ಕಾಂಗ್ರೆಸ್​​ನಿಂದ ಅಂತರ ಕಾಯ್ದುಕೊಂಡು ಬಿಜೆಪಿ ವಿರುದ್ಧದ ‘ಹೊಸ ರಂಗ’ಕ್ಕೆ ಒಪ್ಪಿದ ಅಖಿಲೇಶ್ ಯಾದವ್, ಮಮತಾ ಬ್ಯಾನರ್ಜಿ

ರಾಹುಲ್ ಗಾಂಧಿ ವಿದೇಶದಲ್ಲಿ ನೀಡಿದ ಹೇಳಿಕೆಗೆ ಅವರು ಕ್ಷಮೆಯಾಚಿಸುವವರೆಗೂ ಬಿಜೆಪಿ ಸಂಸತ್ ಕಲಾಪಕ್ಕೆ ಅವಕಾಶ ನೀಡುವುದಿಲ್ಲ. ಇದರರ್ಥ ಅವರು ಕಾಂಗ್ರೆಸ್ ಅನ್ನು ಬಳಸಿಕೊಂಡು ಸಂಸತ್ತು ಕಾರ್ಯನಿರ್ವಹಿಸಲು ಬಯಸುವುದಿಲ್ಲ. ರಾಹುಲ್ ಗಾಂಧಿ (ವಿರೋಧ) ಮುಖವಾಗಬೇಕೆಂದು ಬಿಜೆಪಿ ಬಯಸುತ್ತದೆ

ಕಾಂಗ್ರೆಸ್​​ನಿಂದ ಅಂತರ ಕಾಯ್ದುಕೊಂಡು ಬಿಜೆಪಿ ವಿರುದ್ಧದ 'ಹೊಸ ರಂಗ'ಕ್ಕೆ ಒಪ್ಪಿದ ಅಖಿಲೇಶ್ ಯಾದವ್, ಮಮತಾ ಬ್ಯಾನರ್ಜಿ
ಮಮತಾ ಬ್ಯಾನರ್ಜಿ ಅಖಿಲೇಶ್ ಯಾದವ್​​ನ್ನು ಸ್ವಾಗತಿಸುತ್ತಿರುವುದುImage Credit source: @samajwadiparty
Follow us
ರಶ್ಮಿ ಕಲ್ಲಕಟ್ಟ
|

Updated on: Mar 17, 2023 | 6:42 PM

ಕೋಲ್ಕತ್ತಾ: ಕೇಂದ್ರದ ಮೂರು ಪ್ರಮುಖ ವಿರೋಧ ಪಕ್ಷಗಳು ಕಾಂಗ್ರೆಸ್ (Congress) ಮತ್ತು ಬಿಜೆಪಿ ಎರಡನ್ನೂ ದೂರ ಇರಿಸಲು ಒಪ್ಪಿದ್ದು, ಎರಡು ಪಕ್ಷಗಳನ್ನು ಸಮಾನವಾಗಿ ಪರಿಗಣಿಸುವ ನೀತಿಯನ್ನು ಅನುಸರಿಸುವುದಾಗಿ ಸೂಚಿಸಿದೆ. ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್  (Akhilesh Yadav) ಶುಕ್ರವಾರ ಕೋಲ್ಕತ್ತಾದಲ್ಲಿ ತೃಣಮೂಲ ಕಾಂಗ್ರೆಸ್ (Trinamool Congress) ಮುಖ್ಯಸ್ಥೆ ಮಮತಾ ಬ್ಯಾನರ್ಜಿ (Mamata Banerjee) ಅವರನ್ನು ಭೇಟಿಯಾದ ನಂತರ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಮುಂದಿನ ವಾರ ಬಿಜು ಜನತಾ ದಳದ ಮುಖ್ಯಸ್ಥರಾಗಿರುವ ಒಡಿಶಾದ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರನ್ನು ಭೇಟಿಯಾಗಲಿದ್ದಾರೆ. ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರನ್ನು ವಿರೋಧ ಪಕ್ಷಗಳ ಗುಂಪಿನ ಪ್ರಮುಖ ನಾಯಕ ಎಂದು ಬಿಂಬಿಸುವ ಬಿಜೆಪಿಯ ಪ್ರಯತ್ನವನ್ನು ಎದುರಿಸುವ ಗುರಿಯನ್ನು ಈ ತಂತ್ರ ಹೊಂದಿದೆ.

