AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೌಲ್ವಿ ತನ್ವೀರ್ ಜೊತೆ ವ್ಯಾಪಾರ ಪಾಲುದಾರ ಆರೋಪ: ಸಿದ್ದರಾಮಯ್ಯಗೆ ಸವಾಲು ಹಾಕಿದ ಯತ್ನಾಳ್

ಐಸಿಸಿ ಉಗ್ರರ ಜೊತೆ ಮೌಲ್ವಿ ತನ್ವೀರ್ ಹಶ್ಮಿ ನಂಟು ಇರುವ ಬಗ್ಗೆ ಪ್ರಧಾನಿ ಮೋದಿ ಅವರು ತನಿಖೆಗೆ ಆದೇಶಿಸಲಿ ಎಂದು ಸಿದ್ದರಾಮಯ್ಯ ಅವರು ಸವಾಲು ಹಾಕಿದ್ದರು. ಇದರ ಬೆನ್ನಲ್ಲೇ ಟ್ವೀಟ್ ಮಾಡಿದ ಬಸನಗೌಡ ಪಾಟೀಲ್ ಯತ್ನಾಳ್, ಮೌಲ್ವಿ ವಿರುದ್ಧ ತನಿಖೆಗೆ ಆದೇಶಿಸುವಂತೆ ಸಿದ್ದರಾಮಯ್ಯರಿಗೆ ಸವಾಲು ಹಾಕಿದರಲ್ಲದೆ, ಮೌಲ್ವಿ ಜೊತೆಗಿನ ವ್ಯಾಪಾರ ವಹಿವಾಟಿನ ಆರೋಪ ಸುಳ್ಳು ಎಂದಿದ್ದಾರೆ.

ಮೌಲ್ವಿ ತನ್ವೀರ್ ಜೊತೆ ವ್ಯಾಪಾರ ಪಾಲುದಾರ ಆರೋಪ: ಸಿದ್ದರಾಮಯ್ಯಗೆ ಸವಾಲು ಹಾಕಿದ ಯತ್ನಾಳ್
ಬಸನಗೌಡ ಪಾಟೀಲ್ ಯತ್ನಾಳ್ ಮತ್ತು ಸಿದ್ದರಾಮಯ್ಯ
TV9 Web
| Updated By: Rakesh Nayak Manchi|

Updated on: Dec 08, 2023 | 4:46 PM

Share

ಬೆಂಗಳೂರು, ಡಿ.8: ಮೌಲ್ವಿ ತನ್ವೀರ್ ಹಶ್ಮಿ ಜೊತೆ ಸಿಎಂ ಸಿದ್ದರಾಮಯ್ಯ (Siddaramaiah) ಅವರು ವೇದಿಕೆ ಹಂಚಿಕೊಂಡಿದ್ದರು. ಆದರೆ, ಹಶ್ಮಿಗೆ ಐಸಿಸ್ ಉಗ್ರರ ನಂಟು ಇದೆ ಎಂದು ಬಸನಗೌಡ ಪಾಟೀಲ್ ಯತ್ನಾಳ್ (Basanagouda Patil Yatnal) ಗಂಭೀರ ಆರೋಪ ಮಾಡಿದ್ದರು. ಅದಾಗ್ಯೂ, ಆರೋಪ ಅಳ್ಳಗಳೆದ ಸಿದ್ದರಾಮಯ್ಯ, ಹಶ್ಮಿ ಜೊತೆ ಸ್ನೇಹ ಸಂಬಂಧವನ್ನು ಒಪ್ಪಿಕೊಂಡಿದ್ದೇನೆ ಎಂದು ಹೇಳಿ ಮೌಲ್ವಿ ವಿರುದ್ಧ ಪ್ರಧಾನಿ ಮೋದಿ ತನಿಖೆಗೆ ಆದೇಶಿಸಲಿ ಎಂದರು. ಇದೀಗ ಮೌಲ್ವಿ ವಿರುದ್ಧ ತನಿಖೆಗೆ ಸಿದ್ದರಾಮಯ್ಯ ಆದೇಶಿಸಲಿ ಎಂದು ಯತ್ನಾಳ್ ಸವಾಲು ಹಾಕಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿದ ಯತ್ನಾಳ್, ಮೌಲ್ವಿ ತನ್ವೀರ್ ವಿರುದ್ಧ ತನಿಖೆಗೆ ಆದೇಶಿಸುವಂತೆ ನಾನು ಸಿದ್ದರಾಮಯ್ಯ ಅವರನ್ನು ಒತ್ತಾಯಿಸುತ್ತೇನೆ, ಕಾಂಗ್ರೆಸ್ ಸರ್ಕಾರವು ಯಾವುದೇ ವಿಚಾರಣೆಯಿಲ್ಲದೆ ಮೌಲ್ವಿ ತನ್ವೀರ್ ಅವರನ್ನು ರಕ್ಷಿಸಲು ಹವಣಿಸುತ್ತಿದೆ ಎಂದಿದ್ದಾರೆ.

