Arvind Kejriwal: 8 ಕೋಟಿ ಸಮೇತ ಸಿಕ್ಕಿಬಿದ್ದರೂ ಬಂಧನ ಏಕಿಲ್ಲ? ಬಿಜೆಪಿ ವಿರುದ್ಧ ಕೇಜ್ರಿವಾಲ್ ಆಕ್ರೋಶ

ಕರ್ನಾಟಕದಲ್ಲಿ ಅತಿ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ನಾವು ಅಧಿಕಾರಕ್ಕೆ ಬಂದರೆ ರೈತರ ಎಲ್ಲಾ ಸಾಲಮನ್ನಾ ಮಾಡುತ್ತೇವೆ. ಒಂದು ಅವಕಾಶ ಕೊಡಿ, ಕೆಲಸ ಮಾಡದಿದ್ದರೆ ಮತ್ತೆ ಅಧಿಕಾರ ಕೊಡಬೇಡಿ ಎಂದು ಕೇಜ್ರಿವಾಲ್ ಮನವಿ ಮಾಡಿದರು.

Arvind Kejriwal: 8 ಕೋಟಿ ಸಮೇತ ಸಿಕ್ಕಿಬಿದ್ದರೂ ಬಂಧನ ಏಕಿಲ್ಲ? ಬಿಜೆಪಿ ವಿರುದ್ಧ ಕೇಜ್ರಿವಾಲ್ ಆಕ್ರೋಶ
ಅರವಿಂದ ಕೇಜ್ರಿವಾಲ್ (ಸಂಗ್ರಹ ಚಿತ್ರ)
Follow us
|

Updated on: Mar 04, 2023 | 4:34 PM

ದಾವಣಗೆರೆ: ದೆಹಲಿಯ ಮಾಜಿ ಉಪ ಮುಖ್ಯಮಂತ್ರಿ ನಿವಾಸದಲ್ಲಿ 10 ಸಾವಿರ ರೂ. ನಗದು ಸಿಕ್ಕಿತ್ತು. ಅವರನ್ನು ಬಂಧಿಸಲಾಯಿತು. ಆದರೆ ಇಲ್ಲಿ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರನ ಹಾಗೂ ಅವರ ಮನೆಯಲ್ಲಿ ಕೋಟಿ ಕೋಟಿ ನಗದು ಸಿಕ್ಕಿದರೂ ಅವರನ್ನು ಯಾಕೆ ಬಂಧಿಸಿಲ್ಲ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ (Arvind Kejriwal) ಪ್ರಶ್ನಿಸಿದರು. ದಾವಣಗೆರೆ(Davanagere) ಸರ್ಕಾರಿ ಹೈಸ್ಕೂಲ್ ಮೈದಾನದಲ್ಲಿ ಆಮ್ ಆದ್ಮಿ ಪಕ್ಷದ ಚುನಾವಣಾ ಪ್ರಚಾರ ಅಭಿಯಾನ ಆರಂಭಿಸಿ ಮಾತನಾಡಿದ ಅವರು, ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು. ರ್ನಾಟಕದ ಜನರು ದೇಶಭಕ್ತರು, ಕಷ್ಟ ಪಡುವವರು. ಆದರೆ, ರಾಜ್ಯದಲ್ಲಿರುವ ನಾಯಕರು ಕೆಟ್ಟವರು. ಇಲ್ಲಿರುವುದು 40% ಕಮಿಷನ್ ಸರ್ಕಾರ. ಕೇಂದ್ರ ಗೃಹ ಸಚಿವ ಅಮಿತ್ ಶಾ ಕರ್ನಾಟಕಕ್ಕೆ ಬಂದು ದೊಡ್ಡ ದೊಡ್ಡ ಮಾತನಾಡುತ್ತಾರೆ. 8 ಕೋಟಿ ರೂ. ನಗದು ಸಮೇತ ಈ ಜಿಲ್ಲೆಯ ನಾಯಕನ ಪುತ್ರ ಸಿಕ್ಕಿಬಿದ್ದಿದ್ದಾನೆ. ಮುಂದಿನ ವರ್ಷ ಇವರಿಗೆ ಪದ್ಮಭೂಷಣ ಪ್ರಶಸ್ತಿ ಕೂಡ ಕೊಡುತ್ತಾರೆ ಎಂದು ಕೇಜ್ರಿವಾಲ್ ವ್ಯಂಗ್ಯವಾಡಿದರು.

