ಕಾಂಗ್ರೆಸ್​ಗೆ ಗುಡ್ ಬೈ ಹೇಳಿದ ಮುಖ್ಯಮಂತ್ರಿ ಚಂದ್ರು; ಡಿಕೆ ಶಿವಕುಮಾರ್​ಗೆ ರಾಜೀನಾಮೆ ಸಲ್ಲಿಸಿದ ಹಿರಿಯ ನಟ

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್​ಗೆ ರಾಜೀನಾಮೆ ಸಲ್ಲಿಸಿದ ಮುಖ್ಯಮಂತ್ರಿ ಚಂದ್ರು ಅವರು, ಕಾಂಗ್ರೆಸ್ ನಾಯಕರ ವಿರುದ್ಧ ಪರೋಕ್ಷವಾಗಿ ಬೇಸರ ಹೊರಹಾಕಿದ್ದಾರೆ.

ಕಾಂಗ್ರೆಸ್​ಗೆ ಗುಡ್ ಬೈ ಹೇಳಿದ ಮುಖ್ಯಮಂತ್ರಿ ಚಂದ್ರು; ಡಿಕೆ ಶಿವಕುಮಾರ್​ಗೆ ರಾಜೀನಾಮೆ ಸಲ್ಲಿಸಿದ ಹಿರಿಯ ನಟ
ಹಿರಿಯ ನಟ ಮುಖ್ಯಮಂತ್ರಿ ಚಂದ್ರು
Edited By:

Updated on: May 29, 2022 | 5:01 PM

ಬೆಂಗಳೂರು: ರಾಜ್ಯಸಭೆ ಟಿಕೆಟ್ ನಿರೀಕ್ಷೆಯಲ್ಲಿದ್ದ ಹಿರಿಯ ನಟ ಮುಖ್ಯಮಂತ್ರಿ ಚಂದ್ರು (Mukyamanthri Chandru) ಪ್ರಾಥಮಿಕ ಸದಸ್ಯತ್ವಕ್ಕೆ ಇಂದು (ಮೇ 29) ರಾಜೀನಾಮೆ ಸಲ್ಲಿಸಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್​ಗೆ (DK Shivakumar) ರಾಜೀನಾಮೆ ಸಲ್ಲಿಸಿದ ಮುಖ್ಯಮಂತ್ರಿ ಚಂದ್ರು ಅವರು, ಪಕ್ಷಕ್ಕೆ ಪ್ರಾಮಾಣಿಕ ಸೇವೆ ಸಲ್ಲಿಸಿದ್ರೂ‌ ಗುರುತಿಸಿಲ್ಲ ಎಂದು ಕಾಂಗ್ರೆಸ್ ನಾಯಕರ ವಿರುದ್ಧ ಪರೋಕ್ಷವಾಗಿ ಬೇಸರ ಹೊರಹಾಕಿದ್ದಾರೆ. ಎರಡು ದಿನಗಳ ಹಿಂದಷ್ಟೇ ಕೆಪಿಸಿಸಿ ಘಟಕ ಸಾಂಸ್ಕೃತಿಕ ಸಮಿತಿ ಚೇರ್ ಮನ್ ಆಗಿ ನೇಮಕ ಮಾಡಿತ್ತು.

ವೈಯಕ್ತಿಕ ಕಾರಣಕ್ಕೆ ಸೇವೆ ಸಲ್ಲಿಸುತ್ತಿದ್ದೇನೆ ಎಂದು ತಿಳಿಸಿರುವ ಮುಖ್ಯಮಂತ್ರಿ ಚಂದ್ರು, ಜನಸೇವೆ ಮಾಡುವ ನಿಟ್ಟಿನಲ್ಲಿ ದೇಶದಲ್ಲೇ ಸುದೀರ್ಘ ಇತಿಹಾಸವಿರುವ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದೆ. ಪಕ್ಷದಲ್ಲಿದ್ದು ಪ್ರಾಮಾಣಿಕವಾಗಿ ಕೆಲಸ ಮಾಡಿದ್ದೇನೆ. ಇಲ್ಲಿವರೆಗೂ ನನಗೆ ಪಕ್ಷದಲ್ಲಿ ಬೆಂಬಲಿಸಿ, ಪ್ರೀತಿ ನೀಡಿದ ಎಲ್ಲರಿಗೂ ಧನ್ಯವಾದ ಎಂದು ತಿಳಿಸಿದ್ದಾರೆ.

ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ಸಲ್ಲಿಸಿದ ಮುಖ್ಯಮಂತ್ರಿ ಚಂದ್ರು

ಶಿವಕುಮಾರ್ ಭೇಟಿಯಾದ ಕುಪೇಂದ್ರರೆಡ್ಡಿ:
ಡಿಕೆ ಶಿವಕುಮಾರ್ ಭೇಟಿಯಾದ ಕುಪೇಂದ್ರರೆಡ್ಡಿ ರಾಜ್ಯಸಭಾ ಚುನಾವಣೆ ವಿಚಾರವಾಗಿ ಮಾತುಕತೆ ನಡೆಸಿದರು. ಜೆಡಿಎಸ್​ ಕುಪೇಂದ್ರರೆಡ್ಡಿಗೆ ರಾಜ್ಯಸಭಾ ಟಿಕೆಟ್ ನೀಡಲು ನಿರ್ಧರಿಸಿದೆ. ಜೆಡಿಎಸ್ ಅಭ್ಯರ್ಥಿ ಗೆಲ್ಲಲು ಹೆಚ್ಚುವರಿ ಮತಗಳ ಅವಶ್ಯಕತೆ ಇದೆ. ಕಾಂಗ್ರೆಸ್ ಅಥವಾ ಬಿಜೆಪಿಯ ಬೆಂಬಲದ ಅಗತ್ಯವಿದೆ. ಈ ಹಿನ್ನೆಲೆ ಡಿಕೆಶಿಯನ್ನು ಭೇಟಿ ಮಾಡಿದ್ದಾರೆ.

ಇದನ್ನೂ ಓದಿ
BRO Recruitment 2022: 876 ಹುದ್ದೆಗಳಿಗೆ ನೇಮಕಾತಿ: ಅರ್ಜಿ ಸಲ್ಲಿಸುವುದು ಹೇಗೆಂದು ತಿಳಿಯಿರಿ
ನಾಳೆ ಬೆಂಗಳೂರು ವಿಶ್ವವಿದ್ಯಾಲಯ ಸಂಪೂರ್ಣ ಸ್ತಬ್ಧ! ತರಗತಿ ಬಹಿಷ್ಕರಿಸಿ ಅಹೋರಾತ್ರಿ ಹೋರಾಟಕ್ಕೆ ವಿದ್ಯಾರ್ಥಿಗಳ ಒಕ್ಕೂಟ ನಿರ್ಧಾರ
GT vs RR, IPL 2022 Final: ಐಪಿಎಲ್ 2022ಕ್ಕೆ ಇಂದು ತೆರೆ: ಯಾರಾಗಲಿದ್ದಾರೆ ಚಾಂಪಿಯನ್?
ಕೊವಿಡ್​ನಿಂದ ಅನಾಥರಾದ ಮಕ್ಕಳಿಗೆ ವಿಶೇಷ ವಿದ್ಯಾರ್ಥಿ ವೇತನ: ಮೇ 30ರಂದು ಪ್ರಧಾನಿ ಮೋದಿ ಘೋಷಣೆ

ಜೈರಾಮ್​ ರಮೇಶ್ ಆಯ್ಕೆ- ತೀವ್ರ ಅಸಮಾಧಾನ:
ರಾಜ್ಯಸಭೆಗೆ ಜೈರಾಮ್​ ರಮೇಶ್ ಆಯ್ಕೆ ಬಗ್ಗೆ ರಾಜ್ಯ ಕಾಂಗ್ರೆಸ್​ಗೆ ಬಿಸಿ ತುಪ್ಪವಾಗಿದೆ. ರಾಜ್ಯ ಕಾಂಗ್ರೆಸ್​ನ ಹಿರಿಯ ನಾಯಕರಲ್ಲೇ‌ ತೀವ್ರ ಅಸಮಾಧಾನ ಮೂಡಿದೆ. ಹೈಕಮಾಂಡ್ ಮಾತಿಗೆ ಕಟ್ಟುಬಿದ್ದು ಡಿಕೆಶಿ ಜೈರಾಮ್​​ಗೆ ಬೆಂಬಲ ನೀಡುತ್ತಿದ್ದಾರೆ. ಚುನಾವಣೆ ವರ್ಷವಾದರೂ ರಾಜ್ಯದ ನಾಯಕರಿಗೆ ಅವಕಾಶ ನೀಡ್ತಿಲ್ಲ. ರಾಜ್ಯ ನಾಯಕರ ಹೆಸರು ಪ್ರಸ್ತಾಪಿಸಲು ಹೈಕಮಾಂಡ್ ಬೆಲೆ ನೀಡಿಲ್ಲ. ಹೀಗಾಗಿ ಪ್ರಿಯಾಂಕಾ ಗಾಂಧಿ ಹೆಸರು ಪ್ರಸ್ತಾಪಕ್ಕೆ ಡಿಕೆಶಿ ಮುಂದಾಗಿದ್ದಾರೆ. ರಾಜ್ಯಸಭೆಗೆ ರಾಜ್ಯ ಕಾಂಗ್ರೆಸ್ ನಾಯಕರನ್ನೇ ಆಯ್ಕೆ ಮಾಡಿದರೆ ಸೂಕ್ತ ಎಂದು ಸಿದ್ದರಾಮಯ್ಯ, ಡಿಕೆಶಿ ಅಭಿಪ್ರಾಯ ಹೊಂದಿದ್ದರು.

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:23 am, Sun, 29 May 22