ತಿನ್ನಲು ನಾನು, ಯುದ್ಧಕ್ಕೆ ನೀವು ಹೋಗಿ ಅಂತಾ ಸಿದ್ದರಾಮಯ್ಯ ಹೇಳುತ್ತಿದ್ದಾರೆ: ಪ್ರಲ್ಹಾದ್ ಜೋಶಿ

ಕಾಂಗ್ರೆಸ್ ಸರ್ಕಾರವು ಕೇಂದ್ರದ ಬಿಜೆಪಿ ಸರ್ಕಾರ ಕರ್ನಾಟಕಕ್ಕೆ ತೆರಿಗೆ ವಂಚನೆ ಮಾಡಿದೆ ಎಂದು ಆರೋಪಿಸುತ್ತಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ನಮ್ಮ ಸರ್ಕಾರ 256 ಪರ್ಸೆಂಟ್​ ಹೆಚ್ಚಿಗೆ ಅನುದಾನ ಕೊಟ್ಟಿದೆ ಎಂದರು. ಅಲ್ಲದೆ, ತಿನ್ನಲು ನಾನು, ಯುದ್ಧಕ್ಕೆ ನೀವು ಹೋಗಿ ಅಂತಾ ಸಿದ್ದರಾಮಯ್ಯ ಹೇಳುತ್ತಿದ್ದಾರೆ ಎಂದು ಅರೋಪಕ್ಕೆ ತಿರುಗೇಟು ನೀಡಿದರು.

ತಿನ್ನಲು ನಾನು, ಯುದ್ಧಕ್ಕೆ ನೀವು ಹೋಗಿ ಅಂತಾ ಸಿದ್ದರಾಮಯ್ಯ ಹೇಳುತ್ತಿದ್ದಾರೆ: ಪ್ರಲ್ಹಾದ್ ಜೋಶಿ
ಪ್ರಲ್ಹಾದ್ ಜೋಶಿ ಹಾಗೂ ಸಿದ್ದರಾಮಯ್ಯ
Follow us
ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ
| Updated By: Rakesh Nayak Manchi

Updated on: Feb 12, 2024 | 7:26 PM

ಕೋಲಾರ, ಫೆ.12: ತಿನ್ನಲು ನಾನು, ಯುದ್ಧಕ್ಕೆ ನೀವು ಹೋಗಿ ಅಂತಾ ಸಿದ್ದರಾಮಯ್ಯ (Siddaramaiah) ಹೇಳುತ್ತಿದ್ದಾರೆ ಎಂದು ಹೇಳುವ ಮೂಲಕ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ (Pralhad Joshi) ಅವರು ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ತೆರಿಗೆ ವಂಚನೆ ಮಾಡಿದೆ ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆರೋಪಕ್ಕೆ ತಿರುಗೇಟು ನೀಡಿದರು. ಕೋಲಾರದಲ್ಲಿ ಮಾತನಾಡಿದ ಅವರು, ಹಣಕಾಸು ಆಯೋಗದ ಮುಂದೆ ಅವರ ಸಮಸ್ಯೆ ಹೇಳಲಿ ಎಂದರು.

ಯುಪಿಎ (ಈಗಿನ ಐಎನ್​ಡಿಐಎ ಒಕ್ಕೂಟ) ಸರ್ಕಾರದಲ್ಲಿ 60 ಸಾವಿರ ಕೋಟಿ ಕೊಟ್ಟಿದ್ದಾರೆ ಅಷ್ಟೇ. ರಾಜ್ಯಕ್ಕೆ 1 ಲಕ್ಷ 50 ಸಾವಿರ ಕೋಟಿ ಆದರೂ ಯುಪಿಎ ಷರ್ಕಾರ ಕೊಡಬೇಕಿತ್ತು, ಯಾಕೆ ಕೊಟ್ಟಿಲ್ಲ ಎಂದು ಜೋಶಿ ಪ್ರಶ್ನಿಸಿದರು. ಅಲ್ಲದೆ, ನಮ್ಮ ಅವಧಿಯಲ್ಲಿ 2.61 ಲಕ್ಷ ಕೋಟಿ ರಾಜ್ಯಕ್ಕೆ ಕೊಟ್ಟಿದ್ದೇವೆ. ಆ ಮೂಲಕ ನಮ್ಮ ಸರ್ಕಾರ ಕಾಂಗ್ರೆಸ್ ನೀಡಿದ್ದಕ್ಕಿಂತ 256 ಪರ್ಸೆಂಟ್​ ಹೆಚ್ಚು ಅನುದಾನ ಕೊಟ್ಟಿದೆ. ಪ್ರಧಾನಿ ನರೇಂದ್ರ ಮೋದಿ ಕಾಲದಲ್ಲಿ ಬಜೆಟ್​​ ಗಾತ್ರವೂ ಹೆಚ್ಚಿದೆ ಎಂದರು.

