ದೆಹಲಿ ನಿವಾಸ ಖಾಲಿ ಮಾಡಲು ಬಂದಿದ್ದೇನೆ, ಯಾವ ನಾಯಕರನ್ನೂ ಭೇಟಿಯಾಗುತ್ತಿಲ್ಲ; ಅಮರೀಂದರ್ ಸಿಂಗ್ ಸ್ಪಷ್ಟನೆ

| Updated By: ಸುಷ್ಮಾ ಚಕ್ರೆ

Updated on: Sep 28, 2021 | 6:27 PM

Captain Amarinder Singh | ನಾನು ಯಾವ ನಾಯಕರನ್ನೂ ಭೇಟಿಯಾಗುವುದಿಲ್ಲ. ದೆಹಲಿಯ ಕಪುರ್ತಲದಲ್ಲಿರುವ ಪಂಜಾಬ್ ಮುಖ್ಯಮಂತ್ರಿಯ ಮನೆ ಖಾಲಿ ಮಾಡಲು ಬಂದಿದ್ದೇನೆ ಎಂದು ಅಮರೀಂದರ್ ಸಿಂಗ್ ಹೇಳಿದ್ದಾರೆ.

ದೆಹಲಿ ನಿವಾಸ ಖಾಲಿ ಮಾಡಲು ಬಂದಿದ್ದೇನೆ, ಯಾವ ನಾಯಕರನ್ನೂ ಭೇಟಿಯಾಗುತ್ತಿಲ್ಲ; ಅಮರೀಂದರ್ ಸಿಂಗ್ ಸ್ಪಷ್ಟನೆ
ಅಮರಿಂದರ್ ಸಿಂಗ್​
Follow us on

ನವದೆಹಲಿ: ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ನವಜೋತ್ ಸಿಂಗ್ ಸಿಧು ರಾಜೀನಾಮೆ ನೀಡಿದ ಬೆನ್ನಲ್ಲೆ ನವದೆಹಲಿಗೆ ತೆರಳಿರುವ ಮಾಜಿ ಮುಖ್ಯಮಂತ್ರಿ ಅಮರೀಂದರ್ ಸಿಂಗ್ ಬಿಜೆಪಿ ನಾಯಕರನ್ನು ಭೇಟಿಯಾಗಲಿದ್ದಾರೆ ಎನ್ನಲಾಗಿತ್ತು. ಆದರೆ, ಈ ಬಗ್ಗೆ ಸ್ಪಷ್ಟನೆ ನೀಡಿರುವ ಕ್ಯಾಪ್ಟನ್ ಅಮರೀಂದರ್​ ಸಿಂಗ್​, ನಾನು ಯಾರನ್ನೂ ಭೇಟಿಯಾಗುವ ಉದ್ದೇಶದಿಂದ ದೆಹಲಿಗೆ ಬಂದಿಲ್ಲ. ನಾನು ಯಾವ ನಾಯಕರನ್ನೂ ಭೇಟಿಯಾಗುವುದಿಲ್ಲ. ದೆಹಲಿಯ ಕಪುರ್ತಲದಲ್ಲಿರುವ ಪಂಜಾಬ್ ಮುಖ್ಯಮಂತ್ರಿಯ ಮನೆ ಖಾಲಿ ಮಾಡಲು ಬಂದಿದ್ದೇನೆ ಎಂದು ಹೇಳಿದ್ದಾರೆ.

ದೆಹಲಿಗೆ ಬಂದಿಳಿರುವ ಅಮರೀಂದರ್ ಸಿಂಗ್ ಇಂದು ಸಂಜೆ ಅಮಿತ್ ಶಾ ಮತ್ತು ಜೆ.ಪಿ. ನಡ್ಡಾ ಅವರನ್ನು ಭೇಟಿಯಾಗಲಿದ್ದಾರೆ ಎನ್ನಲಾಗಿತ್ತು. ಕಳೆದ ವಾರ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಅಮರೀಂದರ್ ಸಿಂಗ್ ಕಾಂಗ್ರೆಸ್ ತೊರೆದು ಬಿಜೆಪಿ ಸೇರಲು ಸಿದ್ಧತೆ ನಡೆಸಿದ್ದಾರೆ ಎನ್ನಲಾಗಿತ್ತು. ಆದರೆ, ಇದು ಸುಳ್ಳು ವದಂತಿ, ನಾನು ಕಾಂಗ್ರೆಸ್ ತೊರೆಯುವುದಿಲ್ಲ ಎಂದು ಅಮರೀಂದರ್ ಸಿಂಗ್ ಹೇಳಿದ್ದಾರೆ.

