AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿದ್ದರಾಮಯ್ಯ ವಿರುದ್ಧದ ಮುಡಾ ಹಗರಣ ಆರೋಪ ಹರಿಯಾಣ ಚುನಾವಣೆ ಮೇಲೆ ಎಫೆಕ್ಟ್ ಆಗಿದೆ: ಕೋಳಿವಾಡ

ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಟ್ಟು ತನಿಖೆ ಎದುರಿಸಬೇಕು ಎಂಬ ನನ್ನ ಹೇಳಿಕೆಗೆ ನಾನು ಈಗಲೂ ಬದ್ಧನಾಗಿದ್ದೇನೆ. ಮುಖ್ಯಮಂತ್ರಿಗಳು ರಾಜೀನಾಮೆ ಕೊಡಲಿ ಎಂಬ ನನ್ನ ಹೇಳಿಕೆ ಅಳಿಸಲು ಸಾಧ್ಯವಿಲ್ಲ. ನಾನು ಕಾಂಗ್ರೆಸ್ ಪಕ್ಷದ ದೃಷ್ಟಿಯಿಂದ ಆ ಮಾತನ್ನು ಹೇಳಿದ್ದೇನೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಕೆಬಿ ಕೋಳಿವಾಡ ಹೇಳಿದರು.​

ಸಿದ್ದರಾಮಯ್ಯ ವಿರುದ್ಧದ ಮುಡಾ ಹಗರಣ ಆರೋಪ ಹರಿಯಾಣ ಚುನಾವಣೆ ಮೇಲೆ ಎಫೆಕ್ಟ್ ಆಗಿದೆ: ಕೋಳಿವಾಡ
ಕೆಬಿ ಕೋಳಿವಾಡ
ಪ್ರಸನ್ನ ಗಾಂವ್ಕರ್​
| Edited By: ವಿವೇಕ ಬಿರಾದಾರ|

Updated on:Oct 08, 2024 | 12:12 PM

Share

ಬೆಂಗಳೂರು, ಅಕ್ಟೋಬರ್​ 08: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರ ವಿರುದ್ಧ ಕೇಳಿಬಂದಿರುವ ಮುಡಾ ಹಗರಣದ (Muda Scam) ಆರೋಪ ಹರಿಯಾಣ ಚುನಾವಣೆಯಲ್ಲಿ (Hariyana Election) ಕಾಂಗ್ರೆಸ್ (Congress) ಪಕ್ಷಕ್ಕೆ ಎಫೆಕ್ಟ್ ನೀಡಿದೆ. ಚುನಾವಣೆ ಪ್ರಚಾರದಲ್ಲಿ ಪ್ರಧಾನಿ ಮೋದಿಯವರು ಮುಡಾ ಹಗರಣದ ಬಗ್ಗೆ ಪದೇಪದೆ ಮಾತನಾಡಿದ್ದೂ ಕೂಡ ಸಾಕಷ್ಟು ಎಫೆಕ್ಟ್ ಆಗಿದೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಕೆ.ಬಿ.ಕೋಳಿವಾಡ (KB Koliwad) ಹೇಳಿದರು. ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಟ್ಟು ತನಿಖೆ ಎದುರಿಸಬೇಕು ಎಂಬ ನನ್ನ ಹೇಳಿಕೆಗೆ ನಾನು ಈಗಲೂ ಬದ್ಧನಾಗಿದ್ದೇನೆ ಎಂದರು.

ಮುಖ್ಯಮಂತ್ರಿಗಳು ರಾಜೀನಾಮೆ ಕೊಡಲಿ ಎಂಬ ನನ್ನ ಹೇಳಿಕೆ ಅಳಿಸಲು ಸಾಧ್ಯವಿಲ್ಲ. ನಾನು ಕಾಂಗ್ರೆಸ್ ಪಕ್ಷದ ದೃಷ್ಟಿಯಿಂದ ಆ ಮಾತನ್ನು ಹೇಳಿದ್ದೇನೆ. ಕಾಂಗ್ರೆಸ್ ಪಕ್ಷಕ್ಕೆ ಧಕ್ಕೆ ಆದರೆ ನೋಟಿಸ್ ಕೊಡುತ್ತಾರೆ. ನಾನು ಸಕ್ರಿಯ ರಾಜಕಾರಣದಲ್ಲಿ ಇಲ್ಲ, ಪಕ್ಷ ಉಳಿಸಲು ಕೆಲಸ ಮಾಡುತ್ತೇನೆ ಎಂದರು.

