ರಾಜ್ಯ ಬಿಜೆಪಿ ನಾಯಕರೊಂದಿಗೆ ನಾಳೆ ಅಮಿತ್ ಶಾ ಮಹತ್ವದ ಸಭೆ; ಮಂಡ್ಯ ಕ್ಷೇತ್ರದ ಚರ್ಚೆ ಸಾಧ್ಯತೆ ಇದೆ ಎಂದ ವಿಜಯೇಂದ್ರ

ವಿಧಾನಸಭೆ ಚುನಾವಣೆಯಲ್ಲಿನ ಸೋಲಿನ ಬಳಿಕ ಲೋಕಸಭೆ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನಗಳನ್ನು ಗೆಲ್ಲಲು ಬಿಜೆಪಿ ರಣತಂತ್ರ ರೂಪಿಸುತ್ತಿದ್ದು, ಇಂದು ರಾತ್ರಿ ಬಿಜೆಪಿ ಚಾಣಕ್ಯ ಎಂದೇ ಹೆಸರಾಗಿರುವ ಕೇಂದ್ರ ಗೃಹಸಚಿವ ಅಮಿತ್ ಶಾ ಅವರು ಮೈಸೂರಿಗೆ ಆಗಮಿಸಲಿದ್ದು, ನಾಳೆ ಮಹತ್ವದ ಸಭೆ ನಡೆಯಲಿದೆ. ಈ ಬಗ್ಗೆ ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ಬಿವೈ ವಿಜಯೇಂದ್ರ ಮಾಹಿತಿ ನೀಡಿದ್ದಾರೆ.

ರಾಜ್ಯ ಬಿಜೆಪಿ ನಾಯಕರೊಂದಿಗೆ ನಾಳೆ ಅಮಿತ್ ಶಾ ಮಹತ್ವದ ಸಭೆ; ಮಂಡ್ಯ ಕ್ಷೇತ್ರದ ಚರ್ಚೆ ಸಾಧ್ಯತೆ ಇದೆ ಎಂದ ವಿಜಯೇಂದ್ರ
ರಾಜ್ಯ ಬಿಜೆಪಿ ನಾಯಕರೊಂದಿಗೆ ನಾಳೆ ಅಮಿತ್ ಶಾ ಮಹತ್ವದ ಸಭೆ; ಮಂಡ್ಯ ಕ್ಷೇತ್ರದ ಚರ್ಚೆ ಸಾಧ್ಯತೆ ಇದೆ ಎಂದ ವಿಜಯೇಂದ್ರ
Follow us
ರಾಮ್​, ಮೈಸೂರು
| Updated By: Rakesh Nayak Manchi

Updated on: Feb 10, 2024 | 8:57 PM

ಮೈಸೂರು, ಫೆ.10: ವಿಧಾನಸಭೆ ಚುನಾವಣೆಯಲ್ಲಿನ ಸೋಲಿನ ಬಳಿಕ ಲೋಕಸಭೆ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನಗಳನ್ನು ಗೆಲ್ಲಲು ಬಿಜೆಪಿ ರಣತಂತ್ರ ರೂಪಿಸುತ್ತಿದ್ದು, ಇಂದು ರಾತ್ರಿ ಬಿಜೆಪಿ ಚಾಣಕ್ಯ ಎಂದೇ ಹೆಸರಾಗಿರುವ ಕೇಂದ್ರ ಗೃಹಸಚಿವ ಅಮಿತ್ ಶಾ (Amit Shah) ಅವರು ಮೈಸೂರಿಗೆ ಆಗಮಿಸಲಿದ್ದು, ನಾಳೆ ಮಹತ್ವದ ಸಭೆ ನಡೆಯಲಿದೆ. ಈ ಬಗ್ಗೆ ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ಬಿವೈ ವಿಜಯೇಂದ್ರ (BY Vijayendra) ಮಾಹಿತಿ ನೀಡಿದ್ದಾರೆ.

ಮೈಸೂರಿನಲ್ಲಿ ಟಿವಿ9 ಜೊತೆ ಮಾತನಾಡಿದ ವಿಜಯೇಂದ್ರ, ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ನಾಳಿನ ಸಭೆ ಮಹತ್ವದ್ದಾಗಿದೆ. ಸಭೆಯಲ್ಲಿ ಬಿಜೆಪಿಯ ಪ್ರಮುಖ ಮುಖಂಡರು ಭಾಗಿಯಾಗಲಿದ್ದಾರೆ. ಆದರೆ ಶಿವಮೊಗ್ಗದಲ್ಲಿ ಪೂರ್ವನಿಯೋಜಿತ ಕಾರ್ಯಕ್ರಮ ಇರುವ ಹಿನ್ನೆಲೆ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಭಾಗಿಯಾಗುತ್ತಿಲ್ಲ ಎಂದರು.

