ಕುಮಾರಸ್ವಾಮಿಗೆ ವರ್ಗಾವಣೆ ಬಗ್ಗೆ ವಿದೇಶದಲ್ಲಿ ಮಾಹಿತಿ ಸಿಕ್ಕಿತೇ: ಎಂಬಿ ಪಾಟೀಲ್ ಪ್ರಶ್ನೆ

ಕರ್ನಾಟಕ ಕಾಂಗ್ರೆಸ್ ಸರ್ಕಾರದ ವಿರುದ್ಧ ವರ್ಗಾವಣೆ ದಂಧೆ ಆರೋಪ ಮಾಡಿದ ಹೆಚ್​ಡಿ ಕುಮಾರಸ್ವಾಮಿ ಹೇಳಿಕೆಗೆ ಸಚಿವ ಎಂಬಿ ಪಾಟೀಲ್ ತಿರುಗೇಟು ನೀಡಿದ್ದಾರೆ. ಕುಮಾರಸ್ವಾಮಿಗೆ ವರ್ಗಾವಣೆ ಬಗ್ಗೆ ವಿದೇಶದಲ್ಲಿ ಮಾಹಿತಿ ಸಿಕ್ಕಿತೇ ಎಂದು ಪ್ರಶ್ನಿಸಿದ್ದಾರೆ.

ಕುಮಾರಸ್ವಾಮಿಗೆ ವರ್ಗಾವಣೆ ಬಗ್ಗೆ ವಿದೇಶದಲ್ಲಿ ಮಾಹಿತಿ ಸಿಕ್ಕಿತೇ: ಎಂಬಿ ಪಾಟೀಲ್ ಪ್ರಶ್ನೆ
ಎಂಬಿ ಪಾಟೀಲ್ ಮತ್ತು ಹೆಚ್​ಡಿ ಕುಮಾರಸ್ವಾಮಿ
Edited By: Rakesh Nayak Manchi

Updated on: Aug 05, 2023 | 6:21 PM

ವಿಜಯಪುರ, ಆಗಸ್ಟ್ 5: ಕುಮಾರಸ್ವಾಮಿಗೆ ವರ್ಗಾವಣೆ ಬಗ್ಗೆ ವಿದೇಶದಲ್ಲಿ ಮಾಹಿತಿ ಸಿಕ್ಕಿತೇ ಎಂದು ಬೃಹತ್ ಕೈಗಾರಿಕೆ ಸಚಿವ ಎಂ.ಬಿ. ಪಾಟೀಲ್ (M.B.Patil) ಪ್ರಶ್ನಿಸಿದ್ದಾರೆ. ಸಿಂಗಾಪುರದಿಂದ ಆಗಮಿಸಿದ ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ (H.D. Kumaraswamy) ಅವರು ಕಾಂಗ್ರೆಸ್ ಸರ್ಕಾರದ ವಿರುದ್ಧ ವರ್ಗಾವಣೆ ವಿಚಾರವಾಗಿ 1 ಸಾವಿರ ಕೋಟಿ ದಂಧೆ ನಡೆದಿದೆ ಎಂದು ಆರೋಪಿಸಿದ್ದರು.

ಈ ಬಗ್ಗೆ ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ವ್ಯಂಗ್ಯವಾಡಿದ ಎಂ.ಬಿ. ಪಾಟೀಲರು, ವರ್ಗಾವಣೆ ಬಗ್ಗೆ ಕುಮಾರಸ್ವಾಮಿಗೆ ವಿದೇಶದಲ್ಲಿ ಮಾಹಿತಿ ಸಿಕ್ಕಿತೇ ಎಂದು ಪ್ರಶ್ನಿಸಿದರು. ಅಲ್ಲದೆ, ಪೆನ್​ಡ್ರೈವ್ ಇದೆ ಅಂತಾ ಹೇಳಿ ಸುಮ್ಮನೇ ನಿಂದನೆ ಮಾಡಬಾರದು. ಪೆನ್​ಡ್ರೈವ್​ ಹೊರ ಬರಲಿಲ್ಲ, ಬರೀ ಮುಚ್ಚಿಕೊಂಡು ಹೇಳಿದ್ದೇ ಆಯ್ತು. ಕುಮಾರಸ್ವಾಮಿ ಬಳಿ ಪೆನ್ನೂ ಇಲ್ಲ ಡ್ರೈವ್​ ಇಲ್ಲ ಎಂದರು.

