ಜಾತಿ ಜನಗಣತಿಗೆ ಒತ್ತಾಯಿಸಿದ ರಾಹುಲ್ ಗಾಂಧಿ; ಕರ್ನಾಟಕ ಚುನಾವಣೆ ಹೊತ್ತಲ್ಲಿ ಕಾಂಗ್ರೆಸ್ ಹೊಸ ತಂತ್ರ?

2015ರಲ್ಲಿ ಮುಖ್ಯಮಂತ್ರಿ ಆಗಿದ್ದ ಸಿದ್ದರಾಮಯ್ಯ ಜಾತಿ ಜನಗಮತಿ ಆರಂಭಿಸಿದ್ದರು. ಆದರೆ 2018ರ ವಿಧಾನಸಭಾ ಚುನಾವಣೆವರೆಗೂ ಅದನ್ನು ಬಹಿರಂಗ ಪಡಿಸಲಿಲ್ಲ. ಹೀಗೆ ಜಾತಿ ಜನಗಣತಿಯನ್ನು ಬಿಡುಗಡೆ ಮಾಡಿದರೆ ಇದು ಅವರ ಪಕ್ಷದ ಅವಕಾಶಗಳಿಗೆ ವಿರುದ್ಧವಾಗಿ ಕೆಲಸ ಮಾಡಬಹುದು ಎಂದು ಅವರು ಭಾವಿಸಿದ್ದರು.

ಜಾತಿ ಜನಗಣತಿಗೆ ಒತ್ತಾಯಿಸಿದ ರಾಹುಲ್ ಗಾಂಧಿ; ಕರ್ನಾಟಕ ಚುನಾವಣೆ ಹೊತ್ತಲ್ಲಿ ಕಾಂಗ್ರೆಸ್ ಹೊಸ ತಂತ್ರ?
ನಿತೀಶ್ ಕುಮಾರ್,ತೇಜಸ್ವಿ ಯಾದವ್ ಜತೆ ರಾಹುಲ್ ಸಭೆ ನಡೆಸಿದ್ದರು
Follow us
ರಶ್ಮಿ ಕಲ್ಲಕಟ್ಟ
|

Updated on:Apr 19, 2023 | 7:10 PM

ಕರ್ನಾಟಕ ವಿಧಾನಸಭಾ ಚುನಾವಣೆ (Karnataka elections) ಇನ್ನು ಕೆಲವೇ ದಿನ ಉಳಿದಿರುವಾಗ ರಾಹುಲ್ ಗಾಂಧಿ (Rahul Gandhi) ಜಾತಿ ಆಧಾರಿತ ಜನಗಣತಿಗೆ ಒತ್ತಾಯಿಸಿದ್ದಾರೆ. ಸುಮಾರು 60 ವರ್ಷಗಳಿಂದ ಜಾತಿ ಜನಗಣತಿ (caste census) ವಿರುದ್ಧ ನಿಲುವು ಹೊಂದಿದ್ದ ಕಾಂಗ್ರೆಸ್ 2011ರಲ್ಲಿ ಅದರ ಪರ ನಿಂತಿತ್ತು. ಕರ್ನಾಟಕದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2018ರವರಗೆ ಜಾತಿ ಜನಗಣತಿ ವರದಿಯನ್ನು ಬಿಡುಗಡೆ ಮಾಡಿರಲಿಲ್ಲ. 2011ರಲ್ಲಿ ಯುಪಿಎ ಸಚಿವ ಸಂಪುಟದಲ್ಲಿದ್ದ ಹಿರಿಯ ಸಚಿವರಾದ ಪಿ.ಚಿದಂಬರ, ಆನಂದ್ ಶರ್ಮಾ, ಪವನ್ ಕುಮಾರ್ ಬನ್ಸಾಲ್ ಸೇರಿದಂತೆ ಕಾಂಗ್ರೆಸ್ ಪಕ್ಷ ಹಿರಿಯ ಸಂಸದರ ಜಾತಿ ಜನಗಣತಿಗೆ ವಿರೋಧ ವ್ಯಕ್ತ ಪಡಿಸಿದ ಹಿನ್ನಲೆಯಲ್ಲಿ ಸಚಿವರ ಗುಂಪು ಒಂದು ತೀರ್ಮಾನಕ್ಕೆ ಬರಲು ಸಾಧ್ಯವಾಗಲಿಲ್ಲ. ಆದರೆ ಯುಪಿಎ ಸರ್ಕಾರ ಕೊನೆಗೆ ಪ್ರಾದೇಶಿಕ ಮಿತ್ರ ಪಕ್ಷಗಳ ಒತ್ತಾಯಕ್ಕೆ ಮಣಿದು ತಮ್ಮ ನಿಲುವು ಬದಲಿಸಿತ್ತು.

