ಅಜಿತ್ ಪವಾರ್ ಶೀಘ್ರದಲ್ಲೇ ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಲಿದ್ದಾರೆ, ಸ್ಫೋಟಕ ಹೇಳಿಕೆ ನೀಡಿದ ಮಹಾರಾಷ್ಟ್ರ ಸಚಿವ

|

Updated on: Oct 05, 2023 | 5:44 PM

ಮಹಾರಾಷ್ಟ್ರದ ಸಚಿವ ಧರ್ಮರಾವ್ ಬಾಬಾ ಅತ್ರಾಮ್ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು ಹೇಳಿಕೆ ಸಂಬಂಧಿಸಿದಂತೆ ಮಾಧ್ಯಮಗಳ ಕೇಳಿದ ಪ್ರಶ್ನೆಗೆ ಧರ್ಮರಾವ್ ಬಾಬಾ ಅತ್ರಾಮ್ ಅವರು ಉತ್ತರಿಸಿದ್ದಾರೆ. ಮುಂದಿನ ಅವಧಿಯಲ್ಲಿ ಅಜಿತ್​​ ಪವಾರ್​​ ಅವರನ್ನು ಮಹಾರಾಷ್ಟ್ರ ಮುಖ್ಯಮಂತ್ರಿ ಮಾಡುಲಾಗುತ್ತದೆಯೇ? ಎಂಬ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಧರ್ಮರಾವ್ ಬಾಬಾ ಅತ್ರಾಮ್ ರಾಜಕೀಯದಲ್ಲಿ ಏನಾಗುತ್ತದೆ ಎಂಬುದನ್ನು ಊಹಿಸಲು ಸಾಧ್ಯವಿಲ್ಲ ಎಂದು ಹೇಳುವ ಮೂಲಕ ಪರೋಕ್ಷವಾಗಿ ಅಜಿತ್​​ ಪವಾರ್ ಮುಖ್ಯಮಂತ್ರಿಯಾಗುತ್ತಾರೆ ಎಂದು ಹೇಳಿದ್ದಾರೆ.

ಅಜಿತ್ ಪವಾರ್ ಶೀಘ್ರದಲ್ಲೇ ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಲಿದ್ದಾರೆ, ಸ್ಫೋಟಕ ಹೇಳಿಕೆ ನೀಡಿದ ಮಹಾರಾಷ್ಟ್ರ ಸಚಿವ
Follow us on

ಬಾಂಬೆ, ಅ.5: ಮಹಾರಾಷ್ಟ್ರ (Maharashtra) ರಾಜಕೀಯದಲ್ಲಿ ಮಹತ್ವದ ಬೆಳವಣಿಗಳು ನಡೆಯುತ್ತಿದೆ. ಇದೀಗ ಒಬ್ಬ ಸಚಿವರ ಹೇಳಿಕೆ ಮಹಾರಾಷ್ಟ್ರ ರಾಜಕೀಯದಲ್ಲಿ ಮಹತ್ವ ಬದಲಾವಣೆ ಕಾಣುವ ಸಾಧ್ಯತೆ ಎಂದು ಹೇಳಲಾಗುತ್ತಿದೆ. ಅಜಿತ್​​ ಪವಾರ್​​ (Ajit Pawar) ಬಣದಿಂದ ಸಚಿವರಾಗಿರುವ ಧರ್ಮರಾವ್ ಬಾಬಾ ಅತ್ರಾಮ್ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು ಹೇಳಿಕೆ ಸಂಬಂಧಿಸಿದಂತೆ ಮಾಧ್ಯಮಗಳ ಕೇಳಿದ ಪ್ರಶ್ನೆಗೆ ಧರ್ಮರಾವ್ ಬಾಬಾ ಅತ್ರಾಮ್ ಅವರು ಉತ್ತರಿಸಿದ್ದಾರೆ. ಮುಂದಿನ ಅವಧಿಯಲ್ಲಿ ಅಜಿತ್​​ ಪವಾರ್​​ ಅವರನ್ನು ಮಹಾರಾಷ್ಟ್ರ ಮುಖ್ಯಮಂತ್ರಿ ಮಾಡುಲಾಗುತ್ತದೆಯೇ? ಎಂಬ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಧರ್ಮರಾವ್ ಬಾಬಾ ಅತ್ರಾಮ್ ರಾಜಕೀಯದಲ್ಲಿ ಏನಾಗುತ್ತದೆ ಎಂಬುದನ್ನು ಊಹಿಸಲು ಸಾಧ್ಯವಿಲ್ಲ ಎಂದು ಹೇಳುವ ಮೂಲಕ ಪರೋಕ್ಷವಾಗಿ ಅಜಿತ್​​ ಪವಾರ್ ಮುಖ್ಯಮಂತ್ರಿಯಾಗುತ್ತಾರೆ ಎಂದು ಹೇಳಿದ್ದಾರೆ. ಇನ್ನು ಅಜಿತ್ ಪವಾರ್ ಅವರನ್ನು ಮುಖ್ಯಮಂತ್ರಿ ಮಾಡಿದರೆ ಐದು ವರ್ಷ ಮುಖ್ಯಮಂತ್ರಿ ಮಾಡುತ್ತೇನೆ ಎಂದು ಫಡ್ನವೀಸ್ ಹೇಳಿದ್ದಾರೆ.

