AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಕ್ಷಿಣ ಕನ್ನಡ: ರೋಡ್ ಶೋ ವೇಳೆ ರಸ್ತೆಯ ಗುಂಡಿಗಳ‌ನ್ನು ಅಮಿತ್ ಶಾ ಲೆಕ್ಕ ಹಾಕಲಿ: ಯು.ಟಿ.ಖಾದರ್

ಕರ್ನಾಟಕ ವಿಧಾನಸಭೆ ಚುನಾವಣೆ ಸಮೀಪಿಸುತ್ತಿದೆ. ಈಗಾಗಲೇ ಪ್ರಚಾರ ಆರಂಭಿಸಿದ ಬಿಜೆಪಿ, ಹಿಂದುತ್ವದ ಭದ್ರಕೋಟೆ ದಕ್ಷಿಣ ಕನ್ನಡದಲ್ಲಿ ಮತ್ತೊಮ್ಮೆ ಪ್ರಚಂಡ ಗೆಲುವಿಗೆ ರಣತಂತ್ರ ರೂಪಿಸುತ್ತಿದೆ. ಇದರ ಭಾಗವಾಗಿ ಅಮಿತ್ ಶಾ ಅವರು ಜಿಲ್ಲಾ ಪ್ರವಾಸ ಕೈಗೊಳ್ಳುತ್ತಿದ್ದಾರೆ.

ದಕ್ಷಿಣ ಕನ್ನಡ: ರೋಡ್ ಶೋ ವೇಳೆ ರಸ್ತೆಯ ಗುಂಡಿಗಳ‌ನ್ನು ಅಮಿತ್ ಶಾ ಲೆಕ್ಕ ಹಾಕಲಿ: ಯು.ಟಿ.ಖಾದರ್
ಅಮಿತ್ ಶಾ, ನಳಿನ್ ಕುಮಾರ್ ಕಟೀಲ್ (ಎಡ ಚಿತ್ರ) ಮತ್ತು ಯು.ಟಿ.ಖಾದರ್ (ಬಲ ಚಿತ್ರ)
TV9 Web
| Edited By: |

Updated on:Feb 06, 2023 | 7:04 PM

Share

ಮಂಗಳೂರು: ಕೇಂದ್ರ ಗೃಹಸಚಿವ ಅಮಿತ್ ಶಾ (Amit Shah) ಅವರನ್ನು ಬೆಂಗಳೂರಿನಿಂದ ದಕ್ಷಿಣ ಕನ್ನಡ (Dakshina Kannada) ಜಿಲ್ಲೆಗೆ ರಸ್ತೆ ಮಾರ್ಗವಾಗಿ ಕರೆತಂದರೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ (Nalin Kumar Kateel) ಅವರಿಗೆ ಸೆಲ್ಯೂಟ್ ಹೊಡೆಯುತ್ತೇನೆ ಎಂದು ಕಾಂಗ್ರೆಸ್ ಶಾಸಕ ಯು.ಟಿ.ಖಾದರ್ (U.T.Khader) ಸವಾಲು ಹಾಕಿದ್ದಾರೆ. ಫೆಬ್ರವರಿ 11ರಂದು ಅಮಿತ್ ಶಾ ಅವರು ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ ಕೈಗೊಳ್ಳುತ್ತಿದ್ದು, ಭರ್ಜರಿ ರೋಡ್ ಶೋ (Amit Shah Road Show) ನಡೆಸಲು ತಯಾರಿ ನಡೆಸಲಾಗುತ್ತಿದೆ. ಈ ಬಗ್ಗೆ ವ್ಯಂಗ್ಯವಾಡಿದ ಖಾದರ್, ರೋಡ್ ಶೋ ಮಾಡುವಾಗ ಅಮಿತ್ ಶಾ ಅವರು ರಸ್ತೆಯಲ್ಲಿರುವ ಗುಂಡಿಗಳ‌ನ್ನು ಲೆಕ್ಕ ಮಾಡಲಿ ಎಂದು ಟಾಂಗ್ ನೀಡಿದರು.

