Amarinder Singh: ಪಂಜಾಬ್ ಮುಖ್ಯಮಂತ್ರಿ ಸ್ಥಾನಕ್ಕೆ ಅಮರೀಂದರ್ ಸಿಂಗ್ ರಾಜೀನಾಮೆ; ಕಾಂಗ್ರೆಸ್​ನಿಂದ ಅವಮಾನವಾಗಿದೆ ಎಂದ ಕ್ಯಾಪ್ಟನ್

Punjab Congress Crisis | ಪಂಜಾಬ್​ನಲ್ಲಿ ನಾಯಕತ್ವ ಬದಲಾವಣೆಯ ಕೂಗು ಜೋರಾಗಿ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಅಮರೀಂದರ್ ಸಿಂಗ್ ಅವರಿಗೆ ರಾಜೀನಾಮೆ ನೀಡಲು ಕಾಂಗ್ರೆಸ್ ನಾಯಕರು ಸೂಚಿಸಿದ್ದರು. ಅದರಂತೆ ಇಂದು ರಾಜಭವನಕ್ಕೆ ತೆರಳಿದ ಅಮರೀಂದರ್ ಸಿಂಗ್ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. 

Amarinder Singh: ಪಂಜಾಬ್ ಮುಖ್ಯಮಂತ್ರಿ ಸ್ಥಾನಕ್ಕೆ ಅಮರೀಂದರ್ ಸಿಂಗ್ ರಾಜೀನಾಮೆ; ಕಾಂಗ್ರೆಸ್​ನಿಂದ ಅವಮಾನವಾಗಿದೆ ಎಂದ ಕ್ಯಾಪ್ಟನ್
ಅಮರೀಂದರ್ ಸಿಂಗ್
Follow us
TV9 Web
| Updated By: ಸುಷ್ಮಾ ಚಕ್ರೆ

Updated on:Sep 18, 2021 | 5:03 PM

ಪಂಜಾಬ್: ಪಂಜಾಬ್ ರಾಜ್ಯದ ಕಾಂಗ್ರೆಸ್ ಪಕ್ಷದೊಳಗಿನ ಆಂತರಿಕ ಕಿತ್ತಾಟ ಹೆಚ್ಚಾಗುತ್ತಲೇ ಇದೆ. ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರೀಂದರ್ ಸಿಂಗ್ (Captain Amarider Singh) ಹಾಗೂ ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ನವಜೋತ್ ಸಿಂಗ್ ಸಿಧು (Navjot Singh Sidhu) ನಡುವಿನ ಭಿನ್ನಾಭಿಪ್ರಾಯ ಶಮನವಾಗಿದೆ ಎನ್ನಲಾಗಿತ್ತು. ಆದರೆ, ಪಂಜಾಬ್​ನಲ್ಲಿ ಉಂಟಾಗಿರುವ ಎರಡು ಬಣಗಳಿಂದ ಕಾಂಗ್ರೆಸ್ ಪಕ್ಷಕ್ಕೆ ಭಾರೀ ದೊಡ್ಡ ಹೊಡೆತ ಬಿದ್ದಿದ್ದು, ಪಂಜಾಬ್​ನಲ್ಲಿ ವಿಧಾನಸಭಾ ಚುನಾವಣೆ (Punjab Assembly Elections) ಸಮೀಪಿಸುತ್ತಿರುವ ಬೆನ್ನಲ್ಲೇ ಪಂಜಾಬ್​ನಲ್ಲಿ ನಾಯಕತ್ವ ಬದಲಾವಣೆಯ ಕೂಗು ಜೋರಾಗಿ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಅಮರೀಂದರ್ ಸಿಂಗ್ ಅವರಿಗೆ ರಾಜೀನಾಮೆ ನೀಡಲು ಕಾಂಗ್ರೆಸ್ ನಾಯಕರು ಸೂಚಿಸಿದ್ದರು. ಅದರಂತೆ ಇಂದು ತಮ್ಮ ಮಗ ಹಾಗೂ ಪತ್ನಿ ಪ್ರಣೀತ್ ಸಿಂಗ್ ಅವರೊಂದಿಗೆ ರಾಜಭವನಕ್ಕೆ ತೆರಳಿದ ಅಮರೀಂದರ್ ಸಿಂಗ್ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. 

