Amarinder Singh: ಅಮರೀಂದರ್ ಸಿಂಗ್ ಹೊಸ ಪಕ್ಷದ ಹೆಸರು ಪಂಜಾಬ್ ವಿಕಾಸ್ ಪಾರ್ಟಿ?; ಕಾಂಗ್ರೆಸ್​ಗೆ ಮತ್ತೊಂದು ಹೊಡೆತ

Punjab Vikas Party : ಹೊಸ ಪಕ್ಷ ಕಟ್ಟುವ ಮೂಲಕ ಕಾಂಗ್ರೆಸ್​ಗೆ ಸೆಡ್ಡು ಹೊಡೆಯಲು ತೀರ್ಮಾನಿಸಿರುವ ಕ್ಯಾಪ್ಟನ್ ಅಮರೀಂದರ್ ಸಿಂಗ್ ತಮ್ಮ ಹೊಸ ಪಕ್ಷಕ್ಕೆ ಪಂಜಾಬ್ ವಿಕಾಸ್ ಪಾರ್ಟಿ ಎಂದು ಹೆಸರಿಡಲಿದ್ದಾರೆ ಎನ್ನಲಾಗಿದೆ.

Amarinder Singh: ಅಮರೀಂದರ್ ಸಿಂಗ್ ಹೊಸ ಪಕ್ಷದ ಹೆಸರು ಪಂಜಾಬ್ ವಿಕಾಸ್ ಪಾರ್ಟಿ?; ಕಾಂಗ್ರೆಸ್​ಗೆ ಮತ್ತೊಂದು ಹೊಡೆತ
ಅಮರಿಂದರ್ ಸಿಂಗ್​
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Oct 01, 2021 | 5:37 PM