ಕರ್ನಾಟಕದಲ್ಲಿ 3 ಲಕ್ಷ ಕೋಟಿ ಖರ್ಚು ಮಾಡಿದರೂ ಯಾವುದೇ ಉಚಿತ ಯೋಜನೆಗಳಿಲ್ಲ. ನಮ್ಮದು ಸಾಲ ಇಲ್ಲದ ಬಜೆಟ್​​​, ನಮ್ಮದು 0% ಕಮಿಷನ್​ ಸರ್ಕಾರ ಎಂದು ಅವರು ಹೇಳಿದರು. ಪಂಜಾಬ್​ನಲ್ಲೂ ಭ್ರಷ್ಟಾಚಾರ ಮುಕ್ತ ಆಡಳಿತ ನೀಡುತ್ತೇವೆ. ನನ್ನ ಮಗ ಭ್ರಷ್ಟಾಚಾರ ಮಾಡಿದರೂ ಜೈಲಿಗೆ ಕಳುಹಿಸುತ್ತೇವೆ ಎಂದ ಕೇಜ್ರಿವಾಲ್, ನಿಮಗೆ ತಾಕತ್ತಿದ್ದರೆ ಒಳ್ಳೆಯ ಶಾಲೆ ಮಾಡಿ ತೋರಿಸಿ ನೋಡೋಣ ಎಂದು ಬಿಜೆಪಿ ಸರ್ಕಾರಕ್ಕೆ ಸವಾಲೆಸೆದರು.

ಇದನ್ನೂ ಓದಿ: Manish Sisodia: ಮನೀಶ್ ಸಿಸೋಡಿಯಾ ಸಿಬಿಐ ಕಸ್ಟಡಿ ಮತ್ತೆರಡು ದಿನ ವಿಸ್ತರಣೆ

ಕರ್ನಾಟಕದಲ್ಲಿ ಅತಿ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ನಾವು ಅಧಿಕಾರಕ್ಕೆ ಬಂದರೆ ರೈತರ ಎಲ್ಲಾ ಸಾಲಮನ್ನಾ ಮಾಡುತ್ತೇವೆ. ಒಂದು ಅವಕಾಶ ಕೊಡಿ, ಕೆಲಸ ಮಾಡದಿದ್ದರೆ ಮತ್ತೆ ಅಧಿಕಾರ ಕೊಡಬೇಡಿ ಎಂದು ಅವರು ಮನವಿ ಮಾಡಿದರು.

