ಆಹ್ವಾನ ಇಲ್ಲದೆ ಜಿ20 ಶೃಂಗಸಭೆಗೆ ನಾನು ಹೇಗೆ ಹೋಗಲಿ: ಮಲ್ಲಿಕಾರ್ಜುನ ಖರ್ಗೆ

ಜಿ20 ಶೃಂಗಸಭೆ ದೆಹಲಿಯಲ್ಲಿ ಇಂದಿನಿಂದ ಆರಂಭಗೊಂಡಿದೆ. ಆದರೆ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಆಹ್ವಾನ ನೀಡಿಲ್ಲ ಎಂದು ಕಾಂಗ್ರೆಸ್ ನಾಯಕರು ಆರೋಪಿಸುತ್ತಿದ್ದಾರೆ. ಈ ಬಗ್ಗೆ ಸ್ವತಃ ಖರ್ಗೆ ಪ್ರತಿಕ್ರಿಯೆ ನೀಡಿದ್ದು, ಆಹ್ವಾನ ಇಲ್ಲದೆ ಜಿ20 ಸಭೆಗೆ ನಾನು ಹೇಗೆ ಹೋಗಲಿ ಎಂದಿದ್ದಾರೆ. ಅವರು ಅಧಿಕೃತ ವಿರೋಧ ಪಕ್ಷದ ನಾಯಕರು. ಅವರನ್ನು ಕರೆಯದಿರುವುದು ತಪ್ಪು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಆಹ್ವಾನ ಇಲ್ಲದೆ ಜಿ20 ಶೃಂಗಸಭೆಗೆ ನಾನು ಹೇಗೆ ಹೋಗಲಿ: ಮಲ್ಲಿಕಾರ್ಜುನ ಖರ್ಗೆ
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ
Follow us
| Updated By: Rakesh Nayak Manchi

Updated on: Sep 09, 2023 | 1:02 PM

ಕಲಬುರಗಿ, ಸೆ.9: ಜಿ20 ಶೃಂಗಸಭೆ (G20 Summit) ದೆಹಲಿಯಲ್ಲಿ ಇಂದಿನಿಂದ ಆರಂಭಗೊಂಡಿದೆ. ಆದರೆ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಅವರಿಗೆ ಆಹ್ವಾನ ನೀಡಿಲ್ಲ ಎಂದು ಕಾಂಗ್ರೆಸ್ ನಾಯಕರು ಆರೋಪಿಸುತ್ತಿದ್ದಾರೆ. ಈ ಬಗ್ಗೆ ಸ್ವತಃ ಖರ್ಗೆ ಪ್ರತಿಕ್ರಿಯೆ ನೀಡಿದ್ದು, ಆಹ್ವಾನ ಇಲ್ಲದೆ ಜಿ20 ಸಭೆಗೆ ನಾನು ಹೇಗೆ ಹೋಗಲಿ ಎಂದಿದ್ದಾರೆ. ಜಿ 20 ಸಭೆ ಸಮಾರಸ್ಯದ ಸಭೆ. ದೇಶದಲ್ಲಿ, ಪ್ರಪಂಚದಲ್ಲಿ ಗದ್ದಲ ಇಲ್ಲದೆ ಸಾಮರಸ್ಯದಿಂದ ಇರುವುದು ಒಳ್ಳೆಯದು ಅಂತಾನೂ ಹೇಳಿದರು.

ದೇಶವನ್ನು ರಿಪಬ್ಲಿಕ್ ಆಫ್ ಭಾರತ್ ಎಂದು ಮರುನಾಮಕರಣ ಸಾಧ್ಯತೆ ವಿಚಾರವಾಗಿ ಮಾತನಾಡಿದ ಖರ್ಗೆ, ಇಂಡಿಯಾ ಅಂದರೆ ಭಾರತ. ಅದು ದೇಶದ ಸಂವಿಧಾನದಲ್ಲೇ ಇದೆ. ಇದು ಯಾರು ಬೇಡ ಅಂದಿದ್ದಾರೋ ಗೊತ್ತಿಲ್ಲ. ದೇಶದ ಎಲ್ಲರೂ ಭಾರತ್ ಮಾತಾ ಕೀ ಜೈ ಎಂದು ಜೈಕಾರ ಹಾಕುತ್ತಾರೆ. ಸ್ಟಾರ್ಟಪ್ ಇಂಡಿಯಾ, ಡಿಜಿಟಲ್ ಇಂಡಿಯಾ ಅಂತಾ ಯಾಕೆ ಇಟ್ಟಿದ್ದಾರೆ. ದೇಶದಲ್ಲಿ ಭಾರತ್ ಜೋಡೋ ಅಂತಾ ನಾವೇ ಪ್ರಚಾರ ಮಾಡಿದ್ದೇವೆ ಎಂದರು.

ಇದನ್ನೂ ಓದಿ: ಜಿ20 ಔತಣಕೂಟಕ್ಕೆ ಖರ್ಗೆ ಅವರನ್ನು ಆಹ್ವಾನಿಸದ ಮೋದಿ ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ಮಲ್ಲಿಕಾರ್ಜುನ ಖರ್ಗೆ ಲೋಕಸಭೆ ಚುನಾವಣೆಗೆ ಮತ್ತೆ ನಿಲುತ್ತಾರಾ ಇಲ್ಲವಾವಾ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಖರ್ಗೆ, ನಾನು ಇಲ್ಲೇ ಇದ್ದೆ, ಇಲ್ಲಿಂದ ನನಗೆ ಅಲ್ಲಿಗೆ ಕಳುಹಿಸಿದಿರಿ. ಈಗ ದೆಹಲಿಯಲ್ಲಿ ನಿಶ್ಚಿಂತೆಯಿಂದ ಇದ್ದೇನೆ. ಇದೀಗ ಮತ್ತೆ ಬಾ ಅಂತೀರಾ ಎಂದರು.

