AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶೆಟ್ಟರ್ ಪಕ್ಷ ತೊರೆದಿದ್ದಕ್ಕೆ ಡಿಕೆ ಶಿವಕುಮಾರ್​ಗೆ ಎಚ್ಚರಿಕೆ ಕೊಟ್ಟ ಮಲ್ಲಿಕಾರ್ಜುನ ಖರ್ಗೆ

ಜಗದೀಶ್ ಶೆಟ್ಟರ್ ಅವರನ್ನು ಕಾಂಗ್ರೆಸ್​ಗೆ ಕರೆತರುವಲ್ಲಿ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿಕೆ ಶಿವಕುಮಾರ್ ಪ್ರಮುಖ ಪಾತ್ರ ವಹಿಸಿದ್ದರು. ಇದೀಗ ಶೆಟ್ಟರ್ ಕೆಲವೇ ತಿಂಗಳುಗಳಲ್ಲಿ ಮರಳಿ ಬಿಜೆಪಿ ಸೇರಿರುವುದು ಒಂದರ್ಥದಲ್ಲಿ ಡಿಕೆ ಶಿವಕುಮಾರ್​ಗೆ ಹಿನ್ನಡೆಯಾದಂತೆಯೇ ಎನ್ನಲಾಗುತ್ತಿದೆ.

ಶೆಟ್ಟರ್ ಪಕ್ಷ ತೊರೆದಿದ್ದಕ್ಕೆ ಡಿಕೆ ಶಿವಕುಮಾರ್​ಗೆ ಎಚ್ಚರಿಕೆ ಕೊಟ್ಟ ಮಲ್ಲಿಕಾರ್ಜುನ ಖರ್ಗೆ
ಮಲ್ಲಿಕಾರ್ಜುನ ಖರ್ಗೆ & ಡಿಕೆ ಶಿವಕುಮಾರ್
TV9 Web
| Edited By: |

Updated on: Jan 26, 2024 | 9:24 AM

Share

ಬೆಂಗಳೂರು, ಜನವರಿ 26: ಜಗದೀಶ್ ಶೆಟ್ಟರ್ (Jagadish Shettar) ಪಕ್ಷ ತೊರೆದು ಮರಳಿ ಬಿಜೆಪಿ (BJP) ಸೇರ್ಪಡೆಯಾಗಿರುವ ವಿಚಾರವಾಗಿ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿಕೆ ಶಿವಕುಮಾರ್​ಗೆ (DK Shivakumar) ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಬಹಿರಂಗವಾಗಿಯೇ ಎಚ್ಚರಿಕೆ ನೀಡಿದ್ದಾರೆ. ಗಣರಾಜ್ಯೋತ್ಸವ ಪ್ರಯುಕ್ತ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಶುಕ್ರವಾರ ಅವರು ಧ್ವಜಾರೋಹಣ ನೆರವೇರಿಸಿದರು. ಇದಕ್ಕೂ ಮುನ್ನ ಅವರು ಡಿಕೆ ಶಿವಕುಮಾರ್​​ಗೆ ಎಚ್ಚರಿಕೆ ನೀಡಿದ್ದಾರೆ.

ಪಕ್ಷಕ್ಕೆ ಯಾರನ್ನಾದರೂ ಸೇರಿಸಿಕೊಳ್ಳುವಾಗ ಯೋಚಿಸಬೇಕು. ಅವರ ಹಿನ್ನೆಲೆ, ಸಿದ್ಧಾಂತ ಏನೆಂದು ಅರಿತುಕೊಳ್ಳಬೇಕು. ಪಕ್ಷಕ್ಕೆ ನಿಷ್ಠಾವಂತರು ಮಾತ್ರ ಬರಬೇಕು. ಹೀಗೆ ಬಂದರು, ಹಾಗೆ ಹೋದರು ಅಂತ ಆಗಬಾರದು. ಅವರ ತತ್ವಗಳ ಆಧಾರದ ಮೇಲೆ ಸೇರ್ಪಡೆ ಮಾಡಿಕೊಳ್ಳಿ ಎಂದು ರಾಜ್ಯ ನಾಯಕರಿಗೆ ಖರ್ಗೆ ಕಿವಿಮಾತು ಹೇಳಿದರು. ಜತೆಗೆ, ಪರೋಕ್ಷವಾಗಿ ಶೆಟ್ಟರ್ ಬಗ್ಗೆ ಅಸಮಧಾನ ವ್ಯಕ್ತಪಡಿಸಿದರು.