ಈ ಸಮೀಕ್ಷೆ ಪೂರ್ಣಗೊಳಿಸಲು 5 ವರ್ಷಗಳೇ ಬೇಕಾಯಿತು. ಅದಕ್ಕಾಗಿ 4,000 ಕೋಚಿ ಖರ್ಚು ಮಾಡಿದ್ದರೂ ತಾಂತ್ರಿಕ ದೋಷದಿಂದಾಗಿ ಅದು ಯಾವತ್ತೂ ಪ್ರಕಟವಾಗಲೇ ಇಲ್ಲ. ಆದರೆ ರಾಹುಲ್ ಗಾಂಧಿ ಈಗ 2011ರ ಜಾತಿ ಜನಗಣತಿಯನ್ನು ಬಹಿರಂಗಪಡಿಸಬೇಕು ಎಂದು ಒತ್ತಾಯಿಸುತ್ತಿದ್ದಾರೆ.

2015ರಲ್ಲಿ ಮುಖ್ಯಮಂತ್ರಿ ಆಗಿದ್ದ ಸಿದ್ದರಾಮಯ್ಯ ಜಾತಿ ಜನಗಣತಿ ಆರಂಭಿಸಿದ್ದರು. ಆದರೆ 2018ರ ವಿಧಾನಸಭಾ ಚುನಾವಣೆವರೆಗೂ ಅದನ್ನು ಬಹಿರಂಗ ಪಡಿಸಲಿಲ್ಲ. ಹೀಗೆ ಜಾತಿ ಜನಗಣತಿಯನ್ನು ಬಿಡುಗಡೆ ಮಾಡಿದರೆ ಇದು ಅವರ ಪಕ್ಷದ ಅವಕಾಶಗಳಿಗೆ ವಿರುದ್ಧವಾಗಿ ಕೆಲಸ ಮಾಡಬಹುದು ಎಂದು ಅವರು ಭಾವಿಸಿದ್ದರು. ಸಿದ್ದರಾಮಯ್ಯ ಅವರು ಈಗ ಹೇಳುತ್ತಿರುವುದೇನೆಂದರೆ ಜಾತಿ ಜನಗಣತಿ ಪೂರ್ಣಗೊಂಡಿದ್ದು ಕಾಂಗ್ರೆಸ್- ಜೆಡಿಎಸ್ ಅಧಿಕಾರದಲ್ಲಿದ್ದಾಗ.ಆಗ ಮುಖ್ಯಮಂತ್ರಿಯಾಗಿದ್ದ ಕುಮಾರಸ್ವಾಮಿ ಆ ವರದಿಯನ್ನು ಸ್ವೀಕರಿಸಿಲ್ಲ ಎಂದು.

ಕರ್ನಾಟಕದಲ್ಲಿ ತಮ್ಮ ಸರ್ಕಾರವಿದ್ದಾಗ ನಡೆಸಿದ ಜಾತಿ ಜನಗಣತಿಯನ್ನು ಈಗ ಬಹಿರಂಗಪಡಿಸಬೇಕು ಎಂದು ಸಿದ್ದರಾಮಯ್ಯ ಒತ್ತಾಯಿಸುತ್ತಲೇ ಇದ್ದಾರೆ.ಆದರೆ ಕಾಂಗ್ರೆಸ್ ಪಕ್ಷ ಶೇ 4 ಮುಸ್ಲಿಂ ಮೀಸಲಾತಿ ಕೋಟಾವನ್ನು ಲಿಂಗಾಯತ ಮತ್ತು ಒಕ್ಕಲಿಗರಿಗೆ ಬಿಜೆಪಿ ಹಂಚುತ್ತಿರುವುದನ್ನು ವಿರೋಧಿಸುತ್ತಿದೆ.

ಜವಾಹರ್ ಲಾಲ್ ನೆಹರು ಅವರಿಂದ ಹಿಡಿದು 1951 ಮತ್ತು 2011ರ ನಡುವೆ ಕಾಂಗ್ರೆಸ್ ಪಕ್ಷದಿಂದ ಪ್ರಧಾನಿಗಳಾಗಿದ್ದವರು ಜಾತಿ ಜನಗಣತಿಗೆ ವಿರುದ್ಧವಾಗಿದ್ದರು. ಏತನ್ಮಧ್ಯೆ ಇಂದಿರಾ ಗಾಂಧಿ ಮತ್ತು ರಾಜೀವ್ ಗಾಂಧಿ ಮಂಡಲ್ ಕಮಿಷನ್ ವರದಿಯನ್ನ ಮಾಡಿದರು. 2011ರಲ್ಲಿ ಜಾತಿ ಜನಗಣತಿ ಆರಂಭವಾದಾಗ ಹಲವಾರು ರಾಜ್ಯಗಳಲ್ಲಿ ಇದು ಪೂರ್ವ ತಯಾರಿಯ ಕೊರತೆಯಿಂದಾಗಿ ವಿಳಂಬವಾಯಿತು.

