ಅಖಿಲ ಭಾರತ ಕಾಂಗ್ರೆಸ್ ಸಮಿತಿ (All India Congress Committee – AICC) ಅಧ್ಯಕ್ಷ ಸ್ಥಾನಕ್ಕೆ ಹಿರಿಯ ರಾಜಕಾರಿಣಿ ಅ 17ರಂದು ಮತದಾನ ನಡೆದಿತ್ತು. ಕಾಂಗ್ರೆಸ್ ಪಕ್ಷದ 9,500 ಪ್ರತಿನಿಧಿಗಳು ಮತ ಚಲಾಯಿಸಿದ್ದರು. ಮತದಾನದ ಪ್ರಮಾಣ ಶೇ 96ರಷ್ಟಿತ್ತು. ಹಿರಿಯ ನಾಯಕರಾದ ಮಲ್ಲಿಕಾರ್ಜುನ ಖರ್ಗೆ (Mallikarju Kharge) ಮತ್ತು ಶಶಿ ತರೂರ್ (Shashi Tharoor) ಅಧ್ಯಕ್ಷ ಗಾದಿಗೆ ಸ್ಪರ್ಧಿಸಿದ್ದಾರೆ. ಸುದೀರ್ಘ ಅವಧಿಯಿಂದ ಕಾಂಗ್ರೆಸ್ ಪಕ್ಷದ ನಾಯಕರಾಗಿರುವ, ಹಲವು ಆಯಕಟ್ಟಿನ ಹುದ್ದೆಗಳನ್ನು ನಿರ್ವಹಿಸಿರುವ ಮತ್ತು ಗಾಂಧಿ ಕುಟುಂಬದ ನಿಷ್ಠಾವಂತರೆನಿಸಿರುವ ಮಲ್ಲಿಕಾರ್ಜು ಖರ್ಗೆ ಅವರು ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದಾರೆ. ಈ ಕುರಿತು ಅಧಿಕೃತ ಘೋಷಣೆ ಪ್ರಕಟವಾಗುವುದಷ್ಟೇ ಬಾಕಿಯಿದೆ. ಹಲವು ಸಂಕಷ್ಟ ಪರಿಸ್ಥಿತಿಯಲ್ಲಿ ಗಾಂಧಿ ಕುಟುಂಬದ ಕೈಹಿಡಿದವರು ಖರ್ಗೆ. ಇವರು ಗೆದ್ದರೆ ಗಾಂಧಿ ಕುಟುಂಬವು ಇವರನ್ನು ರಿಮೋಟ್ ಕಂಟ್ರೋಲ್ನಂತೆ ಬಳಸಬಹುದು ಎಂದು ಹಲವರು ಆತಂಕ ವ್ಯಕ್ತಪಡಿಸಿದ್ದರು. ಆದರೆ ಖರ್ಗೆ ಇಂಥ ಆರೋಪಗಳನ್ನು ನಿರಾಕರಿಸಿದ್ದರು.
ಬೆಂಗಳೂರು: ಎಐಸಿಸಿ (AICC) ನೂತನ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ ಆಯ್ಕೆಯಾಗಿದ್ದಾರೆ. ಅ. 26ರಂದು ಅಧಿಕಾರವನ್ನ ಸಹ ಸ್ವೀಕರಿಸಲಿದ್ದಾರೆ. ರಾಜ್ಯ ಕಾಂಗ್ರೆಸ್ ಈಗಾಗಲೇ ಖರ್ಗೆ ಗೆಲುವನ್ನು ಕೂಡ ಸಂಭ್ರಮಿಸಿದೆ. ಕರ್ನಾಟಕಕ್ಕೆ ಒಲಿದು ಬಂದ ಎಐಸಿಸಿ ಪಟ್ಟದ ಬಗ್ಗೆ ಮುಂದಿನ ಸವಾಲುಗಳ ಬಗ್ಗೆ ಇಷ್ಟು ವರ್ಷಗಳ ರಾಜಕೀಯ ಅನುಭವದ ಬುತ್ತಿ ಹೊತ್ತು ಹೇಗೆ ಪಕ್ಷವನ್ನು ಮುನ್ನಡೆಸುತ್ತಾರೆ ಅನ್ನೋದರ ಬಗ್ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಟಿವಿ9 ಜತೆ ಸ್ಪೆಷಲ್ ಇಂಟರ್ವ್ಯೂನಲ್ಲಿ ಮಾತಾಡಿದ್ದಾರೆ. ವಿಡಿಯೋ ನೋಡಿ.
