Big News: ನಿತೀಶ್​ ಕುಮಾರ್​ಗೆ ದೊಡ್ಡ ಶಾಕ್; ಮಣಿಪುರದ 5 ಜೆಡಿಯು ಶಾಸಕರು ಬಿಜೆಪಿ ಜೊತೆ ವಿಲೀನ

ಈಶಾನ್ಯದಲ್ಲಿ ನಿತೀಶ್ ಕುಮಾರ್ ಅವರ ಜೆಡಿಯು ಪಕ್ಷದ ಶಾಸಕರನ್ನು ಬಿಜೆಪಿ ಗುರಿಯಾಗಿಸಿದ್ದು ಇದು ಎರಡನೇ ಬಾರಿ. 2020ರಲ್ಲಿ ಅರುಣಾಚಲ ಪ್ರದೇಶದಲ್ಲಿ 7 ಜೆಡಿಯು ಶಾಸಕರ ಪೈಕಿ 6 ಮಂದಿ ಬಿಜೆಪಿಗೆ ಸೇರಿದ್ದರು.

Big News: ನಿತೀಶ್​ ಕುಮಾರ್​ಗೆ ದೊಡ್ಡ ಶಾಕ್; ಮಣಿಪುರದ 5 ಜೆಡಿಯು ಶಾಸಕರು ಬಿಜೆಪಿ ಜೊತೆ ವಿಲೀನ
ನಿತೀಶ್ ಕುಮಾರ್ Image Credit source: India.com
Follow us
TV9 Web
| Updated By: ಸುಷ್ಮಾ ಚಕ್ರೆ

Updated on:Sep 03, 2022 | 10:28 AM

ಗುವಾಹಟಿ: ಬಿಹಾರದಲ್ಲಿ ಬಿಜೆಪಿ (BJP) ಜೊತೆಗಿನ ಮೈತ್ರಿಯನ್ನು ಮುರಿದುಕೊಂಡು ಆರ್​ಜೆಡಿ (RJD) ಜೊತೆ ಕೈಜೋಡಿಸಿ ಹೊಸ ಸರ್ಕಾರ ರಚಿಸುವ ಮೂಲಕ ನಿತೀಶ್ ಕುಮಾರ್ (Nitish Kumar) ಮತ್ತೊಮ್ಮೆ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದರು. ಆದರೆ, ನಿತೀಶ್ ಕುಮಾರ್​​ಗೆ ಇದೀಗ ಮತ್ತೊಂದು ಶಾಕ್ ಎದುರಾಗಿದ್ದು, ಮಣಿಪುರದಲ್ಲಿ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಜೆಡಿಯು ಪಕ್ಷದ 6 ಶಾಸಕರ ಪೈಕಿ ಐವರು ಶುಕ್ರವಾರ ಆಡಳಿತಾರೂಢ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ.

ಮಣಿಪುರ ವಿಧಾನಸಭೆ ಕಾರ್ಯದರ್ಶಿ ಕೆ. ಮೇಘಜಿತ್ ಸಿಂಗ್ ಸಹಿ ಮಾಡಿರುವ ಹೇಳಿಕೆಯಲ್ಲಿ ಬಿಜೆಪಿಯೊಂದಿಗೆ ಐವರು ಜೆಡಿಯು ಶಾಸಕರ ವಿಲೀನವನ್ನು ಅಂಗೀಕರಿಸಲು ಸ್ಪೀಕರ್ ಸಂತಸ ವ್ಯಕ್ತಪಡಿಸಿದ್ದಾರೆ. ಈಶಾನ್ಯದಲ್ಲಿ ನಿತೀಶ್ ಕುಮಾರ್ ಅವರ ಜೆಡಿಯು ಪಕ್ಷದ ಶಾಸಕರನ್ನು ಬಿಜೆಪಿ ಗುರಿಯಾಗಿಸಿದ್ದು ಇದು ಎರಡನೇ ಬಾರಿ. 2020ರಲ್ಲಿ ಅರುಣಾಚಲ ಪ್ರದೇಶದಲ್ಲಿ 7 ಜೆಡಿಯು ಶಾಸಕರ ಪೈಕಿ 6 ಮಂದಿ ಬಿಜೆಪಿಗೆ ಸೇರಿದ್ದರು. ಈ ವರ್ಷ ಮಾರ್ಚ್‌ನಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಜೆಡಿಯು ಸ್ಪರ್ಧಿಸಿದ್ದ 38 ಕ್ಷೇತ್ರಗಳ ಪೈಕಿ 6ರಲ್ಲಿ ಗೆದ್ದಿತ್ತು. ಬಿಜೆಪಿಗೆ ಸೇರ್ಪಡೆಯಾದ ಶಾಸಕರೆಂದರೆ ಕೆ.ಎಚ್. ​​ಜೋಯ್ಕಿಶನ್, ಎನ್. ಸನತೆ, ಎಂಡಿ ಅಚಾಬ್ ಉದ್ದೀನ್, ಮಾಜಿ ಡಿಜಿಪಿ ಎಲ್​ಎಂ ಖೌಟೆ ಮತ್ತು ತಂಗಜಮ್ ಅರುಣ್ ಕುಮಾರ್.

