Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೆನೆ ಹೊತ್ತ ಮಹಿಳೆ ಬಹುತೇಕ ಕಮಲ ಮುಡಿಯುವುದು ಫಿಕ್ಸ್, BJP ಜತೆ ಮೈತ್ರಿ ಹಿಂದಿದೆ ಜೆಡಿಎಸ್​ ಲೆಕ್ಕಾಚಾರ!

ಕರ್ನಾಟಕದಲ್ಲಿ ಕಾಂಗ್ರೆಸ್ ಅಲೆಯನ್ನ ಛಿದ್ರಗೊಳಿಸಲು ಕಮಲ-ದಳ ದೋಸ್ತಿ ರಾಜ್ಯ ರಾಜಕೀಯದಲ್ಲಿ ಸದ್ಯದ ಹಾಟ್‌ಟಾಪಿಕ್. ಅದಕ್ಕೆ ಕಾರಣ ಹೆಚ್‌ಡಿ ಕುಮಾರಸ್ವಾಮಿ ನಡೆ ದೆಹಲಿಯತ್ತ ನೆಟ್ಟಿರುವುದು. ಹಾಗಾದ್ರೆ, ದಳ ಮತ್ತು ಬಿಜೆಪಿಯ ಲೆಕ್ಕಾಚಾರವೇನು?

ತೆನೆ ಹೊತ್ತ ಮಹಿಳೆ ಬಹುತೇಕ ಕಮಲ ಮುಡಿಯುವುದು ಫಿಕ್ಸ್, BJP ಜತೆ ಮೈತ್ರಿ ಹಿಂದಿದೆ ಜೆಡಿಎಸ್​ ಲೆಕ್ಕಾಚಾರ!
ಕುಮಾರಸ್ವಾಮಿ-ನರೇಂದ್ರ ಮೋದಿ
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on: Jul 17, 2023 | 7:30 AM

ಬೆಂಗಳೂರು, (ಜುಲೈ 17): ಬಿಜೆಪಿಯನ್ನು ಕಟ್ಟಿಹಾಕಲು ಮಹಾಘಟಬಂಧನ್ ನಾಯಕರು ಬೆಂಗಳೂರಲ್ಲಿ ಇಂದಿನಿಂದ ಒಗ್ಗಟ್ಟು ಪ್ರದರ್ಶನಕ್ಕೆ ಸಜ್ಜಾಗಿದ್ದಾರೆ. ಆದ್ರೆ, ದಳಪತಿ ಹೆಚ್​ಡಿ ಕುಮಾರಸ್ವಾಮಿ ಬಿಜೆಪಿ ಜೊತೆ ಸಖ್ಯ ಬೆಳೆಸಲು ದೆಹಲಿಗೆ ತೆರಳುವ ಸಾಧ್ಯತೆ ದಟ್ಟವಾಗಿದೆ. ತೆನೆ ಹೊತ್ತ ಮಹಿಳೆ ಬಹುತೇಕ ಕಮಲ ಮುಡಿಯೋದು ಫಿಕ್ಸ್ ಆಗಿದ್ದು, ದೆಹಲಿಯಲ್ಲಿ ಅಂತಿಮ ಮುದ್ರೆ ಬೀಳುವ ಸಾಧ್ಯತೆ ದಟ್ಟವಾಗಿದೆ. ಹೌದು ಇಂದು ಅಥವಾ ನಾಳೆ ಹೆಚ್‌.ಡಿ ಕುಮಾರಸ್ವಾಮಿ ದೆಹಲಿಗೆ ಪ್ರಯಾಣ ಬೆಳೆಸಲಿದ್ದು, NDA ಸಭೆಗೂ ಮುನ್ನ ಬಿಜೆಪಿ ನಾಯಕರ ಜೊತೆ ಮಾತುಕತೆ ನಡೆಸುವ ಸಾಧ್ಯತೆ ಇದೆ. ಈಗಾಗಲೇ ಪ್ರಧಾನಿ ಮೋದಿ ಜತೆಗೆ ಉತ್ತಮ ಬಾಂಧವ್ಯದ ಮಾತುಗಳನ್ನಾಡಿರುವ ಮಾಜಿ ಸಿಎಂ ಕುಮಾರಸ್ವಾಮಿ, ಕಮಲ ಮುಡಿಯುವು ಫಿಕ್ಸ್ ಆಗಿದೆ.