ಎಐಸಿಸಿ ಚನಾವಣೆ ಬಳಿಕ ಕಾಂಗ್ರೆಸ್ ನಾಯಕ ಶಶಿ ತರೂರ್ ಮಾಧ್ಯಮದರೊಂದಿಗೆ ಮಾತನಾಡಿದ್ದು, ಮಲ್ಲಿಕಾರ್ಜುನ ಖರ್ಗೆ ಗೆಲವು, ಕಾಂಗ್ರೆಸ್ ಗೆಲವು. ಇದು ಯಾವದೇ ವೈಯಕ್ತಿಕ ಸಂಘರ್ಷವಲ್ಲ ಎಂದು ಹೇಳಿದ್ದಾರೆ.
ಎಐಸಿಸಿ ನೂತನ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ ಆಯ್ಕೆಯಾಗಿದ್ದಾರೆ. ಈ ಕುರಿತಾಗಿ ಟ್ವಿಟರ್ ಮೂಲಕ ಪ್ರಧಾನಿ ನರೇಂದ್ರ ಮೋದಿ ಮಲ್ಲಿಕಾರ್ಜುನ ಖರ್ಗೆಗೆ ಅಭಿನಂದನೆ ಸಲ್ಲಿಸಿದ್ದಾರೆ.
My best wishes to Shri Mallikarjun Kharge Ji for his new responsibility as President of @INCIndia. May he have a fruitful tenure ahead. @kharge
— Narendra Modi (@narendramodi) October 19, 2022
ದೆಹಲಿ: ಇಂದು ನಾವೆಲ್ಲ ಒಟ್ಟಾಗಿ ಕೆಲಸ ಮಾಡಬೇಕು. ಇಲ್ಲಿ ಯಾರು ದೊಡ್ಡವರಲ್ಲ, ಯಾರು ಸಣ್ಣವರಲ್ಲ. ಕೋಮುವಾದದ ವಿರುದ್ಧ ಹೋರಾಡಬೇಕಿದೆ. ಸಂಘಟನೆಯನ್ನು ಬಲಿಷ್ಠ ಮಾಡಲಿದ್ದೇನೆ. ಸರ್ಕಾರದಲ್ಲಿರುವ ನಾಯಕರು ಮಾತು ಹೆಚ್ಚು ಮಾತನಾಡುತ್ತಾರೆ ಕೆಲಸ ಮಾಡಲ್ಲ ಎನ್ನಲಾಗುತ್ತಿದೆ. ಬಡ ಕುಟುಂಬದಲ್ಲಿ ಜನಿಸಿದ ನನಗೆ ಭರವಸೆ ಇಟ್ಟು ಆಯ್ಕೆ ಮಾಡಿದ್ದೀರಿ.
ನಾನು ಆ ಭರವಸೆಯನ್ನು ಉಳಿಸಿಕೊಳ್ಳುತ್ತೇನೆ ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದರು.
ದೆಹಲಿ: ಅಧ್ಯಕ್ಷ ಸ್ಥಾನಕ್ಕೆ ನನ್ನನ್ನು ಆಯ್ಕೆ ಮಾಡಿದ ಎಲ್ಲರಿಗೂ ಧನ್ಯವಾದ ಹೇಳಿದ ಮಲ್ಲಿಕಾರ್ಜುನ ಖರ್ಗೆ, ಜೊತೆಗೆ ಸೋನಿಯಾ ಗಾಂಧಿ, ರಾಹುಲ್ ಗಾಂಧಿಗೂ ಧನ್ಯವಾದ ಹೇಳಿದರು. AICC ಅಧ್ಯಕ್ಷ ಸ್ಥಾನ ನನ್ನ ಜವಾಬ್ದಾರಿಯನ್ನು ಮತ್ತಷ್ಟು ಹೆಚ್ಚಿಸಿದೆ. ದೇಶಾದ್ಯಂತ ಪಕ್ಷವನ್ನು ಸಂಘಟಿಸಲು ಮತ್ತಷ್ಟು ಪ್ರಯತ್ನಿಸುವೆ. ಬೂತ್ ಮಟ್ಟದಲ್ಲಿ ಪಕ್ಷ ಸಂಘಟನೆಗೆ ಹೆಚ್ಚು ಒತ್ತು ನೀಡಲಾಗುತ್ತೆ. ಯುವ ನಾಯಕರು, ಹಿರಿಯ ನಾಯಕರ ಜತೆಗೂಡಿ ಪಕ್ಷ ಸಂಘಟನೆ ಮಾಡುತ್ತೇನೆ ಎಂದು ಹೇಳಿದರು.