ನವದೆಹಲಿ: ಪಂಜಾಬ್​ನ ಮಾಜಿ ಮುಖ್ಯಮಂತ್ರಿ ಕ್ಯಾಪ್ಟನ್ ಅಮರೀಂದರ್ ಸಿಂಗ್ (Amarinder Singh) ಕಾಂಗ್ರೆಸ್​ಗೆ ರಾಜೀನಾಮೆ ನೀಡಲು ನಿರ್ಧರಿಸಿದ್ದಾರೆ. ಬಿಜೆಪಿ ಸೇರಲಿರುವ ವದಂತಿಗಳಿಗೆ ತೆರೆ ಎಳೆದಿದ್ದ ಅವರು ನಾನು ಕಾಂಗ್ರೆಸ್ (Congress Party) ತೊರೆಯುತ್ತಿರುವುದು ನಿಜ. ಆದರೆ, ಬಿಜೆಪಿ ಸೇರಲಿದ್ದೇನೆ ಎಂಬುದು ಸುಳ್ಳು ಎಂದು ಖಚಿತಪಡಿಸಿದ್ದರು. ಈ ಹಿನ್ನೆಲೆಯಲ್ಲಿ ಅವರು ಪಂಜಾಬ್​ನಲ್ಲಿ (Punjab Politics) ಹೊಸ ಪಕ್ಷ ಕಟ್ಟಲಿದ್ದಾರೆ ಎಂಬ ಸುದ್ದಿಗಳು ಹರಿದಾಡಿದ್ದವು. ಇದೀಗ ಅಮರೀಂದರ್ ಸಿಂಗ್ ಅವರ ನೂತನ ಪಕ್ಷಕ್ಕೆ ಪಂಜಾಬ್ ವಿಕಾಸ್ ಪಾರ್ಟಿ (Punjab Vikas Party) ಎಂಬ ಹೆಸರಿಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದ ದಿನದಿಂದಲೂ ಕಾಂಗ್ರೆಸ್ ಪಕ್ಷದ ಬಗ್ಗೆ ಅಮರೀಂದರ್ ಸಿಂಗ್​ಗೆ ಅಸಮಾಧಾನವಿತ್ತು. ನಿನ್ನೆ ಬಹಿರಂಗವಾಗಿಯೇ ತಮ್ಮ ಅಸಮಾಧಾನ ಹೊರಹಾಕಿದ್ದ ಅಮರೀಂದರ್ ಸಿಂಗ್, ಚುನಾವಣೆ ಸಮೀಪಿಸುತ್ತಿರುವಾಗಲೇ ನನ್ನನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿರುವುದಕ್ಕೆ ಬೇಸರವಿದೆ. ಇಲ್ಲಿಯವರೆಗೂ ನಾನು ಕಾಂಗ್ರೆಸ್​ನಲ್ಲಿಯೇ ಇದ್ದೇನೆ. ಆದರೆ, ಇನ್ನು ಈ ಪಕ್ಷದಲ್ಲಿ ಮುಂದುವರೆಯಲು ನನಗೆ ಇಷ್ಟವಿಲ್ಲ. ನನ್ನನ್ನು ಸೂಕ್ತ ರೀತಿಯಲ್ಲಿ ಪಕ್ಷ ನಡೆಸಿಕೊಂಡಿಲ್ಲ. ಇದರಿಂದ ನನಗೆ ಅವಮಾನ ಹಾಗೂ ಬೇಸರವಾಗಿದೆ. ನವಜೋತ್​ ಸಿಂಗ್ ಸಿಧು ರೀತಿಯ ಚೈಲ್ಡಿಶ್ ವ್ಯಕ್ತಿಗೆ ಕಾಂಗ್ರೆಸ್ ಪಕ್ಷದಲ್ಲಿ ದೊಡ್ಡ ಜವಾಬ್ದಾರಿ ನೀಡಿದರು. ಆದರೆ, ಆತ ಅದನ್ನು ಉಳಿಸಿಕೊಳ್ಳಲಿಲ್ಲ. ಪಕ್ಷಕ್ಕಾಗಿ ದುಡಿಯುತ್ತಿರುವ ನಮ್ಮಂತಹವರಿಗೆ ಸೂಕ್ತ ಗೌರವ ಸಿಗುತ್ತಿಲ್ಲ. ನಾನು 52 ವರ್ಷಗಳಿಂದ ರಾಜಕೀಯದಲ್ಲಿದ್ದೇನೆ. ಮುಖ್ಯಮಂತ್ರಿಯಾಗಿದ್ದ ನನಗೆ ಬೆಳಗ್ಗೆ 10.30ಕ್ಕೆ ಕಾಂಗ್ರೆಸ್ ಅಧ್ಯಕ್ಷರು ಫೋನ್ ಮಾಡಿ ರಾಜೀನಾಮೆ ನೀಡಲು ಸೂಚಿಸಿದರು. ನಾನು ಅವರಿಗೆ ಯಾವ ಪ್ರಶ್ನೆಯನ್ನೂ ಕೇಳದೆ ಸಂಜೆ 4 ಗಂಟೆಗೆ ರಾಜ್ಯಪಾಲರ ಬಳಿ ಹೋಗಿ ರಾಜೀನಾಮೆ ನೀಡಿದೆ. 50 ವರ್ಷಗಳಾದರೂ ನಮ್ಮ ಪಕ್ಷದ ನಾಯಕರಿಗೆ ನನ್ನ ಮೇಲೆ ನಂಬಿಕೆ ಬಂದಿಲ್ಲ ಎಂದಾದರೆ ನಾನು ಈ ಪಕ್ಷದಲ್ಲಿದ್ದು ಏನೂ ಪ್ರಯೋಜನವಿಲ್ಲ ಎಂದೇ ಅರ್ಥ ಎಂದಿದ್ದರು.

ಅಮರೀಂದರ್ ಸಿಂಗ್ ಕಾಂಗ್ರೆಸ್ ತೊರೆಯುವುದು ಖಚಿತವಾಗಿದೆ. ಹೊಸ ಪಕ್ಷ ಕಟ್ಟುವ ಮೂಲಕ ಕಾಂಗ್ರೆಸ್​ಗೆ ಸೆಡ್ಡು ಹೊಡೆಯಲು ತೀರ್ಮಾನಿಸಿರುವ ಕ್ಯಾಪ್ಟನ್ ಅಮರೀಂದರ್ ಸಿಂಗ್ ತಮ್ಮ ಹೊಸ ಪಕ್ಷಕ್ಕೆ ಪಂಜಾಬ್ ವಿಕಾಸ್ ಪಾರ್ಟಿ ಎಂದು ಹೆಸರಿಡಲಿದ್ದಾರೆ ಎನ್ನಲಾಗಿದೆ. ಪಂಜಾಬ್​ನ ಕಾಂಗ್ರೆಸ್ ಪಕ್ಷದಲ್ಲಿರುವ ನವಜೋತ್ ಸಿಂಗ್ ಸಿಧು ವಿರೋಧಿಗಳನ್ನು ಸೇರಿಸಿಕೊಂಡು ಅಮರೀಂದರ್ ಸಿಂಗ್ ಹೊಸ ಪಕ್ಷ ಕಟ್ಟುವ ಸಾಧ್ಯತೆಯಿದೆ.

