ಸಿದ್ದರಾಮಯ್ಯನವರಿಗೆ ಧಮ್​ ಇದ್ರೆ ಹಿಂದೂ ರಾಷ್ಟ್ರ ಆಗೋದನ್ನ ತಡಿಲಿ; ಅನಂತ್ ಕುಮಾರ್ ಹೆಗ್ಡೆ

ಸಿದ್ದರಾಮಯ್ಯನವರಿಗೆ ದಮ್ಮ ಇದ್ರೆ ಹಿಂದೂ ರಾಷ್ಟ್ರ ಆಗೋದನ್ನ ತಡೆಯಲಿ. ಸಿದ್ದರಾಮಯ್ಯನವರ ದುರಂಹಕಾರಿ ಸರ್ಕಾರ ಹೆಚ್ಚು ದಿನ ಉಳಿಯುವುದಿಲ್ಲ. ಕರ್ನಾಟಕದಲ್ಲಿ ಹಿಂದು ವಿರೋಧಿ ಸರ್ಕಾರ ಇರಲು ಸಾಧ್ಯವೇ ಇಲ್ಲ. ಕಾಂಗ್ರೆಸ್​ನವರು ಬದುಕಬೇಕು ಎಂದರೇ ಮುಸ್ಲಿಂರ ಹಿಜಾಬನ್ನು ಹಿಡಿದುಕೊಂಡೇ ಓಟು ತಗೋಬೇಕು ಎಂದು ಸಂಸದ ಅನಂತ್​ ಕುಮಾರ್​ ಹೆಗಡೆ ಕಿಡಿಕಾರಿದ್ದಾರೆ.

ಸಿದ್ದರಾಮಯ್ಯನವರಿಗೆ ಧಮ್​ ಇದ್ರೆ ಹಿಂದೂ ರಾಷ್ಟ್ರ ಆಗೋದನ್ನ ತಡಿಲಿ; ಅನಂತ್ ಕುಮಾರ್ ಹೆಗ್ಡೆ
ಅನಂತ್​ ಕುಮಾರ್​ ಹೆಗಡೆ
Edited By:

Updated on: Dec 24, 2023 | 7:20 PM

ಉತ್ತರ ಕನ್ನಡ, ಡಿ.24: ಸಿದ್ದರಾಮಯ್ಯ(Siddaramaiah)ನವರಿಗೆ ದಮ್ಮ ಇದ್ರೆ ಹಿಂದೂ ರಾಷ್ಟ್ರ ಆಗೋದನ್ನ ತಡೆಯಲಿ ಎಂದು ಬಿಜೆಪಿ ಸಂಸದ ಅನಂತ್​ ಕುಮಾರ್​ ಹೆಗಡೆ (Anantkumar Hegde) ಕಿಡಿಕಾರಿದ್ದಾರೆ. ಶಿರಸಿ(Sirsi)ಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ‘ ಹಿಜಾಬಿನ ಹಿಂದೆ ತಿರುಗುವ ಈ ಸರ್ಕಾರಕ್ಕೆ ಹೆಚ್ಚು ದಿನ ಉಳಿಗಾಲವಿಲ್ಲ. ಸಿದ್ದರಾಮಯ್ಯನ ಸರ್ಕಾರ ಹುಚ್ಚು ಮಹಮದ್​ನ ಸರ್ಕಾರ. ಅಲ್ಪ ಸಂಖ್ಯಾತರ ಓಟುಗಳು ಇಲ್ಲದೇ ಕಾಂಗ್ರೆಸ್ ಬದುಕಲು ಸಾಧ್ಯವಿಲ್ಲ. ಯಾವತ್ತೂ ಕಾಂಗ್ರೆಸ್ ಬಹುಸಂಖ್ಯಾತರ ರಾಜಕಾರಣ ಮಾಡಿಲ್ಲ,ಅವರ ಮನಸ್ಸಿಗೆ ಬಂದಂತೆ ರಾಜಕಾರಣ ಮಾಡುತಿದ್ದಾರೆ ಎಂದು ಕಾಂಗ್ರೆಸ್​ ವಿರುದ್ದ ಹರಿಹಾಯ್ದಿದ್ದಾರೆ.

