AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖಾತೆ ಬದಲಾವಣೆಗೆ ಬಿಗಿಪಟ್ಟು; ಧ್ವಜಾರೋಹಣ ಬಳಿಕ ಬೆಂಗಳೂರಿಗೆ ತೆರಳಲಿರುವ ಆನಂದ್ ಸಿಂಗ್

Anand Singh: ಸಿಎಂ ಬಸವರಾಜ ಬೊಮ್ಮಾಯಿ ಯಾವ ನಿರ್ಧಾರ ಕೈಗೊಳ್ಳುತ್ತಾರೆ ಕಾದು ನೋಡೋಣ ಎಂದು ಹೇಳಿರುವ ಆನಂದ್ ಸಿಂಗ್, ಖಾತೆ ಬದಲಾವಣೆ ಮಾಡಲೇಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಳಿ ಬೇಡಿಕೆ ಇಟ್ಟಿದ್ದಾರೆ.

ಖಾತೆ ಬದಲಾವಣೆಗೆ ಬಿಗಿಪಟ್ಟು; ಧ್ವಜಾರೋಹಣ ಬಳಿಕ ಬೆಂಗಳೂರಿಗೆ ತೆರಳಲಿರುವ ಆನಂದ್ ಸಿಂಗ್
ಆನಂದ್ ಸಿಂಗ್
TV9 Web
| Edited By: |

Updated on:Aug 14, 2021 | 4:32 PM

Share

ಬಳ್ಳಾರಿ: ಖಾತೆ ಬದಲಾವಣೆಗೆ ಆನಂದ್ ಸಿಂಗ್ ಬಿಗಿಪಟ್ಟು ಹಿಡಿದಿರುವ ವಿಚಾರ ರಾಜಕೀಯ ವಲಯದಲ್ಲಿ ಕಳೆದ ಕೆಲವು ದಿನಗಳಿಂದ ಚರ್ಚೆಯಾಗುತ್ತಿದೆ. ವಿಜಯನಗರ ಜಿಲ್ಲೆ ಹೊಸಪೇಟೆಯಲ್ಲಿರುವ ಆನಂದ್​ ಸಿಂಗ್​ ಇಂದು (ಆಗಸ್ಟ್ 14) ಮನೆಯಿಂದ ಹೊರಗೆ ಬಂದಿಲ್ಲ. ನಾಳೆ, ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ವಿಜಯನಗರ ನೂತನ ಜಿಲ್ಲೆಯಲ್ಲಿ ಧ್ವಜಾರೋಹಣ ನಡೆಯಲಿದೆ. ಅಲ್ಲಿ ಧ್ವಜಾರೋಹಣ ನಡೆಸಿ ಆ ಬಳಿಕ ಆನಂದ್ ಸಿಂಗ್ ಬೆಂಗಳೂರಿಗೆ ತೆರಳಲಿದ್ದಾರೆ ಎಂದು ತಿಳಿದುಬಂದಿದೆ. ಖಾತೆ ಬದಲಾವಣೆಗೆ ಬೇಡಿಕೆ ಇಟ್ಟಿರುವ ಆನಂದ್​ ಸಿಂಗ್ ಬೆಂಗಳೂರಿಗೆ ತೆರಳಲಿದ್ದಾರೆ.

ಸಿಎಂ ಬಸವರಾಜ ಬೊಮ್ಮಾಯಿ ಯಾವ ನಿರ್ಧಾರ ಕೈಗೊಳ್ಳುತ್ತಾರೆ ಕಾದು ನೋಡೋಣ ಎಂದು ಹೇಳಿರುವ ಆನಂದ್ ಸಿಂಗ್, ಖಾತೆ ಬದಲಾವಣೆ ಮಾಡಲೇಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಳಿ ಬೇಡಿಕೆ ಇಟ್ಟಿದ್ದಾರೆ. ಸ್ವಾತಂತ್ರ್ಯ ದಿನಾಚರಣೆಯ ಬಳಿಕ ರಾಜಕೀಯ ವಲಯದಲ್ಲಿ ಏನಾಗಲಿದೆ ಎಂದು ಕಾದುನೋಡಬೇಕಿದೆ.