2016ರಲ್ಲಿ ಜಾತಿ ಜನಗಣತಿ ವರದಿ ಸಿದ್ದವಾಗಿದ್ದರೂ ತಾಂತ್ರಿಕ ದೋಷ ಉಲ್ಲೇಖಿಸಿ ಬಿಜೆಪಿ ಸರ್ಕಾರ ಅದನ್ನು ಬಿಡುಗಡೆ ಮಾಡಿಲ್ಲ. ಹಿಂದೀ ಹೃದಯಭೂಮಿ ರಾಜ್ಯಗಳಲ್ಲಿ ಕಾಂಗ್ರೆಸ್ ಮಿತ್ರ ಪಕ್ಷಗಳಾದ ಆರ್ ಜೆಡ,ಜೆಡಿಯು ಮತ್ತು ಸಮಾಜವಾದಿ ಪಾರ್ಟಿ ಜಾತಿ ಜನಗಣತಿಗೆ ಒತ್ತಾಯಿಸಿವೆ. ಹಾಗಾಗಿಯ ರಾಹುಲ್ ಇದಕ್ಕೆ ಒತ್ತಾಯಿಸುತ್ತಿದ್ದಾರೆ ಎಂದ ಬಿಜೆಪಿ ನಾಯಕರು ಹೇಳುತ್ತಿದ್ದಾರೆ.

ಇದನ್ನೂ ಓದಿ:  Maharashtra Heatstroke : ಮಹಾರಾಷ್ಟ್ರದಲ್ಲಿ ಮಧ್ಯಾಹ್ನ 12ರಿಂದ ಸಂಜೆ 5ರ ನಡುವೆ ಹೊರಾಂಗಣ ಕಾರ್ಯಕ್ರಮಗಳಿಗೆ ನಿಷೇಧ

ದೆಹಲಿಯಲ್ಲಿ ಇತ್ತೀಚೆಗೆ ರಾಹುಲ್ ಗಾಂಧಿ ಅವರು ನಿತೀಶ್ ಕುಮಾರ್ ಮತ್ತು ತೇಜಸ್ವಿ ಯಾದವ್ ಜತ ಸಭೆ ನಡೆಸಿದ್ದು ಅಲ್ಲಿಯೂ ಜಾತಿ ಜನಗಣತಿ ಬಗ್ಗೆ ಮಾತನಾಡಲಾಗಿದೆ ಎಂದು ಹೇಳಲಾಗುತ್ತಿದೆ. ಕಳೆದ ವರ್ಷ ಎನ್ ಡಿ ಎ ಜತೆ ಇದ್ದ ನಿತೀಶ್ ಕುಮಾರ್, ಬಿಹಾರದ ಎಲ್ಲ ಪಕ್ಷದ ಪ್ರತಿನಿಧಿಗಳೊಂದಿಗೆ ಸೇರಿ ಜಾತಿ ಜನಗಣತಿಗಾಗಿ ಪ್ರಧಾನಿ ಮೋದಿಯವರನ್ನು ಒತ್ತಾಯಿಸಿದ್ದರು. ಆದರೆ ಕೇಂದ್ರ ಸರ್ಕಾರ ಇದಕ್ಕೆ ಒಪ್ಪಲಿಲ್ಲ.