ಇದನ್ನೂ ಓದಿ: ಹಳೆದೋಸ್ತಿಗಳನ್ನು ಒಗ್ಗೂಡಿಸಲು ಬಿಜೆಪಿ ಸರ್ಕಸ್​​! ಲೋಕಸಭೆಗೆ ಒಂದಾಗೋಣ ಬನ್ನಿ ಎನ್ನುತ್ತಿದೆ‌ ಬಿಜೆಪಿ!

ಲೋಕಸಭಾ ಚುನಾವಣೆಯಲ್ಲಿ BJP ಜೊತೆ JDS ಮೈತ್ರಿ ಫಿಕ್ಸ್?

ಬಿಜೆಪಿ ಕಟ್ಟಿಹಾಕಲು ವಿರೋಧ ಪಕ್ಷಗಳು ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಜ್ಜಾಗಿವೆ. ಇದರ ಮಧ್ಯೆ ಬಿಜೆಪಿ ಸಹ ತನ್ನ ಬಲ ಹೆಚ್ಚಿಸಿಕೊಳ್ಳಲು ಜುಲೈ 18ರಂದು ಸಭೆ ನಡೆಸುತ್ತಿದೆ. ಎನ್‌ಡಿಎ ಮೈತ್ರಿಕೂಟವನ್ನ ಮತ್ತೆ ಬಲಪಡಿಸಿ ಅಧಿಕಾರದ ಗದ್ದುಗೆ ಉಳಿಸಿಕೊಳ್ಳೋ ಪ್ರಯತ್ನಕ್ಕೆ ಮುಂದಾಗಿದೆ. ಈ ಪೈಕಿ ಜೆಡಿಎಸ್‌ಗೂ ಗಾಳ ಹಾಕಿದೆ. ಹೆಚ್‌ಡಿ ಕುಮಾರಸ್ವಾಮಿ ಸಹ ಬಿಜೆಪಿ ಜೊತೆ ಮೈತ್ರಿಗೆ ಒಲವು ಹೊಂದಿದ್ದಾರೆ ಎನ್ನಲಾಗಿದ್ದು, ನಾಡಿದ್ದಿನ ಸಭೆ ಬಳಿಕ ಮೈತ್ರಿ ಬಹುತೇಕ ಫಿಕ್ಸ್ ಆಗಲಿದೆ ಎಂದು ಹೇಳಲಾಗಿದೆ. ಈಗಾಗಲೇ ಮಹಾರಾಷ್ಟ್ರದ ಶಿವಸೇನೆಯ ಏಕನಾಥ್‌ ಶಿಂಧೆ ಬಣ, ಎನ್‌ಸಿಪಿಯ ಅಜಿತ್‌ ಪವಾರ್‌ ಬಣ ಎನ್‌ಡಿಎ ಕಡೆ ವಾಲಿದ್ದಾರೆ. ಹಳೇ ಮಿತ್ರಪಕ್ಷಗಳಾದ ಶಿರೋಮಣಿ ಅಖಾಲಿದಳ, ತೆಲುಗುದೇಶಂ ಪಾರ್ಟಿಗೂ ನಡ್ಡಾ ಆಹ್ವಾನ ಹೋಗಿದೆ. ಇನ್ನು, ಹೊಸ ಪಕ್ಷ ಪವನ್‌ ಕಲ್ಯಾಣ್‌ರ ಜನಸೇನಾ ಕೂಡಾ ಎನ್‌ಡಿಎ ಜತೆ ಗುರುತಿಸಿಕೊಳ್ಳುವುದು ಬಹುತೇಕ ಖಚಿತವಾಗಿದೆ. ಆದ್ರೆ, ಜೆಡಿಎಸ್‌ ನಾಯಕ ಕುಮಾರಸ್ವಾಮಿ ಈವರೆಗೆ ತಮ್ಮ ನಡೆಯ ಬಗ್ಗೆ ಯಾವುದೇ ಸ್ಪಷ್ಟನೆ ನೀಡಿಲ್ಲ.. ಆದ್ರೆ, ಬಿಜೆಪಿ ನಾಯಕರು ಸಣ್ಣ ಸುಳಿವು ಕೊಟ್ಟಿದ್ದಾರೆ.

