Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾರೇ ಬಂದರೂ, ಕಾಂಗ್ರೆಸ್​ ಪಕ್ಷದ ಸಿದ್ಧಾಂತ, ತತ್ವ ಒಪ್ಪಿ ಬರುವವರಿಗೆ ಸ್ವಾಗತ: ಸಿಎಂ ಸಿದ್ದರಾಮಯ್ಯ

ಅಧಿಕಾರಕ್ಕೆ ಬಂದು ನೂರು ದಿನ‌ ಆಗಿದೆ. ಇಂದಿನಿಂದ ಮೂರು ದಿನ ಮೈಸೂರಿನಲ್ಲಿ ಪ್ರವಾಸ ಮಾಡಲಿದ್ದೇನೆ. ಮೈಸೂರಿನಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗುವೆ. ಆ.30ರಂದು ಗೃಹಲಕ್ಷ್ಮೀ ಯೋಜನೆಗೆ ಚಾಲನೆ ನೀಡಲಾಗುತ್ತೆ. ಕಾರ್ಯಕ್ರಮದಲ್ಲಿ ರಾಹುಲ್ ಗಾಂಧಿ ಭಾಗಿಯಾಗಲಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಅವರ ಖರ್ಗೆ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಯಾರೇ ಬಂದರೂ, ಕಾಂಗ್ರೆಸ್​ ಪಕ್ಷದ ಸಿದ್ಧಾಂತ, ತತ್ವ ಒಪ್ಪಿ ಬರುವವರಿಗೆ ಸ್ವಾಗತ: ಸಿಎಂ ಸಿದ್ದರಾಮಯ್ಯ
ಮುಖ್ಯಮಂತ್ರಿ ಸಿದ್ದರಾಮಯ್ಯ
Follow us
ರಾಮ್​, ಮೈಸೂರು
| Updated By: ವಿವೇಕ ಬಿರಾದಾರ

Updated on: Aug 28, 2023 | 3:16 PM

ಮೈಸೂರು: ವಲಸಿಗ ಬಿಜೆಪಿ (BJP) ಶಾಸಕರು ಕಾಂಗ್ರೆಸ್‌ಗೆ (Congress) ಮರು ಸೇರ್ಪಡೆಯಾಗುತ್ತಾರೆ ಎಂಬ ವಂದತಿ ಜೋರಾಗಿಯೇ ಕೇಳಿ ಬರುತ್ತಿದೆ. ಈ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಮಾತನಾಡಿ ಕಾಂಗ್ರೆಸ್​ ಪಕ್ಷಕ್ಕೆ ಯಾರೇ ಬಂದರೂ ಸ್ವಾಗತ. ಪಕ್ಷ ಬಿಟ್ಟು ಹೋದವರಷ್ಟೇ ಅಲ್ಲ, ಯಾರೇ ಬಂದರೂ ಸ್ವಾಗತ‌. ಆದರೆ ಪಕ್ಷದ ಸಿದ್ಧಾಂತ, ತತ್ವ ಒಪ್ಪಿ ಬರುವವರಿಗೆ ಮಾತ್ರ ಸ್ವಾಗತ. ರಾಜ್ಯದಲ್ಲಿ ಬಿಜೆಪಿ ಎಲ್ಲಿದೆ?, ಬಿಜೆಪಿ ದಿವಾಳಿಯಾಗಿದೆ. ಈವರೆಗೂ ವಿಪಕ್ಷ ನಾಯಕನ ಆಯ್ಕೆ ಮಾಡಲು ಸಾಧ್ಯವಾಗಿಲ್ಲ. ಪ್ರಧಾನಿ ಮೋದಿಯೇ ಭೇಟಿಗೆ ಬರಬೇಡಿ ಎಂದಿದ್ದರಂತೆ ಎಂದು ವಾಗ್ದಾಳಿ ಮಾಡಿದರು.

ಮೈಸೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಸರ್ಕಾರ ಬಂದು ನೂರು ದಿನ‌ ಆಗಿದೆ. ಇಂದಿನಿಂದ ಮೂರು ದಿನ ಮೈಸೂರಿನಲ್ಲಿ ಪ್ರವಾಸ ಮಾಡಲಿದ್ದೇನೆ. ಮೈಸೂರಿನಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗುವೆ. ಆ.30ರಂದು ಗೃಹಲಕ್ಷ್ಮೀ ಯೋಜನೆಗೆ ಚಾಲನೆ ನೀಡಲಾಗುತ್ತೆ. ಕಾರ್ಯಕ್ರಮದಲ್ಲಿ ರಾಹುಲ್ ಗಾಂಧಿ ಭಾಗಿಯಾಗಲಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಅವರ ಖರ್ಗೆ ಅಧ್ಯಕ್ಷತೆ ವಹಿಸಲಿದ್ದಾರೆ. ಮೈಸೂರು, ಚಾಮರಾಜನಗರ, ಕೊಡಗು, ಮಂಡ್ಯ ಸೇರಿದಂತೆ ರಾಜ್ಯದ ವಿವಿಧೆಡೆಯಿಂದ ಜನರು ಕಾರ್ಯಕ್ರಮಕ್ಕೆ ಆಗಮಿಸುವ ನಿರೀಕ್ಷೆ ಇದೆ. ಆ.30ರಂದು ಅರ್ಹ ಫಲಾನುಭವಿಗಳ ಖಾತೆಗೆ ಹಣ ಜಮೆ ಆಗಲಿದೆ ಎಂದು ತಿಳಿಸಿದರು.