ಚಂಡೀಗಢ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದ ಅಮರೀಂದರ್ ಸಿಂಗ್, ನನ್ನ ದೆಹಲಿ ಪ್ರಯಾಣದ ಬಗ್ಗೆ ಅನೇಕ ವದಂತಿಗಳು ಹಬ್ಬಿವೆ. ಆದರೆ, ನಾನು ವೈಯಕ್ತಿಕ ಕೆಲಸದ ಪ್ರಯುಕ್ತ ದೆಹಲಿಗೆ ತೆರಳುತ್ತಿದ್ದೇನೆ. ಇದರ ಹಿಂದೆ ಯಾವ ರಾಜಕೀಯ ಉದ್ದೇಶವೂ ಇಲ್ಲ. ನಾನು ದೆಹಲಿಯ ಕಪುರ್ತಲ ನಿವಾಸವನ್ನು ವಾಪಾಸ್ ನೀಡಬೇಕಾಗಿದೆ. ಹೀಗಾಗಿ, ದೆಹಲಿಗೆ ಹೋಗುತ್ತಿದ್ದೇನೆ ಎಂದಿದ್ದರು.

ಇನ್ನು, ಇಂದು ಸಂಜೆ ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ನವಜೋತ್ ಸಿಂಗ್ ಸಿಧು ರಾಜೀನಾಮೆ ನೀಡಿದ್ದಾರೆ. ಸೋನಿಯಾ ಗಾಂಧಿ ಅವರಿಗೆ ರಾಜೀನಾಮೆ ಪತ್ರ ಕಳುಹಿಸಿರುವ ಸಿಧು ಕಾಂಗ್ರೆಸ್​​ನ ಸಾಮಾನ್ಯ ಕಾರ್ಯಕರ್ತನಾಗಿ ಮುಂದುವರೆಯುವುದಾಗಿ ತಿಳಿಸಿದ್ದಾರೆ. ತಮಗೆ ಪಂಜಾಬ್ ಮುಖ್ಯಮಂತ್ರಿ ಸ್ಥಾನ ನೀಡಲಿಲ್ಲ ಹಾಗೂ ತಮ್ಮ ಬಣದವರಿಗೆ ಸೂಕ್ತ ಖಾತೆಗಳನ್ನು ನೀಡಲಿಲ್ಲ ಎಂಬ ಅಸಮಾಧಾನದಿಂದಲೇ ಸಿಧು ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ. ಪಂಜಾಬ್​ನ ಬಿಕ್ಕಟ್ಟಿಗೆ ಕಾರಣವಾಗಿದ್ದ ನವಜೋತ್ ಸಿಂಗ್ ಸಿಧು ಹಾಗೂ ಅಮರೀಂದರ್ ಸಿಂಗ್ ಇಬ್ಬರೂ ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಿದ್ದರೂ ಪಂಜಾಬ್​ನಲ್ಲಿ ಬಂಡಾಯವಿನ್ನೂ ಕಡಿಮೆಯಾಗುವ ಯಾವ ಲಕ್ಷಣಗಳೂ ಕಾಣುತ್ತಿಲ್ಲ.

ಇದನ್ನೂ ಓದಿ: ಬಿಜೆಪಿ ಸೇರ್ತಾರಾ ಪಂಜಾಬ್ ಮಾಜಿ ಸಿಎಂ ಅಮರೀಂದರ್ ಸಿಂಗ್?; ಇಂದು ಅಮಿತ್ ಶಾ, ಜೆ.ಪಿ. ನಡ್ಡಾ ಭೇಟಿ ಸಾಧ್ಯತೆ

ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ಸಿಧು ರಾಜೀನಾಮೆಗೆ ಕಾರಣವೇನು?: ಪಂಜಾಬ್ ರಾಜಕೀಯದಲ್ಲಿನ ಪ್ರಮುಖ ಬೆಳವಣಿಗೆಗಳು ಇಲ್ಲಿವೆ

(Amarinder Singh reaches Delhi says not here to meet any politician it is my Personal Visit)

Published On - 6:12 pm, Tue, 28 September 21