ಪಂಚರಾಜ್ಯಗಳಲ್ಲಿ ಸೋಲಿನ ಆತ್ಮಾವಲೋಕನ: ಕಾಂಗ್ರೆಸ್​ನಿಂದ ಇಂದು ಎರಡು ಮುಖ್ಯ ಸಭೆ

ಪಕ್ಷದ ಸಂಸದೀಯ ನಡಾವಳಿಗಳನ್ನು ರೂಪಿಸುವ ಸಮಿತಿಯು ಇಂದು ಸಭೆ ನಡೆಸಲಿದ್ದು, ಮಾರ್ಚ್ 14ರಿಂದ ಆರಂಭವಾಗಲಿರುವ ಬಜೆಟ್ ಅಧಿವೇಶನದಲ್ಲಿ ಪಕ್ಷ ಪ್ರಸ್ತಾಪಿಸಬೇಕಾದ ವಿಷಯಗಳ ಬಗ್ಗೆ ಚರ್ಚಿಸಲಿದೆ.

ಪಂಚರಾಜ್ಯಗಳಲ್ಲಿ ಸೋಲಿನ ಆತ್ಮಾವಲೋಕನ: ಕಾಂಗ್ರೆಸ್​ನಿಂದ ಇಂದು ಎರಡು ಮುಖ್ಯ ಸಭೆ
ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Mar 13, 2022 | 8:41 AM

ದೆಹಲಿ: ಇತ್ತೀಚೆಗೆ ನಡೆದ ಐದು ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಪಕ್ಷದ ಹಿನ್ನಡೆ ಕುರಿತು ಚರ್ಚಿಸಲು ಕಾಂಗ್ರೆಸ್ ಪಕ್ಷವು ಉನ್ನತ ಮಟ್ಟದ ಕಾರ್ಯಕಾರಿ ಸಮಿತಿ ಸಭೆಯನ್ನು (Congress Working Committee Meeting) ಕರೆದಿದೆ. ಭವಿಷ್ಯದಲ್ಲಿ ಪಕ್ಷವು ತುಳಿಯಬೇಕಿರುವ ಹಾದಿಯ ಬಗ್ಗೆಯೂ ಸಭೆಯಲ್ಲಿ ವಿಸ್ತೃತ ಚರ್ಚೆ ನಡೆಯಲಿದೆ. ಪಕ್ಷದ ಸಂಸದೀಯ ನಡಾವಳಿಗಳನ್ನು ರೂಪಿಸುವ ಸಮಿತಿಯು ಇಂದು ಸಭೆ ನಡೆಸಲಿದ್ದು, ಮಾರ್ಚ್ 14ರಿಂದ ಆರಂಭವಾಗಲಿರುವ ಬಜೆಟ್ ಅಧಿವೇಶನದಲ್ಲಿ ಪಕ್ಷ ಪ್ರಸ್ತಾಪಿಸಬೇಕಾದ ವಿಷಯಗಳ ಬಗ್ಗೆ ಚರ್ಚಿಸಲಿದೆ.

ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಪಕ್ಷದ ಎಲ್ಲ ನಾಯಕರನ್ನು ಸಭೆಗೆ ಆಹ್ವಾನಿಸಿದ್ದು, ಮುಕ್ತವಾಗಿ ಮಾತನಾಡುವಂತೆ ಮನವಿ ಮಾಡಿದ್ದಾರೆ. ಆದರೆ G23 ಸೇರಿದಂತೆ, ಪಕ್ಷದ ಉನ್ನತ ನಾಯಕತ್ವದ ವಿರುದ್ಧ ಯಾರೇ ಮಾತನಾಡಲು ಮುಂದಾದರೂ ಅಂಥ ಪ್ರಯತ್ನಗಳನ್ನು ಪ್ರತಿ ಹಂತಗಳಲ್ಲಿಯೂ ವಿರೋಧಿಸಲಾಗುವುದು. ವಿಧಾನಸಭಾ ಚುನಾವಣೆಗಳ ಫಲಿತಾಂಶ ಪ್ರಕಟವಾದ ಮೂರು ದಿನಗಳ ನಂತರ ಕೇಂದ್ರ ಕಾರ್ಯಕಾರಿ ಸಮಿತಿ ಸಭೆ ಕರೆದಿರುವುದು ಮಹತ್ವದ ವಿದ್ಯಮಾನ ಎನಿಸಿದೆ. ಫಲಿತಾಂಶ ಪ್ರಕಟವಾದ ಹಲವು ವಾರಗಳ ನಂತರ ಇಂಥ ಸಭೆಗಳನ್ನು ಈ ಹಿಂದೆ ಸಾಮಾನ್ಯವಾಗಿ ಕರೆಯಲಾಗುತ್ತಿತ್ತು.