Delhi | Congress President-elect Mallikarjun Kharge will take charge on October 26: Congress MP Randeep Surjewala pic.twitter.com/kxTXh9M7QO
— ANI (@ANI) October 19, 2022
ಪಕ್ಷದ ಎಲ್ಲರನ್ನೂ ಒಟ್ಟಾಗಿ ಕರೆದುಕೊಂಡು ಹೋಗುತ್ತೇನೆ. ಯಾತ್ರೆಗೆ ಜನರು ಅಭೂತಪೂರ್ವ ಬೆಂಬಲ ನೀಡುತ್ತಿದ್ದಾರೆ. ದೇಶದಲ್ಲಿ ಇಂದು ಸಂವಿಧಾನ ಅಪಾಯದಲ್ಲಿದೆ. ದಿನಬಳಕೆ ವಸ್ತುಗಳ ಬೆಲೆ ಏರಿಕೆ, ನಿರುದ್ಯೋಗ ಪ್ರಮಾಣ ಹೆಚ್ಚಾಗಿದೆ ಎಂದು ಸುದ್ದಿಗೋಷ್ಠಿಯಲ್ಲಿ ಮಲ್ಲಿಕಾರ್ಜುನ ಖರ್ಗೆ ಹೇಳಿದರು.
ಎಐಸಿಸಿ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ ಗದ್ದುಗೆ ಏರಿದ್ದು, ಅ. 26ಕ್ಕೆ ಅಧಿಕಾರ ಸ್ವೀಕರಸಲಿದ್ದಾರೆ. ದೆಹಲಿ ಸುದ್ದಿಗೋಷ್ಠಿಯಲ್ಲಿ ಅವರು ಹೇಳಿಕೆ ನೀಡಿದರು.
AICC ನೂತನ ಅಧ್ಯಕ್ಷರಾಗಿ ಮಲ್ಲಿಕಾರ್ಜುನ್ ಖರ್ಗೆ ಆಯ್ಕೆಯಾಗಿದ್ದಾರೆ. ಈ ಹಿನ್ನೆಲೆ ಕ್ರಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಟ್ವೀಟ್ ಮಾಡುವ ಮೂಲಕ ಅಭಿನಂದಿಸಿದ್ದಾರೆ.
Congratulations to Mallikarjun Kharge ji on being elected as the President of @INCIndia.
The Congress President represents a democratic vision of India.
His vast experience and ideological commitment will serve the party well as he takes on this historic responsibility.
— Rahul Gandhi (@RahulGandhi) October 19, 2022
ಚಿಕ್ಕಬಳ್ಳಾಪುರ: AICC ಅಧ್ಯಕ್ಷರಾಗಿ ಮಲ್ಲಿಕಾರ್ಜುನ್ ಖರ್ಗೆ ಆಯ್ಕೆ ಹಿನ್ನಲೆ. ಚಿಕ್ಕಬಳ್ಳಾಪುರದಲ್ಲಿ ಆರೋಗ್ಯ ಖಾತೆ ಸಚಿವ ಡಾ.ಕೆ.ಸುಧಾಕರ್ ಪ್ರತಿಕ್ರಿಯೆ ನೀಡಿದ್ದು, ಕನ್ನಡಿಗರೊಬ್ಬರು AICC ಅದ್ಯಕ್ಷರಾಗಿದ್ದು ಸಂತೋಷವಾಗಿದೆ. ರಾಜ್ಯ ಕಾಂಗ್ರೆಸ್ನಲ್ಲಿ ಸಂತಸ ಸಂಭ್ರಮ ಏನು ಇಲ್ಲ. ಮಲ್ಲಿಕಾರ್ಜುನ್ ಖರ್ಗೆ AICC ಅದ್ಯಕ್ಷರಾಗಿದ್ದಕ್ಕೆ ರಾಜ್ಯ ಕಾಂಗ್ರೆಸ್ ನಿರಾಸದಾಯಕವಾಗಿದೆ. ಸ್ವತಃ ಮಲ್ಲಿಕಾರ್ಜುನ್ ಖರ್ಗೆ AICC ಅಧ್ಯಕ್ಷರಾದರು ರಾಜ್ಯ ಕಾಂಗ್ರೇಸ್ ಸಪ್ಪೆಯಾಗಿದೆ ಎಂದು ಹೇಳಿದರು.
