೂ ಪ್ರವಾಸೋದ್ಯಮ ಸಚಿವರು ಸಚಿವ ಎಚ್.ಕೆ.ಪಾಟೀಲ (Minister H K Patil) ಹೇಳಿದರು. ನಗರದ ರೈತರ ಭವನದಲ್ಲಿ ಇಂದು ನಡೆದ ಗದಗ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ಜಿಲ್ಲೆಯನ್ನು ಪ್ರವಾಸೋದ್ಯಮ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಸಮಗ್ರ ಹಾಗೂ ತಳಮಟ್ಟದಲ್ಲಿ ಅಧ್ಯಯನ ಮಾಡಿ ಉತ್ತಮ ವರದಿಯನ್ನು ಸರಕಾರಕ್ಕೆ ಒಂದು ತಿಂಗಳೊಳಗಾಗಿ ಸಲ್ಲಿಸಲು ತಿಳಿಸಿದರು.

ಗದಗ ಜಿಲ್ಲೆಯನ್ನು ಪ್ರಮುಖ ಪ್ರವಾಸಿ ತಾಣವಾಗಿಸಲು ಪೂರಕ ವಾತಾವರಣವಿದೆ. ಇರುವ ಸಂಪನ್ಮೂಲ ಸಮರ್ಪಕವಾಗಿ ಬಳಸಿ ಜಿಲ್ಲೆಯನ್ನು ಪ್ರಮುಖ ಪ್ರವಾಸಿ ತಾಣವಾಗಿಸೋಣ ಎಂದರು. ಈಗಾಗಲೇ ರಚಿಸಲಾದ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿಯು ಜಿಲ್ಲೆಯಲ್ಲಿರುವ ವಾಸ್ತುಶಿಲ್ಪಕ್ಕೆ ಪ್ರಸಿದ್ದಿ ಪಡೆದ ಲಕ್ಕುಂಡಿ, ಹರ್ತಿ, ಡಂಬಳ, ಹುಲಕೋಟಿ ಸೇರಿದಂತೆ ಇತರೆ ಸ್ಥಳಗಳು ಐತಿಹಾಸಿಕ ದೇವಾಲಯಗಳನ್ನು ಹೊಂದಿದ್ದು ಈ ಕುರಿತು ಆಳವಾದ ಅಧ್ಯಯನದ ಅವಶ್ಯಕತೆ ಇದೆ.

ದೇಶದಲ್ಲೇ ಶುದ್ಧ ಗಾಳಿಗೆ ಜಿಲ್ಲೆ ಹೆಸರುವಾಸಿಯಾಗಿದೆ. ಅದೇ ರೀತಿ ಭಾವೈಕ್ಯತೆಗೆ ಶಿರಹಟ್ಟಿ ಮತ್ತು ಅಂತೂರು ಬೆಂತೂರು ಭಾವೈಕ್ಯತಾ ಕೇಂದ್ರಗಳು ಮಾದರಿಯಾಗಿವೆ. ಪ್ರಸ್ತುತ ಸಮಾಜಕ್ಕೆ ಅಗತ್ಯವಿರುವ ಭಾವೈಕ್ಯತಾ ಸಾರುವ ಸಂದೇಶಗಳನ್ನು ಹಿಂದಿನಿಂದಲೂ ನೀಡುತ್ತಾ ಬಂದಿದೆ. ಜೊತೆಗೆ ಜಿಲ್ಲೆಯಲ್ಲಿ ಕಲೆ, ಸಾಹಿತ್ಯ, ಸಂಗೀತ, ಸಂಸ್ಕೃತಿ ಕ್ಷೇತ್ರಗಳಲ್ಲಿ ಅಂತರರಾಷ್ಟ್ರೀಯ ಮಟ್ಟದಲ್ಲಿ ಹೆಸರು ಪಡೆದಿದೆ. ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು ಗೀತೆಯನ್ನು ಇಂದಿಗೂ ನಾವು ನಾಡಗೀತೆಯೇಂದೇ ಉಚ್ಛರಿಸುವುದುಂಟು ಎಂದರು.

