ಕರ್ನಾಟಕ ಕಾಂಗ್ರೆಸ್​ನಲ್ಲಿ ಮಹತ್ವದ ರಾಜಕೀಯ ಬೆಳವಣಿಗೆ: ರಾತ್ರೋ ರಾತ್ರಿ ಬೆಂಗಳೂರಿಗೆ ಬಂದ ಹೈಕಮಾಂಡ್ ನಾಯಕರು

ಎರಡುವರೆ ವರ್ಷದ ಬಳಿಕ ಸಿಎಂ ಹಾಗೂ ಸಚಿವ ಸಂಪುಟ ಬದಲಾವದಣೆ ಬಗ್ಗೆ ಸಿದ್ದರಾಮಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಬಣದ ನಡುವೆ ಕಿತ್ತಾಟ ಶುರುವಾಗಿದೆ. ಈ ಎಲ್ಲಾ ಬೆಳವಣಿಗೆಗಳನ್ನು ಗಮನಿಸಿ ಹೈಕಮಾಂಡ್​, ರಾತ್ರೋ ರಾತ್ರಿ ಬೆಂಗಳೂರಿಗೆ ಬಂದಿಳಿದಿದೆ. ಇದರಿಂದ ಕರ್ನಾಟಕ ಕಾಂಗ್ರೆಸ್​​ನಲ್ಲಿ ಮಹತ್ವದ ರಾಜಕೀಯ ಬೆಳವಣಿಗೆಗಳು ನಡೆದಿವೆ. ಹೈಕಮಾಂಡ್​ ನಾಯಕರ ಸಭೆಯಲ್ಲಿ ಯಾವೆಲ್ಲಾ ಅಂಶಗಳು ಚರ್ಚೆಯಾಗಲಿವೆ ಎನ್ಜುವ ವಿವರ ಈ ಕೆಳಗಿನಂತಿದೆ.

ಕರ್ನಾಟಕ ಕಾಂಗ್ರೆಸ್​ನಲ್ಲಿ ಮಹತ್ವದ ರಾಜಕೀಯ ಬೆಳವಣಿಗೆ: ರಾತ್ರೋ ರಾತ್ರಿ ಬೆಂಗಳೂರಿಗೆ ಬಂದ ಹೈಕಮಾಂಡ್ ನಾಯಕರು
ಕಾಂಗ್ರೆಸ್ ನಾಯಕರು
Follow us
ರಮೇಶ್ ಬಿ. ಜವಳಗೇರಾ
|

Updated on: Nov 01, 2023 | 9:48 AM

ಬೆಂಗಳೂರು, (ನವೆಂಬರ್ 01): ರಾಜ್ಯ ರಾಜಕೀಯದಲ್ಲಿ (Karnataka Politics) ಈಗ ಆಪರೇಷನ್​ನದ್ದೇ ಮಾತು. ನಿನ್ನೆಯಷ್ಟೇ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸರ್ಕಾರ ಮಹಾರಾಷ್ಟ್ರ ಮಾದರಿಯಲ್ಲಿ ಪತನವಾಗುತ್ತೆ ಎಂದು ಬಾಂಬ್ ಸಿಡಿಸಿದ್ದರು. ಇದರ ಬೆನ್ನಲ್ಲೇ ಕಾಂಗ್ರೆಸ್ ನಾಯಕರೇ ಆಪರೇಷನ್ ಕಮಲ(Operation Kamala)  ನಡೆಯುತ್ತಿದೆ ಎಂದು ಬಹಿರಂಗವಾಗಿಯೇ ಹೇಳುತ್ತಿದ್ದಾರೆ. ಇದರ ಮಧ್ಯೆ ಎರಡುವರೆ ವರ್ಷದ ಬಳಿಕ ಸಿಎಂ ಹಾಗೂ ಸಚಿವ ಸಂಪುಟ ಬದಲಾವದಣೆ ಬಗ್ಗೆ ಸಿದ್ದರಾಮಮಯ್ಯ(Siddaramaiah)  ಹಾಗೂ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಬಣದ ನಡುವೆ ಕಿತ್ತಾಟ ಶುರುವಾಗಿದೆ. ಈ ಎಲ್ಲಾ ಬೆಳವಣಿಗೆಗಳನ್ನು ಗಮನಿಸಿ ಹೈಕಮಾಂಡ್​, ರಾತ್ರೋ ರಾತ್ರಿ ಬೆಂಗಳೂರಿಗೆ ಬಂದಿಳಿದಿದೆ.