ಇನ್ನು ಧ್ವಜಾರೋಹಣ ನೆರವೇರಿಸಿ ನಂತರ ಮಾತನಾಡಿದ ಖರ್ಗೆ, ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು. ಜನವರಿ 26 ಭಾರತದ ಇತಿಹಾಸದಲ್ಲಿ ವಿಶೇಷ ದಿನ. ಸಂವಿಧಾನ ಇಲ್ಲದಿದ್ರೆ ಪ್ರಜಾಪ್ರಭುತ್ವ ಉಳಿಯುತ್ತಿರಲಿಲ್ಲ. ಸಂವಿಧಾನ ತಿರುಚುವ ಕುತಂತ್ರವನ್ನು ಆರ್​ಎಸ್​ಎಸ್, ಬಿಜೆಪಿ ಮಾಡುತ್ತಿವೆ. ಸ್ವಾಯತ್ತ ಸಂಸ್ಥೆಗಳನ್ನ ನಾಶ ಮಾಡಲು ಬಿಜೆಪಿ ಪ್ರಯತ್ನಿಸುತ್ತಿದೆ. ಪ್ರಧಾನಿ ಮೋದಿ ಆರ್​ಎಸ್​ಎಸ್ ಕೈಗೊಂಬೆಯಾಗಿ ನಡೆದುಕೊಂಡಿದ್ದಾರೆ. ಇದರಿಂದ ನ್ಯಾಯಾಂಗ, ಜಾತ್ಯತೀತ ತತ್ವಕ್ಕೆ ದೊಡ್ಡ ಪೆಟ್ಟು ಬಿದ್ದಿದೆ ಎಂದರು.

ದನ್ನೂ ಓದಿ: ಶೆಟ್ಟರ್​​ ಬಿಜೆಪಿಗೆ ಮರಳಿದ ಬೆನ್ನಲ್ಲೇ ಸವದಿ ಜತೆ ಮಾತುಕತೆ ನಡೆಸಿದ ಡಿಕೆಶಿ

ಇವತ್ತು ಸಂವಿಧಾನವನ್ನು ಮುನ್ನಡೆಸುತ್ತಿರುವ ಜನ ಸರಿ ಇಲ್ಲ. ದೇಶದಲ್ಲಿ ಸ್ವಾತಂತ್ರ್ಯ ಬಂದ ದಿನದಿಂದ 2014ರವರೆಗೆ 55 ಲಕ್ಷ ಕೋಟಿ ರೂಪಾಯಿ ಸಾಲ ಇತ್ತು. ಒಂದು ಕೋಟಿ ಐವತ್ತು ಲಕ್ಷದಷ್ಟು ಸಾಲ ಇವತ್ತು ಹೆಚ್ಚಾಗಿದೆ. ಅನುಭವದಿಂದ ದೇಶಕ್ಕೆ ಒಳ್ಳೆಯ ಕೆಲಸವನ್ನು ನಮ್ಮ ನಾಯಕರು ಮಾಡಿಕೊಟ್ಟಿದ್ದಾರೆ. ನಮ್ಮ ಯುವಕರಿಗೆ ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಕಷ್ಟ ಇದೆ ಎಂದು ಖರ್ಗೆ ಹೇಳಿದರು.