ಎಐಸಿಸಿ ಅಧ್ಯಕ್ಷರಾಗಿ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಆಯ್ಕೆಯಾಗಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ಅವರನ್ನು ಸೋನಿಯಾಗಾಂಧಿ ಮತ್ತು ಪ್ರಿಯಾಂಕ ಗಾಂಧಿ ದೆಹಲಿಯಲ್ಲಿಂದು ಅಭಿನಂದಿಸಿದರು.
ಎಐಸಿಸಿ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ ಆಯ್ಕೆ ಹಿನ್ನೆಲೆ ಖರ್ಗೆ ನೂರಾರು ಸವಾಲುಗಳನ್ನು ಎದುರಿಸಬೇಕಾಗಿದೆ. ರಾಷ್ಟ್ರೀಯ ಮಟ್ಟದಲ್ಲಿ ಕಾಂಗ್ರೆಸ್ ಪಕ್ಷದ ಸಂಘಟನೆ. ಸತತ ಸೋಲುಗಳಿಂದ ಕಾಂಗ್ರೆಸ್ ಪಕ್ಷದ ಸಂಘಟನೆಯಲ್ಲಿ ಕುಸಿದಿದೆ. ಹಾಗಾಗಿ ಇದೀಗ ದೇಶಮಟ್ಟದಲ್ಲಿ ಪಕ್ಷಕ್ಕೆ ಸಂಘಟನೆ ಶಕ್ತಿ ತುಂಬವ ಕೆಲಸ ಖರ್ಗೆ ಮಾಡಬೇಕಿದೆ. ಗಾಂಧಿ ಕುಟುಂಬದ ರಬ್ಬರ್ ಸ್ಟಾಂಪ್ ಅಧ್ಯಕ್ಷ ಎಂಬ ಹಣೆಪಟ್ಟಿ ಕಳಚಳಬೇಕಿದೆ. ಕಾಂಗ್ರೆಸ್ ಪಕ್ಷಕ್ಕೆ ದೊಡ್ಡ ಸವಾಲು ಆಗಿರುವುದು ಪಕ್ಷದ ಆಂತರಿಕ ಭಿನ್ನಾಭಿಪ್ರಾಯ ತಿಳಿಗೊಳಿಸಬೇಕಿದೆ. ಹೀಗೆ ನೂರಾರು ಸವಾಲುಗಳಿವೆ.
ದೆಹಲಿ: ಎಐಸಿಸಿ ಅಧ್ಯಕ್ಷರಾಗಿ ಆಯ್ಕೆಯಾದ ಬೆನ್ನಲ್ಲೆ ಇಂದು ಸಂಜೆ 4 ಗಂಟೆಗೆ ದೆಹಲಿಯ ಕಾಂಗ್ರೆಸ್ ಕಚೇರಿಯಲ್ಲಿ ಮಲ್ಲಿಕಾರ್ಜುನ ಖರ್ಗೆ ಸುದ್ದಿಗೋಷ್ಠಿ ನಡೆಸಲಿದ್ದಾರೆ.
ಕಲಬುರಗಿ: ಎಐಸಿಸಿ ಅಧ್ಯಕ್ಷ ರಾಗಿ ಮಲ್ಲಿಕಾರ್ಜುನ ಖರ್ಗೆ ಆಯ್ಕೆಯಾಗಿದ್ದಾರೆ. ಕಲಬುರಗಿಯ ಕಾಂಗ್ರೆಸ್ ಮುಖಂಡರಿಂದ ಖರ್ಗೆ ಭಾವಚಿತ್ರಕ್ಕೆ ಹಾಲಿನ ಅಭಿಷೇಕ ಮಾಡಿ ಸಂಭ್ರಮಿಸಿದರು. ಇನ್ನು ಕಾಂಗ್ರೆಸ್ ಕಾರ್ಯಕರ್ತರಿಂದ ದೆಹಲಿಯಲ್ಲಿ ಜೈಕಾರ ಮೊಳಗಿದೆ.