ಖಾತೆ ಬದಲಾವಣೆಗೆ ಮನವಿ ಮಾಡಿದ್ದು ನಿಜ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಸಚಿವ ಆನಂದ್ ಸಿಂಗ್ ನಡುವಿನ ಸಂಧಾನ ಸಭೆ ಯಶಸ್ವಿಯಾಗಿದ್ದು, ರಾಜೀನಾಮೆ ನೀಡುವ ಬಗ್ಗೆ ನಾನು ಎಂದೂ ಹೇಳಿಲ್ಲ. ಖಾತೆ ಬದಲಾವಣೆಗಾಗಿ ನಾನು ಮನವಿ ಮಾಡಿದ್ದು ನಿಜ. ಸಿಎಂ ಬಸವರಾಜ್‌ ಬೊಮ್ಮಾಯಿ (Basavaraj Bommai) ವರಿಷ್ಠರೊಂದಿಗೆ ಚರ್ಚಿಸಿ ತಿಳಿಸುವುದಾಗಿ ಭರವಸೆ ನೀಡಿದ್ದಾರೆ. ಸಿಎಂ ಭರವಸೆಯನ್ನು ಸ್ವೀಕರಿಸಿದ್ದೇನೆ, ಸಹಕರಿಸುತ್ತೇನೆ. ಸಹಕಾರ ತತ್ವದಡಿ ಕರ್ತವ್ಯ ನಿರ್ವಹಿಸುತ್ತೇನೆ ಎಂದು ಪರಿಸತರ ಮತ್ತು ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್ (Anand Singh) ಸುದ್ದಿಗೋಷ್ಠಿ ನಡೆಸಿ ಈ ಮೊದಲು ತಿಳಿಸಿದ್ದರು.

ಖಾತೆ ಬದಲಾವಣೆಗೆ ಆನಂದ್​ ಸಿಂಗ್ ಒತ್ತಾಯಿಸಿದ್ದು ನಿಜ. ಆದರೆ ನಾವು ಕ್ಲಿಷ್ಟ ಪರಿಸ್ಥಿತಿಯಲ್ಲಿ ಕೆಲಸ ಮಾಡುತ್ತಿದ್ದೇವೆ. ಮಾತುಕತೆ ವೇಳೆ ಅವರಿಗೆ ಮನವರಿಕೆ ಮಾಡಿದ್ದೇನೆ. ವರಿಷ್ಠರ ಗಮನಕ್ಕೆ ತಂದು ಬಗೆಹರಿಸುತ್ತೇವೆ. ಆನಂದ್ ಸಿಂಗ್ ಅಸಮಾಧಾನ ವಿಚಾರ ಸದ್ಯಕ್ಕೆ ಸುಖಾಂತ್ಯವಾಗಿದೆ. ನಾವೆಲ್ಲರೂ ಒಗ್ಗೂಡಿ ಪಕ್ಷ ಬಲವರ್ಧನೆಗೆ ಶ್ರಮಿಸುತ್ತೇವೆ. ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಹ ಸಂಧಾನ ಸಭೆಯ ನಂತರ ಸುದ್ದಿಗಾರರಿಗೆ ಸ್ಪಷ್ಟಪಡಿಸಿದ್ದರು. ವಿಜಯನಗರದಲ್ಲಿ ಸಚಿವ ಆನಂದ್ ಸಿಂಗ್ ಅವರೇ ಧ್ವಜಾರೋಹಣ ಮಾಡಲಿದ್ದಾರೆ ಎಂದು ಸಹ ಅವರು ತಿಳಿಸಿದ್ದರು.

ಇದನ್ನೂ ಓದಿ: ನಿಮಗೆ ಪ್ರವಾಸೋದ್ಯಮ ಖಾತೆ ಬೇಡ, ನಮಗೆ ನೀವೇ ಬೇಡ; ಸಾಮಾಜಿಕ ಜಾಲತಾಣಗಳಲ್ಲಿ ಆನಂದ್ ಸಿಂಗ್ ವಿರುದ್ಧ ಅಭಿಯಾನ