ಎಲ್ಲರ ಓಟಿಗೂ ಒಂದೇ ಬೆಲೆ. ನನ್ನ ಓಟಿಗೂ ಒಂದೇ ಬೆಲೆ ಟಾಟಾ ಬಿರ್ಲಾ ಓಟಿಗೂ ಒಂದೇ ಬೆಲೆ. ಆದರೆ ಕೆಲವರು ತಾವೇ ಎಲ್ಲ ಅಂತ ಹೇಳಿಕೊಂಡು ತಿರುಗುತ್ತಿದ್ದಾರೆ. ಸಂವಿಧಾನ ಹಾಗೂ ಪ್ರಜಾಪ್ರಭುತ್ವ ಕಾಪಾಡಲು ನಾವೆಲ್ಲರೂ ಒಗ್ಗಟ್ಟಾಗಿ ಇರಬೇಕು ಎಂದು ಖರ್ಗೆ ಕರೆ ನೀಡಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕಾರ್ಮಿಕರ ಮೇಲೆ ಹಲ್ಲೆ ಮಾಡಿ ಚಹಾ ಅಂಗಡಿ ಧ್ವಂಸಗೊಳಿಸಿದ ಪೊಲೀಸಪ್ಪ!
ಕಾರ್ಮಿಕರ ಮೇಲೆ ಹಲ್ಲೆ ಮಾಡಿ ಚಹಾ ಅಂಗಡಿ ಧ್ವಂಸಗೊಳಿಸಿದ ಪೊಲೀಸಪ್ಪ!
ದೊಡ್ಡ ಗಣಪತಿ ದೇವಸ್ಥಾನದಲ್ಲಿ ಮೋದಿ ಹೆಸರಿನಲ್ಲಿ ವಿಶೇಷ ಪೂಜೆ, ಅಭಿಷೇಕ
ದೊಡ್ಡ ಗಣಪತಿ ದೇವಸ್ಥಾನದಲ್ಲಿ ಮೋದಿ ಹೆಸರಿನಲ್ಲಿ ವಿಶೇಷ ಪೂಜೆ, ಅಭಿಷೇಕ
ಬಾಯಿ ಮುಚ್ಕೊಂಡು ಕೂತ್ಗೊ; ಕಾವ್ಯಾಗೆ ಅವಾಜ್ ಹಾಕಿದ ಧ್ರುವಂತ್
ಬಾಯಿ ಮುಚ್ಕೊಂಡು ಕೂತ್ಗೊ; ಕಾವ್ಯಾಗೆ ಅವಾಜ್ ಹಾಕಿದ ಧ್ರುವಂತ್
ಅಕ್ರಮವಾಗಿ ಪಾರ್ಟಿ ಮಾಡುತ್ತಿದ್ದವರಿಗೆ ಶಾಕ್, ಫಾರ್ಮ್​ಹೌಸ್ ಮೇಲೆ ದಾಳಿ
ಅಕ್ರಮವಾಗಿ ಪಾರ್ಟಿ ಮಾಡುತ್ತಿದ್ದವರಿಗೆ ಶಾಕ್, ಫಾರ್ಮ್​ಹೌಸ್ ಮೇಲೆ ದಾಳಿ
ಸಂಜಯ್ ರಾವತ್ ಮನೆ ಮುಂದೆ ಬಾಂಬ್ ಬೆದರಿಕೆ ಸಂದೇಶವಿರುವ ಕಾರು ಪತ್ತೆ
ಸಂಜಯ್ ರಾವತ್ ಮನೆ ಮುಂದೆ ಬಾಂಬ್ ಬೆದರಿಕೆ ಸಂದೇಶವಿರುವ ಕಾರು ಪತ್ತೆ
ಅಯ್ಯಪ್ಪ ಸ್ವಾಮಿಯ ಫೋಟೋವನ್ನು ಮನೆಯಲ್ಲಿ ಇಡುವುದರಿಂದ ಆಗುವ ಲಾಭಗಳೇನು?
ಅಯ್ಯಪ್ಪ ಸ್ವಾಮಿಯ ಫೋಟೋವನ್ನು ಮನೆಯಲ್ಲಿ ಇಡುವುದರಿಂದ ಆಗುವ ಲಾಭಗಳೇನು?
ಹೊಸ ವರ್ಷದ ಮೊದಲ ದಿನದಂದು ಈ ರಾಶಿಯವರಿಗೆ ಶುಭ ಫಲ
ಹೊಸ ವರ್ಷದ ಮೊದಲ ದಿನದಂದು ಈ ರಾಶಿಯವರಿಗೆ ಶುಭ ಫಲ
ನ್ಯೂ ಇಯರ್​​​: ಕುಡಿದು ಟೈಟಾದ ಯುವತಿ, ಆಟೋದಲ್ಲಿ ಕೂರಿಸಿ ಕಳಿಸಿದ ಪೊಲೀಸ್​​
ನ್ಯೂ ಇಯರ್​​​: ಕುಡಿದು ಟೈಟಾದ ಯುವತಿ, ಆಟೋದಲ್ಲಿ ಕೂರಿಸಿ ಕಳಿಸಿದ ಪೊಲೀಸ್​​
ಬೆಳಗಾವಿಯಲ್ಲಿ ನ್ಯೂಇಯರ್​​ ಕಿಕ್​​; ಭರ್ಜರಿ ಸ್ಟೆಪ್​ ಹಾಕಿದ ಜನರು
ಬೆಳಗಾವಿಯಲ್ಲಿ ನ್ಯೂಇಯರ್​​ ಕಿಕ್​​; ಭರ್ಜರಿ ಸ್ಟೆಪ್​ ಹಾಕಿದ ಜನರು
New Year 2026: ಹೊಸವರ್ಷಕ್ಕೆ ಅದ್ಧೂರಿ ಸ್ವಾಗತ; ಕುಣಿದು ಕುಪ್ಪಳಿಸಿದ ಜನರು
New Year 2026: ಹೊಸವರ್ಷಕ್ಕೆ ಅದ್ಧೂರಿ ಸ್ವಾಗತ; ಕುಣಿದು ಕುಪ್ಪಳಿಸಿದ ಜನರು