ಬಸನಗೌಡ ಪಾಟೀಲ್ ಯತ್ನಾಳ್ ಟ್ವೀಟ್

ಇದನ್ನೂ ಓದಿ: ಮುಸ್ಲಿಂ ಧರ್ಮಗುರು ತನ್ವೀರ್​​​ ಪೀರಾ ಜೊತೆ ಉದ್ಯಮ ನಂಟು ಆರೋಪವನ್ನ ಅಲ್ಲಗೆಳೆದ ಯತ್ನಾಳ್​

ಕೇಂದ್ರ ಗೃಹ ಸಚಿವರಿಗೆ ಪತ್ರ ಬರೆದಿದ್ದೇನೆ, ಸಿಎಂ ಸಿದ್ದರಾಮಯ್ಯ ಎನ್‌ಐಎ ತನಿಖೆಗೆ ಆದೇಶಿಸಬೇಕು. ಮೌಲ್ವಿ ಜೊತೆಗಿನ ವ್ಯವಹಾರದ ಬಗ್ಗೆ ಸುಳ್ಳು ಸುದ್ದಿಗೆ ಸಂಬಂಧಿಸಿದಂತೆ, ನನ್ನ ವ್ಯಾಪಾರ ಪಾಲುದಾರರನ್ನು ಮಾಧ್ಯಮದ ಮುಂದೆ ತರುವಂತೆ ನಾನು ಸಿದ್ದರಾಮಯ್ಯ ಅವರಿಗೆ ಬಹಿರಂಗ ಸವಾಲು ಹಾಕುತ್ತೇನೆ ಎಂದರು.

ಸಿದ್ದರಾಮಯ್ಯ ಹೇಳಿದ್ದೇನು?

ಯತ್ನಾಳ್ ವಿರುದ್ಧ ಸರಣಿ ಟ್ವೀಟ್ ಮೂಲಕ ವಾಗ್ದಾಳಿ ನಡೆಸಿದ್ದ ಸಿದ್ದರಾಮಯ್ಯ, ಇಂದಿನ ಪತ್ರಿಕೆಗಳಲ್ಲಿ ಪ್ರಕಟವಾಗಿರುವ ಸುದ್ದಿಯ ಪ್ರಕಾರ ಮೌಲ್ವಿ ತನ್ವೀರ್ ಹಾಶ್ಮಿ ಕುಟುಂಬದ ಜೊತೆಯಲ್ಲಿ ಶಾಸಕ ಯತ್ನಾಳ್ ಅವರಿಗೆ ವ್ಯಾಪಾರಿ ಸಂಬಂಧ ಕೂಡಾ ಇದೆ ಎನ್ನುವುದು ಬಯಲಾಗಿದೆ ಎಂದಿದ್ದರು.

ಯತ್ನಾಳ್ ಅವರ ಆರೋಪದಂತೆ ತನ್ವೀರ್ ಹಾಶ್ಮಿ ಅವರಿಗೆ ಐಸಿಸ್ ಜೊತೆ ಸಂಬಂಧ ಇರುವುದಾಗಿದ್ದರೆ ಅವರ ಜೊತೆಗೆ ವ್ಯವಹಾರದ ಪಾಲುದಾರರಾಗಿರುವ ಯತ್ನಾಳ್ ಅವರಿಗೆ ಅದು ಗೊತ್ತಿರಲಿಲ್ಲವೇ? ಗೊತ್ತಿದ್ದೂ ಸುಮ್ಮನಿರಲು ಕಾರಣವೇನು? ಇಷ್ಟು ಸಮಯದ ನಂತರ ಇಂತಹ ಆರೋಪ ಮಾಡಲು ಕಾರಣಗಳೇನು ಎನ್ನುವುದನ್ನು ಕೂಡಾ ಕೇಂದ್ರ ಸರ್ಕಾರ ತನಿಖೆ ನಡೆಸಬೇಕು ಎಂದಿದ್ದರು.

ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