ಪಂಜಾಬಿನ ಸಮಸ್ಯೆಗಳೇ ಇಲ್ಲೂ ಇವೆ; ಮಾನ್

ಕರ್ನಾಟಕಕ್ಕೆ ಬಂದ ಬಳಿಕ ಕೆಲವು ಜನರ ಬಳಿ ಮಾತಾಡಿದೆ. ಪಂಜಾಬ್ ರೈತರ ಸಮಸ್ಯೆಗಳೇ ಇಲ್ಲಿಯೂ ಇವೆ ಎಂಬುದು ತಿಳಿಯಿತು. ಕಬ್ಬು ಬೆಳೆಗಾರರಿಗೆ ಅಲ್ಲಿಯೂ ಸರಿಯಾಗಿ ದುಡ್ಡು ಕೊಡುತ್ತಿರಲಿಲ್ಲ, ಇಲ್ಲಿಯೂ ಅದೇ ಸಮಸ್ಯೆ ಇದೆ. ಈಗ ಕಬ್ಬಿಗೆ ದೇಶದಲ್ಲಿಯೇ ಹೆಚ್ಚು ದರ ನಾವು ನೀಡುತ್ತಿದ್ದೇವೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ ಮಾನ್ ಹೇಳಿದರು. ಒಳ್ಳೆಯ ಶಾಲೆ ಕಟ್ಟಿಸುತ್ತೇವೆ, ಉಚಿತ ವಿದ್ಯುತ್ ಕೊಡ್ತೇವೆ ಎಂದಾಗ ಅರವಿಂದ ಕೇಜ್ರಿವಾಲ್ ಅವರನ್ನು ನೋಡಿ ಎಲ್ಲರೂ ನಗಾಡಿದ್ದರು. ಆ ಎಲ್ಲ ಭರವಸೆಗಳನ್ನು ಅವರು ಈಡೇರಿಸಿ ತೋರಿಸಿದ್ದಾರೆ ಎಂದು ಮಾನ್ ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Nithya Bhavishya: ಈ ರಾಶಿಯವರಿಗೆ ಇಂದು ಆರು ಗ್ರಹಗಳ ಶುಭ ಫಲವಿದೆ
Nithya Bhavishya: ಈ ರಾಶಿಯವರಿಗೆ ಇಂದು ಆರು ಗ್ರಹಗಳ ಶುಭ ಫಲವಿದೆ
ತಮಿಳು, ತೆಲುಗಿನಲ್ಲೂ ಶಿವರಾಜ್​ಕುಮಾರ್ ಬ್ಯುಸಿ; ಇಲ್ಲಿದೆ ಮಾಹಿತಿ..
ತಮಿಳು, ತೆಲುಗಿನಲ್ಲೂ ಶಿವರಾಜ್​ಕುಮಾರ್ ಬ್ಯುಸಿ; ಇಲ್ಲಿದೆ ಮಾಹಿತಿ..
ಶಿವರಾಜ್​ಕುಮಾರ್​ ಆರೋಗ್ಯ ಸಮಸ್ಯೆ; ಕರೆ ಮಾಡಿ ವಿಚಾರಿಸಿದ ಯಶ್, ಸುದೀಪ್
ಶಿವರಾಜ್​ಕುಮಾರ್​ ಆರೋಗ್ಯ ಸಮಸ್ಯೆ; ಕರೆ ಮಾಡಿ ವಿಚಾರಿಸಿದ ಯಶ್, ಸುದೀಪ್
ಕೆರೆ ಹಾಡಿಯ ಪಡಸಾಲೆಯಲ್ಲಿ ಕುಳಿತು ಜನದ ಸಮಸ್ಯೆ ಆಲಿಸಿದ ಸಿದ್ದರಾಮಯ್ಯ
ಕೆರೆ ಹಾಡಿಯ ಪಡಸಾಲೆಯಲ್ಲಿ ಕುಳಿತು ಜನದ ಸಮಸ್ಯೆ ಆಲಿಸಿದ ಸಿದ್ದರಾಮಯ್ಯ
ಜನಾಂಗೀಯ ನಿಂದನೆಯಾಗಿದೆ ಅಂತ ಕುಮಾರಸ್ವಾಮಿ ಯಾಕೆ ದೂರು ನೀಡಿಲ್ಲ? ಶಿವಕುಮಾರ್
ಜನಾಂಗೀಯ ನಿಂದನೆಯಾಗಿದೆ ಅಂತ ಕುಮಾರಸ್ವಾಮಿ ಯಾಕೆ ದೂರು ನೀಡಿಲ್ಲ? ಶಿವಕುಮಾರ್
ಜಮೀರ್ ಅಹ್ಮದ್​​ರನ್ನು ಸೃಷ್ಟಿ ಮಾಡಿದ್ದೇ ದೇವೇಗೌಡರ ಕುಟುಂಬ: ವಿ ಸೋಮಣ್ಣ
ಜಮೀರ್ ಅಹ್ಮದ್​​ರನ್ನು ಸೃಷ್ಟಿ ಮಾಡಿದ್ದೇ ದೇವೇಗೌಡರ ಕುಟುಂಬ: ವಿ ಸೋಮಣ್ಣ
ಹನುಮಂತನ ಪಂಚೆ ಧರಿಸಿದ ಗೌತಮಿ ಜಾದವ್; ಬಟ್ಟೆ ಮಹಿಮೆಯಿಂದ ಬದಲಾಯ್ತು ವರ್ತನೆ
ಹನುಮಂತನ ಪಂಚೆ ಧರಿಸಿದ ಗೌತಮಿ ಜಾದವ್; ಬಟ್ಟೆ ಮಹಿಮೆಯಿಂದ ಬದಲಾಯ್ತು ವರ್ತನೆ
ಸಿದ್ದರಾಮಯ್ಯ ವಿರುದ್ಧ ಯಾವತ್ತೂ ವೈಯಕ್ತಿಕ ಟೀಕೆ ಮಾಡಿಲ್ಲ: ಎ ಮಂಜು
ಸಿದ್ದರಾಮಯ್ಯ ವಿರುದ್ಧ ಯಾವತ್ತೂ ವೈಯಕ್ತಿಕ ಟೀಕೆ ಮಾಡಿಲ್ಲ: ಎ ಮಂಜು
ಚನ್ನಪಟ್ಟಣದಲ್ಲಿ ನಾನೇ ಮುಖ್ಯಮಂತ್ರಿ ಅಂತ ಶಿವಕುಮಾರ್ ಹೇಳುತ್ತಾರೆ: ಅಶೋಕ
ಚನ್ನಪಟ್ಟಣದಲ್ಲಿ ನಾನೇ ಮುಖ್ಯಮಂತ್ರಿ ಅಂತ ಶಿವಕುಮಾರ್ ಹೇಳುತ್ತಾರೆ: ಅಶೋಕ
ನಾನು ತಪ್ಪು ಮಾಡಿದ್ರೆ ಕ್ಷೇತ್ರದಲ್ಲಿ ರಕ್ತ ಕಾರಿ ಸಾಯಬೇಕು ಎಂದ ಮುನಿರತ್ನ
ನಾನು ತಪ್ಪು ಮಾಡಿದ್ರೆ ಕ್ಷೇತ್ರದಲ್ಲಿ ರಕ್ತ ಕಾರಿ ಸಾಯಬೇಕು ಎಂದ ಮುನಿರತ್ನ