ಇದನ್ನೂ ಓದಿ: Shakti Yojana: ಫ್ರೀ ಬಸ್ ಎಫೆಕ್ಟ್, ದೇವಸ್ಥಾನ ಮಾತ್ರವಲ್ಲ ದರ್ಗಾದಲ್ಲೂ ಜನಜಾತ್ರೆ

ರೋಣ, ಗಜೇಂದ್ರಗಡ, ನರಗುಂದ, ಶ್ರೀಮಂತಗಡ ಕೋಟೆಗಳು ಐತಿಹಾಸಿಕ ಚಾರಿತ್ರ್ಯ ಸಾರುವ ಕೋಟೆಗಳಾಗಿವೆ. ಹತ್ತಿರದ ಕಪ್ಪತಗುಡ್ಡ ಔಷಧಿ ಗುಣವುಳ್ಳ ಸಸ್ಯ ಸಂಪತ್ತನ್ನು ತನ್ನ ಒಡಲಲ್ಲಿ ಅಡಗಿಸಿಕೊಂಡು ಸಹ್ಯಾದ್ರಿಯಾಗಿದೆ. ಬಿಂಕದಕಟ್ಟಿಯಲ್ಲಿ ಇರುವ ಪ್ರಾಣಿ ಸಂಗ್ರಹಾಲಯವು ನಿರಂತರವಾಗಿ 50 ವರ್ಷಗಳನ್ನು ಪೂರೈಸಿ ಸುವರ್ಣ ಸಂಭ್ರಮ ಆಚರಣೆ ಮಾಡಿದೆ. ಈ ಸಂಗ್ರಹಾಲಯವು ಇನ್ನೂ ಹೆಚ್ಚಿನ ಜನರನ್ನು ಆಕರ್ಷಿಸುವಂತಾಗಬೇಕು.

ನಗರದ ಭೀಷ್ಮಕೆರೆ, ಜುಮ್ಮಾ ಮಸೀದಿ, ತಿರಂಗಾ ಪಾರ್ಕ, ಬೆಟಗೇರಿಯ ತಾರಾಲಯ, ಪ್ರಾಚ್ಯ ವಸ್ತು ಸಂಗ್ರಹಾಲಯ, ನೇಕಾರಿಕೆ ಇವೆಲ್ಲವುಗಳು ಪ್ರವಾಸಿಗರ ಆಕರ್ಷಣೆಗೆ ಪೂರಕವಾಗಿವೆ. ಇವುಗಳನ್ನು ಸೇರಿದಂತೆ ಜಿಲ್ಲೆಯ ಅನೇಕ ತಾಣಗಳನ್ನು ಅಭಿವೃದ್ಧಿಪಡಿಸಲು ರಚಿಸಲಾದ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿಯು ಸರಿಯಾಗಿ ಅಧ್ಯಯನ ಕಾರ್ಯನಿರ್ವಹಿಸಿ ಅಭಿವೃದ್ಧಿಗೆ ಶೀಘ್ರ ಶಿಫಾರಸ್ಸುಗಳನ್ನು ಮಾಡಬೇಕೆಂದು ಹೇಳಿದರು.

ಇದನ್ನೂ ಓದಿ: No Bus: ದ್ಯಾಮುಣಸಿ ಗ್ರಾಮ ಹುಟ್ಟಿದಾಗಿನಿಂದಲೂ ಸರ್ಕಾರಿ ಕೆಂಪು ಬಸ್ ಕಂಡಿಲ್ಲ, ಗ್ರಾಮದ ಯುವಕರಿಗೆ ಹೆಣ್ಣು ಕೊಡ್ತಿಲ್ಲ

