AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Amit Shah: ಕರ್ನಾಟಕದಲ್ಲಿ ಬಿಜೆಪಿಗೆ ಪೂರ್ಣ ಬಹುಮತ: ಅಮಿತ್ ಶಾ

ANI Interview of Amit Shah: ಕರ್ನಾಟಕ, ರಾಜಸ್ಥಾನ, ಮಧ್ಯಪ್ರದೇಶ ಮತ್ತು ಛತ್ತೀಸ್​ಗಡ ರಾಜ್ಯಗಳಲ್ಲಿ ಬಿಜೆಪಿ ಪೂರ್ಣಬಹುಮತ ಪಡೆಯುತ್ತದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಎಎನ್​ಐ ಸಂದರ್ಶನದಲ್ಲಿ ಅವರು ಹಲವು ವಿಚಾರಗಳ ಬಗ್ಗೆ ಮಾತನಾಡಿದರು.

Amit Shah: ಕರ್ನಾಟಕದಲ್ಲಿ ಬಿಜೆಪಿಗೆ ಪೂರ್ಣ ಬಹುಮತ: ಅಮಿತ್ ಶಾ
ಅಮಿತ್ ಶಾImage Credit source: ANI
Follow us
ಸುಗ್ಗನಹಳ್ಳಿ ವಿಜಯಸಾರಥಿ
|

Updated on:Feb 14, 2023 | 12:12 PM

ಬೆಂಗಳೂರು: 2024ರ ಲೋಕಸಭಾ ಚುನಾವಣೆಗಳಿಗೆ ಸೆಮಿಫೈನಲ್ ಎಂದೇ ಪರಿಗಣಿಸಲಾಗಿರುವ 9 ರಾಜ್ಯಗಳ ವಿಧಾನಸಭಾ ಚುನಾವಣೆಗಳಲ್ಲಿ ಭರ್ಜರಿ ಪ್ರದರ್ಶನ ನೀಡುವ ವಿಶ್ವಾಸದಲ್ಲಿ ಬಿಜೆಪಿ ಇದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಎಎನ್​ಐ ಸುದ್ದಿ ಸಂಸ್ಥೆಗೆ ನೀಡಿದ ಸಂದರ್ಶನದಲ್ಲಿ ಮಾತನಾಡುತ್ತಾ, ಕರ್ನಾಟಕವೂ ಸೇರಿದಂತೆ ಕೆಲ ರಾಜ್ಯಗಳಲ್ಲಿ ಗೆಲ್ಲುತ್ತದೆ ಎಂದಿದ್ದಾರೆ.

ಕರ್ನಾಟಕದ ಜೊತೆಗೆ ಇತರ ಪ್ರಮುಖ ರಾಜ್ಯಗಳಾದ ರಾಜಸ್ಥಾನ, ಮಧ್ಯಪ್ರದೇಶ ಮತ್ತು ಛತ್ತೀಸ್​ಗಡ ವಿಧಾನಸಭಾ ಚುನಾವಣೆಗಳಲ್ಲಿ ಬಿಜೆಪಿ ಪೂರ್ಣ ಬಹುಮತ ಪಡೆಯುತ್ತದೆ ಎಂದು ಅಮಿತ್ ಶಾ ಹೇಳಿದ್ದಾರೆ.

ಲೋಕಸಭಾ ಚುನಾವಣೆಗೆ ಮುನ್ನ ಕರ್ನಾಟಕ, ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್​ಗಡ, ತೆಲಂಗಾಣ, ನಾಗಾಲ್ಯಾಂಡ್, ಮೇಘಾಲಯ, ತ್ರಿಪುರ ಮತ್ತು ಮಿಝೋರಾಂ ಈ 9 ರಾಜ್ಯಗಳಲ್ಲಿ ವಿಧಾನಸಭಾ ಚುನಾವಣೆಗಳು ನಡೆಯಲಿವೆ. ಈ ವರ್ಷದ ಮಾರ್ಚ್ ತಿಂಗಳಲ್ಲಿ ನಾಗಾಲೆಂಡ್, ಮೇಘಾಲಯ ಮತ್ತು ತ್ರಿಪುರಾ ರಾಜ್ಯಗಳಿಗೆ ಚುನಾವಣೆ ಆಗಬಹುದು. ಮೇ ತಿಂಗಳಲ್ಲಿ ಕರ್ನಾಟಕದಲ್ಲಿ, ಡಿಸೆಂಬರ್ ತಿಂಗಳಲ್ಲಿ ಮಿಜೋರಾಮ್​ನಲ್ಲಿ ವಿಧಾನಸಭಾ ಚುನಾವಣೆಗಳಾಗಲಿವೆ. ಮುಂದಿನ ಜನವರಿಯಲ್ಲಿ ಛತ್ತೀಸ್​ಗಡ, ಮಧ್ಯಪ್ರದೇಶ, ರಾಜಸ್ಥಾನ ಮತ್ತು ತೆಲಂಗಾಣದಲ್ಲಿ ಚುನಾವಣೆ ಆಗಬಹುದು. 9 ರಾಜ್ಯಗಳ ಪೈಕಿ ಮಿಝೋರಾಮ್, ರಾಜಸ್ಥಾನ ಮತ್ತು ತೆಲಂಗಾಣ ಹೊರತುಪಡಿಸಿ ಉಳಿದ 6 ರಾಜ್ಯಗಳಲ್ಲಿ ಬಿಜೆಪಿ ಆಡಳಿತ ಪಕ್ಷವಾಗಿದೆ. ಹೀಗಾಗಿ, ಬಿಜೆಪಿಗೆ ಈ ರಾಜ್ಯಗಳ ಚುನಾವಣೆ ಗೆಲ್ಲುವುದು ಬಹಳ ಮುಖ್ಯ. ಎಎನ್​ಐ ಸಂದರ್ಶನದಲ್ಲಿ ಬಿಜೆಪಿಯ ಚುನಾವಣಾ ಚಾಣಕ್ಯ ಎಂದೇ ಗುರುತಾಗಿರುವ ಅಮಿತ್ ಶಾ ಮಾತನಾಡಿ, ಹೆಚ್ಚಿನ ರಾಜ್ಯಗಳಲ್ಲಿ ಬಿಜೆಪಿ ಗೆಲ್ಲುತ್ತದೆಂದು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ: Amit Shah: ಅದಾನಿ ವಿಚಾರದಲ್ಲಿ ಮುಚ್ಚುಮರೆ ಏನಿಲ್ಲ: ಕಾಂಗ್ರೆಸ್ ಆರೋಪಕ್ಕೆ ಅಮಿತ್ ಶಾ ಉತ್ತರ

ಕರ್ನಾಟಕದಲ್ಲಿ ಗೆಲುವು ಹೇಗೆ ಸಾಧ್ಯ?

ಕರ್ನಾಟಕದಲ್ಲಿ ಆಡಳಿತದಲ್ಲಿರುವ ಬಿಜೆಪಿ ಮತ್ತೆ ಪೂರ್ಣಬಹುಮತದೊಂದಿಗೆ ಅಧಿಕಾರಕ್ಕೆ ಬರುತ್ತದೆ ಎಂದು ಅಮಿತ್ ಶಾ ಹೇಳಿದ್ದು, ಅದಕ್ಕೆ ಕಾರಣವನ್ನೂ ವಿವರಿಸಿದ್ದಾರೆ.

ಕಳೆದ 2 ತಿಂಗಳಲ್ಲಿ ನಾನು ಕರ್ನಾಟಕಕ್ಕೆ 5 ಬಾರಿ ಭೇಟಿ ನೀಡಿದ್ದೇನೆ. ಈ ರಾಜ್ಯದ ಜನರ ನಾಡಿಯನ್ನು ಅರಿತುಕೊಂಡಿದ್ದೇನೆ. ಪ್ರಧಾನಿ ಮೋದಿ ಅವರ ಜನಪ್ರಿಯತೆ ಎಷ್ಟಿದೆ ಎಂದು ಬಲ್ಲೆ. ಕರ್ನಾಟಕದಲ್ಲಿ ಬಿಜೆಪಿಗೆ ಭಾರೀ ಜನಾದೇಶ ಸಿಗುತ್ತದೆ. ಮಂಡ್ಯದ ಜನರೂ ವಂಶಾಡಳಿತದ ಪಕ್ಷಗಳಿಂದ ದೂರವಾಗಿ ಬಿಜೆಪಿಯ ಅಭಿವೃದ್ಧಿ ರಾಜಕೀಯವನ್ನು ಅಪ್ಪಿಕೊಳ್ಳುತ್ತಿದ್ದಾರೆ. ಇದು ಕರ್ನಾಟಕಕ್ಕೆ ಶುಭ ಸೂಚನೆ ಎಂದು ತಮ್ಮ ಸಂದರ್ಶನದಲ್ಲಿ ಅಮಿತ್ ಶಾ ಹೇಳಿದ್ದಾರೆ.

ಬಿಜೆಪಿಗೆ ಬುಡಕಟ್ಟು ಸಮುದಾಯದ ಬೆಂಬಲ

ಅಮಿತ್ ಶಾ ಇದೇ ವೇಳೆ ರಾಷ್ಟ್ರಮಟ್ಟದಲ್ಲಿ ಬಿಜೆಪಿಗೆ ಬುಡಕಟ್ಟು ಸಮುದಾಯದವರ ಮತಗಳು ಸಿಗಲಿವೆ ಎಂದಿದ್ದಾರೆ.

ಬುಡಕಟ್ಟು ಸಮುದಾಯಗಳು ಈಗ ಅಭಿವೃದ್ಧಿ ಕಾಣತೊಡಗಿವೆ. ಇವತ್ತು ದೇಶಕ್ಕೆ ಬುಡಕಟ್ಟು ಸಮುದಾಯದಿಂದ ಮೊದಲ ಬಾರಿಗೆ ರಾಷ್ಟ್ರಪತಿ ಸಿಕ್ಕಿದ್ದಾರೆ. ಬಡ ಕುಟುಂಬಗಳಿಗೆ ಸರ್ಕಾರ ನೀಡುತ್ತಿರುವ ಬೆಂಬಲವು ಯಾವುದೇ ಭೇದವಿಲ್ಲದೇ ಬುಡಕಟ್ಟು ಸಮುದಾಯಕ್ಕೂ ಸಿಗುತ್ತಿದೆ. ಈ ಹಿಂದೆ ತಮ್ಮನ್ನು ವಂಚಿಸಲಾಗುತ್ತಿತ್ತು ಎಂಬುದು ಈ ಸಮುದಾಯಗಳಿಗೆ ಅರಿವಾಗುತ್ತಿದೆ ಎಂದು ಅಮಿತ್ ಶಾ ತಿಳಿಸಿದ್ದಾರೆ.

ಇದನ್ನೂ ಓದಿ: ಜೆಡಿಎಸ್​ ಪಕ್ಷವನ್ನು ಪದೇ ಪದೇ ಕೆಣಕುತ್ತಿದ್ದಾರೆ, ಹೀಗೆ ಮಾಡಿದ್ರೆ ಸಿದ್ದರಾಮಯ್ಯ ಮನೆಗೆ ಹೋಗಬೇಕಾಗುತ್ತೆ: ಕುಮಾರಸ್ವಾಮಿ

ಜಮ್ಮು ಕಾಶ್ಮೀರಕ್ಕೆ ಮತ್ತೆ ರಾಜ್ಯ ಸ್ಥಾನಮಾನ

ಇದೇ ವೇಳೆ, ಅಮಿತ್ ಶಾ ಅವರು ಜಮ್ಮು ಮತ್ತು ಕಾಶ್ಮೀರಕ್ಕೆ ಮತ್ತೆ ರಾಜ್ಯ ಸ್ಥಾನಮಾನ ಮರಳಿಸಲು ಸರ್ಕಾರ ಬದ್ಧವಾಗಿದೆ ಎಂದು ಪುನರುಚ್ಚರಿಸಿದ್ದಾರೆ.

ಜಮ್ಮು ಮತ್ತು ಕಾಶ್ಮೀರದಲ್ಲಿ ಚುನಾವಣೆಗಳು ಯಶಸ್ವಿಯಾಗಿ ನಡೆದ ಬಳಿಕ ಈ ಕೇಂದ್ರಾಡಳಿತ ಪ್ರದೇಶಕ್ಕೆ ಮತ್ತೆ ರಾಜ್ಯ ಸ್ಥಾನಮಾನ ಕೊಡಲಾಗುವುದು. ಇದನ್ನು ಈ ಹಿಂದೆಯೇ ಹೇಳಿದ್ದೆವು. ಆ ಮಾತು ತಪ್ಪುವುದಿಲ್ಲ. ಜಮ್ಮು ಕಾಶ್ಮೀರ ಅಭಿವೃದ್ಧಿ ಆಗಬೇಕೆಂಬುದು ಸರ್ಕಾರದ ಸಂಕಲ್ಪ ಎಂದು ಅಮಿತ್ ಶಾ ಅಭಯ ನೀಡಿದ್ದಾರೆ.

