ಹುಬ್ಬಳ್ಳಿ: ಮತ್ತೆ ಬಿಜೆಪಿ​ ಎಂಎಲ್​ಸಿ ಪ್ರದೀಪ್ ಶೆಟ್ಟರ್ ಕಡೆಗಣನೆ; ಶಾಸಕರ ಕಾರ್ಯಾಲಯ ಉದ್ಘಾಟನಾ ಪೋಸ್ಟರ್​ನಲ್ಲಿ ಫೋಟೋ ಮಿಸ್

ಜಗದೀಶ್ ಶೆಟ್ಟರ್ ವಿರುದ್ದವೇ ಗೆದ್ದು ಶಾಸಕರಾಗಿರುವ ಮಹೇಶ್ ಟೆಂಗಿನಕಾಯಿ ಅವರ ಜನ ಸಂಪರ್ಕ ಕಾರ್ಯಾಲಯ ಉದ್ಘಾಟನೆ ಪೋಸ್ಟರ್​ ಅಲ್ಲಿ ಜಗದೀಶ್ ಶೆಟ್ಟರ್ ಸಹೋದರ ಆಗಿರುವ ಪ್ರದೀಪ್​ ಶೆಟ್ಟರ್ ಫೋಟೋ ಹಾಕದೇ ಮತ್ತೊಮ್ಮೆ ಕಡೆಗಣನೆ ಮಾಡಿದ್ದಾರೆ.​

ಹುಬ್ಬಳ್ಳಿ: ಮತ್ತೆ ಬಿಜೆಪಿ​ ಎಂಎಲ್​ಸಿ ಪ್ರದೀಪ್ ಶೆಟ್ಟರ್ ಕಡೆಗಣನೆ; ಶಾಸಕರ ಕಾರ್ಯಾಲಯ ಉದ್ಘಾಟನಾ ಪೋಸ್ಟರ್​ನಲ್ಲಿ ಫೋಟೋ ಮಿಸ್
ಎಂಎಲ್​ಸಿ ಪ್ರದೀಪ್​ ಶೆಟ್ಟರ್​
Follow us
ಶಿವಕುಮಾರ್ ಪತ್ತಾರ್. ಹುಬ್ಬಳ್ಳಿ
| Updated By: ಕಿರಣ್ ಹನುಮಂತ್​ ಮಾದಾರ್

Updated on: Sep 09, 2023 | 8:56 PM

ಹುಬ್ಬಳ್ಳಿ, ಸೆ.09: ವಿಧಾನಪರಿಷತ್​ನ​ ಬಿಜೆಪಿ ಸದಸ್ಯ ಪ್ರದೀಪ್ ಶೆಟ್ಟರ್ (Pradeep Shettar) ಅವರನ್ನು ಮತ್ತೆ ಪಕ್ಷದಲ್ಲಿ ಕಡೆಗಣಿಸಲಾಗಿದೆ. ಹೌದು, ಸೆ.11ರಂದು ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಬಿಜೆಪಿ (BJP) ಶಾಸಕ ಮಹೇಶ್ ಟೆಂಗಿನಕಾಯಿ ಅವರ ಕಾರ್ಯಾಲಯ ಉದ್ಘಾಟನೆ ಪೋಸ್ಟರ್​ನಲ್ಲಿ ಪ್ರದೀಪ್ ಶೆಟ್ಟರ್​ ಅವರ ಫೋಟೋ‌ ಮಿಸ್ ಆಗಿದೆ.​ ಇನ್ನು ಕೆಲ ದಿನಗಳ ಹಿಂದೆ ಎಂಎಲ್​ಸಿ ಪ್ರದೀಪ್ ಶೆಟ್ಟರ್ ಸ್ವ ಪಕ್ಷದ ವಿರುದ್ಧ ಸನ್ಮಾನಕ್ಕೆ ಆಹ್ವಾನಿಸಿಲ್ಲ ಎಂದು ಬೇಸರ ಹೊರಹಾಕಿದ್ದರು. ಬಳಿಕ ಬಿಜೆಪಿ ಮುಖಂಡರು ಪ್ರದೀಪ್​ರನ್ನು ಕಚೇರಿಗೆ ಕರೆಸಿ ಸಭೆ ಮಾಡಿದ್ದರು.