ಜಾತಿ ಆಧಾರಿತ ಜನಗಣತಿ ಡೇಟಾವನ್ನು ಸಾರ್ವಜನಿಕ ಡೊಮೇನ್‌ನಲ್ಲಿ ಬಿಡುಗಡೆ ಮಾಡಿ

2011 ರ ಜಾತಿ ಆಧಾರಿತ ಜನಗಣತಿ ಡೇಟಾವನ್ನು ಸಾರ್ವಜನಿಕ ಡೊಮೇನ್‌ನಲ್ಲಿ ಬಿಡುಗಡೆ ಮಾಡಲು ಬಿಜೆಪಿಯ ಉನ್ನತ ನಾಯಕರಿಗೆ ರಾಹುಲ್ ಗಾಂಧಿ ಹೇಳಿದ್ದಾರೆ.  ಇತ್ತ,  2011-12ರ ಅವಧಿಯಲ್ಲಿ ಯುಪಿಎ ಸರ್ಕಾರ ಸಾಮಾಜಿಕ ಆರ್ಥಿಕ ಮತ್ತು ಜಾತಿ ಗಣತಿ (ಎಸ್‌ಇಸಿಸಿ) ನಡೆಸಿದೆ. ಆದರೆ 2014ರ ಮೇನಲ್ಲಿ ನಿಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಕಾಂಗ್ರೆಸ್ ಮತ್ತು ಇತರ ಸಂಸದರು ಅದನ್ನು ಬಿಡುಗಡೆ ಮಾಡಲು ಒತ್ತಾಯಿಸಿದರೂ ಡೇಟಾವನ್ನು ಪ್ರಕಟಿಸಲಾಗಲಿಲ್ಲ ಎಂದು ಮಲ್ಲಿಕಾರ್ಜುನ ಖರ್ಗೆ ಪ್ರಧಾನಿ ಮೋದಿಗೆ ಪತ್ರ ಬರೆದಿದ್ದಾರೆ. ನಿಯಮಿತ ದಶವಾರ್ಷಿಕ ಜನಗಣತಿಯನ್ನು 2021 ರಲ್ಲಿ ನಡೆಸಬೇಕಾಗಿತ್ತು ಆದರೆ ಅದನ್ನು ಇನ್ನೂ ನಡೆಸಲಾಗಿಲ್ಲ. ಅದನ್ನು ತಕ್ಷಣವೇ ಮಾಡಬೇಕು ಮತ್ತು ಸಮಗ್ರ ಜಾತಿ ಗಣತಿಯನ್ನು ಅದರ ಅವಿಭಾಜ್ಯ ಅಂಗವಾಗಿಸಬೇಕು ಎಂದು ನಾವು ಒತ್ತಾಯಿಸುತ್ತೇವೆ ಎಂದಿದ್ದಾರೆ ಖರ್ಗೆ.

ಏಪ್ರಿಲ್ 16ರಂದು  ಕರ್ನಾಟಕದ ಕೋಲಾರದಲ್ಲಿ ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, ಕೇಂದ್ರ ಸರ್ಕಾರದಲ್ಲಿ ಕೇವಲ 7 ಪ್ರತಿಶತದಷ್ಟು ಹಿಂದುಳಿದ ಜಾತಿಗಳು, ದಲಿತರು ಮತ್ತು ಬುಡಕಟ್ಟು ಜನಾಂಗದವರು ಕಾರ್ಯದರ್ಶಿಗಳಾಗಿದ್ದಾರೆ. ಅದೇ ವೇಳೆ ಮೀಸಲಾತಿ ಮೇಲಿನ 50% ಮಿತಿಯನ್ನು ತೆಗೆದುಹಾಕಬೇಕೆಂದು ಒತ್ತಾಯಿಸಿದರು.

ಯುಪಿಎ 2011 ರಲ್ಲಿ ಜಾತಿ ಆಧಾರಿತ ಜನಗಣತಿ ಮಾಡಿದೆ. ಅದರಲ್ಲಿ ಎಲ್ಲಾ ಜಾತಿಗಳ ದತ್ತಾಂಶವಿದೆ. ಮಿಸ್ಟರ್ ಪ್ರಧಾನಿ, ನೀವು ಒಬಿಸಿಗಳ ಬಗ್ಗೆ ಮಾತನಾಡುತ್ತೀರಿ. ಆ ಡೇಟಾವನ್ನು ಸಾರ್ವಜನಿಕಗೊಳಿಸಿ. ದೇಶದಲ್ಲಿ ಎಷ್ಟು ಒಬಿಸಿಗಳು, ದಲಿತರು ಮತ್ತು ಬುಡಕಟ್ಟು ಜನಾಂಗದವರು ಇದ್ದಾರೆ ಎಂಬುದನ್ನು ರಾಷ್ಟ್ರಕ್ಕೆ ತಿಳಿಸಲಿ ಎಂದು ಕೋಲಾರದಲ್ಲಿ ನಡೆದ ಕಾಂಗ್ರೆಸ್‌ನ ‘ಜೈ ಭಾರತ್’ ಚುನಾವಣಾ ರ್ಯಾಲಿಯಲ್ಲಿ ರಾಹುಲ್ ಗಾಂಧಿ ಹೇಳಿದ್ದಾರೆ.

ದಯವಿಟ್ಟು ಜಾತಿ ಗಣತಿ ಅಂಕಿಅಂಶಗಳನ್ನು ಬಿಡುಗಡೆ ಮಾಡಿ ಇದರಿಂದ ಒಬಿಸಿಗಳು, ದಲಿತರು ಮತ್ತು ಬುಡಕಟ್ಟು ಜನಾಂಗದವರ ಜನಸಂಖ್ಯೆ ಎಷ್ಟು ಎಂದು ರಾಷ್ಟ್ರಕ್ಕೆ ತಿಳಿಯುತ್ತದೆ. ನೀವು ಇದನ್ನು ಮಾಡದಿದ್ದರೆ ಅದು ಒಬಿಸಿಗಳಿಗೆ ಅವಮಾನ ಎಂದು ರಾಹುಲ್ ಗಾಂಧಿ ಹೇಳಿರುವುದಾಗಿ ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ.

ಮತ್ತಷ್ಟು ರಾಜಕೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:53 pm, Wed, 19 April 23

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