ಎಐಸಿಸಿ ಅಧ್ಯಕ್ಷರಿಗೆ ಆಹ್ವಾನ ನೀಡದಿರುವುದು ತಪ್ಪು: ಸಿದ್ದರಾಮಯ್ಯ

ಮಲ್ಲಿಕಾರ್ಜುನ ಖರ್ಗೆ ಕಾಂಗ್ರೆಸ್ ಅಧ್ಯಕ್ಷರು ಮಾತ್ರವಲ್ಲ, ಅವರು ಅಧಿಕೃತ ವಿರೋಧ ಪಕ್ಷದ ನಾಯಕರು. ಅವರನ್ನು ಜಿ20 ಶೃಂಗಸಭೆಗೆ ಕರೆಯದಿರುವುದು ತಪ್ಪು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬೆಂಗಳೂರಿನಲ್ಲಿ ಮಾತನಾಡಿದ ಅವರು, ನಾನು ಬೇರೆ ಕೆಲಸ ಇರುವ ಕಾರಣಕ್ಕೆ ಔತಣಕೂಟಕ್ಕೆ ಹೋಗತಿಲ್ಲ ಅಂತಾನೂ ಹೇಳಿದರು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅಧಿಕಾರಿಗಳ ನಿರ್ಲಕ್ಷ್ಯ; ಈರುಳ್ಳಿ ನೀರುಪಾಲು, ರೈತರು ಕಂಗಾಲು
ಅಧಿಕಾರಿಗಳ ನಿರ್ಲಕ್ಷ್ಯ; ಈರುಳ್ಳಿ ನೀರುಪಾಲು, ರೈತರು ಕಂಗಾಲು
‘ಮಾತಾಡೋದು ಕಲಿಯುತ್ತಿದ್ದೇನೆ’: ಚೈತ್ರಾ ಹೇಳಿದ್ದು ಕೇಳಿ ಕಂಗಾಲಾದ ಸುದೀಪ್​
‘ಮಾತಾಡೋದು ಕಲಿಯುತ್ತಿದ್ದೇನೆ’: ಚೈತ್ರಾ ಹೇಳಿದ್ದು ಕೇಳಿ ಕಂಗಾಲಾದ ಸುದೀಪ್​
ಮಾರ್ಟಿನ್​ ಸಿನಿಮಾದ ಅದ್ದೂರಿ ಪ್ರೀ-ರಿಲೀಸ್​ ಕಾರ್ಯಕ್ರಮ; ಇಲ್ಲಿದೆ ಲೈವ್
ಮಾರ್ಟಿನ್​ ಸಿನಿಮಾದ ಅದ್ದೂರಿ ಪ್ರೀ-ರಿಲೀಸ್​ ಕಾರ್ಯಕ್ರಮ; ಇಲ್ಲಿದೆ ಲೈವ್
ಉಡುಪಿಯ ಹೆಬ್ರಿಯಲ್ಲಿ ಮೇಘಸ್ಫೋಟ; ಭೀಕರ ಪ್ರವಾಹ ಸೃಷ್ಟಿ
ಉಡುಪಿಯ ಹೆಬ್ರಿಯಲ್ಲಿ ಮೇಘಸ್ಫೋಟ; ಭೀಕರ ಪ್ರವಾಹ ಸೃಷ್ಟಿ
‘ಡೆವಿಲ್​’ ಎದುರು ‘ಕರ್ನಾಟಕದ ಅಳಿಯ’ ಸಿನಿಮಾ ಬರೋದು ಫಿಕ್ಸ್: ಪ್ರಥಮ್
‘ಡೆವಿಲ್​’ ಎದುರು ‘ಕರ್ನಾಟಕದ ಅಳಿಯ’ ಸಿನಿಮಾ ಬರೋದು ಫಿಕ್ಸ್: ಪ್ರಥಮ್
ಉತ್ತರ ಕನ್ನಡ: ಮುರುಡೇಶ್ವರ ಕಡಲತೀರಕ್ಕೆ ಪ್ರವಾಸಿಗರಿಗೆ ನಿರ್ಬಂಧ
ಉತ್ತರ ಕನ್ನಡ: ಮುರುಡೇಶ್ವರ ಕಡಲತೀರಕ್ಕೆ ಪ್ರವಾಸಿಗರಿಗೆ ನಿರ್ಬಂಧ
ಬಿಗ್​ಬಾಸ್​ನಲ್ಲಿ ಮನೆಯಲ್ಲಿ ಯಾರು ಹಿಟ್? ಫ್ಲಾಪ್ ಆಗಿದ್ದು ಯಾರು?
ಬಿಗ್​ಬಾಸ್​ನಲ್ಲಿ ಮನೆಯಲ್ಲಿ ಯಾರು ಹಿಟ್? ಫ್ಲಾಪ್ ಆಗಿದ್ದು ಯಾರು?
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು