AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಮ್ಮ ಎದೆ ಬಗೆದರೆ ರಾಮನೂ ಕಾಣ್ತಾನೆ, ಸಿದ್ದರಾಮಯ್ಯನೂ ಕಾಣ್ತಾರೆ: ಪ್ರದೀಪ್ ಈಶ್ವರ್

ಬಾಬ್ರಿ ಮಸೀದಿ ನಿರ್ನಾಮವಾದಂತೆ ಭಟ್ಕಳದಲ್ಲಿ ಚಿನ್ನದ ಪಳ್ಳಿಯೂ ಆಗುತ್ತದೆ ಎಂದು ಬಿಜೆಪಿ ಸಂಸದ ಅನಂತಕುಮಾರ್ ಹೆಗಡೆ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಈ ಸಂಬಂಧ ಹೆಗಡೆ ವಿರುದ್ಧ ಪ್ರಕರಣ ದಾಖಲಾಗಿದೆ. ಹೇಳಿಕೆ ಬಗ್ಗೆ ಆಕ್ರೋಶ ಹೊರಹಾಕಿದ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್, ನಿಮ್ಮ ನಾಲಗೆ ಹಿಡಿತದಲ್ಲಿರಲಿ ಎಂದು ಎಚ್ಚರಿಕೆ ನೀಡಿದ್ದಾರೆ. ನಮ್ಮ ಎದೆ ಬಗೆದರೆ ರಾಮನೂ ಕಾಣ್ತಾನೆ, ಸಿದ್ದರಾಮಯ್ಯನೂ ಕಾಣ್ತಾರೆ ಎಂದಿದ್ದಾರೆ.

ನಮ್ಮ ಎದೆ ಬಗೆದರೆ ರಾಮನೂ ಕಾಣ್ತಾನೆ, ಸಿದ್ದರಾಮಯ್ಯನೂ ಕಾಣ್ತಾರೆ: ಪ್ರದೀಪ್ ಈಶ್ವರ್
ಅನಂತಕುಮಾರ್ ಹೆಗಡೆ ವಿರುದ್ಧ ಪ್ರದೀಪ್ ಈಶ್ವರ್ ವಾಗ್ದಾಳಿ
ಪ್ರಸನ್ನ ಗಾಂವ್ಕರ್​
| Edited By: |

Updated on:Jan 14, 2024 | 3:04 PM

Share

ಬೆಂಗಳೂರು, ಜ.14: ಬಾಬ್ರಿ ಮಸೀದಿ ನಿರ್ನಾಮವಾದಂತೆ ಭಟ್ಕಳದಲ್ಲಿ ಚಿನ್ನದ ಪಳ್ಳಿಯೂ ಆಗುತ್ತದೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ ಬಿಜೆಪಿ ಸಂಸದ ಅನಂತಕುಮಾರ್ ಹೆಗಡೆ (Ananth Kumar Hegde) ವಿರುದ್ಧ ವಾಗ್ದಾಳಿ ನಡೆಸಿದ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ (Pradeep Eshwar), ನಾಲಗೆ ಹಿಡಿತದಲ್ಲಿರಲಿ ಎಂದು ಎಚ್ಚರಿಕೆ ನೀಡಿದ್ದಾರೆ. ಅಲ್ಲದೆ, ನಮ್ಮ ಎದೆ ಬಗೆದರೆ ರಾಮನೂ ಕಾಣ್ತಾನೆ, ಸಿದ್ದರಾಮಯ್ಯನೂ ಕಾಣ್ತಾರೆ ಎಂದಿದ್ದಾರೆ.