ಎಐಸಿಸಿ ನಾಯಕರು ಯಾಕೆ ನನಗೆ ಎಚ್ಚರಿಕೆ ನೀಡುತ್ತಾರೆ? ನಾನು ಕಾಂಗ್ರೆಸ್​ನ ಹಿರಿಯ ನಾಯಕ. ನಾನು (ಕೋಳಿವಾಡ) ಮತ್ತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸ್ನೇಹಿತರು. ನನ್ನ ಅಭಿಪ್ರಾಯವನ್ನ ನಾನು ಹೇಳಿದ್ದೇನೆ. ಮಲ್ಲಿಕಾರ್ಜುನ್​ ಖರ್ಗೆಯವರೂ ಕೂಡ ಅವರು ಇರಬಹುದು, ಇಲ್ಲದೇ ಇರಬಹುದು, ಪಕ್ಷ ಇರುತ್ತದೆ ಎಂದು ಹೇಳಿದ್ದಾರೆ ಎಂದು ತಿಳಿಸಿದರು.

ಇದನ್ನೂ ಓದಿ: ಸಿದ್ದರಾಮಯ್ಯ ರಾಜೀನಾಮೆ ನೀಡಲಿ: ಕಾಂಗ್ರೆಸ್ ನಾಯಕರ ಕೆರಳಿಸಿದ ಕೋಳಿವಾಡ ಹೇಳಿಕೆ! ಸಿಎಂ, ಡಿಸಿಎಂ ಹೇಳಿದ್ದೇನು?

ಕಾಂತರಾಜ ವರದಿ ಕೇವಲ ಆರ್ಥಿಕ ಶೈಕ್ಷಣಿಕ ಸಾಮಾಜಿಕ ಜನಗಣತಿ ಮಾತ್ರವಲ್ಲ. ಅದು ಜಾತಿ ಜನಗಣತಿ ಕೂಡ ಹೌದು. ಅವೈಜ್ಞಾನಿಕ ಅಂದರೆ ಹೇಗೆ ಅಂತ ಅರ್ಥವಾಗುತ್ತಿಲ್ಲ. ಜಾತಿ ಗಣತಿ ವರದಿಯಿಂದ ಯಾವುದೇ ಸಮುದಾಯಕ್ಕೆ ಅನ್ಯಾಯ ಆಗುತ್ತದೆ ಎಂದು ಅನಿಸುವುದಿಲ್ಲ. ಇದನ್ನು ಜಾರಿಗೆಗೆ ವಿಳಂಬ ಮಾಡುವ ಅವಶ್ಯಕತೆ ಇಲ್ಲ. ಜಾತಿಗಣತಿ ಜಾರಿಗೆ ನನ್ನ ಬೆಂಬಲ ಇದೆ. ಒಂದು ತಿಂಗಳು ಸಮಯ ಕೊಟ್ಟು ಏನಾದರೂ ಬದಲಾವಣೆ ಇದ್ದರೆ ಮಾಡಲಿ. ಜಾತಿ ಜನಗಣತಿ ಮಾಡುವಾಗ ನಾನೇ ವೈಯಕ್ತಿಕವಾಗಿ ಹಲವು ಕಡೆ ಹೋಗಿದ್ದೇನೆ. ಪ್ರತಿಯೊಂದು ಮನೆಗೆ ಭೇಟಿ ನೀಡಿದ್ದಾರೆ. ಉಪಜಾತಿಯನ್ನೂ ಕೂಡ ದಾಖಲು ಮಾಡಿಕೊಂಡಿದ್ದಾರೆ. ಬಹಳ ಉತ್ತಮವಾಗಿ ಜನಗಣತಿ ಮಾಡಿದ್ದಾರೆ ಎಂದು ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 12:11 pm, Tue, 8 October 24

Follow Us
Prasanna Gaonkar
Prasanna Gaonkar

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