ಎಐಸಿಸಿ ನೂತನ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ ಆಯ್ಕೆ ಹಿನ್ನೆಲೆ ಖರ್ಗೆಗೆ ಗಣ್ಯರಿಂದ ಶುಭಾಶಯ ಹರಿದು ಬರುತ್ತಿದೆ. ಮಾಜಿ ಪ್ರಧಾನಿ ದೇವೇಗೌಡ, ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ, ಸಿಎಲ್ಪಿ ನಾಯಕ ಸಿದ್ದರಾಮಯ್ಯ, ಬಿ.ಕೆ.ಹರಿಪ್ರಸಾದ್
ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ ಸೇರಿದಂತೆ ಹಲವರಿಂದ ಶುಭ ಕೋರಲಾಗಿದೆ.
ಶಿವಮೊಗ್ಗ: ಮಲ್ಲಿಕಾರ್ಜುನ ಖರ್ಗೆ ಎಐಸಿಸಿ ಅಧ್ಯಕ್ಷ ಆಯ್ಕೆ ಹಿನ್ನಲೆ ಕಾಂಗ್ರೆಸ್ ಹಿರಿಯ ನಾಯಕ ಕಾಗೋಡು ತಿಮ್ಮಪ್ಪ ಖರ್ಗೆಗೆ ಶುಭಕೋರಿದರು. ಕರ್ನಾಟಕಕ್ಕೆ ಎಐಸಿಸಿ ಅಧ್ಯಕ್ಷ ಪಟ್ಟ ಸಿಕ್ಕಿಸುವುದು ಸಂತಸ ತಂದಿದೆ. ಖರ್ಗೆ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷ ಮತ್ತಷ್ಟು ಕೇಂದ್ರ ಮತ್ತು ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೆ ಬರಲಿದೆ. ಹೋರಾಟದ ಮೂಲಕ ಖರ್ಗೆ ಪಕ್ಷಕ್ಕೆ ಮತ್ತಷ್ಟು ಬಲ ತುಂಬಬೇಕಿದೆ ಎಂದರು.
ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ನೇಮಕಗೊಂಡಿರುವ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಹೃದಯ ಪೂರ್ವಕ ಅಭಿನಂದನೆಗಳು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ ಶುಭ ಕೋರಿದ್ದಾರೆ.
ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ನೇಮಕಗೊಂಡಿರುವ ಶ್ರೀ @Kharge ಅವರಿಗೆ ಹೃದಯ ಪೂರ್ವಕ ಅಭಿನಂದನೆಗಳು. ಅವರ ನಾಯಕತ್ವದಲ್ಲಿ ಕಾಂಗ್ರೆಸ್ ಪಕ್ಷ ಇನ್ನಷ್ಟು ಎತ್ತರಕ್ಕೇರಲಿದೆ ಎನ್ನುವ ವಿಶ್ವಾಸವಿದೆ. pic.twitter.com/NRW6F268Fm
— DK Shivakumar (@DKShivakumar) October 19, 2022
ಕಾಂಗ್ರೆಸ್ ಪಕ್ಷದ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಮಲ್ಲಿಕಾರ್ಜನ ಖರ್ಗೆ ಅವರಿಗೆ ಹಾರ್ದಿಕ ಅಭಿನಂದನೆಗಳು ಎಂದು ಮಾಜಿ ಸಿಎಂ ಸಿದ್ಧರಾಮಯ್ಯ ಟ್ವೀಟ್ ಮೂಲಕ ಶುಭ ಕೋರಿದ್ದಾರೆ. ಪ್ರತಿಭೆ ಮತ್ತು ಅನುಭವವನ್ನು ಮೈಗೂಡಿಸಿಕೊಂಡ ಖರ್ಗೆಯವರಿಗೆ ಕಾಂಗ್ರೆಸ್ ಪಕ್ಷವನ್ನು ಯಶಸ್ಸಿನ ಹಾದಿಯಲ್ಲಿ ಮುನ್ನಡೆಸುವ ಶಕ್ತಿ ಇದೆ ಎಂದು ಸಿದ್ದರಾಮಯ್ಯ ಬರೆದುಕೊಂಡಿದ್ದಾರೆ.
ಕಾಂಗ್ರೆಸ್ ಪಕ್ಷದ ನೂತನ ಅಧ್ಯಕ್ಷರಾಗಿ ಆಯ್ಕೆಯಾದ @kharge ಅವರಿಗೆ ಹಾರ್ದಿಕ ಅಭಿನಂದನೆಗಳು.
ಪ್ರತಿಭೆ ಮತ್ತು ಅನುಭವವನ್ನು ಮೈಗೂಡಿಸಿಕೊಂಡ ಖರ್ಗೆಯವರಿಗೆ ಕಾಂಗ್ರೆಸ್ ಪಕ್ಷವನ್ನು ಯಶಸ್ಸಿನ ಹಾದಿಯಲ್ಲಿ ಮುನ್ನಡೆಸುವ ಶಕ್ತಿ ಇದೆ.