ಮಂಡ್ಯ ಕ್ಷೇತ್ರ ಸಹ ನಮಗೆ ಮಹತ್ವವಾದ್ದಾಗಿದೆ ಎಂದ ವಿಜಯೇಂದ್ರ, ನಾಳಿನ ಸಭೆಯಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರದ ವಿಚಾರ ಚರ್ಚೆ ಆದರೂ ಆಗಬಹುದು. ಉಳಿದಂತೆ, ಟಿಕೆಟ್​​ ಆಕಾಂಕ್ಷಿಗಳ ಕುರಿತು ಯಾವುದೇ ಚರ್ಚೆ ಇರುವುದಿಲ್ಲ. ಈಗಾಗಲೇ ಗೆಲ್ಲುವ ಅಭ್ಯರ್ಥಿಗಳ ಬಗ್ಗೆ ವರಿಷ್ಠರ ಬಳಿ ಮಾಹಿತಿ ಇದ್ದು, ವರಿಷ್ಠರು ಸೂಕ್ತ ಕಾಲದಲ್ಲಿ ನಿರ್ಣಯ ತೆಗೆದುಕೊಳ್ಳುತ್ತಾರೆ ಎಂದರು.

ಇದನ್ನೂ ಓದಿ: ಸುಧಾಕರ್ ಚಿಕ್ಕಬಳ್ಳಾಪುರದಿಂದ ಲೋಕಸಭೆಗೆ ಸ್ಪರ್ಧಿಸಲಿಚ್ಛಿಸಿದ್ದರೆ ತಪ್ಪೇನೂ ಇಲ್ಲ: ಬಿವೈ ವಿಜಯೇಂದ್ರ, ಬಿಜೆಪಿ ರಾಜ್ಯಾಧ್ಯಕ್ಷ

ರಾಜ್ಯ ಸರ್ಕಾರದ ಕಾರ್ಯ ವೈಖರಿಯಿಂದ ಜನರು ನಿರಾಶರಾಗಿದ್ದಾರೆ. ಬಡವರ ವಿರೋಧಿ, ರೈತ ವಿರೋಧಿ ಸರ್ಕಾರದ ಬಗ್ಗೆ ಜನ ಬೇಸತ್ತಿದ್ದಾರೆ ಎಂದು ವಿಜಯೇಂದ್ರ ಹೇಳಿದ್ದಾರೆ.

ಇಂದು ರಾತ್ರಿ 11 ಗಂಟೆ ಸುಮಾರಿಗೆ ಅಮಿತ್ ಶಾ ಅವರು ಮೈಸೂರಿನ ಮಂಡಕಹಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ಇಲ್ಲಿಂದ ರಸ್ತೆ ಮಾರ್ಗದ ಮೂಲಕ ರೆಡಿಸನ್ ಬ್ಲೂ ಹೊಟೇಲ್​ಗೆ ತೆರಳಿ ವಾಸ್ತವ್ಯ ಮಾಡಲಿದ್ದಾರೆ. ಇದಕ್ಕೆ ಸಿದ್ಧತೆಗಳನ್ನು ನಡೆಸಲಾಗಿದೆ. ಅಮಿತ್ ಶಾ ಭಾವಚಿತ್ರದ ಊಟ, ತಿಂಡಿ ಮೆನುಕಾರ್ಡ್ ಸಿದ್ಧಪಡಿಸಲಾಗಿದೆ. ಜೊತೆಗೆ, ಅಮಿತ್ ಶಾ ಅವರ ಭಾವಚಿತ್ರವಿರುವ ಕರವಸ್ತ್ರ, ಟವೆಲ್​ಗಳನ್ನು ಸಿದ್ಧಪಡಿಸಲಾಗಿದೆ.

ಖಾಕಿ ಸರ್ಪಗಾವಲು

ಅಮಿತ್ ಶಾ ಸಂಚರಿಸುವ ಮಾರ್ಗದಲ್ಲಿ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದ್ದು, ಉಳಿದುಕೊಳ್ಳುವ ಹೊಟೇಲ್​ ಕೊಠಡಿಗಳನ್ನು ಪೊಲೀಸರು ತಪಾಸಣೆ ನಡೆಸಿದ್ದಾರೆ. ಹೊಟೇಲ್ ಸುತ್ತಮುತ್ತ ಪೊಲೀಸರನ್ನು ನಿಯೋಜಿಸಲಾಗಿದೆ.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್
Results: ಹಣ ಹಂಚಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ: ಬಂಗಾರು ಹನುಮಂತು
Results: ಹಣ ಹಂಚಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ: ಬಂಗಾರು ಹನುಮಂತು
ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ
ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