AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

AICC President Poll: ದಿಲ್ಲಿಗೆ ಹೋಗುವ ಬದಲು ಬೆಂಗಳೂರಲ್ಲೇ ರಾಹುಲ್‌ ಗಾಂಧಿ ಮತದಾನ

ತೀವ್ರ ಕುತೂಹಲ ಮೂಡಿಸಿರುವ ಎಐಸಿಸಿ ಅಧ್ಯಕ್ಷ ಚುನಾವಣೆಗೆ ಬೆಂಗಳೂರಿನಿಂದಲೇ ಮತದಾನ ಮಾಡಲು ರಾಹುಲ್​ ಗಾಂಧಿ ತೀರ್ಮಾನಿಸಿದ್ದಾರೆ.

AICC President Poll: ದಿಲ್ಲಿಗೆ ಹೋಗುವ ಬದಲು ಬೆಂಗಳೂರಲ್ಲೇ ರಾಹುಲ್‌ ಗಾಂಧಿ ಮತದಾನ
ರಾಹುಲ್ ಗಾಂಧಿ
TV9 Web
| Edited By: |

Updated on:Sep 25, 2022 | 7:44 PM

Share

ಬೆಂಗಳೂರು: ಅಖಿಲ ಭಾರತ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ (AICC President Election) ಇದೇ ಅಕ್ಟೋಬರ್ 17 ರಂದು ಚುನಾವಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ರಾಹುಲ್‌ ಗಾಂಧಿ ಅವರು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ತಮ್ಮ ಮತ ಚಲಾಯಿಸಲಿದ್ದಾರೆ.

ಭಾರತ್‌ ಜೋಡೋ ಯಾತ್ರೆ ನಡೆಸಿರುವ ರಾಹುಲ್‌ ಗಾಂಧಿ (Rahul Gandhi) ಅವರು ಈ ಅವಧಿಯಲ್ಲಿ ಕರ್ನಾಟಕದಲ್ಲಿರುತ್ತಾರೆ. ಈ ಹಿನ್ನೆಲೆಯಲ್ಲಿ ಅ.17 ಮತದಾನಕ್ಕಾಗಿ ದೂರದ ದೆಹಲಿಗೆ ಹೋಗುವ ಬದಲು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಸ್ಥಾಪಿತವಾಗುವ ಮತಗಟ್ಟೆಯಲ್ಲೇ ಮತದಾನ ಮಾಡಲಿದ್ದಾರೆ.

ಅಂದು ಪಾದಯಾತ್ರೆ ಸ್ಥಳದಿಂದ ವಾಹನದಲ್ಲಿ ಬೆಂಗಳೂರಿಗೆ ಬಂದು ಮತದಾನ ನಡೆಸಿ ನಂತರ ಮತ್ತೆ ಪಾದಯಾತ್ರೆಯ ಸ್ಥಳಕ್ಕೆ ವಾಪಸ್ ಹೋಗಿ ಭಾರತ್‌ ಜೋಡೋ ಯಾತ್ರೆಯನ್ನು ಮುಂದುವರೆಸಲಿದ್ದಾರೆ ಎಂದು ತಿಳಿದುಬಂದೆ.ಇದರಿಂದ ಕೆಪಿಸಿಸಿ ಕಚೇರಿಯಲ್ಲಿ ಮತಗಟ್ಟೆಸ್ಥಾಪಿಸುವ ಹಾಗೂ ರಾಹುಲ್‌ ಗಾಂಧಿ ಅವರ ಮತದಾನಕ್ಕೆ ಪೂರಕವಾದಂತಹ ವ್ಯವಸ್ಥೆ ರೂಪಿಸುವ ಬಗ್ಗೆ ಶನಿವಾರ ಕೆಪಿಸಿಸಿ ಕಚೇರಿಯಲ್ಲಿ ಮಹತ್ವದ ಸಭೆ ಸಹ ಮಾಡಲಾಗಿದೆ.

ಕಾಂಗ್ರೆಸ್ ಹೊಸ ಅಧ್ಯಕ್ಷರ ಚುನಾವಣೆಯ ನಾಮನಿರ್ದೇಶನಕ್ಕೆ ಸೆಪ್ಟೆಂಬರ್ 30 ಕೊನೆಯ ದಿನವಾಗಿದ್ದು, ಅಕ್ಟೋಬರ್ 17ಕ್ಕೆ ಚುನಾವಣೆ ನಡೆಯಲಿದೆ. ಅಕ್ಟೋಬರ್ 19ಕ್ಕೆ ಮತ ಎಣಿಕೆ ನಡೆಯಲಿದೆ.