ಇದನ್ನೂ ಓದಿ: ನೈಸ್ ಹಗರಣದ ಕುರಿತು ದಾಖಲೆ ನೀಡಿದ್ರೆ, ನೀವು ರೈತರಿಗೆ ನ್ಯಾಯ ಕೊಡಿಸುತ್ತೀರಾ – ಪ್ರಧಾನಿ ಮೋದಿಗೆ ಕುಮಾರಸ್ವಾಮಿ ಪ್ರಶ್ನೆ

ಹೆಚ್​.ಡಿ.ಕುಮಾರಸ್ವಾಮಿ ಅವಧಿಯಲ್ಲಿ ವರ್ಗಾವಣೆ ಆಗಿಯೇ ಇಲ್ವಾ ಎಂದು ಪ್ರಶ್ನಿಸಿದ ಪಾಟೀಲರು, ವರ್ಗಾವಣೆ ಆಡಳಿತಾತ್ಮಕ ವಿಷಯ. ಅವರ ನೇತೃತ್ವದ ಸರ್ಕಾರದಲ್ಲಿ ನಾನೇ ಗೃಹಸಚಿವನಾಗಿದ್ದೆ. ಆಗ ಸಾಕಷ್ಟು ವರ್ಗಾವಣೆಗಳಿಗೆ ತಡೆಯಾಜ್ಞೆ ಆಗಿದೆ ಎಂದರು.

ಸರ್ಕಾರ ಪತನಕ್ಕೆ ವಿದೇಶದಲ್ಲಿ ಯೋಜನೆ ರೂಪಿಸಲಾಗುತ್ತಿದೆ ಎಂಬ ವದಂತಿ ವಿಚಾರವಾಗಿ ಮಾತನಾಡಿದ ಎಂಬಿ ಪಾಟೀಲ್, ನಮ್ಮ ಸರ್ಕಾರ ಅಸ್ಥಿರಗೊಳಿಸಲು ಆಗುವುದಿಲ್ಲ. 136 ಶಾಸಕರಿದ್ದೇವೆ ಯಾರಿಗೂ ಸರ್ಕಾರ ಅಲುಗಾಡಿಸೋಕೆ ಆಗಲ್ಲ. ನಮ್ಮ ಸರ್ಕಾರ 5 ವರ್ಷ ಸುಭದ್ರ ಆಡಳಿತ ನೀಡುತ್ತದೆ. ಮತ್ತೆ ಅಧಿಕಾರಕ್ಕೆ ಬರುತ್ತೇವೆ. ಮೊದಲು ಕುಮಾರಸ್ವಾಮಿ ತಮ್ಮ ಶಾಸಕರನ್ನು ಸಂಭಾಳಿಸಿಕೊಳ್ಳಲಿ. ಇಲ್ಲೇ ಏನು ಮಾಡಲು ಆಗಲ್ಲ, ವಿದೇಶದಲ್ಲಿ ಏನ್ ಮಾಡುತ್ತಾರೆ ಎಂದು ಪ್ರಶ್ನಿಸಿದರು.

ಎಸ್​ಸಿ ಎಸ್​ಟಿ ಸಮುದಾಯದ ಕಲ್ಯಾಣಕ್ಕಾಗಿ ಮೀಸಲಿಟ್ಟ ಅನುದಾನವನ್ನು ಗ್ಯಾರಂಟಿ ಯೋಜನೆಗೆ ಬಳಕೆ ಮಾಡಲಾಗುತ್ತಿದೆ ಎಂಬ ಬಿಜೆಪಿ ನಾಯಕ ಮುರುಗೇಶ್ ನಿರಾಣಿ ಆರೋಪಕ್ಕೆ ತಿರುಗೇಟು ನೀಡಿದ ಪಾಟೀಲರು, ಹಣ ಯಾವಾಗ ದುರುಪಯೋಗ ಆಗಿದೆ ಎಂದು ನಿರಾಣಿಯರನ್ನ ಕೇಳಿ, ಮೆಟ್ರೋ ರೈಲಿಗಾಗಿ ಬಿಜೆಪಿ ಎಸ್​ಸಿ ಎಸ್​ಟಿ ಹಣ ಬಳಕೆ‌ ಮಾಡಿದೆ ಎಂದರು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Ashok Yadalli