ಇದನ್ನೂ ಓದಿ: BY Vijayendra: ದೆಹಲಿಯಲ್ಲಿ ಜೆಪಿ ನಡ್ಡಾ, ಜೋಶಿ ಭೇಟಿಯಾದ ವಿಜಯೇಂದ್ರ, ಚುನಾವಣೆ ಸಿದ್ಧತೆ ಬಗ್ಗೆ ಚರ್ಚೆ

ರಾಹುಲ್ ಗಾಂಧಿಗೆ ಬುದ್ಧಿ ಇಲ್ಲ: ಪ್ರಲ್ಹಾದ್ ಜೋಶಿ

ಪ್ರಧಾನಿ ಮೋದಿ ಜಾತಿ ಕುರಿತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿಕೆ ವಿಚಾರವಾಗಿ ಮಾತನಾಡಿದ ಜೋಶಿ, ರಾಹುಲ್ ಗಾಂಧಿಗೆ ಬುದ್ಧಿ ಇಲ್ಲ ಎಂದರು. ಮೋದಿ ಜಾತಿ ಬಗ್ಗೆ ಮಾತಾಡಿ ಈಗಾಗಲೇ ಎರಡು ವರ್ಷ ಶಿಕ್ಷೆ ಆಗಿದೆ. ಕಾಂಗ್ರೆಸ್ ಸರ್ಕಾರ ಇದ್ದಾಗ ಮೋದಿ ಜಾತಿ ಒಬಿಸಿಗೆ ಸೇರಿದೆ. ಯಾರೋ ಬರೆದು ಕೊಟ್ಟಿದ್ದನ್ನು ರಾಹುಲ್ ಗಾಂಧಿ ಹೇಳಿದ್ದಾರೆ. ಬೇರೆ ವಿಚಾರ ಹೇಳಿ ಕೊಡುವವರೆಗೂ ಇದನ್ನೇ ಹೇಳುತ್ತಾರೆ ಎಂದರು.

ಕ್ಷೇತ್ರ ಹಂಚಿಕೆ ತೀರ್ಮಾನ ಆಗಿಲ್ಲ: ಪ್ರಲ್ಹಾದ್ ಜೋಶಿ

ಬಿಜೆಪಿ-ಜೆಡಿಎಸ್ ಮೈತ್ರಿ ನಡುವೆ ಟಿಕೆಟ್ ಹಂಚಿಕೆ ಬಗ್ಗೆ ಮಾತನಾಡಿದ ಜೋಶಿ, ಲೋಕಸಭೆ ಚುನಾವಣೆಗೆ ಕ್ಷೇತ್ರ ಹಂಚಿಕೆ ಬಗ್ಗೆ ಇನ್ನೂ ತೀರ್ಮಾನ ಆಗಿಲ್ಲ. ಸಮಿತಿ ಮುಂದೆ ಚರ್ಚೆ ಮಾಡಿ ತೀರ್ಮಾನ ಮಾಡಲಾಗುತ್ತದೆ ಎಂದರು. ಕೋಲಾರ ಬಿಜೆಪಿಯ ಬಲವಾದ ಕ್ಷೇತ್ರ. ಜೆಡಿಎಸ್​ಗೆ ಕೋಲಾರ ಬಿಟ್ಟು ಕೊಡುವ ಬಗ್ಗೆ ತೀರ್ಮಾನ ಆಗಿಲ್ಲ. ಹೆಚ್​ಡಿ ದೇವೇಗೌಡರ ಜೊತೆ ಮಾತನಾಡಿ ತೀರ್ಮಾನ ಮಾಡಲಾಗುತ್ತದೆ ಎಂದರು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ತನ್ನ ತಂದೆ ಬಗ್ಗೆ ಮಾತಾಡಿದ ಬಿಜೆಪಿ ನಾಯಕನ ಹೇಳಿಕೆಗೆ ಕಣ್ಣೀರು ಹಾಕಿದ ಅತಿಶಿ
ತನ್ನ ತಂದೆ ಬಗ್ಗೆ ಮಾತಾಡಿದ ಬಿಜೆಪಿ ನಾಯಕನ ಹೇಳಿಕೆಗೆ ಕಣ್ಣೀರು ಹಾಕಿದ ಅತಿಶಿ
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