ಒಂದೆಡೆ ಅಮರೀಂದರ್ ಸಿಂಗ್ ಬಂಡಾಯ ಇನ್ನೊಂದೆಡೆ ನವಜೋತ್ ಸಿಂಗ್ ಸಿಧು ರಾಜೀನಾಮೆಯಿಂದ ಕಾಂಗ್ರೆಸ್​ಗೆ ಪಂಜಾಬ್​ನಲ್ಲಿ ಹಿಡಿತ ಸಾಧಿಸುವುದು ಬಹಳ ಕಷ್ಟವಾಗಿದೆ. ಅಮರೀಂದರ್ ಸಿಂಗ್ ಹೊಸ ಪಕ್ಷ ಕಟ್ಟಿದರೆ 2022ರ ಡಿಸೆಂಬರ್ ನಲ್ಲಿ ನಡೆಯಲಿರುವ ಪಂಜಾಬ್ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್​ಗೆ ಭಾರೀ ಹೊಡೆತ ಬೀಳುವುದು ಖಚಿತ. ಈ ಹಿನ್ನೆಲೆಯಲ್ಲಿ ಪಂಜಾಬ್​ ಕಾಂಗ್ರೆಸ್ ಪಾಳಯದಲ್ಲಿ ಉಂಟಾಗಿರುವ ಅಸಮಾಧಾನ, ಬಂಡಾಯವನ್ನು ಶಮನ ಮಾಡುವುದು ಕಾಂಗ್ರೆಸ್ ಹೈಕಮಾಂಡ್​ಗೆ ದೊಡ್ಡ ಸವಾಲಾಗಿದೆ.

ಇದನ್ನೂ ಓದಿ: ಅಮರೀಂದರ್ ಸಿಂಗ್ ಕಾಂಗ್ರೆಸ್ ತೊರೆಯುವುದು ಖಚಿತ; ಹೊಸ ಪಕ್ಷ ಕಟ್ಟುತ್ತಾರಾ ಕ್ಯಾಪ್ಟನ್?

Amarinder Singh: ನಾನು ಪಂಜಾಬ್ ಮಾಜಿ ಮುಖ್ಯಮಂತ್ರಿಯಲ್ಲ, ನನ್ನ ಬಿಟ್ಟುಬಿಡಿ; ಅಮರೀಂದರ್ ಸಿಂಗ್ ಹೀಗೆ ಹೇಳಿದ್ದೇಕೆ?

‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!
ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!
ಅಯ್ಯೋ.. ಸಿಸಿಟಿವಿ ರಿಪೇರಿ ಮಾಡಲು ಬಂದಿದ್ದವನ ವಜ್ರದ ಉಂಗುರ ಬಿಡದ ಖದೀಮರು
ಅಯ್ಯೋ.. ಸಿಸಿಟಿವಿ ರಿಪೇರಿ ಮಾಡಲು ಬಂದಿದ್ದವನ ವಜ್ರದ ಉಂಗುರ ಬಿಡದ ಖದೀಮರು
ಗಾಂಧಿ ಭಾರತ ಒಂದು ಸರ್ಕಾರೀ ಕಾರ್ಯಕ್ರಮ, ಎಲ್ಲರೂ ಭಾಗವಹಿಸಬಹುದು: ಶಿವಕುಮಾರ್
ಗಾಂಧಿ ಭಾರತ ಒಂದು ಸರ್ಕಾರೀ ಕಾರ್ಯಕ್ರಮ, ಎಲ್ಲರೂ ಭಾಗವಹಿಸಬಹುದು: ಶಿವಕುಮಾರ್
ಮಹಾಕುಂಭದಲ್ಲಿ ಹೂವಿನ ಹಾರ ಮಾರುವ ಯುವತಿ ಸೌಂದರ್ಯಕ್ಕೆ ಫ್ಯಾನ್ ಆಗದವರೇ ಇಲ್ಲ
ಮಹಾಕುಂಭದಲ್ಲಿ ಹೂವಿನ ಹಾರ ಮಾರುವ ಯುವತಿ ಸೌಂದರ್ಯಕ್ಕೆ ಫ್ಯಾನ್ ಆಗದವರೇ ಇಲ್ಲ
ನಾನು ನಿಷ್ಠಾವಂತ ಕಾರ್ಯಕರ್ತ, ಸತೀಶ್ ಜಾರಕಿಹೊಳಿ ಹಿಂಬಾಲಕನಲ್ಲ: ಕಾರ್ಯಕರ್ತ
ನಾನು ನಿಷ್ಠಾವಂತ ಕಾರ್ಯಕರ್ತ, ಸತೀಶ್ ಜಾರಕಿಹೊಳಿ ಹಿಂಬಾಲಕನಲ್ಲ: ಕಾರ್ಯಕರ್ತ