Amit Shah: ನಾಳೆ ಬೆಳಗ್ಗೆ ಬಿಎಸ್ ಯಡಿಯೂರಪ್ಪ ನಿವಾಸಕ್ಕೆ ಅಮಿತ್ ಶಾ
ನಾಳೆ ಅಮಿತ್ ಶಾ ಅವರು ಬೆಂಗಳೂರಿಗೆ ಭೇಟಿ ನೀಡಲಿದ್ದು, ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ. ಅದಕ್ಕೂ ಮುಂಚೆ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ನಿವಾಸಕ್ಕೆ ಅಮಿತ್ ಶಾ ಭೇಟಿ ನೀಡಲಿದ್ದಾರೆ.
ಬೆಂಗಳೂರು: ವಿಧಾನಸಭೆ ಚುನಾವಣಾ ಹೊಸ್ತಿಲಿನಲ್ಲಿರುವ ಕರ್ನಾಟಕಕ್ಕೆ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ (Amit Shah) ಸೇರಿದಂತೆ ಕೇಂದ್ರದ ಅನೇಕ ನಾಯಕರು ಭೇಟಿ ನೀಡುತ್ತಿದ್ದಾರೆ. ಸದ್ಯ ನಾಳೆ ಅಮಿತ್ ಶಾ ಅವರು ಬೆಂಗಳೂರಿಗೆ ಭೇಟಿ ನೀಡಲಿದ್ದು, ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ. ಅದಕ್ಕೂ ಮುಂಚೆ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ನಿವಾಸಕ್ಕೆ ಅಮಿತ್ ಶಾ ಭೇಟಿ ನೀಡಲಿದ್ದಾರೆ. ನಾಳೆ ಬೆಳಗ್ಗೆ 9.30ಕ್ಕೆ ಬೆಂಗಳೂರಿನ ಕುಮಾರಕೃಪಾ ರಸ್ತೆಯಲ್ಲಿರುವ ಕಾವೇರಿ ನಿವಾಸಕ್ಕೆ ಭೇಟಿ ನೀಡಲಿದ್ದು, ಉಪಾಹಾರಕ್ಕೆ ಅಮಿತ್ ಶಾರನ್ನು ಬಿಎಸ್ವೈ ಆಹ್ವಾನಿಸಿದ್ದಾರೆ. ಯಡಿಯೂರಪ್ಪ ನಿವಾಸಕ್ಕೆ ಅಮಿತ್ ಶಾ ಭೇಟಿ ವಿಚಾರ ವಿಶೇಷವಾಗಿದ್ದು, ಅಷ್ಟೇ ಕುತೂಹಲ ಸಹ ಕೆರಳಿಸಿದೆ ಎನ್ನಲಾಗುತ್ತಿದೆ. ಅಮಿತ್ ಶಾ ಜೊತೆಗೆ ಸಿಎಂ ಬಸವರಾಜ ಬೊಮ್ಮಾಯಿ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೂ ಆಹ್ವಾನ ನೀಡಲಾಗಿದೆ.
ಚುನಾವಣೆ ಹಿನ್ನೆಲೆ ಮತದಾರರನ್ನು ಸೆಳೆಯಲು ಬಿಜೆಪಿ ಕಸರತ್ತು ಮಾಡುತ್ತಿದೆ. ಬಿ.ಎಸ್ ಯಡಿಯೂರಪ್ಪ ರಾಜೀನಾಮೆ ನೀಡಿದ್ದರು, ಮತ್ತೊಮ್ಮೆ ಬಿಜೆಪಿಯನ್ನು ಅಧಿಕಾರಕ್ಕೆ ತರಲು ರಾಜ್ಯಾದ್ಯಂತ ಪ್ರವಾಸ ಕೈಗೊಂಡಿದ್ದಾರೆ. ಕೇಂದ್ರ ನಾಯಕರು ಸಹ ಬಿ.ಎಸ್ ಯಡಿಯೂರಪ್ಪ ಅವರ ಮೇಲೆ ಅವಲಂಬನೆ ಆಗಿದ್ದಾರೆ ಎನ್ನಲಾಗುತ್ತಿದೆ. ಈ ಹಿಂದೆ ಬಿ.ಎಸ್ ಯಡಿಯೂರಪ್ಪ ಅಮಿತ್ ಶಾ ಅವರನ್ನು ಭೇಟಿ ಮಾಡಲೇಂದು ದೆಹಲಿಗೆ ಹೋದರು ಭೇಟಿ ಆಗದೇ ಬಹಳ ಹೊತ್ತು ಕಾದು ವಾಪಸ್ ಬಂದಿರುವುದು ಇದೆ. ಆದರೆ ಕರ್ನಾಟಕ ಚುನಾವಣೆ ಹಿನ್ನೆಲೆ ರಾಜ್ಯಕ್ಕೆ ಆಗಮಿಸುತ್ತಿರುವ ಶಾ ಬಿ.ಎಸ್ ಯಡಿಯೂರಪ್ಪ ಅವರ ಮನೆಗೂ ಭೇಟಿ ನೀಡುತ್ತಿರುವುದು ವಿಶೇಷ.