ಇದನ್ನೂ ಓದಿ: ಬಿಹಾರದಲ್ಲಿ ಬಿಜೆಪಿ-ಜೆಡಿಯು ಮೈತ್ರಿ ಸರ್ಕಾರ ಪತನ; ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ

ಎಲ್​ಎಂ ಖೌಟೆ ಮತ್ತು ಅರುಣ್‌ ಕುಮಾರ್ ಈ ಹಿಂದೆ ಬಿಜೆಪಿಯಿಂದ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಪ್ರಯತ್ನಿಸಿದ್ದರು. ಆದರೆ, ಬಿಜೆಪಿ ಪಕ್ಷದಿಂದ ತಿರಸ್ಕರಿಸಲ್ಪಟ್ಟ ನಂತರ ಜೆಡಿಯು ಸೇರಿದ್ದರು. ಬಿಹಾರದಲ್ಲಿ 9 ವರ್ಷಗಳಲ್ಲಿ ಎರಡನೇ ಬಾರಿಗೆ ಕೇಸರಿ ಪಕ್ಷದೊಂದಿಗಿನ ಮೈತ್ರಿಯನ್ನು ಜೆಡಿಯು ಮುರಿದುಕೊಂಡ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ.

ಈ ವರ್ಷದ ಮಾರ್ಚ್‌ನಲ್ಲಿ ನಡೆದ ಮೈಪುರ್ ವಿಧಾನಸಭಾ ಚುನಾವಣೆಯಲ್ಲಿ ಜೆಡಿಯು ಸ್ಪರ್ಧಿಸಿದ್ದ 38 ಕ್ಷೇತ್ರಗಳ ಪೈಕಿ ಆರರಲ್ಲಿ ಗೆದ್ದಿತ್ತು. ನಿತೀಶ್ ಕುಮಾರ್ ಬಿಜೆಪಿಯನ್ನು ತ್ಯಜಿಸಿ ತೇಜಸ್ವಿ ಯಾದವ್ ಅವರ ಜೆಡಿಯು, ಕಾಂಗ್ರೆಸ್ ಮತ್ತು ಇತರ ಪಕ್ಷಗಳೊಂದಿಗೆ ಸೇರಿಕೊಂಡು ಬಿಜೆಪಿಯನ್ನು ಬಿಟ್ಟು, ಬಿಹಾರದಲ್ಲಿ ಸಮ್ಮಿಶ್ರ ಸರ್ಕಾರವನ್ನು ರಚಿಸಿದ ಬೆನ್ನಲ್ಲೇ ಮಣಿಪುರದ ಜೆಡಿಯು ಶಾಸಕರು ಈ ನಿರ್ಧಾರ ತೆಗೆದುಕೊಂಡಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:27 am, Sat, 3 September 22