G23 ಗುಂಪು ಎಂದೇ ಪ್ರಸಿದ್ಧವಾದ ಕಾಂಗ್ರೆಸ್ ಪಕ್ಷದ ಕೆಲ ಪ್ರಮುಖ ನಾಯಕರು 2020ರಲ್ಲಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಪತ್ರ ಬರೆದು, ಪಕ್ಷದ ಕಾರ್ಯನಿರ್ವಹಣೆಯನ್ನು ಪ್ರಶ್ನಿಸಿದ್ದರು. ಪಕ್ಷವು ಇಡಿಯಾಗಿ ಸುಧಾರಣೆ ಆಗಬೇಕಿದೆ. ಅದಕ್ಕೆ ಪೂರಕ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದ್ದರು.

ಇಂದು ನಡೆಯಲಿರುವ ಕೇಂದ್ರ ಕಾರ್ಯಕಾರಿ ಸಮಿತಿ ಸಭೆಯು ಪಕ್ಷದ ಉನ್ನತ ನಾಯಕತ್ವವನ್ನು ಟೀಕಿಸಲು ವೇದಿಕೆ ಒದಗಿಸುವುದಿಲ್ಲ. ಅದಕ್ಕೆ ಮೀರಿದ ಸಂಕಷ್ಟವು ಪಕ್ಷಕ್ಕೆ ಎದುರಾಗಿದೆ. ಹೀಗಾಗಿ ಪರಿಹಾರಗಳನ್ನು ಹುಡುಕುವ ಪ್ರಯತ್ನಕ್ಕೆ ಈ ಸಭೆ ಸೀಮಿತವಾಗಿರುತ್ತದೆ. ಯಾವುದೇ ಸಮಸ್ಯೆಗೆ ಒಬ್ಬ ನಾಯಕ ಅಥವಾ ನಾಯಕಿ ಕಾರಣ ಎಂದು ದೋಷಾರೋಪ ಹೊರಿಸುವುದು ತಪ್ಪಾಗುತ್ತದೆ ಎಂದು ಕೇಂದ್ರ ಕಾರ್ಯಕಾರಿ ಸಮಿತಿಯ ಹಿರಿಯ ನಾಯಕರೊಬ್ಬರು ಹಿಂದೂಸ್ತಾನ್ ಟೈಮ್ಸ್​ಗೆ ಪ್ರತಿಕ್ರಿಯಿಸಿದ್ದಾರೆ. ಪಕ್ಷದ ವತಿಯಿಂದ ವಿವಿಧ ರಾಜ್ಯಗಳ ಉಸ್ತುವಾರಿಗಳಾಗಿದ್ದವರು ಪಕ್ಷದ ಚುನಾವಣಾ ಸಾಧನೆಯ ಕುರಿತು ಪ್ರತ್ಯೇಕವಾಗಿ ತಮ್ಮ ವರದಿಗಳನ್ನು ಸಭೆಯಲ್ಲಿ ಮಂಡಿಸಲಿದ್ದಾರೆ. ಯಾವುದೇ ರಾಜ್ಯದ ಉಸ್ತುವಾರಿಯಿಂದ ರಾಜೀನಾಮೆ ಪಡೆಯುವ ಉದ್ದೇಶವೂ ಈ ಹಂತದಲ್ಲಿ ಪಕ್ಷದ ಉನ್ನತ ನಾಯಕತ್ವಕ್ಕೆ ಇಲ್ಲ.

ಇದೇ ಸಭೆಯಲ್ಲಿ ಕಾಂಗ್ರೆಸ್​ನ ಮುಂಚೂಣಿ ನಾಯಕರಿಂದ ರಾಜೀನಾಮೆ ಪಡೆದುಕೊಳ್ಳಲಾಗುವುದು ಎಂಬ ವರದಿಗಳನ್ನು ಕಾಂಗ್ರೆಸ್ ನಾಯಕ ರಣದೀಪ್ ಸುರ್ಜೆವಾಲಾ ತಳ್ಳಿ ಹಾಕಿದ್ದಾರೆ. ಮತಎಣಿಕೆ ಪ್ರಕ್ರಿಯೆ ಚಾಲ್ತಿಯಲ್ಲಿದ್ದಾಗಲೇ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಕೆಲ ನಾಯಕರಿಗೆ ಕರೆ ಮಾಡಿ ಪರಿಸ್ಥಿತಿಯ ಮಾಹಿತಿ ಪಡೆದುಕೊಂಡಿದ್ದರು. ಆದರೆ ಚುನಾವಣೆಯ ನಂತರ G23 ಗುಂಪಿನಲ್ಲಿರುವ ಯಾವೊಬ್ಬ ನಾಯಕರೊಂದಿಗೂ ಸೋನಿಯಾ ಮಾತನಾಡಿಲ್ಲ ಎಂದು ಕಾಂಗ್ರೆಸ್​ ಪಕ್ಷದ ಉನ್ನತ ಮೂಲಗಳು ಹೇಳಿವೆ.