ರಾಜೀನಾಮೆ ಬಳಿಕ ಕ್ಯಾ.ಅಮರೀಂದರ್ ಮೊದಲ ಪ್ರತಿಕ್ರಿಯೆ ನೀಡಿದ್ದು, ನನ್ನ ರಾಜೀನಾಮೆ ಬಗ್ಗೆ ಇಂದು ಬೆಳಗ್ಗೆ ಕಾಂಗ್ರೆಸ್ ಪಕ್ಷದ ಅಧ್ಯಕ್ಷೆ ಸೋನಿಯಾರಿಗೆ ಮಾಹಿತಿ ನೀಡಿದ್ದೆ. ನನಗೆ ಮಾಹಿತಿ ನೀಡದೆ 2 ಸಲ ಸಿಎಲ್‌ಪಿ ಸಭೆ ನಡೆಸಿದ್ದರು. ಇತ್ತೀಚೆಗೆ ನಡೆದ ಬೆಳವಣಿಗೆಯಿಂದ ನನಗೆ ಅವಮಾನವಾಗಿತ್ತು. ನನಗೆ 3 ಸಲ ಅವಮಾನ ಮಾಡಲಾಗಿತ್ತು. ಹೀಗಾಗಿ, ನನ್ನ ಬೆಂಬಲಿಗರ ಜತೆ ಚರ್ಚಿಸಿ ಮುಂದಿನ ನಿರ್ಧಾರ ಕೈಗೊಳ್ಳುತ್ತೇನೆ. ಈಗ ಕಾಂಗ್ರೆಸ್​ನಲ್ಲಿ ಇದ್ದೇನೆ, ಚರ್ಚಿಸಿ ಮುಂದಿನ ನಿರ್ಧಾರ ತೆಗೆದುಕೊಳ್ಳುತ್ತೇನೆ. ನನಗೆ ಸಹಕರಿಸಿದ ಬೆಂಬಲಿಗರು, ಕಾರ್ಯಕರ್ತರಿಗೆ ಧನ್ಯವಾದ ಎಂದು ಹೇಳಿದ್ದಾರೆ.

ಈ ಮೊದಲು ಸಿಎಂ ಕ್ಯಾಪ್ಟನ್ ಅಮರೀಂದರ್ ಸಿಂಗ್ ಹಠಕ್ಕೂ ಮಣಿಯದ ಕಾಂಗ್ರೆಸ್ ಹೈಕಮಾಂಡ್ ನವಜೋತ್ ಸಿಂಗ್ ಸಿಧು ಅವರನ್ನೇ ಪಂಜಾಬ್ ಕಾಂಗ್ರೆಸ್ ಅಧ್ಯಕ್ಷರನ್ನಾಗಿ ನೇಮಕ ಮಾಡುವ ಮೂಲಕ ಈಗಾಗಲೇ ಪಂಜಾಬ್ ಕಾಂಗ್ರೆಸ್ ಪಾಳಯದಲ್ಲಿ ಉರಿಯುತ್ತಿದ್ದ ಬೆಂಕಿಗೆ ತುಪ್ಪ ಸುರಿದಿತ್ತು. ಬಳಿಕ ನವಜೋತ್ ಸಿಂಗ್ ಸಿಧು ಅಧಿಕಾರ ಸ್ವೀಕಾರ ಮಾಡುವಾಗ ಅಮರೀಂದರ್ ಸಿಂಗ್ ಕೂಡ ಆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಮೂಲಕ ತಮ್ಮ ಮಧ್ಯೆ ಯಾವುದೇ ಭಿನ್ನಾಭಿಪ್ರಾಯವಿಲ್ಲ ಎಂದು ತೋರ್ಪಡಿಸಿಕೊಂಡಿದ್ದರು.

ಆದರೂ 2022ರಲ್ಲಿ ಪಂಜಾಬ್​ನಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೂ ಮುನ್ನ ಪಂಜಾಬ್​ನಲ್ಲಿ ನಾಯಕತ್ವ ಬದಲಾಯಿಸುವಂತೆ 40 ಕಾಂಗ್ರೆಸ್ ಶಾಸಕರು ಒತ್ತಡ ಹೇರಿದ್ದರು. ಇದರ ನಂತರ ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರೀಂದರ್ ಸಿಂಗ್ ಅವರಿಗೆ ರಾಜೀನಾಮೆ ನೀಡುವಂತೆ ಪಕ್ಷದ ಹೈಕಮಾಂಡ್ ಸೂಚಿಸಿತ್ತು. ಈ ಹಿನ್ನೆಲೆಯಲ್ಲಿ ಇದೀಗ ರಾಜಭವನಕ್ಕೆ ತೆರಳಿರುವ ಅಮರೀಂದರ್ ಸಿಂಗ್ ತಮ್ಮ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಕೆಲವೇ ಕ್ಷಣಗಳಲ್ಲಿ ಅವರು ಸುದ್ದಿಗೋಷ್ಠಿ ನಡೆಸಲಿದ್ದಾರೆ. ಸುದ್ದಿಗೋಷ್ಠಿಯಲ್ಲಿ ತಮ್ಮ ರಾಜೀನಾಮೆಯ ಬಗ್ಗೆ ಅಧಿಕೃತವಾಗಿ ಘೋಷಿಸಲಿದ್ದಾರೆ.

