ತ್ರಿಪುರದಲ್ಲಿ ಅಭಿಷೇಕ್ ಬ್ಯಾನರ್ಜಿ ಮೇಲಿನ ಹಲ್ಲೆ ಹಿಂದೆ ಅಮಿತ್ ಶಾ ಕೈವಾಡ; ಸಿಎಂ ಮಮತಾ ಬ್ಯಾನರ್ಜಿ ಆರೋಪ

Mamata Banerjee: ಸಿಎಂ ಮಮತಾ ಬ್ಯಾನರ್ಜಿ ಅವರ ಸೋದರಳಿಯ ಕೂಡ ಆಗಿರುವ ಟಿಎಂಸಿ ಸಂಸದ ಅಭಿಷೇಕ್ ಬ್ಯಾನರ್ಜಿ ವಾಹನದ ಮೇಲೆ ತ್ರಿಪುರದಲ್ಲಿ ಹಲ್ಲೆ ನಡೆಸಲಾಗಿತ್ತು.

ತ್ರಿಪುರದಲ್ಲಿ ಅಭಿಷೇಕ್ ಬ್ಯಾನರ್ಜಿ ಮೇಲಿನ ಹಲ್ಲೆ ಹಿಂದೆ ಅಮಿತ್ ಶಾ ಕೈವಾಡ; ಸಿಎಂ ಮಮತಾ ಬ್ಯಾನರ್ಜಿ ಆರೋಪ
ಮಮತಾ ಬ್ಯಾನರ್ಜಿ

ಕೊಲ್ಕತ್ತಾ: ಇತ್ತೀಚಿಗೆ ತ್ರಿಪುರಾದ ಅಗರ್ತಲಾಗೆ ಭೇಟಿ ನೀಡಿದ್ದ ಟಿಎಂಸಿ ಸಂಸದ ಅಭಿಷೇಕ್ ಬ್ಯಾನರ್ಜಿ ವಾಹನದ ಮೇಲೆ ಹಲ್ಲೆ ನಡೆಸಲಾಗಿತ್ತು. ಜೊತೆಗೆ ಕೆಲವು ಟಿಎಂಸಿ ಕಾರ್ಯಕರ್ತರ ಮೇಲೂ ದಾಳಿ ಮಾಡಲಾಗಿತ್ತು. ಈ ಹಲ್ಲೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೇ ಜವಾಬ್ದಾರರು ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪ ಮಾಡಿದ್ದಾರೆ.

ಸಿಎಂ ಮಮತಾ ಬ್ಯಾನರ್ಜಿ ಅವರ ಸೋದರಳಿಯ ಕೂಡ ಆಗಿರುವ ಟಿಎಂಸಿ ಸಂಸದ ಅಭಿಷೇಕ್ ಬ್ಯಾನರ್ಜಿ ವಾಹನದ ಮೇಲೆ ತ್ರಿಪುರದಲ್ಲಿ ಹಲ್ಲೆ ನಡೆಸಲಾಗಿತ್ತು. ಬಿಜೆಪಿ ಸರ್ಕಾರ ಅಧಿಕಾರದಲ್ಲಿರುವ ತ್ರಿಪುರದಲ್ಲಿ ಟಿಎಂಸಿ ನಾಯಕರು ಹಗೂ ಕಾರ್ಯಕರ್ತರ ಮೇಲೆ ನಡೆದಿರುವ ಹಲ್ಲೆಗೆ ಅಮಿತ್ ಶಾ ಅವರೇ ಹೊಣೆ ಎಂದು ದೀದಿ ಆರೋಪಿಸಿದ್ದಾರೆ. ಇಂತಹ ದಾಳಿಗಳಿಂದ ನಾವು ಧೈರ್ಯ ಕಳೆದುಕೊಳ್ಳುವುದಿಲ್ಲ. ಬಿಜೆಪಿ ತ್ರಿಪುರಾ, ಅಸ್ಸಾಂ ಮತ್ತು ಉತ್ತರಪ್ರದೇಶದಲ್ಲಿ ಬಿಜೆಪಿ ಅರಾಜಕ ಸರ್ಕಾರವನ್ನು ನಡೆಸುತ್ತಿದೆ. ತ್ರಿಪುರಾದಲ್ಲಿ ಅಭಿಷೇಕ್ ಮತ್ತು ನಮ್ಮ ಪಕ್ಷದ ಕಾರ್ಯಕರ್ತರ ಮೇಲೆ ನಡೆದ ಹಲ್ಲೆಯನ್ನು ನಾವು ಖಂಡಿಸುತ್ತೇವೆ ಎಂದು ಮಮತಾ ಬ್ಯಾನರ್ಜಿ ಆಕ್ರೋಶ ಹೊರಹಾಕಿದ್ದಾರೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಬೆಂಬಲವಿಲ್ಲದೆ ಇಂತಹ ದಾಳಿಗಳು ನಡೆಯಲು ಸಾಧ್ಯವಿಲ್ಲ. ಇದೆಲ್ಲದಕ್ಕೂ ಅಮಿತ್ ಶಾ ಅವರೇ ನೇರ ಹೊಣೆ ಎಂದು ಟೀಕಿಸಿದ್ದಾರೆ. ಕೆಲವು ದಿನಗಳ ಹಿಂದೆ ತ್ರಿಪುರದಲ್ಲಿ ಬಿಜೆಪಿ ಧ್ವಜಗಳನ್ನು ಹೊತ್ತ ಕೆಲವರು ಅಭಿಷೇಕ್ ಬ್ಯಾನರ್ಜಿಯ ಬೆಂಗಾಲವು ವಾಹನದ ಮೇಲೆ ಹಲ್ಲೆ ನಡೆಸಿದ್ದರು. 2023ರ ಚುನಾವಣೆಯ ಹಿನ್ನೆಲೆಯಲ್ಲಿ ತ್ರಿಪುರಾಗೆ ತೆರಳಿದ್ದ ಟಿಎಂಸಿ ನಾಯಕ ಅಭಿಷೇಕ್ ಬ್ಯಾನರ್ಜಿ ವಾಹನದ ಮೇಲೆ ದಾಳಿ ನಡೆದಿತ್ತು.

ಇದನ್ನೂ ಓದಿ: West Bengal Flood: ಪಶ್ಚಿಮ ಬಂಗಾಳದಲ್ಲಿ ಭಾರೀ ಪ್ರವಾಹ; ನೆರವು ನೀಡುವುದಾಗಿ ಸಿಎಂ ಮಮತಾ ಬ್ಯಾನರ್ಜಿಗೆ ಪ್ರಧಾನಿ ಮೋದಿ ಭರವಸೆ

Crime News: ಚೆನ್ನೈನ ನರರೋಗ ತಜ್ಞ ಡಾ. ಸುಬ್ಬಯ್ಯ ಹತ್ಯೆ ಪ್ರಕರಣ; 7 ಆರೋಪಿಗಳಿಗೆ ಗಲ್ಲು ಶಿಕ್ಷೆ

(Home Minister Amit Shah behind attack on Abhishek Banerjee and TMC Activists in Tripura Mamata Banerjee Accuses)

Published On - 5:56 pm, Mon, 9 August 21

Click on your DTH Provider to Add TV9 Kannada