ಪಂಜಾಬ್​ನಲ್ಲಿ ಆಮ್ ಆದ್ಮಿ ಪಕ್ಷದ ಗೆಲುವು ಕಾಂಗ್ರೆಸ್​ಗೆ ಎಚ್ಚರಿಕೆಯ ಗಂಟೆಯಾಗಬೇಕು. ಬಿಜೆಪಿ ವಿರೋಧಿ ಮತಗಳಿಗೆ ಮತ್ತೊಂದು ಪಕ್ಷದ ಅಸ್ತಿತ್ವಕ್ಕೆ ಬಂದಿರುವುದನ್ನು ಈ ಬೆಳವಣಿಗೆಯು ಎತ್ತಿ ತೋರಿಸುತ್ತದೆ ಎಂದು G23 ಗುಂಪಿನ ಕೆಲ ನಾಯಕರು ಅಭಿಪ್ರಾಯಪಟ್ಟಿದ್ದರು. ಆದರೆ ಈ ಆರೋಪಗಳನ್ನು ತಳ್ಳಿಹಾಕಿದ್ದ ಕೆಲ ನಾಯಕರು, ಬಿಜೆಪಿಯು ಅಧಿಕಾರದಿಂದ ದೂರ ಇರುವವರೆಗೆ ಈ ವಿಷಯಗಳಿಗೆ ತಲೆಕೆಡಿಸಿಕೊಳ್ಳಬೇಕಿಲ್ಲ. ರಾಷ್ಟ್ರಮಟ್ಟದಲ್ಲಿ ಕಾಂಗ್ರೆಸ್​ಗೆ ಆಪ್​ ಸವಾಲು ಹಾಕಬಲ್ಲದು ಎನ್ನುವುದನ್ನು ನಂಬಲು ಆಗುವುದಿಲ್ಲ ಎಂದು ಹೇಳಿದ್ದರು.

ಈ ವರ್ಷಾಂತ್ಯದಲ್ಲಿ ಕಾಂಗ್ರೆಸ್ ಪಕ್ಷವು ಸಂಘಟನಾತ್ಮಕ ಬದಲಾವಣೆಗಳನ್ನು ಚರ್ಚಿಸಲು ಉದ್ದೇಶಿಸಿದೆ. ರಾಹುಲ್ ಗಾಂಧಿ ಅವರು ಮತ್ತೆ ಪಕ್ಷದಲ್ಲಿ ಸಕ್ರಿಯರಾಗಬೇಕು ಎಂದು ಹಲವರು ಮನವಿ ಮಾಡುವ ಸಾಧ್ಯತೆಯೂ ಇದೆ ಆದರೆ ರಾಹುಲ್ ಗಾಂಧಿ ಅವರು ಈವರೆಗೂ ಈ ಸಂಬಂಧ ಏನನ್ನೂ ಹೇಳಿಲ್ಲ.

ಇದನ್ನೂ ಓದಿ: ಕಾಂಗ್ರೆಸ್ ಸದಸ್ಯತ್ವ ಹೆಚ್ಚಿಗೆ ಮಾಡಿಸಿದ ಕಾರ್ಯಕರ್ತರಿಗೆ ಗಿಫ್ಟ್; ಸಿದ್ದರಾಮಯ್ಯ ಕ್ಷೇತ್ರದಲ್ಲಿ ಬಂಪರ್ ಆಫರ್!

ಇದನ್ನೂ ಓದಿ: ಯಡಿಯೂರಪ್ಪರನ್ನು ಹಾಡಿಹೊಗಳಿದ ಕಾಂಗ್ರೆಸ್ ನೂತನ ಎಂಎಲ್​ಸಿ ಮಂಜುನಾಥ್ ಭಂಡಾರಿ: ಮಧು ಬಂಗಾರಪ್ಪ ಸೇರಿ ಹಲವರಿಗೆ ಅಚ್ಚರಿ

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್