ಬೆಂಗಳೂರು, ಡಿ.8: ಮೌಲ್ವಿ ತನ್ವೀರ್ ಹಶ್ಮಿ ಜೊತೆ ಸಿಎಂ ಸಿದ್ದರಾಮಯ್ಯ (Siddaramaiah) ಅವರು ವೇದಿಕೆ ಹಂಚಿಕೊಂಡಿದ್ದರು. ಆದರೆ, ಹಶ್ಮಿಗೆ ಐಸಿಸ್ ಉಗ್ರರ ನಂಟು ಇದೆ ಎಂದು ಬಸನಗೌಡ ಪಾಟೀಲ್ ಯತ್ನಾಳ್ (Basanagouda Patil Yatnal) ಗಂಭೀರ ಆರೋಪ ಮಾಡಿದ್ದರು. ಅದಾಗ್ಯೂ, ಆರೋಪ ಅಳ್ಳಗಳೆದ ಸಿದ್ದರಾಮಯ್ಯ, ಹಶ್ಮಿ ಜೊತೆ ಸ್ನೇಹ ಸಂಬಂಧವನ್ನು ಒಪ್ಪಿಕೊಂಡಿದ್ದೇನೆ ಎಂದು ಹೇಳಿ ಮೌಲ್ವಿ ವಿರುದ್ಧ ಪ್ರಧಾನಿ ಮೋದಿ ತನಿಖೆಗೆ ಆದೇಶಿಸಲಿ ಎಂದರು. ಇದೀಗ ಮೌಲ್ವಿ ವಿರುದ್ಧ ತನಿಖೆಗೆ ಸಿದ್ದರಾಮಯ್ಯ ಆದೇಶಿಸಲಿ ಎಂದು ಯತ್ನಾಳ್ ಸವಾಲು ಹಾಕಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿದ ಯತ್ನಾಳ್, ಮೌಲ್ವಿ ತನ್ವೀರ್ ವಿರುದ್ಧ ತನಿಖೆಗೆ ಆದೇಶಿಸುವಂತೆ ನಾನು ಸಿದ್ದರಾಮಯ್ಯ ಅವರನ್ನು ಒತ್ತಾಯಿಸುತ್ತೇನೆ, ಕಾಂಗ್ರೆಸ್ ಸರ್ಕಾರವು ಯಾವುದೇ ವಿಚಾರಣೆಯಿಲ್ಲದೆ ಮೌಲ್ವಿ ತನ್ವೀರ್ ಅವರನ್ನು ರಕ್ಷಿಸಲು ಹವಣಿಸುತ್ತಿದೆ ಎಂದಿದ್ದಾರೆ.
I would urge Siddaramaiah to order an enquiry against Maulvi Tanveer, The Congress Government is bent to protect Maulvi Tanvir without any enquiry.
I have written a letter to Union Home Minister, CM Siddaramaiah should order NIA Enquiry.
Regarding Fake news about business with… https://t.co/4EpilpOFRj
— Basanagouda R Patil (Yatnal) (@BasanagoudaBJP) December 8, 2023
ಇದನ್ನೂ ಓದಿ: ಮುಸ್ಲಿಂ ಧರ್ಮಗುರು ತನ್ವೀರ್ ಪೀರಾ ಜೊತೆ ಉದ್ಯಮ ನಂಟು ಆರೋಪವನ್ನ ಅಲ್ಲಗೆಳೆದ ಯತ್ನಾಳ್
ಕೇಂದ್ರ ಗೃಹ ಸಚಿವರಿಗೆ ಪತ್ರ ಬರೆದಿದ್ದೇನೆ, ಸಿಎಂ ಸಿದ್ದರಾಮಯ್ಯ ಎನ್‌ಐಎ ತನಿಖೆಗೆ ಆದೇಶಿಸಬೇಕು. ಮೌಲ್ವಿ ಜೊತೆಗಿನ ವ್ಯವಹಾರದ ಬಗ್ಗೆ ಸುಳ್ಳು ಸುದ್ದಿಗೆ ಸಂಬಂಧಿಸಿದಂತೆ, ನನ್ನ ವ್ಯಾಪಾರ ಪಾಲುದಾರರನ್ನು ಮಾಧ್ಯಮದ ಮುಂದೆ ತರುವಂತೆ ನಾನು ಸಿದ್ದರಾಮಯ್ಯ ಅವರಿಗೆ ಬಹಿರಂಗ ಸವಾಲು ಹಾಕುತ್ತೇನೆ ಎಂದರು.
ಯತ್ನಾಳ್ ವಿರುದ್ಧ ಸರಣಿ ಟ್ವೀಟ್ ಮೂಲಕ ವಾಗ್ದಾಳಿ ನಡೆಸಿದ್ದ ಸಿದ್ದರಾಮಯ್ಯ, ಇಂದಿನ ಪತ್ರಿಕೆಗಳಲ್ಲಿ ಪ್ರಕಟವಾಗಿರುವ ಸುದ್ದಿಯ ಪ್ರಕಾರ ಮೌಲ್ವಿ ತನ್ವೀರ್ ಹಾಶ್ಮಿ ಕುಟುಂಬದ ಜೊತೆಯಲ್ಲಿ ಶಾಸಕ ಯತ್ನಾಳ್ ಅವರಿಗೆ ವ್ಯಾಪಾರಿ ಸಂಬಂಧ ಕೂಡಾ ಇದೆ ಎನ್ನುವುದು ಬಯಲಾಗಿದೆ ಎಂದಿದ್ದರು.
ಯತ್ನಾಳ್ ಅವರ ಆರೋಪದಂತೆ ತನ್ವೀರ್ ಹಾಶ್ಮಿ ಅವರಿಗೆ ಐಸಿಸ್ ಜೊತೆ ಸಂಬಂಧ ಇರುವುದಾಗಿದ್ದರೆ ಅವರ ಜೊತೆಗೆ ವ್ಯವಹಾರದ ಪಾಲುದಾರರಾಗಿರುವ ಯತ್ನಾಳ್ ಅವರಿಗೆ ಅದು ಗೊತ್ತಿರಲಿಲ್ಲವೇ? ಗೊತ್ತಿದ್ದೂ ಸುಮ್ಮನಿರಲು ಕಾರಣವೇನು? ಇಷ್ಟು ಸಮಯದ ನಂತರ ಇಂತಹ ಆರೋಪ ಮಾಡಲು ಕಾರಣಗಳೇನು ಎನ್ನುವುದನ್ನು ಕೂಡಾ ಕೇಂದ್ರ ಸರ್ಕಾರ ತನಿಖೆ ನಡೆಸಬೇಕು ಎಂದಿದ್ದರು.
ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