BJP ಜೊತೆಯ ಮೈತ್ರಿಯ ಹಿಂದೆ ಜೆಡಿಎಸ್​ ಲೆಕ್ಕಾಚಾರ!

ಅಷ್ಟಕ್ಕೂ ಕುಮಾರಸ್ವಾಮಿ ಈ ಹೆಜ್ಜೆ ಇಟ್ಟಿರುವುದರ ಹಿಂದೆಯ ಭಾರೀ ಲೆಕ್ಕಾಚಾರವೂ ಅಡಗಿದೆ. ಬಿಜೆಪಿ ಮೈತ್ರಿಕೂಟ ಸೇರಿದ್ರೆ ಚುನಾವಣೆಯಲ್ಲಿ ಮತ್ತಷ್ಟು ಬಲ ಸಿಗಲಿದೆ, 2 ಪಕ್ಷ ಮೈತ್ರಿಯಾದ್ರೆ ಕಾಂಗ್ರೆಸ್​ ಎದುರಿಸುವುದು ಸುಲಭವಾಗಲಿದೆ ಎನ್ನುವ ಲೆಕ್ಕಾಚಾರವಿದೆ. ಹಾಗೆಯೇ ಹಳೇ ಮೈಸೂರು ಭಾಗದಲ್ಲಿ 3-4 ಸ್ಥಾನ ಗೆಲ್ಲಲು ಅವಕಾಶ ಸಿಗಲಿದ್ದು, ಈಗಾಗಲೇ ಒಂದು ತಿಂಗಳ ಹಿಂದೆ ಬಿಜೆಪಿ ನಾಯಕರನ್ನ ಕುಮಾರಸ್ವಾಮಿ ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ. ಇದೀಗ ಮತ್ತೆ ದೆಹಲಿ ಬಿಜೆಪಿ ನಾಯಕರನ್ನ ಹೆಚ್‌ಡಿಕೆ ಭೇಟಿಯಾಗುತ್ತಿರುವುದು ತೀವ್ರು ಕುತೂಹಲಕ್ಕೆ ಕಾರಣವಾಗಿದೆ. ಇನ್ನೂ ಈ ಬಗ್ಗೆ ಪ್ರತಿಕ್ರಿಯಿಸಿರೋ ಪ್ರತಿಕ್ರಿಯಿಸಿರುವ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಜೆಡಿಎಸ್ ಜೊತೆ ಮೈತ್ರಿ ನಮ್ಮ ವರಿಷ್ಠರಿಗೆ ಬಿಟ್ಟಿದ್ದು ಎಂದಿದ್ದಾರೆ.