ಇತ್ತೀಚೆಗೆ ಲಂಡನ್‌ನಲ್ಲಿ ಭಾಷಣ ಮಾಡುವಾಗ ಭಾರತದ ಸಂಸತ್ತಿನಲ್ಲಿ ವಿರೋಧ ಪಕ್ಷದ ನಾಯಕರ ಮೈಕ್‌ಗಳನ್ನು ಮ್ಯೂಟ್ ಮಾಡಲಾಗಿದೆ ಎಂದು ಆರೋಪಿಸಿದ್ದ ರಾಹುಲ್ ಗಾಂಧಿ ಕ್ಷಮೆ ಕೇಳಬೇಕು ಎಂದು ಬಿಜೆಪಿ ಪಟ್ಟು ಹಿಡಿದಿದೆ. ಈಗ ಬಿಜೆಪಿಯು ರಾಹುಲ್ ಗಾಂಧಿಯನ್ನು ಬಳಸಿಕೊಂಡು ತಮ್ಮನ್ನು ಗುರಿಯಾಗಿಸಿಕೊಂಡಿದೆ ಇತರ ವಿರೋಧ ಪಕ್ಷಗಳು ಶಂಕಿಸುತ್ತಿದೆ.

ರಾಹುಲ್ ಗಾಂಧಿ ವಿದೇಶದಲ್ಲಿ ನೀಡಿದ ಹೇಳಿಕೆಗೆ ಅವರು ಕ್ಷಮೆಯಾಚಿಸುವವರೆಗೂ ಬಿಜೆಪಿ ಸಂಸತ್ ಕಲಾಪಕ್ಕೆ ಅವಕಾಶ ನೀಡುವುದಿಲ್ಲ. ಇದರರ್ಥ ಅವರು ಕಾಂಗ್ರೆಸ್ ಅನ್ನು ಬಳಸಿಕೊಂಡು ಸಂಸತ್ತು ಕಾರ್ಯನಿರ್ವಹಿಸಲು ಬಯಸುವುದಿಲ್ಲ. ರಾಹುಲ್ ಗಾಂಧಿ (ವಿರೋಧ) ಮುಖವಾಗಬೇಕೆಂದು ಬಿಜೆಪಿ ಬಯಸುತ್ತದೆ. 2024 ರ ಚುನಾವಣೆಗೆ ಪ್ರಧಾನ ಮಂತ್ರಿ ಆಕಾಂಕ್ಷಿಯನ್ನು ನಿರ್ಧರಿಸುವ ಅಗತ್ಯವಿಲ್ಲ” ಎಂದು ತೃಣಮೂಲ ಕಾಂಗ್ರೆಸ್ ಸಂಸದ ಸುದೀಪ್ ಬಂಡೋಪಾಧ್ಯಾಯ ಹೇಳಿರುವುದಾಗಿ ಎನ್​​ಡಿಟಿವಿ ವರದಿ ಮಾಡಿದೆ.ಕಾಂಗ್ರೆಸ್ ವಿರೋಧ ಪಕ್ಷದ ಬಿಗ್ ಬಾಸ್ ಎಂದು ಭಾವಿಸುವುದು ತಪ್ಪು ಎಂದಿದ್ದಾರೆ ಬಂಡೋಪಾಧ್ಯಾಯ.

ಇದನ್ನೂ ಓದಿ: 20 ನಿಮಿಷಗಳವರೆಗೆ ಯಾವುದೇ ದನಿ ಕೇಳಿಸಿಲ್ಲ; ಲೋಕಸಭೆಯಲ್ಲಿ ಮೈಕ್ ಬಂದ್ ಮಾಡಲಾಗಿದೆ ಎಂದು ಆರೋಪಿಸಿದ ಕಾಂಗ್ರೆಸ್

ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಮಾರ್ಚ್ 23 ರಂದು ನವೀನ್ ಪಟ್ನಾಯಕ್ ಅವರನ್ನು ಭೇಟಿಯಾಗಲಿದ್ದಾರೆ. ಬಿಜೆಪಿ ಮತ್ತು ಕಾಂಗ್ರೆಸ್‌ನಿಂದ ಸಮಾನ ಅಂತರವನ್ನು ಕಾಯ್ದುಕೊಳ್ಳುವ ಯೋಜನೆಯನ್ನು ಇತರ ವಿರೋಧ ಪಕ್ಷಗಳೊಂದಿಗೆ ಚರ್ಚಿಸುತ್ತೇವೆ. ಇದು ಮೂರನೇ ರಂಗ ಎಂದು ನಾವು ಹೇಳುತ್ತಿಲ್ಲ, ಆದರೆ ಬಿಜೆಪಿ ವಿರುದ್ಧ ನಿಲ್ಲಲ್ಲು ಪ್ರಾದೇಶಿಕ ಪಕ್ಷಗಳಿಗೆ ಶಕ್ತಿ ಇದೆ ಎಂದು ಬಂಡೋಪಾಧ್ಯಾಯ ಹೇಳಿದರು. ಅಖಿಲೇಶ್ ಯಾದವ್ ಅವರು ಕಾಂಗ್ರೆಸ್ ಮತ್ತು ಬಿಜೆಪಿ ಎರಡರಿಂದಲೂ ಸಮಾನ ಅಂತರವನ್ನು ಕಾಯ್ದುಕೊಳ್ಳಲು ಬಯಸುತ್ತಾರೆ ಎಂದು ಖಚಿತಪಡಿಸಿದ್ದಾರೆ.

ಬಂಗಾಳದಲ್ಲಿ, ನಾವು ಮಮತಾ ದೀದಿಯವರೊಂದಿಗೆ ಇದ್ದೇವೆ. ಇದೀಗ, ನಮ್ಮ ನಿಲುವು ಬಿಜೆಪಿ ಮತ್ತು ಕಾಂಗ್ರೆಸ್ ಎರಡರಿಂದಲೂ ಸಮಾನ ಅಂತರವನ್ನು ಕಾಯ್ದುಕೊಳ್ಳಲು ಬಯಸುತ್ತದೆ ಎಂದು ಅಖಿಲೇಶ್ ಯಾದವ್ ಕೋಲ್ಕತ್ತಾದಲ್ಲಿ ಸುದ್ದಿಗಾರರಿಗೆ ತಿಳಿಸಿದರು. ‘ಬಿಜೆಪಿ ಲಸಿಕೆ’ ಪಡೆಯುವವರಿಗೆ ಸಿಬಿಐ, ಇಡಿ ಅಥವಾ ಐಟಿಯಿಂದ ತೊಂದರೆಯಾಗುವುದಿಲ್ಲ ಎಂದು ಬಿಜೆಪಿಗೆ ಸೇರಿದ ನಂತರ ಕೇಂದ್ರ ತನಿಖಾ ಸಂಸ್ಥೆಗಳಿಂದ ಪ್ರಕರಣಗಳನ್ನು ಕೈಬಿಟ್ಟ ವಿರೋಧ ಪಕ್ಷದ ಮಾಜಿ ನಾಯಕರನ್ನು ಉಲ್ಲೇಖಿಸಿ ಅಖಿಲೇಶ್ ಹೇಳಿದ್ದಾರೆ.

ಕೇಂದ್ರೀಯ ತನಿಖಾ ದಳ ಮತ್ತು ಜಾರಿ ನಿರ್ದೇಶನಾಲಯ, ಇತ್ತೀಚೆಗೆ ಆಮ್ ಆದ್ಮಿ ಪಕ್ಷದ ಮನೀಶ್ ಸಿಸೋಡಿಯಾ ಮತ್ತು ರಾಷ್ಟ್ರೀಯ ಜನತಾ ದಳದ ಲಾಲು ಯಾದವ್ ಮತ್ತು ಅವರ ಕುಟುಂಬದಿಂದ ಹಲವಾರು ವಿರೋಧ ಪಕ್ಷದ ನಾಯಕರನ್ನು ಬೇಟೆಯಾಡಿದೆ ಎಂದಿದ್ದಾರೆ ಅಖಿಲೇಶ್.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