ಅನಂತಕುಮಾರ್ ಹೆಗಡೆ ನಿಮ್ಮ ನಾಲಗೆ ಹಿಡಿತದಲ್ಲಿರಲಿ. ಹಿಂದೂ ಧರ್ಮ ನಿಮ್ಮ ಅಪ್ಪನ ಮನೆ ಸ್ವತ್ತಾ ಎಂದು ಪ್ರಶ್ನಿಸಿದ ಪ್ರದೀಪ್ ಈಶ್ವರ್, ಹಿಂದೂ ಧರ್ಮ ನಿಮ್ಮಪ್ಪನ ಮನೆ ಆಸ್ತಿ ತರ ಆಡುತ್ತಿದ್ದೀರಲ್ಲ, ನಾಲಗೆ ಕಂಟ್ರೋಲ್​ನಲ್ಲಿ ಇಟ್ಟುಕೊಳ್ಳಿ ಹೆಗಡೆಯವರೇ ಎಂದು ಎಚ್ಚರಿಕೆ ನೀಡಿದರು.

ಇದನ್ನೂ ಓದಿ: ಪ್ರಚೋದನಾಕರಿ ಹೇಳಿಕೆ: ಬಿಜೆಪಿ ಸಂಸದ ಅನಂತ ಕುಮಾರ್ ಹೆಗಡೆ ವಿರುದ್ಧ ಸುವೋಟೊ ಕೇಸ್ ದಾಖಲು

ನೀವು ಒಂದು ಮಾತಾಡಿದರೆ ನಾವು ನಾಲ್ಕು ಮಾತಾಡುತ್ತೇವೆ. ಬನ್ನಿ ಈ ಫೈಟ್ ಎಲ್ಲಿಗೆ ಹೋಗಿ ನಿಲ್ಲುತ್ತದೆ ನೋಡೋಣ. ಬಿಜೆಪಿಯಲ್ಲಿ ಟಿಕೇಟ್ ಸಿಗಲ್ಲ ಎನ್ನೋದು ಗೊತ್ತಾಗಿದೆ. ಇವರ ಬಾಯಿ ಚಪಲದಿಂದ ಹಿಂದೆ ಮಂತ್ರಿಗಿರಿ ಕಳೆದುಕೊಂಡರು. ಬಾಯಿಗೆ ಬಂದಂತೆ ಮಾತಾಡುತ್ತಿದ್ದರೆ ನಾವು ನೋಡಿಕೊಂಡು ಸುಮ್ಮನೆ ಇರಬೇಕಾ? ಮನ್ ಕಿ ಬಾತ್ ಜೊತೆಗೆ ಕಾಮ್ ಕಿ ಬಾತ್ ಮಾತಾಡೋಣ ಬನ್ನಿ ಎಂದರು.

ಪ್ರಚೋದನೆಯಿಂದ ಏನಾದರು ಹೆಚ್ಚು ಕಡಿಮೆ ಆದರೆ ಹೆಗಡೆ ಬರುತ್ತಾರಾ? ನಮ್ಮ ಸರ್ಕಾರ ಕಠಿಣ ಕ್ರಮ ತೆಗೆದುಕೊಳ್ಳಬೇಕು. ಅವರನ್ನು ಒಳಗೆ ಹಾಕಬೇಕು ಎಂದು ಹೇಳಿದ ಪ್ರದೀಪ್ ಈಶ್ವರ್, ನಾವೂ ಹಿಂದೂ ಧರ್ಮದವರೇ. ನಮಗೂ ಶ್ರೀರಾಮನ ಮೇಲೆ ನಂಬಿಕೆ ಇದೆ. ಹೆಗಡೆಯವರೇ ನಮ್ಮ ಎದೆ ಬಗೆದರೆ ರಾಮನೂ ಕಾಣುತ್ತಾನೆ. ಸಿದ್ದರಾಮಯ್ಯನೂ ಕಾಣುತ್ತಾರೆ, ಡಾ.ಅಂಬೇಡ್ಕರ್​​, ಸಿದ್ದಗಂಗಾ ಶ್ರೀಗಳು ಸಹ ಕಾಣುತ್ತಾರೆ.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:03 pm, Sun, 14 January 24