ಇದನ್ನೂ ಓಡಿ:ಎಐಸಿಸಿಗೆ ಹೊಸ ಅಧ್ಯಕ್ಷರ ಆಯ್ಕೆಗಾಗಿ ಚುನಾವಣೆ ನಿಗದಿ: ಅಕ್ಟೋಬರ್ 17ಕ್ಕೆ ಚುನಾವಣೆ, 19ಕ್ಕೆ ಮತ ಎಣಿಕೆ

ಗಾಂಧಿ ಕುಟುಂಬಯೇತರ ವ್ಯಕ್ತಿ ಕೈಗೆ ಚುಕ್ಕಾಣಿ ಗಾಂಧಿ ಕುಟುಂಬಯೇತರ ವ್ಯಕ್ತಿ ಈ ಬಾರಿ ದೇಶದ ಅತ್ಯಂತ ಹಳೆಯ ರಾಜಕೀಯ ಪಕ್ಷವಾದ ಕಾಂಗ್ರೆಸ್ನ ನೇತೃತ್ವ ವಹಿಸಿಕೊಳ್ಳುತ್ತಿದ್ದಾರೆ. ಕೈ ಪಕ್ಷದ ಅನೇಕ ನಾಯಕರು ಕಾಂಗ್ರೆಸ್ ಸರ್ವೋನ್ನತ ಸ್ಥಾನದ ಮೇಲೆ ಕಣ್ಣಿಟ್ಟಿದ್ದು, ಚುನಾವಣೆಯಲ್ಲಿ ಸ್ಪರ್ಧಿಸುವ ಇಂಗಿತವನ್ನು ವ್ಯಕ್ತಪಡಿಸಿದ್ದಾರೆ. ಈ ನಡುವೆ ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ (Ashok Gehlot) ಚುನಾವಣೆಗೆ ಸ್ಪರ್ಧಿಸುವುದು ಖಚಿತವಾಗಿದ್ದು, ಸೆಪ್ಟೆಂಬರ್ 28 ರಂದು ಅವರು ನಾಮಪತ್ರವನ್ನು ಸಲ್ಲಿಸಲಿದ್ದಾರೆ ಎಂದು ತಿಳಿದುಬಂದಿದೆ.

ಮತ್ತೊಂದೆಡೆ ಸಂಸದ ಶಶಿತರೂರ್ ಸಹ ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧೆ ಮಾಡಲಿದ್ದಾರೆ ಎನ್ನಲಾಗಿದೆ. ಒಂದು ವೇಳೆ ತರೂರ್ ಸಹ ಅಖಾಡಕ್ಕಿಳಿದ್ರೆ, ಅಶೋಕ್ ಗೆಹ್ಲೋಟ್ ಹಾಗೂ ಶಶಿ ತರೂರ್ ನಡುವೆ ಸ್ಪರ್ಧೆ ಏರ್ಪಡಲಿದೆ.

2019 ರಲ್ಲಿ ನಡೆದ ಸಂಸತ್ ಚುನಾವಣೆಯಲ್ಲಿ ಸೋಲು ಅನುಭವಿಸಿದ ನಂತರ ರಾಹುಲ್ ಗಾಂಧಿ ಅವರು ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಬಳಿಕ ಸೋನಿಯಾ ಗಾಂಧಿ ಅವರು ಹಂಗಾಮಿ ಅಧ್ಯಕ್ಷರಾದರು. ಮತ್ತೆ ಪಕ್ಷದ ಆಡಳಿತವನ್ನು ವಹಿಸಿಕೊಂಡ ಸೋನಿಯಾ ಗಾಂಧಿ ಅವರು ಜಿ -23 ಎಂದು ಉಲ್ಲೇಖಿಸಲಾದ ನಾಯಕರ ಒಂದು ವಿಭಾಗದ ಬಹಿರಂಗ ಬಂಡಾಯದ ನಂತರ ಆಗಸ್ಟ್ 2020 ರಲ್ಲಿ ರಾಜೀನಾಮೆ ನೀಡಲು ಮುಂದಾಗಿದ್ದರು, ಆದರೆ ಸಿಡಬ್ಲ್ಯೂಸಿ, ಅವರು ಮುಂದುವರಿಯುವಂತೆ ಒತ್ತಾಯಿಸಿತ್ತು.

Published On - 7:42 pm, Sun, 25 September 22

ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