ಕ್ಷೇತ್ರ ಹಂಚಿಕೆ ಗೊಂದಲ

ಹಳೇ ಮೈಸೂರು ಭಾಗದಲ್ಲಿಯೇ ಜೆಡಿಎಸ್‌ ಪ್ರಾಬಲ್ಯ ಹೊಂದಿದೆ. ಹೀಗಾಗಿಯೇ ಈ ಭಾಗದ ಲೋಕಸಭಾ ಕ್ಷೇತ್ರಗಳನ್ನೇ ತನಗೆ ಬಿಟ್ಟುಕೊಡುವಂತೆ ಕೇಳುವುದು ಸಾಧ್ಯತೆಗಳು ಹೆಚ್ಚಿವೆ. ಹಾಸನ, ಮಂಡ್ಯ, ಮೈಸೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ ಹಾಗೂ ತುಮಕೂರು ಲೋಕಸಭಾ ಕ್ಷೇತ್ರಗಳಿಗೆ ಬೇಡಿಕೆ ಇಡುವ ನಿರೀಕ್ಷೆಯಿದೆ ಎಂದು ತಿಳಿದುಬಂದಿದೆ. ಆದ್ರೆ, ಜೆಡಿಎಸ್‌ ನಿರೀಕ್ಷೆಯಲ್ಲಿರುವ ಕ್ಷೇತ್ರಗಳ ಪೈಕಿ ನಾಲ್ಕರಲ್ಲಿ ಬಿಜೆಪಿಯ ಹಾಲಿ ಸಂಸದರಿದ್ದಾರೆ. ಕಳೆದ ಲೋಕಸಭಾ ಚುನಾವಣೆಯಲ್ಲಿ 25 ಕ್ಷೇತ್ರಗಳಲ್ಲಿ ಭರ್ಜರಿ ಜಯ ಗಳಿಸಿರುವ ಬಿಜೆಪಿ ಮೈಸೂರು, ಚಿಕ್ಕಬಳ್ಳಾಪುರ, ಕೋಲಾರ ಮತ್ತು ತುಮಕೂರಿನಲ್ಲೂ ಗೆದ್ದಿದೆ. ಮೈಸೂರಿನ ಪ್ರತಾಪ್‌ ಸಿಂಹ ಮತ್ತು ಕೋಲಾರದ ಮುನಿಸ್ವಾಮಿ ಅವರು ಮತ್ತೊಮ್ಮೆ ಸ್ಪರ್ಧಿಸಲು ಮುಂದಾಗಿದ್ದರೆ, ಚಿಕ್ಕಬಳ್ಳಾಪುರದ ಬಿ.ಎನ್‌.ಬಚ್ಚೇಗೌಡ ಮತ್ತು ತುಮಕೂರಿನ ಜಿಎಸ್‌ ಬಸವರಾಜು ವಯಸ್ಸಿನ ಕಾರಣದಿಂದ ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಕಣಕ್ಕಿಳಿಯುವುದಿಲ್ಲ. ಹೀಗಾಗಿ ಕ್ಷೇತ್ರ ಹಂಚಿಕೆಯಲ್ಲೂ ಸಹ ಬಿಜೆಪಿ ಹಾಗೂ ಜೆಡಿಎಸ್​ ಮಧ್ಯೆ ಭಾರೀ ಚರ್ಚೆಗಳು ನಡೆದಿವೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಜೆಡಿಎಸ್ ವಿರುದ್ಧ ವಾಗ್ದಾಳಿ

