ಬೆಂಗಳೂರು, ಸೆ.22: ಮುಂಬರುವ ಲೋಕಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಕರ್ನಾಟಕದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಮಾತುಕತೆ ಒಮ್ಮತಕ್ಕೆ ಬಂದಿದೆ. ಬಿಜೆಪಿ ನಾಯಕರಾದ ಅಮಿತ್ ಶಾ, ಜೆಪಿ ನಡ್ಡಾ ಜೊತೆಗಿನ ಮಾತುಕತೆ ವೇಳೆ ಜೆಡಿಎಸ್ನ ಹೆಚ್ಡಿ ಕುಮಾರಸ್ವಾಮಿ (HD Kumaraswamy) ಮತ್ತು ಪುತ್ರ ನಿಖಿಲ್ ಕುಮಾರಸ್ವಾಮಿ ಇದ್ದರು. ಆದರೆ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಇರಲಿಲ್ಲ. ಇದನ್ನೇ ಮುಂದಿಟ್ಟುಕೊಂಡು ಕಾಂಗ್ರೆಸ್ (Congress) ಟ್ವೀಟ್ ಮೂಲಕ ಜೆಡಿಎಸ್ ಅನ್ನು ಪ್ರಶ್ನಿಸಿದೆ.
ಜೆಡಿಎಸ್ ಪಕ್ಷಕ್ಕೆ ರಾಜ್ಯಾಧ್ಯಕ್ಷ ಅಂತ ಒಬ್ಬರಿದ್ದರು ಈ ಚಿತ್ರದಲ್ಲಿ ಅವರೆಲ್ಲಿದ್ದಾರೆ? ಪಕ್ಷದ ಪ್ರಮುಖ ನಿರ್ಧಾರವೊಂದನ್ನು ತೆಗೆದುಕೊಳ್ಳುವುದಕ್ಕೆ ರಾಜ್ಯಾಧ್ಯಕ್ಷರ ಅಭಿಪ್ರಾಯ ಬೇಕಿಲ್ಲವೇ? ಅವರ ಉಪಸ್ಥಿತಿ ಬೇಕಿಲ್ಲವೇ? ಎಂದು ಕಾಂಗ್ರೆಸ್ ಪ್ರಶ್ನಿಸಿದೆ.
ಇದನ್ನೂ ಓದಿ: ಬಿಜೆಪಿ, ಜೆಡಿಎಸ್ ಮೈತ್ರಿ ಮಾತುಕತೆ ವೇಳೆ ಏನೇನು ಚರ್ಚೆ ನಡೆಸಿದ್ರು ಹೆಚ್ಡಿಕೆ, ಅಮಿತ್ ಶಾ? ಇಲ್ಲಿದೆ ವಿವರ
ಅಲ್ಲದೆ, ರಾಜ್ಯಾಧ್ಯಕ್ಷ ಹುದ್ದೆ ಎನ್ನುವುದು ಕುಮಾರಸ್ವಾಮಿಯವರ ಕುಟುಂಬ ಕೈ ಒರೆಸಲು ಇಟ್ಟುಕೊಂಡಿರುವ ಟಿಶ್ಯೂ ಪೇಪರ್ ಮಾತ್ರವೇ? ವಿಮಾನದ ಟಿಕೆಟ್ ಬುಕ್ ಮಾಡಲೊಬ್ಬರು, ಹೋಟೆಲ್ ರೂಮ್ ಬುಕ್ ಮಾಡಲೊಬ್ಬರು ಹಾಗೂ ತಮ್ಮ ಪುತ್ರ ಜೊತೆಗಿದ್ದರೆ ಸಾಕೇ? ಎಂದು ಪ್ರಶ್ನಿಸಿದೆ.
ಜೆಡಿಎಸ್ ಪಕ್ಷಕ್ಕೆ ರಾಜ್ಯಾಧ್ಯಕ್ಷ ಅಂತ ಒಬ್ಬರಿದ್ದರು ಈ ಚಿತ್ರದಲ್ಲಿ ಅವರೆಲ್ಲಿದ್ದಾರೆ?
ಪಕ್ಷದ ಪ್ರಮುಖ ನಿರ್ಧಾರವೊಂದನ್ನು ತೆಗೆದುಕೊಳ್ಳುವುದಕ್ಕೆ ರಾಜ್ಯಾಧ್ಯಕ್ಷರ ಅಭಿಪ್ರಾಯ ಬೇಕಿಲ್ಲವೇ? ಅವರ ಉಪಸ್ಥಿತಿ ಬೇಕಿಲ್ಲವೇ?
ರಾಜ್ಯಾಧ್ಯಕ್ಷ ಹುದ್ದೆ ಎನ್ನುವುದು ಕುಮಾರಸ್ವಾಮಿಯವರ ಕುಟುಂಬ ಕೈ ಒರೆಸಲು ಇಟ್ಟುಕೊಂಡಿರುವ ಟಿಶ್ಯೂ ಪೇಪರ್… pic.twitter.com/nDdLx8a6JT
— Karnataka Congress (@INCKarnataka) September 22, 2023
ಬಿಜೆಪಿಯ ಬಿ ಟೀಮ್ ಜೆಡಿಎಸ್ ಎಂಬುದಕ್ಕೆ ಇಂದು ಅಧಿಕೃತ ಮುದ್ರೆ ಬಿದ್ದಿದೆ, ಚುನಾವಣೆಯಲ್ಲಿ ಬಿಜೆಪಿಯೊಂದಿಗೆ ಕದ್ದುಮುಚ್ಚಿ ಅಫೇರ್ ಇಟ್ಟುಕೊಂಡಿದ್ದ ಜೆಡಿಎಸ್ ಇಂದು ಬಹುರಂಗವಾಗಿ ಜೊತೆಗೂಡಿದೆ. ಬಿಜೆಪಿ ಜೊತೆ ಹೋಗುವ ದಾರಿದ್ರ್ಯ ಬಂದಿಲ್ಲ ಎಂದಿದ್ದ ಕುಮಾರಸ್ವಾಮಿಯವರು ಇಂದು ದರಿದ್ರ ಬಂದಿದೆ ಎಂದು ಒಪ್ಪಿಕೊಂಡಂತಾಗಿದೆ ಎಂದು ಮತ್ತೊಂದು ಟ್ವೀಟ್ ಮಾಡಿದೆ.
ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