ಸುದ್ದಿಗೋಷ್ಠಿಗೂ ಮುನ್ನವೇ ಅಮರೀಂದರ್ ಸಿಂಗ್ ಅವರ ಮಗ ರಣೀಂದರ್ ಸಿಂಗ್ ತಮ್ಮ ತಂದೆ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವ ವಿಚಾರವನ್ನು ಖಚಿತಪಡಿಸಿದ್ದರು. ರಾಜೀನಾಮೆ ನೀಡುವಾಗ ಜೊತೆಗಿರಲು ನಾನು ಕೂಡ ಅಪ್ಪನೊಂದಿಗೆ ರಾಜಭವನಕ್ಕೆ ತೆರಳುತ್ತಿದ್ದೇನೆ ಎಂದು ಅವರು ಟ್ವೀಟ್ ಮಾಡಿದ್ದರು.

ಪಂಜಾಬ್​ನ 40 ಕಾಂಗ್ರೆಸ್ ಶಾಸಕರು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಪತ್ರ ಬರೆದು ಮುಖ್ಯಮಂತ್ರಿಯನ್ನು ಬದಲಾವಣೆ ಮಾಡುವಂತೆ ಒತ್ತಾಯಿಸಿದ್ದರು. ಪಂಜಾಬ್ ಕಾಂಗ್ರೆಸ್ ಮಾಜಿ ಮುಖ್ಯಸ್ಥ ಸುನಿಲ್ ಜಕಾರ್, ಲುಧಿಯಾನಾ ಸಂಸದ ರವನೀತ್ ಸಿಂಗ್, ರಾಜ್​ಕುಮಾರ್ ವರ್ಕಾ ಅಥವಾ ರಾಜ್ಯಸಭಾ ಸಂಸದ ಪ್ರತಾಪ್ ಸಿಂಗ್ ಬಾಜ್ವಾ ಪಂಜಾಬ್​ನ ನೂತನ ಮುಖ್ಯಮಂತ್ರಿಯಾಗುವ ಸಾಧ್ಯತೆಯಿದೆ. ಈಗಾಗಲೇ ಪಂಜಾಬ್ ಕಾಂಗ್ರೆಸ್​ನಲ್ಲಿ ಉಂಟಾಗಿರುವ ಭಿನ್ನಾಭಿಪ್ರಾಯಗಳಿಂದ ನವಜೋತ್ ಸಿಂಗ್ ಸಿಧು ಅವರನ್ನು ಸಿಎಂ ರೇಸ್​ನಿಂದ ಹೊರಗಿಡಲಾಗಿದೆ. ಕೆಲವು ದಿನಗಳ ಹಿಂದಷ್ಟೇ ಬಿಜೆಪಿ ಪಕ್ಷ ಕೂಡ ಕರ್ನಾಟಕ, ಗುಜರಾತ್ ಸೇರಿದಂತೆ ಕೆಲವು ರಾಜ್ಯಗಳ ಮುಖ್ಯಮಂತ್ರಿಗಳನ್ನು ಬದಲಾವಣೆ ಮಾಡಿತ್ತು.