ಈ ರಾಜ್ಯವನ್ನು ಸಾಂಸ್ಕೃತಿಕವಾಗಿ, ಸಾಮಾಜಿಕವಾಗಿ ತೊಂದರೆಗೀಡು ಮಾಡಿದ ವ್ಯಕ್ತಿಯ ಹೆಸರನ್ನೇ ತೆಗದುಕೊಂಡು ಕಾಂಗ್ರೆಸ್ ರಾಜಕಾರಣ ಮಾಡುತ್ತೆ ಎಂದರೇ ಕಾಂಗ್ರೆಸ್​ಗೆ ಮುಂದಿನ ದಿನ ಜನತೆ ಹೇಗೆ ಉತ್ತರ ಕೊಡುತ್ತೆ ಎಂಬುದನ್ನು ಯೋಚನೆ ಮಾಡಬೇಕು. ಸಿದ್ದರಾಮಯ್ಯ ಅವರು ‘ಯಾರು ಬೇಕಾದರೂ, ಏನು ಬೇಕಾದರೂ ಡ್ರೇಸ್​ ಹಾಕಿಕೊಂಡು ಹೋಗಬಹುದು ಎಂಬ ಹೇಳಿಕೆಗೆ ಉತ್ತರಿಸಿದ ಅವರು ‘ ಇವರ ಹೇಳಿಕೆ ಮುಂದಿನ ದಿನ ಆತಂಕಕಾರಿ ಬೆಳವಣಿಗೆಗೆ ಕಾರಣ ಆಗುತ್ತೆ. ನಮ್ಮವರು ಕೇಸರಿ ಶಾಲು ಹಾಕಿಕೊಂಡು ಹೋಗುತ್ತಾರೆ, ಅವರು ಹಿಜಾಬ್ ಹಾಕಿಕೊಂಡು ಹೋಗ್ತಾರೆ ಎಂದರು.

ಇದನ್ನೂ ಓದಿ:ಹಿಜಾಬ್ ವಿವಾದ: ಅದು ಹಾಗಲ್ಲ ಅಂತ ರಾಗ ಎಳೆಯುತ್ತಾ ನಿನ್ನೆ ಹೇಳಿದ್ದನ್ನೇ ಯಾಮಾರಿಸಿಬಿಟ್ಟ ಮುಖ್ಯಮಂತ್ರಿ ಸಿದ್ದರಾಮಯ್ಯ

ಸಿದ್ದರಾಮಯ್ಯನ ದುರಂಹಕಾರಿ ಸರ್ಕಾರ ಹೆಚ್ಚು ದಿನ ಉಳಿಯುವುದಿಲ್ಲ

ಸರ್ಕಾರಕ್ಕೆ ಒಂದು ಚೌಕಟ್ಟಿನ ಕಲ್ಪನೆ ಇಲ್ಲ ಎಂದಾದರೇ ಸರ್ಕಾರ ಇದೆ ಎಂದು ಅನಿಸುವುದಿಲ್ಲ. ಸಿದ್ದರಾಮಯ್ಯನವರಿಗೆ ದಮ್ಮ ಇದ್ರೆ ಹಿಂದೂ ರಾಷ್ಟ್ರ ಆಗೋದನ್ನ ತಡೆಯಲಿ. ಸಿದ್ದರಾಮಯ್ಯನವರ ದುರಂಹಕಾರಿ ಸರ್ಕಾರ ಹೆಚ್ಚು ದಿನ ಉಳಿಯುವುದಿಲ್ಲ. ಕರ್ನಾಟಕದಲ್ಲಿ ಹಿಂದು ವಿರೋಧಿ ಸರ್ಕಾರ ಇರಲು ಸಾಧ್ಯವೇ ಇಲ್ಲ. ಕಾಂಗ್ರೆಸ್​ನವರು ಬದುಕಬೇಕು ಎಂದರೇ ಮುಸ್ಲಿಂರ ಹಿಜಾಬನ್ನು ಹಿಡಿದುಕೊಂಡೇ ಓಟು ತಗೋಬೇಕು. ಹಿಜಾಬಿನ ಹಿಂದೆ ತಿರುಗುವ ಈ ಸರ್ಕಾರಕ್ಕೆ ಹೆಚ್ಚು ದಿನ ಉಳಿಗಾಲವಿಲ್ಲ. ಕರ್ನಾಟಕದಲ್ಲಿ ಮುಂದಿನ ದಿನದಲ್ಲಿ ಬಿಜೆಪಿ ಬರುತ್ತದೆ ಎಂದು ಹೇಳಿದರು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:31 pm, Sun, 24 December 23