ಅಜಿತ್ ಪವಾರ್ ಅವರನ್ನು ಮುಖ್ಯಮಂತ್ರಿ ಮಾಡುವ ಸಮಯ ಬಂದರೆ ಅವರನ್ನು ಐದು ವರ್ಷಗಳ ಕಾಲ ಮುಖ್ಯಮಂತ್ರಿಯನ್ನಾಗಿ ಮಾಡುತ್ತೇನೆ ಎಂದು ಫಡ್ನವೀಸ್ ಹೇಳಿದ್ದರು. ಈ ಹೇಳಿಕೆಯ ನಂತರ ಮಹಾರಾಷ್ಟ್ರ ರಾಜಕೀಯದಲ್ಲಿ ಅಜಿತ್ ಪವಾರ್ ಮುಖ್ಯಮಂತ್ರಿಯಾಗುತ್ತಾರೆ ಎಂಬ ಚರ್ಚೆ ಶುರುವಾಗಿದೆ. ಫಡ್ನವೀಸ್ ಹೇಳಿಕೆಯ ಪ್ರಕಾರ ಮುಂದಿನ ಚುನಾವಣೆಯ ನಂತರ ಅಥವಾ ಅದಕ್ಕೂ ಮುನ್ನವೇ ಅಜಿತ್ ಪವಾರ್​ ಮುಖ್ಯಮಂತ್ರಿಯಾಗಬಹುದು ಎಂದು ಹೇಳಲಾಗಿದೆ.

ಇದನ್ನೂ ಓದಿ: ಅಜಿತ್ ಪವಾರ್ ಬಣದ ಎನ್​​ಸಿಪಿ ಟ್ವಿಟರ್​​ ಖಾತೆ ಅಮಾನತು

ಇನ್ನು ಅಜಿತ್ ಪವಾರ್ ಮುಖ್ಯಮಂತ್ರಿಯಾಗುವಂತೆ ಗರಿಷ್ಠ ಸೀಟು ಪಡೆಯಲು ಪ್ರಯತ್ನಿಸುತ್ತೇವೆ ಎಂದೂ ಹೇಳಿದರು. ಪುಣೆಯ ಸಚಿವ ಸ್ಥಾನದ ಬಗ್ಗೆ ಅಜಿತ್ ಪವಾರ್ ಅಸಮಾಧಾನದ ಪ್ರಶ್ನೆಯೇ ಇಲ್ಲ ಎಂದು ಅವರು ಹೇಳಿದರು. ಪುಣೆಯ ಉಸ್ತುವಾರಿ ಸಚಿವ ಸ್ಥಾನವನ್ನು ಎನ್‌ಸಿಪಿಗೆ ನೀಡಲು ಈಗಾಗಲೇ ನಿರ್ಧರಿಸಲಾಗಿದೆ. ಅದನ್ನು ನೀಡಲು ಸ್ವಲ್ಪ ತಡವಾಗಿದೆ ಎಂದು ಹೇಳಿದರು. ಚಂದ್ರಕಾಂತ ಪಾಟೀಲ ಅವರಿಗೆ ಪುಣೆಯ ಆಪ್ತ ಸಚಿವ ಸ್ಥಾನ ನೀಡಿದ್ದಕ್ಕೆ ಅಸಮಾಧಾನವಿಲ್ಲ ಎಂದೂ ಅವರು ಹೇಳಿದರು.

ಮಹಾರಾಷ್ಟ್ರದಲ್ಲಿ ಶಿಂದೆ ಸಂಪುಟ ಸಭೆ ನಡೆದಾಗ ಅಜಿತ್ ಪವಾರ್ ಅವರು ಅನಾರೋಗ್ಯದ ಕಾರಣದಿಂದ ಈ ಸಭೆಯಿಂದ ದೂರ ಉಳಿದಿದ್ದರು, ಆದರೆ ಅವರು ತಮ್ಮ ಶಾಸಕರ ಜತೆಗೆ ಮನೆಯಲ್ಲಿ ಸಭೆ ನಡೆಸಿದ್ದಾರೆ. ಈ ಸಮಯದಲ್ಲಿ ಹಲವು ಪ್ರಶ್ನೆಗಳು ಎದ್ದಿದ್ದವು. ಮತ್ತೊಂದೆಡೆ, ಸಂಪುಟ ಸಭೆಯ ನಂತರ ಸಿಎಂ ಏಕನಾಥ್ ಶಿಂದೆ ಮತ್ತು ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ದೆಹಲಿಗೆ ತೆರಳಿ ಬಿಜೆಪಿಯ ಹಿರಿಯ ನಾಯಕ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿದ್ದಾರೆ. ಈ ಭೇಟಿಯು ಸಿಎಂ ಬದಲಾವಣೆಯ ಚರ್ಚೆ ಗ್ರಾಸವಾಗಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 3:58 pm, Thu, 5 October 23