ಪಂಜಾಬ್ ವಿಧಾನಸಭಾ ಚುನಾವಣೆಗೆ ಇನ್ನು ಕೆಲವೇ ತಿಂಗಳುಗಳು ಬಾಕಿ ಇರುವಾಗ ಪಂಜಾಬ್​ನಲ್ಲಿ ಅಧಿಕಾರದಲ್ಲಿರುವ ಕಾಂಗ್ರೆಸ್ ಪಕ್ಷದಲ್ಲಿ ಸಿಎಂ ವಿರುದ್ಧ ಹಲವು ಶಾಸಕರು ಹಾಗೂ ಸಚಿವರು ಬಂಡಾಯವೆದ್ದಿದ್ದಾರೆ. 2017ರ ವಿಧಾನಸಭೆ ಚುನಾವಣೆಗೂ ಮುನ್ನ ಅಮರೀಂದರ್ ಸಿಂಗ್ ನೀಡಿದ್ದ ಭರವಸೆಗಳು ರಾಜ್ಯದಲ್ಲಿ ಈಡೇರದೆ ಇರುವುದೇ ಬಂಡಾಯಕ್ಕೆ ಪ್ರಮುಖ ಕಾರಣವಾಗಿದೆ ಎನ್ನಲಾಗುತ್ತಿದೆ. ಈ ಹಿಂದೆ ನವಜೋತ್ ಸಿಂಗ್ ಸಿಧು ಕಾಂಗ್ರೆಸ್ ಅಧ್ಯಕ್ಷರಾಗಿ ಅಧಿಕಾರಕ್ಕೆ ಏರಿದಾಗಲೂ ತಮ್ಮ ಪ್ರಾಬಲ್ಯವನ್ನು ತೋರಿಸುವ ಸಲುವಾಗಿ ಪಂಜಾಬ್​ನ ಎಲ್ಲ ಕಾಂಗ್ರೆಸ್ ಶಾಸಕರನ್ನು ಗೋಲ್ಡನ್ ಟೆಂಪಲ್​ಗೆ ಬರುವಂತೆ ಸೂಚಿಸಿದ್ದರು. ಮುಕ್ಕಾಲು ಭಾಗ ಶಾಸಕರು ನವಜೋತ್ ಸಿಂಗ್ ಸಿಧು ಜೊತೆ ತೆರಳಿದ್ದರು.

ಕೆಲವು ದಿನಗಳ ಹಿಂದೆ ಕಾಂಗ್ರೆಸ್ ಹಿರಿಯ ನಾಯಕ ಹರೀಶ್ ರಾವತ್, 2022ರ ಪಂಜಾಬ್ ವಿಧಾನಸಭಾ ಚುನಾವಣೆಯ ಜವಾಬ್ದಾರಿಯನ್ನು ಕ್ಯಾಪ್ಟನ್ ಅಮರೀಂದರ್ ಸಿಂಗ್ ವಹಿಸಿಕೊಳ್ಳಲಿದ್ದಾರೆ ಎಂದು ಘೋಷಿಸಿದ್ದರು. ಹಲವು ಭಿನ್ನಾಭಿಪ್ರಾಯಗಳ ನಡುವೆಯೂ ಹೈಕಮಾಂಡ್ ನಿರ್ಧಾರಕ್ಕೆ ಬೆಲೆ ನೀಡಿ ನವಜೋತ್ ಸಿಂಗ್ ಸಿಧು ಅವರಿಗೆ ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನ ನೀಡಿದ್ದನ್ನು ಸಿಎಂ ಅಮರೀಂದರ್ ಸಿಂಗ್ ಸ್ವಾಗತಿಸಿದ್ದರು. ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸುವ ಬಗ್ಗೆ ಯಾವುದೇ ಚರ್ಚೆಗಳಾಗಿಲ್ಲ. ಮುಂದಿನ ಚುನಾವಣೆ ಅವರ ನೇತೃತ್ವದಲ್ಲೇ ನಡೆಯಲಿದೆ ಎಂದು ರಾವತ್ ತಿಳಿಸಿದ್ದರು. ಆದರೆ, ಅದರ ಬೆನ್ನಲ್ಲೇ ಅವರಿಗೆ ರಾಜೀನಾಮೆ ನೀಡಲು ಸೂಚಿಸಲಾಗಿತ್ತು.

ಇದನ್ನೂ ಓದಿ: ಅಮರೀಂದರ್ ಸಿಂಗ್​ ನೇತೃತ್ವದಲ್ಲೇ 2022ರ ಪಂಜಾಬ್ ಚುನಾವಣೆ; ಸಿಎಂ ಬದಲಾವಣೆ ಕುರಿತು ಕಾಂಗ್ರೆಸ್ ಸ್ಪಷ್ಟನೆ

ಸಿಎಂ ಅಮರೀಂದರ್ ಸಿಂಗ್ ಬಳಿ ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ; ನವಜೋತ್ ಸಿಂಗ್ ಸಿಧು ಬಣದಿಂದ ಸ್ಪಷ್ಟ ಸಂದೇಶ

( Amarinder Singh Resignation Punjab Chief Minister Captain Amarinder Singh Resigns )

Published On - 4:46 pm, Sat, 18 September 21

ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