ಬಿಜೆಪಿಯತ್ತ ಮುಖ ಮಾಡಿದ ಅಖಂಡ ಶ್ರೀನಿವಾಸ್ ಮೂರ್ತಿ, ಇತ್ತ ಡಿಕೆ ಶಿವಕುಮಾರ್ ಭೇಟಿಯಾದ ಬಿಜೆಪಿ ಹಿರಿಯ ನಾಯಕ
ಕಾಂಗ್ರೆಸ್ ಶುರು ಮಾಡಿದ ಆಪರೇಷನ್ ಹಸ್ತ ರಾಜ್ಯ ರಾಜಕಾರಣದಲ್ಲಿ ಸಂಚಲನ ಸೃಷ್ಟಿಸಿದೆ. ಲೋಕಸಭಾ ಚುನಾವಣೆಗಾಗಿ ರಾಜ್ಯ ರಾಜಕಾರಣದಲ್ಲಿ ಪಕ್ಷಾಂತರ ಪರ್ವ ಶುರುವಾಗುವ ಎಲ್ಲಾ ಲಕ್ಷಣಗಳು ಗೋಚರಿಸಿವೆ. ಇದರ ಮಧ್ಯೆ ಮಾಜಿ ಶಾಸಕರೊಬ್ಬರು ಬಿಜೆಪಿಯತ್ತ ಮುಖ ಮಾಡಿದ್ದರೆ, ಬಿಜೆಪಿ ಹಿರಿಯ ನಾಯಕರೊಬ್ಬರು ಡಿಕೆ ಶಿವಕುಮಾರ್ ಭೇಟಿಯಾಗಿದ್ದು, ಬಾರೀ ಕುತೂಹಲ ಮೂಡಿಸಿದೆ.
ಬೆಂಗಳೂರು, (ಆಗಸ್ಟ್ 21): ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆದಯೇ ರಾಜ್ಯ ರಾಜಕಾರಣದಲ್ಲಿ (Karnataka Politics) ಹೊಸ ಬೆಳವಣಿಗೆಗಳು ನಡೆಯುತ್ತಿವೆ. ಅದರಲ್ಲೂ ಕಾಂಗ್ರೆಸ್(Congress) ತೊರೆದಿರುವ ಮಾಜಿ ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿ (Akhanda Srinivas murthy) ಇದೀಗ ಬಿಜೆಪಿ ಸೇರ್ಪಡೆಗೆ ಕಸರತ್ತು ನಡೆಸಿದ್ದಾರೆ. ವಿಧಾನಸಭೆ ಚುನಾವಣೆಯಲ್ಲಿ ಸೋಲು ಕಂಡಿರುವ ಶ್ರೀನಿವಾಸ್ ಮೂರ್ತಿ ಇದೀಗ ಲೋಕಸಭಾ ಚುನಾವಣೆ ಮೇಲೆ ಕಣ್ಣಿಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿಅವರು ಬಿಜೆಪಿ ಸೇರ್ಪಡೆಗೆ ಮುಂದಾಗಿದ್ದಾರೆ. ಕೋಲಾರ ಹಾಲಿ ಸಂಸದ ಎಸ್. ಮುನಿಸ್ವಾಮಿಗೆ 2024ರ ಲೋಕಸಭಾ ಚುನಾವಣೆಯ ಟಿಕೆಟ್ ಕಟ್ ಆಗಲಿದೆ ಎನ್ನುವ ಸುದ್ದಿ ಇದೆ. ಹೀಗಾಗಿ ಕೋಲಾರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಯಿಂದ ಕಣಕ್ಕಿಳಿಯುಲು ಕಸರತ್ತು ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಈ ಸಂಬಂಧ ಕಳೆದ ನಾಲ್ಕೈದು ದಿನಗಳ ಹಿಂದೆ ಬಸವರಾಜ ಬೊಮ್ಮಾಯಿ ಭೇಟಿಗೆ ಪ್ರಯತ್ನಿಸಿದ್ದರು. ಆದ್ರೆ, ಇನ್ನೂ ಭೇಟಿ ಬೊಮ್ಮಾಯಿ ಭೇಟಿಗೆ ಅವಕಾಶ ಸಿಕ್ಕಿಲ್ಲ.
ಈ ಹಿಂದೆ ಕಿಡಿಗೇಡಿಗಳು ಅಖಂಡ ಶ್ರೀನಿವಾಸ್ ಮೂರ್ತಿ ಮನೆಗೆ ಬೆಂಕಿ ಹಚ್ಚಿದ ಬಳಿಕ ಬಿಜೆಪಿ ನಾಯಕರು ಬೆಂಬಲವಾಗಿ ನಿಂತಿದ್ದರು. ಈ ಹಿನ್ನೆಲೆಯಲ್ಲಿ ಅಖಂಡ ಶ್ರೀನಿವಾಸ್ ಮೂರ್ತಿ ಅವರು ಇದೀಗ ಕಮಲ ಮುಡಿಯಲು ಮುಂದಾಗಿದ್ದಾರೆ.
ಡಿಕೆ ಶಿವಕುಮಾರ್ ಭೇಟಿಯಾದ ಕಟ್ಟಾ ಸುಬ್ರಹ್ಮಣ್ಯ ನಾಯ್ಡು
ಮತ್ತೊಂದೆಡೆ ಕಾಂಗ್ರೆಸ್ ಆರಂಭಿಸಿರುವ ಆಪರೇಷನ್ ಹಸ್ತ ರಾಜ್ಯ ರಾಜಕಾರಣದಲ್ಲಿ ಬಿರುಗಾಳಿ ಎಬ್ಬಿಸಿರುವ ಮಧ್ಯೆಯೇ ಮಾಜಿ ಸಚಿವ, ಬಿಜೆಪಿ ನಾಯಕ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಅವರು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿದ್ದಾರೆ. ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ಇಂದು(ಆಗಸ್ಟ್ 21) ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಡಿಕೆ ಶಿವಕುಮಾರ್ ಅವರನ್ನು ಭೇಟಿಯಾಗಿ ಗೌಪ್ಯ ಚರ್ಚೆ ನಡೆಸಿದ್ದು,ಭಾರೀ ಕುತೂಹಲಕ್ಕೆ ಮೂಡಿಸಿದೆ.
ಇನ್ನಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