Bharat Jodo: ಜೆಡಿಎಸ್ ನಾಯಕ ಎಚ್ಡಿ ದೇವೇಗೌಡರಿಗೆ ಭಾರತ್ ಜೋಡೋ ಸಮಾರೋಪಕ್ಕೆ ಆಹ್ವಾನ
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ ಜೋಡೊ ಯಾತ್ರೆ ಕಾಶ್ಮೀರ ತಲುಪಿದ್ದು, ಶ್ರೀನಗರದಲ್ಲಿ ನಡೆಯುವ ಯಾತ್ರೆಯ ಸಮಾರೋಪ ಸಮಾರಂಭಕ್ಕೆ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಅವರಿಗೆ ಆಹ್ವಾನಿಸಲಾಗಿದೆ.
ಬೆಂಗಳೂರು: ಕಾಂಗ್ರೆಸ್ (Congress) ನಾಯಕ, ಸಂಸದ ರಾಹುಲ್ ಗಾಂಧಿ (Rahul Gandhi) ನೇತೃತ್ವದಲ್ಲಿ ನಡೆಯುತ್ತಿರುವ ಭಾರತ ಜೋಡೊ ಯಾತ್ರೆ (Bharat Jodo) ಕಾಶ್ಮೀರ (Kashmir) ತಲುಪಿದೆ. ಶ್ರೀನಗರದಲ್ಲಿ (Srinagar) ಯಾತ್ರೆಯ ಸಮಾರೋಪ ಸಮಾರಂಭ ನಡೆಯಲಿದೆ. ಯಾತ್ರೆಯ ಸಮಾರೋಪ ಸಮಾರಂಭಕ್ಕೆ ಮಾಜಿ ಪ್ರಧಾನಿ, ಜೆಡಿಎಸ್ ನಾಯಕ ಹೆಚ್ ಡಿ ದೇವೇಗೌಡ (H. D Devegowda) ಅವರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಆಹ್ವಾನಿಸಿದ್ದಾರೆ.
ಆದರೆ ಹೆಚ್. ಡಿ ದೇವೇಗೌಡರು ಕಾರ್ಯಕ್ರಮಕ್ಕೆ ಗೈರಾಗಲಿದ್ದಾರೆ. ಈ ಸಂಬಂಧ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಪತ್ರ ಬರೆದಿರುವ ದೇವೇಗೌಡ, ನಾನು ಈ ಕಾರ್ಯಕ್ರಮಕ್ಕೆ ಹಾಜರಾಗಲು ಆಗುತ್ತಿಲ್ಲ. ರಾಹುಲ್ ಗಾಂಧಿ ಅವರಿಗೆ ಶುಭಾಷಯ ಕೋರುತ್ತೇನೆ. ದೇಶದ ಒಗ್ಗೂಡಿವಿಕೆಗೆ ರಾಹುಲ್ ಗಾಂಧಿಯವರು ಪಾದಯಾತ್ರೆ ಮಾಡಿದ್ದಾರೆ. ರಾಷ್ಟ್ರಪಿತ ಮಹಾತ್ಮ ಗಾಂಧಿ ಹುತಾತ್ಮರಾದ ದಿನದಂದು ಈ ಕಾರ್ಯಕ್ರಮ ಆಯೋಜಿಸುತ್ತಿರುವುದು ಅತ್ಯಂತ ಸೂಕ್ತವಾಗಿದೆ. 3,500 ಕಿಲೋಮೀಟರ್ ರಾಹುಲ್ ಗಾಂಧಿ ಯಾತ್ರೆ ನಡೆಸಿದ್ದಾರೆ. ನನ್ನ ಶುಭಾಶಯಗಳನ್ನು ರಾಹುಲ್ ಗಾಂಧಿ ಅವರಿಗೆ ತಿಳಿಸಿ ಎಂದು ಪತ್ರದ ಮೂಲಕ ಅಭಿನಂದನೆ ತಿಳಸಿದ್ದಾರೆ.
ಮತ್ತಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