ಇನ್ನು, ಕೇಂದ್ರ ಸರ್ಕಾರ ಮಂಡಿಸಿದ ಬಜೆಟ್ ಬಗ್ಗೆ ಪ್ರತಿಕ್ರಿಯಿಸಿ ಖಾದರ್, ಕೇಂದ್ರ ಬಜೆಟ್​​ನಲ್ಲಿ ಕರಾವಳಿಗೆ ಒಂದೇ ಒಂದು ಅನುದಾನ ಇಲ್ಲ. ಶಿರಾಡಿಗೆ ಸುರಂಗ ಮಾರ್ಗ ಅಂತಾ ಹಲವು ವರ್ಷಗಳಿಂದ ಹೇಳುತ್ತಿದ್ದಾರೆ. ಆದರೆ ಯಾವುದೇ ಬಜೆಟ್​ನಲ್ಲಿ ಈ ಯೋಜನೆಗೆ ಹಣ ಇಟ್ಟಿಲ್ಲ. ರೈಲ್ವೇ ಪ್ರತ್ಯೇಕ ವಿಭಾಗ ಕೇಳಿದಾಗಲೂ ಸರ್ಕಾರದ ಸ್ಪಂದನೆ ಇಲ್ಲ. ಬಂದರು ಮತ್ತು ರಸ್ತೆಗೆ ಯಾವ ಅನುದಾನವನ್ನೂ ಸರ್ಕಾರ ನೀಡಿಲ್ಲ. ಶಿರಾಡಿ ಘಾಟ್ ಬಗ್ಗೆ ಸರ್ಕಾರ ಸ್ಪಷ್ಟವಾಗಿ ಜನರಿಗೆ ಹೇಳಲಿ. ಟನಲ್ ಬೇಡ, ರಸ್ತೆಗೆ ತೇಪೆ ಆದರೂ ಹಾಕಿ. ಅದೂ ಆಗಲ್ಲ ಅಂದರೆ ನಾವು ನಮ್ಮ ಅನುದಾನ ಬಳಸಿ ತೇಪೆ ಕಾರ್ಯ ಮಾಡುತ್ತೇವೆ ಎಂದರು.

ಇದನ್ನೂ ಓದಿ: ಹಿಂದುತ್ವ, ಮನುವಾದದ ವಿರೋಧಿ ಎಂದ ಸಿದ್ದರಾಮಯ್ಯ ಮೇಲೆ ಕೇಸರಿ, ಕುಂಕುಮಾಸ್ತ್ರ ಪ್ರಯೋಗಿಸಿದ ಸಚಿವ ಸಿಸಿ ಪಾಟೀಲ್

ನಾಲ್ಕುವರ್ಷಗಳಾದರೂ ತುಳುವನ್ನು ಎರಡನೇ ರಾಜ್ಯ ಭಾಷೆ ಮಾಡದ ಬಿಜೆಪಿ

ತುಳು ಭಾಷೆಯನ್ನು ರಾಜ್ಯದ ಅಧೀಕೃತ ಭಾಷೆಯನ್ನಾಗಿ ಘೋಷಿಸುವ ವಿಚಾರವಾಗಿ ಮಾತನಾಡಿದ ಖಾದರ್, ಬಿಜೆಪಿ ಶಾಸಕರು ಅಧಿಕಾರಕ್ಕೆ ಬಂದು ನಾಲ್ಕುವರ್ಷಗಳಾದರೂ ಈವರೆಗೆ ಎರಡನೇ ರಾಜ್ಯ ಭಾಷೆಯನ್ನಾಗಿ ಮಾಡಲಿಲ್ಲ. ಈಗ ಚುನಾವಣೆ ಹತ್ತಿರ ಬರುತ್ತಿದ್ದಂತೆ ಜನರ ಆಕ್ರೋಶ ತಪ್ಪಿಸಲು ಮೋಸ ಮಾಡುತ್ತಿದ್ದಾರೆ. ಸರ್ಕಾರ ಅಧ್ಯಯನ ಸಮಿತಿ ಮಾಡಿರುವುದೇ ತುಳು ಭಾಷೆಗೆ ಮಾಡಿರುವ ಅವಮಾನ. ತುಳು ಭಾಷೆಗೆ ಅದರದ್ದೇ ಆದ ಇತಿಹಾಸವಿದೆ. ಈ ಭಾಷೆಯ ಅಧ್ಯಯನ ಮಾಡಿ ವರದಿ ಕೊಡುವ ಅವಶ್ಯಕತೆ ಏನಿತ್ತು? ಇದು ಜನರಿಗೆ ಮೋಸ ಮಾಡುವ ತಂತ್ರ ಆಗಿದೆ ಎಂದರು.

ರಾಜಕೀಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:01 pm, Mon, 6 February 23

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು