ಆದಾಯ ಮೀರಿ ಆಸ್ತಿ ಗಳಿಗೆ ಆರೋಪ: ಕೋರ್ಟ್​ ಆದೇಶ, ಕೆಎಸ್​ ಈಶ್ವರಪ್ಪಗೆ ಸಂಕಷ್ಟ

ಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಕೆಯ ಆರೋಪದಲ್ಲಿ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಅಬರಿಗೆ ಸಂಕಷ್ಟ ಎದುರಾಗಿದೆ. ಆದಾಯ ಮೀರಿ ಆಸ್ತಿ ಗಳಿಗೆ ಆರೋಪದ ಪ್ರಕರಣದ ತನಿಖೆ ನಡೆಸುವಂತೆ ಲೋಕಾಯುಕ್ತ ಪೊಲೀಸರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿದೆ. ಮೂರು ತಿಂಗಳೊಳಗೆ ತನಿಖೆ ಪೂರ್ಣಗೊಳಿಸಿ ವರದಿ ಸಲ್ಲಿಸುವಂತೆ ಹೇಳಿದೆ.

ಆದಾಯ ಮೀರಿ ಆಸ್ತಿ ಗಳಿಗೆ ಆರೋಪ: ಕೋರ್ಟ್​ ಆದೇಶ, ಕೆಎಸ್​ ಈಶ್ವರಪ್ಪಗೆ ಸಂಕಷ್ಟ
ಮಾಜಿ ಸಚಿವ ಕೆಎಸ್​ ಈಶ್ವರಪ್ಪ
Edited By:

Updated on: Apr 05, 2025 | 8:36 PM

ಬೆಂಗಳೂರು, ಏಪ್ರಿಲ್​ 05: ಕೆ.ಎಸ್.ಈಶ್ವರಪ್ಪ (KS Eshwarappa) ಸಚಿವರಾಗಿದ್ದಾಗ ಆದಾಯ ಮೀರಿ ಆಸ್ತಿ ಗಳಿಸಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಪ್ರಕರಣದ ತನಿಖೆಯನ್ನು ಮೂರು ತಿಂಗಳಲ್ಲಿ ನಡೆಸಿ ವರದಿ ಸಲ್ಲಿಸುವಂತೆ ಲೋಕಾಯುಕ್ತ ಪೊಲೀಸರಿಗೆ (Lokayukta Police) ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿದೆ. ಕೆಎಸ್​ ಈಶ್ವರಪ್ಪ ಅವರು ಜಲಸಂಪನ್ಮೂಲ ಸಚಿವರಾಗಿದ್ದಾಗ ಆದಾಯ ಮೀರಿ ಆಸ್ತಿ ಗಳಿಸಿದ್ದಾರೆ ಎಂದು 2016ರಲ್ಲಿ ವಕೀಲ ಬಿ.ವಿನೋದ್ ಎಂಬುವರು ಶಿವಮೊಗ್ಗ ಲೋಕಾಯುಕ್ತ ನ್ಯಾಯಾಲಯಕ್ಕೆ ಖಾಸಗಿ ದೂರು ಸಲ್ಲಿಸಿದ್ದರು.

ಆದರೆ, ಶಿವಮೊಗ್ಗ ಲೋಕಾಯುಕ್ತ ನ್ಯಾಯಾಲಯ ಖಾಸಗಿ ದೂರು ಸಮರ್ಕವಾಗಿಲ್ಲವೆಂದು ವಜಾಗೊಳಿಸಿತ್ತು. ವಜಾ ಆದೇಶ ಪ್ರಶ್ನಿಸಿ ಬಿ.ವಿನೋದ್ ಅವರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ 2020ರಲ್ಲಿ ದೂರನ್ನು ಮರು ಪರಿಗಣನೆಗೆ ತೆಗೆದುಕೊಳ್ಳುವಂತೆ ಶಿವಮೊಗ್ಗ ಲೋಕಾಯುಕ್ತ ನ್ಯಾಯಾಲಯಕ್ಕೆ ಆದೇಶಿಸಿತ್ತು. ನಂತರ, ಶಿವಮೊಗ್ಗ ಲೋಕಾಯುಕ್ತ ನ್ಯಾಯಾಲಯ, ಪ್ರಕರಣವನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ವರ್ಗಾಯಿಸಿದೆ.

ಇದನ್ನೂ ಓದಿ: ಕ್ರಾಂತಿವೀರ ಬ್ರಿಗೇಡ್ ಉದ್ಘಾಟನೆಗೆ ಮುಹೂರ್ತ ಫಿಕ್ಸ್: ರಾಜ್ಯ ರಾಜಕಾರಣದಲ್ಲಿ ಈಶ್ವರಪ್ಪ ಸಂಚಲನ

ಇದನ್ನೂ ಓದಿ
ಡಿಕೆ ಶಿವಕುಮಾರ್ ಭಾರತೀಯ ಸಂಸ್ಕೃತಿಯನ್ನು ಪ್ರತಿನಿಧಿಸುತ್ತಾರೆ: ಈಶ್ವರಪ್ಪ
ಕ್ರಾಂತಿವೀರ ಬ್ರಿಗೇಡ್ ಉದ್ಘಾಟನೆಗೆ ಮುಹೂರ್ತ ಫಿಕ್ಸ್: ಈಶ್ವರಪ್ಪ ಸಂಚಲನ
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಪಿಎನನ್ನು ಇದುವರೆಗೆ ಯಾಕೆ ಬಂಧಿಸಿಲ್ಲ? ರವಿ
ಕ್ರಾಂತಿವೀರ ಬ್ರಿಗೇಡ್: ಈಶ್ವರಪ್ಪ ನೇತೃತ್ವದಲ್ಲಿ ಹೊಸ ಸಂಘಟನೆ!

ಇದೀಗ, ಪ್ರಕರಣದ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ, ಖಾಸಗಿ ದೂರು ಮರುಪರಿಗಣಿಸಿ, ಸಿಆರ್​ಪಿಸಿ 156 (3) ಅಡಿ ಎಫ್ಐಆರ್ ದಾಖಲಿಸಿ, ತನಿಖೆ ನಡೆಸಿ ಮೂರು ತಿಂಗಳ ಒಳಗೆ ವರದಿ ಸಲ್ಲಿಸುವಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜಡ್ಜ್ ಸಂತೋಷ್ ಗಜಾನನ ಭಟ್ ಆದೇಶ ಹೊರಡಿಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:35 pm, Sat, 5 April 25