ಕೆ.ಸಿ. ವೇಣುಗೋಪಾಲ್ ಹಾಗೂ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರು ನಿನ್ನೆ ರಾತ್ರಿ ಬೆಂಗಳೂರಿಗೆ ಆಗಮಿಸಿದ್ದಾರೆ. ನಿಗಮ ಮಂಡಳಿಗಳಿಗೆ ಅಧ್ಯಕ್ಷರ ನೇಮಕದ ಕುರಿತು ರಾಜ್ಯ ನಾಯಕರ ಚರ್ಚೆ ಹಾಗೂ ಅಲ್ಲದೇ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಬಣಗಳ ನಡುವಿನ ಆಂತರಿಕ ಕಿತ್ತಾಟಗಳಿಗೆ ಬ್ರೇಕ್ ಹಾಕಲು ಹೈಕಮಾಂಡ್ ನಾಯಕರು ರಾಜ್ಯಕ್ಕೆ ಆಗಮಿಸಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜ್ಯ ಕಾಂಗ್ರೆಸ್​ನಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ.

ಅಧಿಕಾರ ಹಂಚಿಕೆ ಸೂತ್ರದ ಬಗ್ಗೆ ಸಿಎಂ ಹಾಗೂ ಡಿಸಿಎಂ ಬಣದ ಶಾಸಕರು ಪದೇ ಪದೇ ಹೇಳಿಕೆ ನೀಡುತ್ತಿರುವುದರಿಂದ ಪಕ್ಷಕ್ಕೆ ಡ್ಯಾಮೇಜ್ ಆಗುತ್ತಿದೆ. ಈ ಬೆಳವಣಿಗೆಗೆ ಬ್ರೇಕ್ ಹಾಕಲು ವೇಣುಗೋಪಾಲ್ ಹಾಗೂ ಸುರ್ಜೆವಾಲ ಅವರು ಪಂಚ ರಾಜ್ಯ ಚುನಾವಣೆ ಕೆಲಸಗಳನ್ನೂ ಬದಿಗೊತ್ತಿ ಕರ್ನಾಟಕಕ್ಕೆ ದೌಡಾಯಿಸಿದ್ದಾರೆ.

ಎಐಸಿಸಿ ತನಕ ತಲುಪಿದ್ದ ಬೆಳಗಾವಿ ಪಾಲಿಟಿಕ್ಸ್

ಮತ್ತೊಂದೆಡೆ ಸತೀಶ್ ಜಾರಕಿಹೊಳಿ ನಡೆ ಕಾಂಗ್ರೆಸ್​ನಲ್ಲಿ ಕಂಪನ ಸೃಷ್ಟಿಸಿದೆ. ಹಲವು ಶಾಸಕರ ಜೊತೆಗೆ ಪ್ರವಾಸದ ಪ್ಲ್ಯಾನ್ ಅನ್ನು ಸ್ವತಃ ವೇಣುಗೋಪಾಲ್ ತಡೆದಿದ್ದರು. ಆದರೂ ಸಹ ಇದೀಗ ಸತೀಶ್ ಜಾರಕಿಹೊಳಿ ಪ್ರವಾಸ ಪ್ಲ್ಯಾನ್ ಮಾಡಿದ್ದಾರೆ. ಈ ಹಿನ್ನೆಲೆಯಲ್ಲೂ ವೇಣುಗೋಪಾಲ್ ಹಾಗೂ ಸುರ್ಜೆವಾಲ ರಾಜ್ಯಕ್ಕೆ ಬಂದಿದ್ದು, ಈ ಬಗ್ಗೆ ಚರ್ಚೆ ನಡೆಸಿ ಸತೀಶ್ ಜಾರಕಿಹೊಳಿ ಸಮಸ್ಯೆ ಬಗೆಹರಿಸಲಿದ್ದಾರೆ. ಇನ್ನೊಂದೆಡೆ ಸತೀಶ್ ಜಾರಕಿಹೊಳಿ ತಮ್ಮ ಸಮಸ್ಯೆ ಹಾಗೂ ಬೇಡಿಕೆಗಳನ್ನು ಎಐಸಿಸಿ ನಾಯಕರ ಮುಂದಿಡಲಿದ್ದಾರೆ.