ಸಹಕಾರ ಕ್ಷೇತ್ರದಲ್ಲಿ ಜಿಲ್ಲೆಯು ಮಹತ್ವದ ಸಾಧನೆ ಸಾಧಿಸಿದೆ. ದೇಶ ಕಟ್ಟುವಲ್ಲಿ ಗದಗ ತನ್ನದೇ ಆದ ಕಾಣಿಕೆ ಹಾಗೂ ಹಿರಿಮೆಯನ್ನು ಹೊಂದಿದೆ. ಮೈಸೂರು ರಾಜ್ಯಕ್ಕೆ ಕರ್ನಾಟಕ ರಾಜ್ಯ ಎಂದು ಮರು ನಾಮಕರಣ ಮಾಡುವಾಗ ಗದಗ, ಹಂಪಿ ಹಾಗೂ ಬೆಂಗಳೂರಿನಲ್ಲಿ ಬೃಹತ್ ಕಾರ್ಯಕ್ರಮಗಳನ್ನು ಏರ್ಪಡಿಸಲಾಯಿತು. ಜಿಲ್ಲೆಯು ದೇಶಕ್ಕೆ ಉನ್ನತ ವ್ಯಕ್ತಿಗಳನ್ನು ನೀಡಿದೆ. ಇದರಲ್ಲಿ ಪ್ರಮುಖವಾಗಿ ಭಾರತರತ್ನ ಪಂಡಿತ ಭೀಮಸೇನ ಜೋಶಿ, ಹುಯಿಲಗೋಳ ನಾರಾಯಣರಾಯರು, ಸ್ವಾತಂತ್ರ್ಯ ಹೋರಾಟಗಾರರು ಸೇರಿದ್ದಾರೆ.

ಗದಗ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ ಅಧ್ಯಕ್ಷರಾಗಿ ಹಿರಿಯ ಐಎಎಸ್ ಅಧಿಕಾರಿ ಮನೋಜ ಕುಮಾರ್, ಕಾರ್ಯದರ್ಶಿಯಾಗಿ ಜಿ.ಜಗದೀಶ, ಸದಸ್ಯರಾಗಿ ಮಂಜುನಾಥ ಚವ್ಹಾಣ, ಜೆ.ಕೆ.ಜಮಾದಾರ, ವಿವೇಕಾನಂದಗೌಡ ಪಾಟೀಲ, ಡಾ. ಎಸ್.ಜಿ. ಚಲವಾದಿ, ಕಿಶೋರ ಬಾಬು ನಾಗರಕಟ್ಟೆ, ಎ. ದೇವರಾಜ, ಎಫ್. ಎನ್. ಹುಡೇದ ಸೇರಿದಂತೆ ಒಟ್ಟು 16 ತಜ್ಞರು ಸಮಿತಿಯ ಸದಸ್ಯರಾಗಿ ಕಾರ್ಯ ನಿರ್ವಹಿಸಲಿದ್ದಾರೆ.

ಸಮಿತಿಯು ಸರಿಯಾಗಿ ಅಧ್ಯಯನ ಮಾಡಿ ಶಿಫಾರಸ್ಸುಗಳನ್ನು ಮಾಡಬೇಕು. ನಂತರ ಅದನ್ನು ಶಿಸ್ತು ಬದ್ಧವಾಗಿ ಅನುಷ್ಟಾನ ಗೊಳಿಸಬೇಕು. ನಿಮ್ಮ ವರದಿ ಶ್ರೇಷ್ಠವಾಗಿರಲಿದೆ ಎಂಬ ವಿಶ್ವಾಸ ನಮ್ಮದು. ಜಿಲ್ಲೆಯನ್ನು ಪ್ರಮುಖ ಪ್ರವಾಸಿ ತಾಣವಾಗಿಸುವಲ್ಲಿ ಸಮಿತಿಯು ಕಾರ್ಯೋನ್ಮುಖವಾಗಲಿ ಎಂದು ತಿಳಿಸಿದರು.

ನಂತರ ನಡೆದ ಸಮಿತಿ ಸಭೆಯಲ್ಲಿ ಜಿಲ್ಲೆಯನ್ನು ಪ್ರಮುಖ ಪ್ರವಾಸಿ ತಾಣವಾಗಿಸುವಲ್ಲಿ ಕೈಗೊಳ್ಳಬೇಕಾದ ಕ್ರಮಗಳು ಹಾಗೂ ಇರುವ ಸಂಪನ್ಮೂಲ ಹಾಗೂ ಪೂರಕ ವಾತಾವರಣವನ್ನು ಸದ್ಭಳಕೆ ಮಾಡಿಕೊಂಡು ಪ್ರವಾಸೋದ್ಯಮ ಅಭಿವೃಧ್ಧಿಗೆ ಹೇಗೆ ಸದ್ಭಳಕೆ ಮಾಡಿಕೊಳ್ಳಬಹುದೆಂದು ಚರ್ಚಿಸಲಾಯಿತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 6:57 pm, Mon, 19 June 23

ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