BJP ಬಿ ಟೀಂ JDS ಎಂದು ನಾವು ಅನೇಕ ಬಾರಿ ಹೇಳಿದ್ದೆವು. ಈಗ ಕುಮಾರಸ್ವಾಮಿ ನಮ್ಮ ಮಾತು ಸತ್ಯ ಎಂಬುದನ್ನು ನಿರೂಪಿಸಲು ಹೊರಟಿದ್ದಾರೆ. JDS ಪಕ್ಷಕ್ಕೆ ಯಾವುದೇ ತತ್ವ ಸಿದ್ದಾಂತಗಳಿಲ್ಲ.‌ ಕೋಮುವಾದಿ ಪಕ್ಷ BJP ಜೊತೆಗೆ ಮೈತ್ರಿ ಮಾಡಿಕೊಳ್ಳಲು ಹೊರಟಿರುವ JDSಗೆ ಯಾವ ಸಿದ್ದಾಂತವಿದೆ? ಅದೊಂದು ಅವಕಾಶವಾದಿ ಪಕ್ಷ.‌ ಅಧಿಕಾರಕ್ಕಾಗಿ ಯಾರ ಜೊತೆಗಾದರೂ ಸೈ ಎನ್ನುತ್ತದೆ. JDS ಮುಂದಿರುವ ಜಾತ್ಯಾತೀತ ಎಂಬ ಪದ ಕೇವಲ ಸೋಗಲಾಡಿತನವಷ್ಟೆ. ಹೀಗಂತಾ ಟ್ವೀಟ್ ಮಾಡಿ ಟೀಕಿಸಿರೋ ದಿನೇಶ್ ಗುಂಡೂರಾವ್, ವಿಪಕ್ಷ ನಾಯಕನ ಎರವಲು ಸೇವೆ ನೀಡುತ್ತಿರುವ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳುವ ಬದಲು ವಿಲೀನ ಮಾಡಿಕೊಳ್ಳಲಿ ಅಂತಾ ವ್ಯಂಗ್ಯವಾಡಿದ್ದಾರೆ. ಇನ್ನೂ ಮಾಜಿ ಪ್ರಧಾನಿ ದೇವೇಗೌಡರು ಎತ್ತರಕ್ಕೆ ಬೆಳೆದು ನಿಂತ ನಾಯಕರು. ಜಾತಿಯ ಕೋಮುವಾದಿ ಪಕ್ಷದ ಜೊತೆಗೆ ಹೋಗಲು ಸಾಧ್ಯವಿಲ್ಲ ಎಂದು ಸಚಿವ ಹೆಚ್‌.ಕೆ ಪಾಟೀಲ್ ಹೇಳಿದ್ದಾರೆ.

ಹೀಗೆ ಟೀಕಿಸ್ತಿರೋ ಕೈ ನಾಯಕರಿಗೆ ತೆನೆ ಹೊತ್ತ ಮಹಿಳೆ ಕಮಲ ಮುಡಿದು, ರಾಜ್ಯದಲ್ಲಿ ಕಾಂಗ್ರೆಸ್‌ಗೆ ಟಕ್ಕರ್ ಕೊಡ್ತಾಳಾ? ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್ ಬಿಜೆಪಿ ದೋಸ್ತಿ ಮೋಡಿ ಮಾಡುತ್ತಾ ಎನ್ನುವುದು ಎಂದು ಕಾದು ನೋಡಬೇಕಿದೆ.