ಬ್ಲಾಕ್‌ಮೇಲ್‌ ತಂತ್ರ ಮಾಡುವುದಿಲ್ಲ, ನೇರವಾಗಿ ಕೇಳುತ್ತೇನೆ: ಸಚಿವ ಆನಂದ್ ಸಿಂಗ್

Published On - 4:31 pm, Sat, 14 August 21

ಕನ್ಯಾಕುಮಾರಿಯಲ್ಲಿ 2025ರ ಕೊನೆಯ ಸೂರ್ಯಾಸ್ತದ ನೋಡಲು ಆಗಮಿಸಿದ ಜನಸಾಗರ
ಕನ್ಯಾಕುಮಾರಿಯಲ್ಲಿ 2025ರ ಕೊನೆಯ ಸೂರ್ಯಾಸ್ತದ ನೋಡಲು ಆಗಮಿಸಿದ ಜನಸಾಗರ
ನ್ಯೂಇಯರ್ ಸೆಲೆಬ್ರೇಷನ್​​​ ಮುನ್ನ ಮಳೆ ಎಂಟ್ರಿ: ಪಾರ್ಟಿ ಪ್ರಿಯರಿಗೆ ಶಾಕ್!​
ನ್ಯೂಇಯರ್ ಸೆಲೆಬ್ರೇಷನ್​​​ ಮುನ್ನ ಮಳೆ ಎಂಟ್ರಿ: ಪಾರ್ಟಿ ಪ್ರಿಯರಿಗೆ ಶಾಕ್!​
ಅಭಿಮಾನಿಗಳ ಜೊತೆ ಸಿನಿಮಾ ನೋಡುತ್ತಿರುವ ಉದ್ದೇಶ ಏನು? ಸುದೀಪ್ ಉತ್ತರ
ಅಭಿಮಾನಿಗಳ ಜೊತೆ ಸಿನಿಮಾ ನೋಡುತ್ತಿರುವ ಉದ್ದೇಶ ಏನು? ಸುದೀಪ್ ಉತ್ತರ
ಕಳೆದು ಹೋಗಿದ್ದ ಬಾಲಕಿಯನ್ನು ಮರಳಿ ತಾಯಿ ಮಡಿಲಿಗೆ ಸೇರಿಸಿದ ಪೊಲೀಸರು
ಕಳೆದು ಹೋಗಿದ್ದ ಬಾಲಕಿಯನ್ನು ಮರಳಿ ತಾಯಿ ಮಡಿಲಿಗೆ ಸೇರಿಸಿದ ಪೊಲೀಸರು
ನನ್ನ ಮಗಳು ಸರಿಯಾಗಿಯೇ ಹೇಳಿದ್ದಾಳೆ: ಸುದೀಪ್
ನನ್ನ ಮಗಳು ಸರಿಯಾಗಿಯೇ ಹೇಳಿದ್ದಾಳೆ: ಸುದೀಪ್
ಸ್ಟ್ರೋಕ್ ಗೆ ಒಳಗಾದವರನ್ನು ಎಷ್ಟು ಸಮಯದೊಳಗೆ ಆಸ್ಪತ್ರೆಗೆ ದಾಖಲಿಸಬೇಕು?
ಸ್ಟ್ರೋಕ್ ಗೆ ಒಳಗಾದವರನ್ನು ಎಷ್ಟು ಸಮಯದೊಳಗೆ ಆಸ್ಪತ್ರೆಗೆ ದಾಖಲಿಸಬೇಕು?
ಇಂದೋರ್‌ನಲ್ಲಿ ಕಲುಷಿತ ನೀರು ಕುಡಿದು 7 ಜನ ಸಾವು; ಆಸ್ಪತ್ರೆಗೆ ಸಿಎಂ ಭೇಟಿ
ಇಂದೋರ್‌ನಲ್ಲಿ ಕಲುಷಿತ ನೀರು ಕುಡಿದು 7 ಜನ ಸಾವು; ಆಸ್ಪತ್ರೆಗೆ ಸಿಎಂ ಭೇಟಿ
ಬಸ್ಸಿನಲ್ಲಿ ನಿದ್ದೆಗೆ ಜಾರಿದ್ದ ವೇಳೆ ಯುವತಿಯ ಎದೆ ಮೇಲೆ ಕೈ ಇಟ್ಟ ಯುವಕ
ಬಸ್ಸಿನಲ್ಲಿ ನಿದ್ದೆಗೆ ಜಾರಿದ್ದ ವೇಳೆ ಯುವತಿಯ ಎದೆ ಮೇಲೆ ಕೈ ಇಟ್ಟ ಯುವಕ
ಪುರಿ ಜಗನ್ನಾಥ ದೇವಸ್ಥಾನದಲ್ಲಿ ಈ ವರ್ಷದ ಕೊನೆಯ ಸೂರ್ಯಾಸ್ತ ಕಂಡಿದ್ದು ಹೀಗೆ
ಪುರಿ ಜಗನ್ನಾಥ ದೇವಸ್ಥಾನದಲ್ಲಿ ಈ ವರ್ಷದ ಕೊನೆಯ ಸೂರ್ಯಾಸ್ತ ಕಂಡಿದ್ದು ಹೀಗೆ
ಬೆಂಗಳೂರಲ್ಲಿ ಪಬ್​​ಗಳತ್ತ ಮುಖ ಮಾಡಿದ ಜನ: ಸಿಲಿಕಾನ್​​ ಸಿಟಿ ಫುಲ್​​ ಝಗಮಗ
ಬೆಂಗಳೂರಲ್ಲಿ ಪಬ್​​ಗಳತ್ತ ಮುಖ ಮಾಡಿದ ಜನ: ಸಿಲಿಕಾನ್​​ ಸಿಟಿ ಫುಲ್​​ ಝಗಮಗ