ಇದನ್ನೂ ಓದಿ: ಅಮಿತ್ ಶಾ ಭೇಟಿ ಕಾರಣ ಬೆಂಗಳೂರಿನ ಕೆಲವು ರಸ್ತೆಗಳಲ್ಲಿ ನಾಳೆ ಸಂಚಾರ ನಿರ್ಬಂಧ; ವಿವರ ಇಲ್ಲಿದೆ
ಬೆಂಗಳೂರಿನ ಕಮ್ಮಘಟ್ಟ ಗ್ರಾಮದಲ್ಲಿ ಶೇಖರ್ ಸಮೃದ್ಧಿ ಸೌಧದ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಸಹಕರ ಸಚಿವಾಲಯದ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಉದ್ಘಾಟಿಸಲಿದ್ದಾರೆ. ಜೊತೆಗೆ ದಕ್ಷಿಣ ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳಿಗೆ ಮಾರಕವಸ್ತು ಕಳ್ಳಸಾಗಣೆ ಮತ್ತು ರಾಷ್ಟ್ರೀಯ ಭದ್ರತೆ ವಿಷಯದ ಕುರಿತ ವಿಚಾರ ಸಂಕಿರ್ಣದಲ್ಲಿ ಅಮಿತ್ ಶಾ ಭಾಗವಹಿಸಲಿದ್ದಾರೆ.
ಇದನ್ನೂ ಓದಿ: Tejasvi Surya: ಮುಂದಿನ ಸಿಎಂ ಕುರಿತ ಬೊಮ್ಮಾಯಿ ಹೇಳಿಕೆ ನೂರಕ್ಕೆ ನೂರು ನಿಜ; ತೇಜಸ್ವಿ ಸೂರ್ಯ
ನಾಳೆ ಸಂಚಾರ ನಿರ್ಬಂಧ
ಅಮಿತ್ ಶಾ ರಾಜ್ಯ ಭೇಟಿ ಹಿನ್ನೆಲೆ ಕೆಲವು ಮಾರ್ಗಗಳಲ್ಲಿ ಸಂಚಾರಕ್ಕೆ ಅಡಚಣೆಯಾಗುವ ಸಾಧ್ಯತೆ ಇದೆ. ಕೆಲವು ಮಾರ್ಗಗಳಲ್ಲಿ ನಿರ್ದಿಷ್ಟ ಅವಧಿಗೆ ವಾನಹ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ. ಈ ಬಗ್ಗೆ ವಾಹನ ಸವಾರರು ಹಾಗೂ ಸಾರ್ವಜನಿಕರು ಗಮನ ಹರಿಸುವಂತೆ ಬೆಂಗಳೂರು ನಗರ ಸಂಚಾರ ಪೊಲೀಸರು (Bengaluru Traffic Police) ಪ್ರಕಟಣೆ ಹೊರಡಿಸಿದ್ದಾರೆ. ಮಧ್ಯಾಹ್ನ 12 ಗಂಟೆಯಿಂದ ಸಂಜೆ 4 ಗಂಟೆಯ ವರೆಗೆ ಈ ಕೆಳಗೆ ಉಲ್ಲೇಖಿಸಿರುವ ಮಾರ್ಗಗಳಲ್ಲಿ ಸಂಚರಿಸದಂತೆ ಸಂಚಾರ ಪೊಲೀಸರು ಮನವಿ ಮಾಡಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 7:16 pm, Thu, 23 March 23