ಖರ್ಗೆಯವರ ಆಯ್ಕೆ ಕನ್ನಡಿಗರಿಗೂ ಹೆಮ್ಮೆಯ ಸಂಗತಿ.#AICCPresidentElection pic.twitter.com/0UYBuVEIcz
— Siddaramaiah (@siddaramaiah) October 19, 2022
ದೆಹಲಿ: ಎಐಸಿಸಿ ನೂತನ ಅಧ್ಯಕ್ಷ ಪಟ್ಟ ಕರ್ನಾಟಕದ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಒದಗಿದೆ. ಈ ಕುರಿತಾಗಿ ಮಲ್ಲಿಕಾರ್ಜುನ ಖರ್ಗೆಗೆ ಶಶಿ ತರೂರ್ ಅಭಿನಂದನೆ ತಿಳಿಸಿದರು.
ಚುನಾವಣೆ ಫಲಿತಾಂಶ ಘೋಷಣೆಯಾಗಿದ್ದು, ಅದರ ವಿಡಿಯೋ ಇಲ್ಲಿದೆ.
LIVE: Congress Party briefing by Shri Madhusudan Mistry at AICC HQ. https://t.co/qG92VV5f5y
— Congress (@INCIndia) October 19, 2022
ದೆಹಲಿ: ಎಐಸಿಸಿ ನೂತನ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ ಆಯ್ಕೆಯಾಗಿದ್ದು, ದೆಹಲಿ ಎಐಸಿಸಿ ಕಚೇರಿ ಎದುರು ಬೆಂಬಲಿಗರ ಸಂಭ್ರಮಾಚರಣೆ ಮಾಡುತ್ತಿದ್ದಾರೆ. ಕಾಂಗ್ರೆಸ್ ಕಚೇರಿ ಎದುರು ಖರ್ಗೆ ಬೆಂಬಲಿಗರು ಸಂಭ್ರಮಾಚರಣೆ ಮಾಡುತ್ತಿದ್ದಾರೆ.
ಎಐಸಿಸಿ ನೂತನ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ ಆಯ್ಕೆಯಾಗಿದ್ದಾರೆ. 7,897 ಮತಗಳನ್ನ ಮಲ್ಲಿಕಾರ್ಜುನ ಖರ್ಗೆ ಪಡೆದರೆ, 1,072 ಮತಗಳನ್ನ ಪಡೆದ ‘ಕೈ’ ನಾಯಕ ಶಶಿ ತರೂರ್ ಪಡೆದುಕೊಂಡಿದ್ದಾರೆ. 24 ವರ್ಷದ ಬಳಿಕ ಗಾಂಧಿಯೇತರ ನಾಯಕನಿಗೆ ಅಧ್ಯಕ್ಷ ಪಟ್ಟ. 9,385 ಮತಗಳು ಚಲಾವಣೆ, 416 ಮತಗಳು ಅಮಾನ್ಯ. 1975ರಲ್ಲಿ ಎಸ್.ನಿಜಲಿಂಗಪ್ಪ ಎಐಸಿಸಿ ಅಧ್ಯಕ್ಷರಾಗಿದ್ದರು. ಬಳಿಕ ಖರ್ಗೆಗೆ ಅಧ್ಯಕ್ಷ ಪಟ್ಟ ಒಲಿದಿದೆ. ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಏರಿದ ಎರಡನೇ ಕನ್ನಡಿಗ ಖರ್ಗೆ.
