ಬಿಜೆಪಿ ಜೊತೆ ಮೈತ್ರಿ; ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷರು ಈ ಫೋಟೋದಲ್ಲಿ ಎಲ್ಲಿದ್ದಾರೆ?: ಕಾಂಗ್ರೆಸ್ ಪ್ರಶ್ನೆ

ಮುಂಬರುವ ಲೋಕಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಕರ್ನಾಟಕದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಮಾತುಕತೆ ಒಮ್ಮತಕ್ಕೆ ಬಂದಿದೆ. ಬಿಜೆಪಿ ನಾಯಕರಾದ ಅಮಿತ್ ಶಾ, ಜೆಪಿ ನಡ್ಡಾ ಜೊತೆಗಿನ ಮಾತುಕತೆ ವೇಳೆ ಜೆಡಿಎಸ್​ನ ಹೆಚ್​ಡಿ ಕುಮಾರಸ್ವಾಮಿ ಮತ್ತು ಪುತ್ರ ನಿಖಿಲ್ ಕುಮಾರಸ್ವಾಮಿ ಇದ್ದರು. ಆದರೆ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಇರಲಿಲ್ಲ. ಇದನ್ನೇ ಮುಂದಿಟ್ಟುಕೊಂಡು ಕಾಂಗ್ರೆಸ್ ಟ್ವೀಟ್ ಮಾಡಿ ಜೆಡಿಎಸ್​ ಅನ್ನು ಪ್ರಶ್ನಿಸಿದೆ.

ಬಿಜೆಪಿ ಜೊತೆ ಮೈತ್ರಿ; ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷರು ಈ ಫೋಟೋದಲ್ಲಿ ಎಲ್ಲಿದ್ದಾರೆ?: ಕಾಂಗ್ರೆಸ್ ಪ್ರಶ್ನೆ
ಜೆಡಿಎಸ್ ರಾಜ್ಯಾಧ್ಯಕ್ಷರ ಅನುಪಸ್ಥಿತಿಯಲ್ಲಿ ಬಿಜೆಪಿ ಜೊತೆ ಮೈತ್ರಿ ಮಾತುಕತೆ ನಡೆಸಿದ ಕುಮಾರಸ್ವಾಮಿ
Follow us
ಪ್ರಸನ್ನ ಗಾಂವ್ಕರ್​
| Updated By: Rakesh Nayak Manchi

Updated on: Sep 22, 2023 | 9:42 PM

ಬೆಂಗಳೂರು, ಸೆ.22: ಮುಂಬರುವ ಲೋಕಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಕರ್ನಾಟಕದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಮಾತುಕತೆ ಒಮ್ಮತಕ್ಕೆ ಬಂದಿದೆ. ಬಿಜೆಪಿ ನಾಯಕರಾದ ಅಮಿತ್ ಶಾ, ಜೆಪಿ ನಡ್ಡಾ ಜೊತೆಗಿನ ಮಾತುಕತೆ ವೇಳೆ ಜೆಡಿಎಸ್​ನ ಹೆಚ್​ಡಿ ಕುಮಾರಸ್ವಾಮಿ (HD Kumaraswamy) ಮತ್ತು ಪುತ್ರ ನಿಖಿಲ್ ಕುಮಾರಸ್ವಾಮಿ ಇದ್ದರು. ಆದರೆ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಇರಲಿಲ್ಲ. ಇದನ್ನೇ ಮುಂದಿಟ್ಟುಕೊಂಡು ಕಾಂಗ್ರೆಸ್ (Congress) ಟ್ವೀಟ್ ಮೂಲಕ ಜೆಡಿಎಸ್​ ಅನ್ನು ಪ್ರಶ್ನಿಸಿದೆ.

ಜೆಡಿಎಸ್ ಪಕ್ಷಕ್ಕೆ ರಾಜ್ಯಾಧ್ಯಕ್ಷ ಅಂತ ಒಬ್ಬರಿದ್ದರು ಈ ಚಿತ್ರದಲ್ಲಿ ಅವರೆಲ್ಲಿದ್ದಾರೆ? ಪಕ್ಷದ ಪ್ರಮುಖ ನಿರ್ಧಾರವೊಂದನ್ನು ತೆಗೆದುಕೊಳ್ಳುವುದಕ್ಕೆ ರಾಜ್ಯಾಧ್ಯಕ್ಷರ ಅಭಿಪ್ರಾಯ ಬೇಕಿಲ್ಲವೇ? ಅವರ ಉಪಸ್ಥಿತಿ ಬೇಕಿಲ್ಲವೇ? ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