ನನ್ನ ಹೆಸರು ಅಶೋಕ ಯಡಳ್ಳಿ, ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಕಳೆದ 2012 ರಿಂದ ವಿಜಯಪುರ ಜಿಲ್ಲಾ ಪ್ರತಿನಿಧಿಯಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೂ ಮುನ್ನ ಹೈದರಾಬಾದಿನ ರಾಮೋಜಿ ರಾವ್ ಪೀಲ್ಮ್ ಸಿಟಿಯಲ್ಲಿದ್ದ ಈಟಿವಿ ಕನ್ನಡ ಮನರಂಜನೆ ಹಾಗೂ ಸುದ್ದಿ ವಾಹಿನಿಯಲ್ಲಿ ಸೇವೆ ಸಲ್ಲಿಸುತ್ತಿದ್ದೆ. ಇದು ನನ್ನ ಕೆಲಸದ ಬಗ್ಗೆ ಹೇಳಿರೋ ಮಾಹಿತಿಯಾಗಿದ್ದು ವೈಯುಕ್ತಿಕ ಮಾಹಿತಿ ಬಗ್ಗೆ ಹೇಳದಾದರೆ. ನಾನು ಮೂಲತಃ ಧಾರವಾಡ ಜಿಲ್ಲೆಯವ. ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮ ನಮ್ಮೂರು. ತಂದೆ ತಾಯಿ ಸಹೋದರ ಸಹೋದರಿಯರ ತುಂಬು ಕುಟುಂಬ. ಮೂಲತಃ ಕೃಷಿ ಕುಟುಂಬವಾಗಿದ್ದು, ಹಿರಿಯರಿಂದ ಬಂದ ಜಮೀನುಗಳಿವೆ. ಪ್ರಾಥಮಿಕ ಶಿಕ್ಷಣ ನಮ್ಮೂರಲ್ಲೇ ಬಳಿಕ ಹೈಸ್ಕೂಲ್ ನಿಂದ ಹಿಡಿದು ಪಿಜಿವರೆಗೂ ಧಾರವಾಡ. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋಧ್ಯಮ ಮತ್ತು ಸಮೂಹ ಸಂವಹನ ವಿಭಾಗದಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. ಟಿವಿ9 ನಲ್ಲಿ ಹಲವಾರು ಉತ್ತಮ ವರದಿಗಳನ್ನು ನೀಡಿದ ಹೆಮ್ಮೆ ತೃಪ್ತಿ ನನಗಿದೆ. ಆಲಮೇಲದ ವಿದ್ಯಾರ್ಥಿನಿಯರ ಮೇಲಿನ ಲೈಂಗಿಕ ದೌರ್ಜನ್ಯ ಬಹಿರಂಗ ಮಾಡಿದ್ದು, ವಿಜಯಪುರ ಬಾಗಲಕೋಟೆಯಲ್ಲಿ ಕೊಳವೆ ಬಾವಿಯಲ್ಲಿ ಬಿದ್ದಿದ್ದ ಮಕ್ಕಳ ಕುರಿತ ವರದಿ. ಹಾವಿನ ಸೇಡಿಗೆ ಒಳಗಾಗಿದ್ದ ಯುವಕನ ಸಮಸ್ಯೆ ಬಗೆ ಹರಿಸಿದ್ದು. ಉಷ್ಣ ವಿದ್ಯುತ್ ಸ್ಥಾವರದ ಗಲಾಟೆ ಹೀಗೆ ಹಲವಾರು ವಿಶೇಷ ಸುದ್ದಿಗಳು, ಚುನಾವಣೆ, ರಾಜಕೀಯ, ಕ್ರೀಡೆ, ಹೀಗೂ ಉಂಟೇ, ವಾರೆಂಟ್, ಮಾರುವೇಷ, ಸಾಧನೆ, ಕೃಷಿ ಹೀಗೆ ಅನೇಕ ವಿಚಾರಗಳ ಕುರಿತ ಸುದ್ದಿಗಳಿಗೆ ನ್ಯಾಯ ಒದಗಿಸಿದ್ದೇನೆಂದು ನಂಬಿದ್ದೇನೆ. ಭವಿಷ್ಯದಲ್ಲಿ ಇನ್ನೂ ಹೆಚ್ಚಿನ ಉತ್ತಮ ವರದಿಗಳನ್ನು ಮಾಡುವ ಹಂಬಲ - ಆಸಕ್ತಿಯಿದೆ. ಕ್ರೀಡೆ, ಸಾಮಾಜಿಕ, ಕೃಷಿಯಲ್ಲಿ ಹೆಚ್ಚಿನ ಆಸಕ್ತಿಯಿದೆ. ಧನ್ಯವಾದಗಳು.......

Read More
Follow Us