ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಹಾಗೂ ಪುತ್ತೂರಿಗೆ (Amit Shah Visit To Mangaluru And Puttur) ಇಂದು (ಫೆಬ್ರವರಿ 11) ಬಿಜೆಪಿ ಚಾಣಕ್ಯ ಎಂದೇ ಖ್ಯಾತಿ ಪಡೆದಿರುವ ಕೇಂದ್ರ ಗೃಹಸಚಿವ ಅಮಿತ್ ಶಾ (Amit Shah) ಅವರು ಭೇಟಿ ನೀಡಲಿದ್ದಾರೆ. ಈ ಹಿನ್ನೆಲೆ ಪುತ್ತೂರು ವಲಯ ವ್ಯಾಪ್ತಿಯಲ್ಲಿ ಇಂದು ಮದ್ಯದ ಅಂಗಡಿಗಳಿಗೆ ಹಾಗೂ ಮದ್ಯ ಮಾರಾಟಕ್ಕೆ ನಿಷೇಧ ಹೇರಿ ಜಿಲ್ಲಾಧಿಕಾರಿ ಎಂ.ಆರ್.ರವಿಕುಮಾರ್ ಆದೇಶ ಹೊರಡಿಸಿದ್ದಾರೆ. ಆದೇಶದ ಪ್ರಕಾರ, ಇಂದು ಮಧ್ಯಾಹ್ನ 12ರಿಂದ ರಾತ್ರಿ 8ರವರೆಗೆ ಮದ್ಯ ಮಾರಾಟ ಮಾಡುವಂತಿಲ್ಲ. ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಜಿಲ್ಲಾಧಿಕಾರಿಯವರು ಈ ಆದೇಶ ಹೊರಡಿಸಿದ್ದಾರೆ.
ಪುತ್ತೂರಿನ ಪ್ರತಿಷ್ಠಿತ ಕ್ಯಾಂಪ್ಕೋ ಸಂಸ್ಥೆಯ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗುವ ಸಲುವಾಗಿ ಕೇಂದ್ರ ಸಚಿವ ಅಮಿತ್ ಶಾ ನಾಳೆ ಶನಿವಾರ ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಲಿದ್ದಾರೆ. ರಾಜ್ಯದಲ್ಲಿ ಚುನಾವಣೆ ಸಮೀಪಿಸುತ್ತಿದೆ. ಹೀಗಾಗಿ ಪ್ರಬಲ ನಾಯಕರ ಹೆಸರಲ್ಲಿ ತನ್ನ ಭದ್ರಕೋಟೆಗಳನ್ನು ಉಳಿಸಿಕೊಳ್ಳುವ ಸಾಹಸ ಮಾಡುತ್ತಿರುವ ಬಿಜೆಪಿ ಕರಾವಳಿ ಜಿಲ್ಲೆಗೆ ಅಮಿತ್ ಶಾ ಭೇಟಿಗೆ ರತ್ನಗಂಬಳಿ ಹಾಸಿದೆ.
ಇದನ್ನೂ ಓದಿ: ಅಮಿತ್ ಶಾ ಕಾರ್ಯಕ್ರಮಕ್ಕೆ ಬಿಗಿ ಭದ್ರತೆ, 11 ಕೆಎಸ್ಆರ್ಪಿ ತುಕಡಿ, 1 ಸಾವಿರ ಪೊಲೀಸ್ ಸಿಬ್ಬಂದಿ ನಿಯೋಜನೆ: ಎಡಿಜಿಪಿ ಅಲೋಕ್
ರಾಜ್ಯ ವಿಧಾನಸಭಾ ಚುನಾವಣೆಯನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿರುವ ಬಿಜೆಪಿ ಹೈಕಮಾಂಡ್ ಕರ್ನಾಟಕದಲ್ಲಿ ಪ್ರಚಾರ ಕಾರ್ಯವನ್ನು ನಡೆಸುವ ಯಾವುದೇ ಸಣ್ಣ ಅವಕಾಶವೂ ತಪ್ಪಿಹೋಗಲು ಬಿಡುತ್ತಿಲ್ಲ. ಪ್ರಧಾನಿ ಮೋದಿ, ಅಮಿತ್ ಶಾ ಜಿದ್ದಿಗೆ ಬಿದ್ದವರಂತೆ ಕರ್ನಾಟಕಕ್ಕೆ ಬರುತ್ತಲೇ ಇದ್ದಾರೆ.
ಅಮಿತ್ ಶಾ ಮಂಗಳೂರು ಭೇಟಿ ವೇಳಾಪಟ್ಟಿ ಫೆಬ್ರುವರಿ 11, ಶನಿವಾರ ಮಧ್ಯಾಹ್ನ 2.15 ಕಣ್ಣೂರು ವಿಮಾನ ನಿಲ್ದಾಣಕ್ಕೆ ಅಮಿತ್ ಶಾ ಆಗಮನ. ಮಧ್ಯಾಹ್ನ 2.45 ಕಣ್ಣೂರಿನಿಂದ ಬಿಎಸ್ಎಫ್ ಹೆಲಿಕಾಪ್ಟರ್ ಮೂಲಕ ಪುತ್ತೂರಿನ ಈಶ್ವರ ಮಂಗಲಕ್ಕೆ ಆಗಮನ. ಮಧ್ಯಾಹ್ನ 2.50 ಈಶ್ವರಮಂಗಲ ದೇವಸ್ಥಾನಕ್ಕೆ ಅಮಿತ್ ಶಾ ಭೇಟಿ ಮಧ್ಯಾಹ್ನ 3.35 ಹೆಲಿಕಾಪ್ಟರ್ ಮೂಲಕ ಈಶ್ವರ ಮಂಗಲದಿಂದ ಪುತ್ತೂರಿಗೆ ಆಗಮನ. ಮಧ್ಯಾಹ್ನ 3.40: ಪ್ರತಿಷ್ಠಿತ ಕ್ಯಾಂಪ್ಕೋ ಸಂಸ್ಥೆಯ ಸುವರ್ಣ ಮಹೋತ್ಸವದ ಸಮಾರಂಭದಲ್ಲಿ ಭಾಗಿ ಸಂಜೆ 6.00: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಅಮಿತ್ ಶಾ ಆಗಮನ ಸಂಜೆ 6:15 ರಿಂದ 8:00 : ಏರ್ಪೋರ್ಟ್ ಸಮೀಪ ಬಿಜೆಪಿ ಪ್ರಮುಖರೊಂದಿಗೆ ಆಂತರಿಕ ಸಭೆ ರಾತ್ರಿ 8:15 : ಮಂಗಳೂರು ಏರ್ಪೋರ್ಟ್ನಿಂದ ದೆಹಲಿಗೆ ಪ್ರಯಾಣ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 6:34 am, Sat, 11 February 23