AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಮುಂಡೇಶ್ವರಿ ಸೋಲಿನ ಮೆಲುಕು ಜೊತೆಗೆ ಬಾದಾಮಿ ಸ್ಪರ್ಧೆ ಹಿಂದಿನ ಸತ್ಯ ಬಿಚ್ಚಿಟ್ಟ ಸಿಎಂ ಸಿದ್ದರಾಮಯ್ಯ

2018ರಲ್ಲಿ ಸ್ಪರ್ಧಿಸಿ ಚಾಮುಂಡೇಶ್ವರಿಯಲ್ಲಿ ಸೋತಿದ್ದನ್ನು ಸಿಎಂ ಇನ್ನು ಮರೆತಿಲ್ಲ. ಹೌದು, ಅಂದು ಸಿದ್ದರಾಮಯ್ಯನವರು ಚಾಮುಂಡೇಶ್ವರಿ ಹಾಗೂ ಬಾದಾಮಿಯಲ್ಲಿ ಸ್ಪರ್ಧಿಸಿದ್ದರು. ಆದರೆ, ಬಾದಾಮಿಯಲ್ಲಿ ಮಾತ್ರ ಗೆದ್ದು ಬೀಗಿದ್ದರು. ಪ್ರಬಲ ಪೈಪೋಟಿ ಕೊಟ್ಟಿದ್ದ ಬಿಜೆಪಿಯ ಶ್ರೀರಾಮಲು ವಿರುದ್ದ ಸ್ಪರ್ಧೆ ಮಾಡಿ, ಗೆಲುವು ಸಾಧಿಸಿದ ಸಿದ್ದರಾಮಯ್ಯನವರು ಇಂದು(ಆ.30) ತಾವು ಬಾದಾಮಿಯಲ್ಲಿ ಸ್ಪರ್ಧೆ ಮಾಡಿದ ಹಿಂದಿನ ಸತ್ಯವನ್ನು ಬಿಚ್ಚಿಟ್ಟಿದ್ದಾರೆ.

ಚಾಮುಂಡೇಶ್ವರಿ ಸೋಲಿನ ಮೆಲುಕು ಜೊತೆಗೆ ಬಾದಾಮಿ ಸ್ಪರ್ಧೆ ಹಿಂದಿನ ಸತ್ಯ ಬಿಚ್ಚಿಟ್ಟ ಸಿಎಂ ಸಿದ್ದರಾಮಯ್ಯ
ಸಿಎಂ ಸಿದ್ದರಾಮಯ್ಯ
ದಿಲೀಪ್​, ಚೌಡಹಳ್ಳಿ
| Updated By: ಕಿರಣ್ ಹನುಮಂತ್​ ಮಾದಾರ್|

Updated on:Aug 31, 2023 | 6:49 PM

Share

ಮೈಸೂರು, ಆ.30: ರಾಜಕೀಯ ಅಂದರೆ ಹಾಗೇ ಇಲ್ಲಿ ಸೋಲು-ಗೆಲುವು ಸರ್ವೇ ಸಾಮಾನ್ಯ ಅದರಂತೆ ರಾಜ್ಯದಲ್ಲಿ ಇದೀಗ ಕಾಂಗ್ರೆಸ್​ ಸರ್ಕಾರ ಅಭೂತಪೂರ್ವ ಗೆಲುವು ಸಾಧಿಸಿ ಸಿದ್ದರಾಮಯ್ಯ (Siddaramaiah) ಅವರು ಮುಖ್ಯಮಂತ್ರಿ ಕುರ್ಚಿ ಎರಿದ್ದಾರೆ. ಆದರೆ, ಈಗಲೂ ಕೂಡ ಸಿದ್ದರಾಮಯ್ಯನವರು 2018ರಲ್ಲಿ ಸ್ಪರ್ಧಿಸಿ ಚಾಮುಂಡೇಶ್ವರಿಯಲ್ಲಿ ಸೋತಿದ್ದನ್ನು ಇನ್ನು ಮರೆತಿಲ್ಲ. ಹೌದು, ಅಂದು ಸಿದ್ದರಾಮಯ್ಯನವರು ಚಾಮುಂಡೇಶ್ವರಿ(Chamundeshwari)  ಹಾಗೂ ಬಾದಾಮಿಯಲ್ಲಿ(Badami) ಸ್ಪರ್ಧಿಸಿದ್ದರು. ಆದರೆ, ಬಾದಾಮಿಯಲ್ಲಿ ಮಾತ್ರ ಗೆದ್ದು ಬೀಗಿದ್ದರು. ಪ್ರಬಲ ಪೈಪೋಟಿ ಕೊಟ್ಟಿದ್ದ ಬಿಜೆಪಿಯ ಶ್ರೀರಾಮಲು ವಿರುದ್ದ ಸ್ಪರ್ಧೆ ಮಾಡಿ, ಗೆಲುವು ಸಾಧಿಸಿದ ಸಿದ್ದರಾಮಯ್ಯನವರು ಇಂದು(ಆ.30) ತಾವು ಬಾದಾಮಿಯಲ್ಲಿ ಸ್ಪರ್ಧೆ ಮಾಡಿದ ಹಿಂದಿನ ಸತ್ಯವನ್ನು ಬಿಚ್ಚಿಟ್ಟಿದ್ದಾರೆ.

ಹೌದು, ಇಂದು ಚಾಮುಂಡೇಶ್ವರಿ ಕ್ಷೇತ್ರ ವ್ಯಾಪ್ತಿಯ ಸಿದ್ದಲಿಂಗಪುರದಲ್ಲಿ ಕನಕ ಭವನ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಬಾದಾಮಿ ಸ್ಪರ್ಧೆಯ ರಹಸ್ಯವನ್ನು ಬಿಚ್ಚಿಟ್ಟಿದ್ದಾರೆ. ‘ಚಾಮುಂಡೇಶ್ವರಿ ಕ್ಷೇತ್ರದಲ್ಲಿ ನಾನು ಸೋಲ್ತೇನೆ ಎಂಬ ವಾಸನೆ‌ ಇತ್ತು. ಆ ಕಾರಣಕ್ಕೆ ಚಾಮುಂಡೇಶ್ವರಿ, ಬಾದಾಮಿ ಎರಡು ಕ್ಷೇತ್ರದಲ್ಲಿ ಸ್ಪರ್ಧೆ ಮಾಡಿದ್ದೆ. ಅಷ್ಟು ದೂರದ ಬಾದಾಮಿ ಕ್ಷೇತ್ರದಲ್ಲಿ‌ ಸ್ಪರ್ಧಿಸಿದರೂ ಜನ ನನ್ನನ್ನು ಗೆಲ್ಲಿಸಿದರು. ಆದರೆ, ಇಲ್ಲಿಯವರೇ ನನ್ನನ್ನು ಸೋಲಿಸಿದರು ಎಂದು ತಮ್ಮ ಸೋಲಿನ ನೆನಪನ್ನು ಸ್ಮರಿಸಿದ್ದಾರೆ.

ಇದನ್ನೂ ಓದಿ:ಗ್ಯಾರಂಟಿಗಳ ಅನುಷ್ಠಾನದ ಭರದಲ್ಲಿ ಸಿದ್ದರಾಮಯ್ಯ ಸರ್ಕಾರ ಅಭಿವೃದ್ಧಿ ಕಾಮಗಾರಿಗಳನ್ನು ಸ್ಥಗಿತಗೊಳಿಸಿದೆ: ಬಸನಗೌಡ ಪಾಟೀಲ್ ಯತ್ನಾಳ್, ಶಾಸಕ

‘ಈ ಕ್ಷೇತ್ರದಲ್ಲಿ ನಾನು ಮಾಡಿದಷ್ಟು ಬೇರೆ ಯಾರೂ ಕೆಲಸ ಮಾಡೇ ಇಲ್ಲ. ಆದ್ರೆ‌, ಕೆಲಸಕ್ಕೆ ಬಾರದ ಯಾರನ್ನೋ ಈ ಕ್ಷೇತ್ರದಲ್ಲಿ ಗೆಲ್ಲಿಸುತ್ತಾರೆ. ಕೆಲಸ ಮಾಡುವವರನ್ನು ಸೋಲಿಸಿ ಬಿಡುತ್ತಾರೆ. ನನ್ನನ್ನು ಸೋಲಿಸಿದವರಿಗೂ ಧನ್ಯವಾದ, ಗೆಲ್ಲಿಸಿದವರಿಗೂ ಧನ್ಯವಾದ. ರಾಜಕೀಯದಲ್ಲಿ ಗೆಲುವು ಸೋಲು ಮುಖ್ಯ ಎನ್ನುವ ಮೂಲಕ ಮತ್ತೊಮ್ಮೆ ಸಿಎಂ ಆದರೂ ಕೂಡ ಪುನಃ ಚಾಮುಂಡೇಶ್ವರಿ ಸೋಲಿನ ಬಗ್ಗೆ ಸಿಎಂ ಪ್ರಸ್ತಾಪಿಸುತ್ತಲೆ ಇದ್ದಾರೆ.

ಮತ್ತಷ್ಟು ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:21 pm, Wed, 30 August 23

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!