ಸಿಎಂ ಹಾಗೂ ಡಿಸಿಎಂ ಜತೆ ಮಾತುಕತೆ

ಬಣ ರಾಜಕೀಯ ಶುರುವಾಗಿರುವುದನ್ನು ಗಮನಿಸಿ ಬೆಂಗಳೂರಿಗೆ ಬಂದಿರುವ ವೇಣುಗೋಪಾಲ್ ಹಾಗೂ ಸುರ್ಜೆವಾಲ ಇಂದು(ನವೆಂಬರ್ 01) ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಜೊತೆ ಮಹತ್ವದ ಮಾತುಕತೆ ನಡೆಸಲಿದ್ದಾರೆ. ಸಿಎಂ ನಿವಾಸದಲ್ಲಿ ಹೈಕಮಾಂಡ್ ನಾಯಕರು ಮಹತ್ವದ ಸಭೆ ನಡೆಸಲಿದ್ದು, ಅಧಿಕಾರ ಹಂಚಿಕೆ ಸೂತ್ರದ ಬಗ್ಗೆ ಶಾಸಕರ ಹೇಳಿಕೆಗಳ ಬಗ್ಗೆ ಚರ್ಚೆ ನಡೆಸಿ ಬಣ ರಾಜಕೀಯಕ್ಕೆ ಬ್ರೇಕ್ ಹಾಕುವಂತೆ ಇಬ್ಬರೂ ನಾಯಕರಿಗೆ ಖಡಕ್ ಸಲಹೆ ಸೂಚನೆಗಳನ್ನು ನೀಡಲಿದ್ದಾರೆ. ಜೊತೆ ಲೋಕಸಭಾ ಚುನಾವಣೆ ಸಂಬಂಧ ಚರ್ಚೆ ನಡೆಸಲಿದ್ದಾರೆ ಎಂದು  ತಿಳಿದುಬಂದಿದೆ.

ನಿಗಮ ಮಂಡಳಿ ನೇಮಕಾತಿ ಇಂದು ಫೈನಲ್ ?

ತಡ ರಾತ್ರಿ ಬೆಂಗಳೂರಿಗೆ ಆಗಮಿಸಿದ ಕಾಂಗ್ರೆಸ್ ಹೈಕಮಾಂಡ್ ನಾಯಕರು, ಇಂದು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ ಕೆ ಶಿವಕುಮಾರ್ ಜತೆ ಮಹತ್ವದ ಸಭೆ ನಡೆಸಿ ಕಗ್ಗಂಟಾಗಿ ಉಳಿದಿರುವ ನಿಗಮ ಮಂಡಳಿ ನೇಮಕ ಬಗ್ಗೆ ಮಾತುಕತೆ ನಡೆಸಿ ಅಂತಿಮ ಪಟ್ಟಿ ಫೈನಲ್ ಮಾಡಲಿದ್ದಾರೆ ಎನ್ನಲಾಗಿದೆ.

ಶಾಸಕರಿಗೆ ಮಾತ್ರ ಮೊದಲಿಗೆ ನಿಗಮ ಮಂಡಳಿ ಸ್ಥಾನಮಾನ ನೀಡೋಣ ಸಿದ್ದರಾಮಯ್ಯ ಹೇಳುತ್ತಿದ್ದರೆ, ಶಾಸಕರ ಜತೆ ಪ್ರಮುಖ ಕಾರ್ಯಕರ್ತರಿಗೂ ನಿಗಮಮಂಡಳಿ ನೀಡೋಣ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಪಟ್ಟು ಹಿಡಿದಿದ್ದಾರೆ. ಹೀಗಾಗಿ ಎಐಸಿಸಿ ನಾಯಕರು ಇಂದು ಇದೇ ವಿಚಾರವಾಗಿ ಚರ್ಚೆ ನಡೆಸಿ ಫೈನಲ್​ ಮಾಡಲಿದ್ದು, ವಾರಾಂತ್ಯದೊಳಗೆ ಪಟ್ಟಿ ಬಿಡುಗಡೆ ಸಾಧ್ಯತೆ ಇದೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಇನ್ನಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