ಉದ್ಘಾಟನೆ ಪೋಸ್ಟರ್​ನಲ್ಲಿ ಪುನಃ ಫೋಟೋ ಮಿಸ್

ಜಗದೀಶ್ ಶೆಟ್ಟರ್ ವಿರುದ್ದವೇ ಗೆದ್ದು ಶಾಸಕರಾಗಿರುವ ಮಹೇಶ್ ಟೆಂಗಿನಕಾಯಿ ಅವರ ಜನ ಸಂಪರ್ಕ ಕಾರ್ಯಾಲಯ ಉದ್ಘಾಟನೆ ಪೋಸ್ಟರ್​ ಅಲ್ಲಿ ಜಗದೀಶ್ ಶೆಟ್ಟರ್ ಸಹೋದರ ಆಗಿರುವ ಪ್ರದೀಪ್​ ಶೆಟ್ಟರ್ ಫೋಟೋ ಹಾಕದೇ ಕಡೆಗಣನೆ ಮಾಡಿದ್ದಾರೆ. ಫೋಸ್ಟರ್​ನಲ್ಲಿ ಮೋದಿ, ಶಾ, ಜೋಶಿ, ಮೇಯರ್​ ಫೋಟೋ ಇದ್ದರೂ ಎಂಎಲ್​ಸಿ ಫೋಟೋ ಮಿಸ್ ಆಗಿದೆ.

ಇದನ್ನೂ ಓದಿ:ಪ್ರದೀಪ್ ಶೆಟ್ಟರ್ ಅವರಿಂದ ಇಂತಹ ಹೇಳಿಕೆ ನಿರೀಕ್ಷಿಸಿರಲಿಲ್ಲ: ಧಾರವಾಡ ಗ್ರಾಮಾಂತರ ಜಿಲ್ಲಾ ಬಿಜೆಪಿ ಅಧ್ಯಕ್ಷ

ಸ್ವ ಪಕ್ಷದ ವಿರುದ್ಧವೇ ಬೇಸರ ವ್ಯಕ್ತಪಡಿಸಿದ್ದ ಪ್ರದೀಪ್​ ಶೆಟ್ಟರ್​

ಸೆ.3 ರಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ್ದ ಅವರು ‘ಬಿಜೆಪಿಯಲ್ಲಿ ಲಿಂಗಾಯತ ನಾಯಕರನ್ನು ಮೂಲೆಗುಂಪು ಮಾಡುವ ಕೆಲಸ ವ್ಯವಸ್ಥಿತವಾಗಿ ನಡೆಯುತ್ತಿದೆ. ಈ ಪ್ರವೃತ್ತಿಯಿಂದ ಬೇಸತ್ತು ಸಮುದಾಯದ ಅನೇಕ ನಾಯಕರು ಬಿಜೆಪಿ ಪಕ್ಷದಿಂದ ಒಂದು ಹೆಜ್ಜೆ ಹೊರ ಹಾಕಿದ್ದಾರೆ. ಅದು ಅಲ್ಲದೇ ಪಕ್ಷದಲ್ಲಿ ನಾಯಕತ್ವದ ಕೊರತೆ ಇದ್ದಂತಿದೆ. ಜೊತೆಗೆ ವಿರೋಧ ಪಕ್ಷದ ನಾಯಕನನ್ನು ಇನ್ನು ಆಯ್ಕೆ ಮಾಡಿಲ್ಲ. ಹೀಗಿದ್ದಾಗ ನಮ್ಮ ಸಮಸ್ಯೆಯನ್ನು ಯಾರ ಬಳಿ ಹೇಳಿಕೊಳ್ಳುವುದು ಎಂದು ಬೇಸರ ಹೊರ ಹಾಕಿದ್ದರು.

ಮತ್ತಷ್ಟು ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