ಕಾಂಗ್ರೆಸ್ ಪಕ್ಷದ ನೂತನ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ ಆಯ್ಕೆಯಾಗದ್ದಾರೆ. ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಮಲ್ಲಿಕಾರ್ಜುನ ಖರ್ಗೆ 7,897 ಮತಗಳನ್ನು ಪಡೆದರೆ, ಶಶಿ ತರೂರ್ 1,072 ಮತ ಪಡೆದಿದ್ದರು. 24 ವರ್ಷಗಳ ಬಳಿಕ ಗಾಂಧಿಯೇತರ ಕುಟುಂಬಸ್ಥರಿಗೆ ಎಐಸಿಸಿ ಅಧ್ಯಕ್ಷ ಸ್ಥಾನ ಸಿಕ್ಕಿದೆ. ಚುನಾವಣೆಯಲ್ಲಿ ಒಟ್ಟು 9,385 ಮತಗಳು ಚಲಾವಣೆಯಾಗಿದ್ದವು ಈ ಪೈಕಿ 416 ಮತಗಳು ಅಮಾನ್ಯಗೊಂಡಿದ್ದವು. ಈವರೆಗೆ ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ 6 ಬಾರಿ ಚುನಾವಣೆ ನಡೆದಿತ್ತು. 1975ರಲ್ಲಿ ಎಐಸಿಸಿ ಅಧ್ಯಕ್ಷರಾಗಿ ಕರ್ನಾಟಕದ ಎಸ್.ನಿಜಲಿಂಗಪ್ಪ ಆಯ್ಕೆಯಾಗಿದ್ದರು. ಇದೀಗ ಅವರ ಬಳಿಕ, ಈ ಮಹತ್ವದ ಹುದ್ದೆಗೆ ಬಂದ 2ನೇ ಕನ್ನಡಿಗ ಎಂಬ ಶ್ರೇಯಕ್ಕೆ ಮಲ್ಲಿಕಾರ್ಜುನ ಖರ್ಗೆ ಪಾತ್ರರಾಗಿದ್ದಾರೆ.
ಎಐಸಿಸಿ ಅಧ್ಯಕ್ಷರಾಗಿ ಆಯ್ಕೆಯಾದ ಮಲ್ಲಿಕಾರ್ಜುನ ಖರ್ಗೆ ಆಯ್ಕೆ ಅವರನ್ನು ಅವರ ಎದುರಾಳಿಯಾಗಿ ಸ್ಪರ್ಧಿಸಿದ್ದ ಶಶಿ ತರೂರ್ ಅಭಿನಂದಿಸಿದ್ದಾರೆ. ‘ಕಾಂಗ್ರೆಸ್ ಅಧ್ಯಕ್ಷರಾಗುವುದು ಎಂದರೆ ದೊಡ್ಡ ಗೌರವ ಮತ್ತು ದೊಡ್ಡ ಜವಾಬ್ದಾರಿ. ಖರ್ಗೆ ಅವರಿಗೆ ಈ ಜವಾಬ್ದಾರಿಯಲ್ಲಿ ಯಶಸ್ಸು ಸಿಗಲಿ ಎಂದು ಹಾರೈಸುತ್ತೇನೆ. ನನಗೆ ಸಾವಿರಕ್ಕೂ ಹೆಚ್ಚು ಗೆಳೆಯರ ಬೆಂಬಲ ಸಿಕ್ಕಿದ್ದನ್ನು ಕೃತಜ್ಞತೆಯಿಂದ ನೆನೆಯುತ್ತೇನೆ. ಭಾರತದೆಲ್ಲೆಡೆ ಇರುವ ಕಾಂಗ್ರೆಸ್ ಬೆಂಬಲಿಗರ ಆಶೋತ್ತರಗಳನ್ನು ಮುನ್ನಡೆಸಲಾಗುವುದು’ ಎಂದು ಟ್ವೀಟ್ನಲ್ಲಿ ಶಶಿ ತರೂರ್ ಹೇಳಿದ್ದಾರೆ.
It is a great honour & a huge responsibility to be President of @INCIndia &I wish @Kharge ji all success in that task. It was a privilege to have received the support of over a thousand colleagues,& to carry the hopes& aspirations of so many well-wishers of Congress across India. pic.twitter.com/NistXfQGN1
— Shashi Tharoor (@ShashiTharoor) October 19, 2022
ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ಚುನಾವಣೆ ಮತಎಣಿಕೆ ಮುಕ್ತಾಯ ಹಂತಕ್ಕೆ ಬಂದಿದ್ದು ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಪರ 8,000ಕ್ಕೂ ಹೆಚ್ಚು ಮತಗಳು ಚಲಾವಣೆಯಾಗಿವೆ. ಖರ್ಗೆ ಎದುರು ಸ್ಪರ್ಧಿಸಿದ್ದ ಶಶಿತರೂರ್ ಅವರು 1,060 ಮತಗಳನ್ನು ಪಡೆದಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಎಐಸಿಸಿ ಅಧ್ಯಕ್ಷ ಸ್ಥಾನದ ಉಮೇದುವಾರರಾಗಿರುವ ಮಲ್ಲಿಕಾರ್ಜುನ ಖರ್ಗೆ ಅವರ ಆಯ್ಕೆಗೆ ಪ್ರಾರ್ಥಿಸಿ ಅಭಿಮಾನಿಗಳು ಅಫಜಲಪುರ ಪಟ್ಟಣದ ಬಸವೇಶ್ವರ ವೃತ್ತದಿಂದ ಡಾ ಬಿ.ಆರ್.ಅಂಬೇಡ್ಕರ್ ವೃತ್ತದವರೆಗೆ ದೀರ್ಘದಂಡ ನಮಸ್ಕಾರ ಹಾಕಿದರು. ಶಶಿ ತರೂರ್ ಮತ್ತು ಮಲ್ಲಿಕಾರ್ಜುನ ಖರ್ಗೆ ಮಧ್ಯೆ ಹಣಾಹಣಿ ಇದ್ದು, ಮಧ್ಯಾಹ್ನದ ಹೊತ್ತಿಗೆ ಫಲಿತಾಂಶ ಪ್ರಕಟವಾಗಲಿದೆ.