ಇನ್ನಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಹನಿಮೂನ್ ಟ್ರಿಪ್​ನಲ್ಲಿ ಹೆಂಡ್ತಿಯೊಂದಿಗಿನ ವಿನಯ್ ನರ್ವಾಲ್​​​ ಕೊನೆ ರೀಲ್ಸ್
ಹನಿಮೂನ್ ಟ್ರಿಪ್​ನಲ್ಲಿ ಹೆಂಡ್ತಿಯೊಂದಿಗಿನ ವಿನಯ್ ನರ್ವಾಲ್​​​ ಕೊನೆ ರೀಲ್ಸ್
ಕಾಶ್ಮೀರಕ್ಕೆ ಉಗ್ರರು ಹೇಗೆ ಬಂದ್ರು? ಅಲ್ಲಿನ ಜನರಿಗೆ ಅನಿರುದ್ಧ್ ಪ್ರಶ್ನೆ
ಕಾಶ್ಮೀರಕ್ಕೆ ಉಗ್ರರು ಹೇಗೆ ಬಂದ್ರು? ಅಲ್ಲಿನ ಜನರಿಗೆ ಅನಿರುದ್ಧ್ ಪ್ರಶ್ನೆ
ಪಹಲ್ಗಾಮ್​ ಭೂಲೋಕದ ಸ್ವರ್ಗ ಎನ್ನುವುದ್ಹೇಕೆ? ಈ ವಿಡಿಯೋ ನೋಡಿ
ಪಹಲ್ಗಾಮ್​ ಭೂಲೋಕದ ಸ್ವರ್ಗ ಎನ್ನುವುದ್ಹೇಕೆ? ಈ ವಿಡಿಯೋ ನೋಡಿ
ಮಂಜುನಾಥ್ ಪಾರ್ಥೀವ ಶರೀರ ಬೆಳಗಿನ ಜಾವ 3 ಗಂಟೆಗೆ ಬೆಂಗಳೂರು ಬರುವ ನಿರೀಕ್ಷೆ
ಮಂಜುನಾಥ್ ಪಾರ್ಥೀವ ಶರೀರ ಬೆಳಗಿನ ಜಾವ 3 ಗಂಟೆಗೆ ಬೆಂಗಳೂರು ಬರುವ ನಿರೀಕ್ಷೆ
ಉಗ್ರರ ಅಟ್ಟಹಾಸದಿಂದ ರಕ್ತಪಾತವಾದ ಪಹಲ್ಗಾಮ್ ಈಗ ಹೇಗಿದೆ ನೋಡಿ...
ಉಗ್ರರ ಅಟ್ಟಹಾಸದಿಂದ ರಕ್ತಪಾತವಾದ ಪಹಲ್ಗಾಮ್ ಈಗ ಹೇಗಿದೆ ನೋಡಿ...
ಕಾಶ್ಮೀರದ ಉಗ್ರರ ದಾಳಿ ಬಗ್ಗೆ ಅಮೆರಿಕ ಉಪಾಧ್ಯಕ್ಷ ವ್ಯಾನ್ಸ್ ಹೇಳಿದ್ದೇನು?
ಕಾಶ್ಮೀರದ ಉಗ್ರರ ದಾಳಿ ಬಗ್ಗೆ ಅಮೆರಿಕ ಉಪಾಧ್ಯಕ್ಷ ವ್ಯಾನ್ಸ್ ಹೇಳಿದ್ದೇನು?
ಬಿಜೆಪಿಯಿಂದ ಹೊರಬಿದ್ದ ಬಳಿಕ ಜನಪ್ರಿಯತೆ ಹೆಚ್ಚುತ್ತಾ ಸಾಗಿದೆ: ಯತ್ನಾಳ್
ಬಿಜೆಪಿಯಿಂದ ಹೊರಬಿದ್ದ ಬಳಿಕ ಜನಪ್ರಿಯತೆ ಹೆಚ್ಚುತ್ತಾ ಸಾಗಿದೆ: ಯತ್ನಾಳ್
ಉಗ್ರರಿಗೆ ಪಾಕಿಸ್ತಾನ ತರಬೇತಿ ನೀಡುತ್ತಿರೋದನ್ನು ಖಂಡಿಸಬೇಕು: ಹರಿಪ್ರಸಾದ್​​
ಉಗ್ರರಿಗೆ ಪಾಕಿಸ್ತಾನ ತರಬೇತಿ ನೀಡುತ್ತಿರೋದನ್ನು ಖಂಡಿಸಬೇಕು: ಹರಿಪ್ರಸಾದ್​​
ಪಹಲ್ಗಾಮ್ ದಾಳಿ: ಹುಟ್ಟುಹಬ್ಬ ಆಚರಣೆ ರದ್ದು ಮಾಡಿದ ಯುವ
ಪಹಲ್ಗಾಮ್ ದಾಳಿ: ಹುಟ್ಟುಹಬ್ಬ ಆಚರಣೆ ರದ್ದು ಮಾಡಿದ ಯುವ
ಪಹಲ್ಗಾಮ್‌ ಉಗ್ರರ ದಾಳಿಯಿಂದ ಗ್ರೇಟ್​ ಎಸ್ಕೆಪ್​ ಆದ ಬಾಗಲಕೋಟೆಯ 13 ಮಂದಿ
ಪಹಲ್ಗಾಮ್‌ ಉಗ್ರರ ದಾಳಿಯಿಂದ ಗ್ರೇಟ್​ ಎಸ್ಕೆಪ್​ ಆದ ಬಾಗಲಕೋಟೆಯ 13 ಮಂದಿ