ಇನ್ನು ರಾಜ್ಯದಲ್ಲಿ ವಾಡಿಕೆಯಷ್ಟು ಮಳೆಯಾಗದಿದ್ದಕ್ಕೆ ಮೋಡ ಬಿತ್ತನೆ ವಿಚಾರವಾಗಿ ಮಾತನಾಡಿದ ಅವರು ಮೋಡ ಬಿತ್ತನೆ ಯಾವ ಕಾಲದಲ್ಲೂ ಯಶಸ್ವಿಯಾಗಿಲ್ಲ. ಮೋಡ ಬಿತ್ತನೆಯಿಂದ ಯಾವುದೇ ಪ್ರಯೋಜನ ಇಲ್ಲ. ಬರ ಪೀಡಿತ ಪ್ರದೇಶ ಘೋಷಣೆ ನಂತರ ಅಗತ್ಯ ಕ್ರಮ ಕೈಗೊಳ್ಳುತ್ತೇವೆ ಎಂದರು.

ಇದನ್ನೂ ಓದಿ: ಬೈಯ್ಯುವವರಿಗೂ ಸ್ವಾಗತ, ಹೊಗಳುವವರಿಗೂ ಸ್ವಾಗತ ಎಂದು ಪ್ರತಾಪ್ ಸಿಂಹಗೆ ಹೇಳಿದ ಸಿದ್ದರಾಮಯ್ಯ

ಮೈಸೂರು ಜಿಲ್ಲೆಯಲ್ಲಿ ಬರ ಘೋಷಣೆ ಮಾಡುವ ಸ್ಥಿತಿ ಇದ್ಯಾ? ಕೃಷಿ ಅಧಿಕಾರಿಗಳು ಹಳ್ಳಿಗಳಿಗೆ ಹೋಗಬೇಕು. ಆಫೀಸ್​​ನಲ್ಲೆ ಕೂತು ಕೆಲಸ ಮಾಡಬೇಡಿ. ರೈತರ ಜೊತೆ ಗೌರವಯುತವಾಗಿ ನಡೆದುಕೊಳ್ಳಿ. ರೈತರ ಸಂಪರ್ಕ ಕೇಂದ್ರ ಇರುವುದು ಯಾಕೆ? ರೈತರು ಕೃಷಿ ಅಧಿಕಾರಿಗಳಿಗಿಂತ ಬುದ್ದಿವಂತರು. ಕೃಷಿ ವಿಶ್ವವಿದ್ಯಾಲಯದಲ್ಲಿ ಓದಿದ ಮಾತ್ರಕ್ಕೆ ಅಧಿಕಾರಿಗಳು ಬುದ್ದಿವಂತರಲ್ಲ ಎಂದು ಗರಂ ಆದರು.

ಯಾವ ರೈತರು ಕೂಡ ಪರಿಹಾರಕ್ಕಾಗಿ ಆತ್ಮಹತ್ಯೆ ಮಾಡಿಕೊಳ್ಳಲ್ಲ. ಏನೋ ಕಷ್ಟದಲ್ಲಿ ಆತುರದ ನಿರ್ಧಾರಕ್ಕೆ ಬಂದಿರುತ್ತಾರೆ. ಆತ್ಮಹತ್ಯೆ ಮಾಡಿಕೊಂಡ ರೈತರ ಕುಟುಂಬಕ್ಕೆ ತಕ್ಷಣ ಪರಿಹಾರ ಕೊಡಿ. ರೈತರ ಆತ್ಮಹತ್ಯೆ ಪ್ರಕರಣದಲ್ಲಿ ತಡ ಮಾಡಬೇಡಿ. ದುಡ್ಡು ಕೊಡುವುದು ಸರ್ಕಾರ ಅಲ್ಲ ನಾವು. ದಸರಾ ಇದೆ ಅಂತ ನೆಪ ಹೇಳಿಕೊಂಡು ರೈತರ ಕೆಲಸ ಮರೆಯಬೇಡಿ. ಪರಿಹಾರ ಕೊಟ್ಟು ಸುಮ್ಮನಾಗಬೇಡಿ, ಆತ್ಮಹತ್ಯೆಗೆ ಕಾರಣ ತಿಳಿದುಕೊಳ್ಳಿ. ರೈತರ ಆತ್ಮಹತ್ಯೆಗೆ ಕಾರಣರಾದವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಿ” ಎಂದು ಸೂಚನೆ ನೀಡಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