2019 ಅಕ್ಟೋಬರ್ ತಿಂಗಳಲ್ಲಿ ಕೇಂದ್ರ ಸರ್ಕಾರ ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು ಹಿಂಪಡೆಯುವ ಐತಿಹಾಸಿಕ ನಿರ್ಧಾರ ಕೈಗೊಂಡಿತ್ತು. ಅದಾದ ಬಳಿಕ ಜಮ್ಮು ಕಾಶ್ಮೀರವನ್ನು ಎರಡು ಕೇಂದ್ರಾಡಳಿತ ಪ್ರದೇಶವಾಗಿ ವಿಭಜಿಸಿತು. ಲಡಾಕ್ ಪ್ರತ್ಯೇಕ ಕೇಂದ್ರಾಡಳಿತ ಪ್ರದೇಶವಾಯಿತು. ಇದೀಗ ಕೇಂದ್ರಾಡಳಿತ ಪ್ರದೇಶವಾಗಿರುವ ಜಮ್ಮು ಕಾಶ್ಮೀರಕ್ಕೆ ಮರಳಿ ರಾಜ್ಯವಾಗಿ ಮಾಡುವ ಉದ್ದೇಶ ಸರ್ಕಾರದ್ದಾಗಿದೆ.

Published On - 12:12 pm, Tue, 14 February 23

ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ಸೇವೆ: ತೇಜಸ್ವಿ ಸೂರ್ಯ
ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ಸೇವೆ: ತೇಜಸ್ವಿ ಸೂರ್ಯ
ಯತ್ನಾಳ್ ವಿರುದ್ಧ ಮುಸ್ಲಿಮರ ಪ್ರತಿಭಟನೆಯಲ್ಲಿ ಹಿಂದೂ ಸ್ವಾಮೀಜಿಗಳು!
ಯತ್ನಾಳ್ ವಿರುದ್ಧ ಮುಸ್ಲಿಮರ ಪ್ರತಿಭಟನೆಯಲ್ಲಿ ಹಿಂದೂ ಸ್ವಾಮೀಜಿಗಳು!
ಪಹಲ್ಗಾಮ್​ನಲ್ಲಿ ಧರ್ಮ ಕೇಳಿ ಶೂಟ್ ಮಾಡಿದ್ದು ನಿಜ: ಮಂಜುನಾಥ್ ಪತ್ನಿ ಪಲ್ಲವಿ
ಪಹಲ್ಗಾಮ್​ನಲ್ಲಿ ಧರ್ಮ ಕೇಳಿ ಶೂಟ್ ಮಾಡಿದ್ದು ನಿಜ: ಮಂಜುನಾಥ್ ಪತ್ನಿ ಪಲ್ಲವಿ
ಭಾರತದಲ್ಲಿರುವ ಪಾಕಿಸ್ತಾನಿ ಹಿಂದೂಗಳ ಕತೆಯೇನು? ವಾಪಸ್ಸಾಗಲು ಮನಸ್ಸಿಲ್ಲ!
ಭಾರತದಲ್ಲಿರುವ ಪಾಕಿಸ್ತಾನಿ ಹಿಂದೂಗಳ ಕತೆಯೇನು? ವಾಪಸ್ಸಾಗಲು ಮನಸ್ಸಿಲ್ಲ!
ಪ್ರತಿಭಟನೆ ಹಿನ್ನೆಲೆ ಎಸ್ಪಿ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್
ಪ್ರತಿಭಟನೆ ಹಿನ್ನೆಲೆ ಎಸ್ಪಿ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್
ನಂಜನಗೂಡು ದೇವಾಲಯದಲ್ಲಿ ಒಂದೇ ತಿಂಗಳಲ್ಲಿ 2.59 ಕೋಟಿ ರೂ. ಸಂಗ್ರಹ
ನಂಜನಗೂಡು ದೇವಾಲಯದಲ್ಲಿ ಒಂದೇ ತಿಂಗಳಲ್ಲಿ 2.59 ಕೋಟಿ ರೂ. ಸಂಗ್ರಹ
ಸದ್ಯದ ಸ್ಥಿತಿಯಲ್ಲಿ ಪ್ರಧಾನಿ ಮೋದಿಯವರ ನಿರ್ಣಯವೇ ಅಂತಿಮ: ಹೆಚ್​ಕೆ ಪಾಟೀಲ್
ಸದ್ಯದ ಸ್ಥಿತಿಯಲ್ಲಿ ಪ್ರಧಾನಿ ಮೋದಿಯವರ ನಿರ್ಣಯವೇ ಅಂತಿಮ: ಹೆಚ್​ಕೆ ಪಾಟೀಲ್