ನ್ಯೂ ಈಯರ್ ರೆವೆಲ್ಲರ್​​ಗಳ ಅಮಲಿನ ಹಾವಭಾವಗಳು ನಗೆ ಹುಟ್ಟಿಸುವಂತಿದ್ದವು!
ನ್ಯೂ ಈಯರ್ ರೆವೆಲ್ಲರ್​​ಗಳ ಅಮಲಿನ ಹಾವಭಾವಗಳು ನಗೆ ಹುಟ್ಟಿಸುವಂತಿದ್ದವು!
ಗುಂಡಿನ ಮತ್ತೇ ಗಮ್ಮತ್ತು, ಗೆಳೆಯ ಹೊತ್ತೊಯ್ಯದಿದ್ದರೆ ಕಾದಿತ್ತು ಆಪತ್ತು
ಗುಂಡಿನ ಮತ್ತೇ ಗಮ್ಮತ್ತು, ಗೆಳೆಯ ಹೊತ್ತೊಯ್ಯದಿದ್ದರೆ ಕಾದಿತ್ತು ಆಪತ್ತು
ಕಂಠಮಟ್ಟ ಕುಡಿದು ರಸ್ತೆಯಲ್ಲಿ ಓಲಾಡುತ್ತಇತರರ ಕಣ್ಣಿಗೆ ಆಹಾರವಾದ ಯುವತಿಯರು
ಕಂಠಮಟ್ಟ ಕುಡಿದು ರಸ್ತೆಯಲ್ಲಿ ಓಲಾಡುತ್ತಇತರರ ಕಣ್ಣಿಗೆ ಆಹಾರವಾದ ಯುವತಿಯರು
New Year Party: ಕೋರಮಂಗಲದಲ್ಲಿ ಮದ್ಯದ ಮತ್ತಲ್ಲಿ ತೂರಾಡಿದ ಯುವಕ ಯುವತಿಯರು
New Year Party: ಕೋರಮಂಗಲದಲ್ಲಿ ಮದ್ಯದ ಮತ್ತಲ್ಲಿ ತೂರಾಡಿದ ಯುವಕ ಯುವತಿಯರು
ಹೊಸ ವರ್ಷಾಚರಣೆಗೆ ಮೈಸೂರಿನಲ್ಲಿ ಯುವತಿಯರ ಮಸ್ತ್ ಡ್ಯಾನ್ಸ್: ವಿಡಿಯೋ ನೋಡಿ
ಹೊಸ ವರ್ಷಾಚರಣೆಗೆ ಮೈಸೂರಿನಲ್ಲಿ ಯುವತಿಯರ ಮಸ್ತ್ ಡ್ಯಾನ್ಸ್: ವಿಡಿಯೋ ನೋಡಿ
ಮೂರು ತಿಂಗಳು ದೂರ ಇದ್ದ ಅಕ್ಕನ ಮರೆತ ತಮ್ಮ; ಮೋಕ್ಷಿತಾ ಕಣ್ಣೀರು ನೋಡಿ
ಮೂರು ತಿಂಗಳು ದೂರ ಇದ್ದ ಅಕ್ಕನ ಮರೆತ ತಮ್ಮ; ಮೋಕ್ಷಿತಾ ಕಣ್ಣೀರು ನೋಡಿ
ಹೊಸ ಸಂಖ್ಯಾ ವರ್ಷದ ಆಚರಣೆ ವಿಧಾನ ಹೇಗಿರಬೇಕು ನೋಡಿ
ಹೊಸ ಸಂಖ್ಯಾ ವರ್ಷದ ಆಚರಣೆ ವಿಧಾನ ಹೇಗಿರಬೇಕು ನೋಡಿ
ಹೊಸ ವರ್ಷದ ಮೊದಲ ದಿನ ಹೇಗಿದೆ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ಹೊಸ ವರ್ಷದ ಮೊದಲ ದಿನ ಹೇಗಿದೆ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆ ವೇಳೆ ಅಸಭ್ಯ ವರ್ತನೆ: ಜನರಿಂದ ಧರ್ಮದೇಟು
ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆ ವೇಳೆ ಅಸಭ್ಯ ವರ್ತನೆ: ಜನರಿಂದ ಧರ್ಮದೇಟು
ಗುಡ್​ಬೈ 2024: ವೆಲ್​ಕಮ್​ 2025, ಜನರ ಜೋಶ್ ನೋಡಿ
ಗುಡ್​ಬೈ 2024: ವೆಲ್​ಕಮ್​ 2025, ಜನರ ಜೋಶ್ ನೋಡಿ