ಇದನ್ನೂ ಓದಿ: ಬಿಜೆಪಿ, ಜೆಡಿಎಸ್ ಮೈತ್ರಿ ಮಾತುಕತೆ ವೇಳೆ ಏನೇನು ಚರ್ಚೆ ನಡೆಸಿದ್ರು ಹೆಚ್​​ಡಿಕೆ, ಅಮಿತ್ ಶಾ? ಇಲ್ಲಿದೆ ವಿವರ

ಅಲ್ಲದೆ, ರಾಜ್ಯಾಧ್ಯಕ್ಷ ಹುದ್ದೆ ಎನ್ನುವುದು ಕುಮಾರಸ್ವಾಮಿಯವರ ಕುಟುಂಬ ಕೈ ಒರೆಸಲು ಇಟ್ಟುಕೊಂಡಿರುವ ಟಿಶ್ಯೂ ಪೇಪರ್ ಮಾತ್ರವೇ? ವಿಮಾನದ ಟಿಕೆಟ್ ಬುಕ್ ಮಾಡಲೊಬ್ಬರು, ಹೋಟೆಲ್ ರೂಮ್ ಬುಕ್ ಮಾಡಲೊಬ್ಬರು ಹಾಗೂ ತಮ್ಮ ಪುತ್ರ ಜೊತೆಗಿದ್ದರೆ ಸಾಕೇ? ಎಂದು ಪ್ರಶ್ನಿಸಿದೆ.

ಬಿಜೆಪಿಯ ಬಿ ಟೀಮ್ ಜೆಡಿಎಸ್ ಎಂಬುದಕ್ಕೆ ಇಂದು ಅಧಿಕೃತ ಮುದ್ರೆ ಬಿದ್ದಿದೆ, ಚುನಾವಣೆಯಲ್ಲಿ ಬಿಜೆಪಿಯೊಂದಿಗೆ ಕದ್ದುಮುಚ್ಚಿ ಅಫೇರ್ ಇಟ್ಟುಕೊಂಡಿದ್ದ ಜೆಡಿಎಸ್ ಇಂದು ಬಹುರಂಗವಾಗಿ ಜೊತೆಗೂಡಿದೆ. ಬಿಜೆಪಿ ಜೊತೆ ಹೋಗುವ ದಾರಿದ್ರ್ಯ ಬಂದಿಲ್ಲ ಎಂದಿದ್ದ ಕುಮಾರಸ್ವಾಮಿಯವರು ಇಂದು ದರಿದ್ರ ಬಂದಿದೆ ಎಂದು ಒಪ್ಪಿಕೊಂಡಂತಾಗಿದೆ ಎಂದು ಮತ್ತೊಂದು ಟ್ವೀಟ್ ಮಾಡಿದೆ.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಡಿಸೆಂಬರ್ 29ರಂದು ನಿಧನರಾದ ದಿವಿನ್ ಫೆಬ್ರುವರಿ 22ರಂದು ಮದುವೆಯಾಗಲಿದ್ದರು
ಡಿಸೆಂಬರ್ 29ರಂದು ನಿಧನರಾದ ದಿವಿನ್ ಫೆಬ್ರುವರಿ 22ರಂದು ಮದುವೆಯಾಗಲಿದ್ದರು
ಬಿಗ್​ ಬಾಸ್ ಮನೆಗೆ ಬಂದ ಗೌತಮಿ ಜಾದವ್ ಪತಿ​; ಹೇಗಿತ್ತು ಮಂಜು ರಿಯಾಕ್ಷನ್?
ಬಿಗ್​ ಬಾಸ್ ಮನೆಗೆ ಬಂದ ಗೌತಮಿ ಜಾದವ್ ಪತಿ​; ಹೇಗಿತ್ತು ಮಂಜು ರಿಯಾಕ್ಷನ್?
ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!
ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು
ಹೊಸ ವರ್ಷಕ್ಕೆ ಸಿಹಿ ಸುದ್ದಿ ಕೊಟ್ಟ ಶಿವಣ್ಣ: ವಿಡಿಯೋ ನೋಡಿ
ಹೊಸ ವರ್ಷಕ್ಕೆ ಸಿಹಿ ಸುದ್ದಿ ಕೊಟ್ಟ ಶಿವಣ್ಣ: ವಿಡಿಯೋ ನೋಡಿ