ಕಾಂಗ್ರೆಸ್ ಪಕ್ಷಕ್ಕೆ 137 ವರ್ಷಗಳ ಸುದೀರ್ಘ ಇತಿಹಾಸವಿದೆ. ಈ ಅವಧಿಯಲ್ಲಿ ಕೇವಲ 6 ಬಾರಿ ಮಾತ್ರ ಅಧ್ಯಕ್ಷ ಗಾದಿಗೆ ಚುನಾವಣೆ ನಡೆದಿದೆ. 1998ರಲ್ಲಿ ನಡೆದಿದ್ದ ಚುನಾವಣೆಯಲ್ಲಿ ಸೋನಿಯಾ ಗಾಂಧಿ ಅವರು ಜಿತೇಂದ್ರ ಪ್ರಸಾದ್ ಅವರನ್ನು ಸೋಲಿಸಿದ್ದರು. ಡಿಸೆಂಬರ್ 2017ರಲ್ಲಿ ರಾಹುಲ್ ಗಾಂಧಿಗೆ ಸೋನಿಯಾ ಅಧ್ಯಕ್ಷ ಗಾದಿ ಬಿಟ್ಟುಕೊಟ್ಟಿದ್ದರು. 2019ರಲ್ಲಿ ರಾಹುಲ್ ಗಾಂಧಿ ರಾಜೀನಾಮೆ ಕೊಟ್ಟ ನಂತರ ಸೋನಿಯಾ ಗಾಂಧಿ ಹಂಗಾಮಿ ಅಧ್ಯಕ್ಷೆಯಾಗಿ ಪಕ್ಷವನ್ನು ಮುನ್ನಡೆಸುತ್ತಿದ್ದರು.
ಎಐಸಿಸಿ ಅಧ್ಯಕ್ಷ ಗಾದಿ ಚುನಾವಣೆಯ ಮತಎಣಿಕೆ ಆರಂಭವಾಗಿದ್ದು, ಸಂಜೆ 3ರಿಂದ 4 ಗಂಟೆಯ ಹೊತ್ತಿಗೆ ಫಲಿತಾಂಶ ಪ್ರಕಟವಾಗಬಹುದು ಎಂದು ನಿರೀಕ್ಷಿಸಲಾಗಿದೆ.
ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಗಾದಿಗೆ ಗಾಂಧಿ ಕುಟುಂಬದಲ್ಲಿಯೇ ಇರುವುದು ವಾಡಿಕೆ. ಕಳೆದ 20 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಈ ಕುಟುಂಬದ ಹೊರಗಿನವರು ಅಧ್ಯಕ್ಷ ಗಾದಿಗೆ ಸ್ಪರ್ಧಿಸಿದ್ದಾರೆ. ಇದಕ್ಕೂ ಮೊದಲು ಜೆ.ಬಿ.ಕೃಪಲಾನಿ (1947), ಪಟ್ಟಾಭಿ ಸೀತಾರಾಮಯ್ಯ (1948-49) ಮತ್ತು ಪುರುಷೋತ್ತಮ್ ದಾಸ್ ಟಂಡನ್ (1950), ಪಿ.ವಿ.ನರಸಿಂಹರಾವ್ (1992-1994), ಸೀತಾರಾಮ್ ಕೇಸರಿ (1996-98) ಎಐಸಿಸಿ ಅಧ್ಯಕ್ಷರಾಗಿದ್ದರು.
Published On - 10:50 am, Wed, 19 October 22