ಅನಂತಕುಮಾರ್​ ಹೆಗಡೆಯ ಸಂವಿಧಾನ ತಿದ್ದುಪಡಿ ಹೇಳಿಕೆ ವೈಯಕ್ತಿಕ: ಅಂತರ ಕಾಯ್ದುಕೊಂಡ ಬಿಜೆಪಿ

ಸಂವಿಧಾನದ ಬಗ್ಗೆ ಸಂಸದ ಅನಂತಕುಮಾರ್ ಹೆಗಡೆ ಅವರ ಹೇಳಿಕೆಗಳು ಅವರ ವೈಯಕ್ತಿಕ ಅಭಿಪ್ರಾಯಗಳು. ಮತ್ತು ಪಕ್ಷದ ನಿಲುವನ್ನು ಪ್ರತಿಬಿಂಬಿಸುವುದಿಲ್ಲ. ಮತ್ತು ಈ ಬಗ್ಗೆ ವಿವರಣೆಯನ್ನು ಅವರಿಂದ ಪಡೆದುಕೊಳ್ಳುತ್ತೇವೆ ಎಂದು ರಾಜ್ಯ ಬಿಜೆಪಿ ಘಟಕ ಹೇಳಿದೆ.

ಅನಂತಕುಮಾರ್​ ಹೆಗಡೆಯ ಸಂವಿಧಾನ ತಿದ್ದುಪಡಿ ಹೇಳಿಕೆ ವೈಯಕ್ತಿಕ: ಅಂತರ ಕಾಯ್ದುಕೊಂಡ ಬಿಜೆಪಿ
ಬಿಜೆಪಿ, ಅನಂತಕುಮಾರ್​ ಹೆಗಡೆ
Follow us
ವಿವೇಕ ಬಿರಾದಾರ
|

Updated on: Mar 11, 2024 | 11:13 AM

ಬೆಂಗಳೂರು ಮಾರ್ಚ್​ 10: ಸಂವಿಧಾನ ತಿದ್ದುಪಡಿ (Constitution Amendment) ಕುರಿತು ಸಂಸದ ಅನಂತ್‌ಕುಮಾರ್ ಹೆಗಡೆ (Anantkumar Hegde) ಹೇಳಿಕೆಯಿಂದ ರಾಜ್ಯ ಬಿಜೆಪಿ (BJP) ಘಟಕ ಅಂತರ ಕಾಯ್ದುಕೊಂಡಿದೆ. ಸಂಸದ ಅನಂತಕುಮಾರ್​ ಹೆಗಡೆ ಅವರ ಸಂವಿಧಾನ ತಿದ್ದುಪಡಿ (Constitution Amendment) ಹೇಳಿಕೆ ಅವರ ‘ವೈಯಕ್ತಿಕ ಅಭಿಪ್ರಾಯ’ ಮತ್ತು ಅವರಿಂದ ಈ ಬಗ್ಗೆ ವಿವರಣೆ ಪಡೆಯುವುದಾಗಿ ರಾಜ್ಯ ಬಿಜೆಪಿ ಹೇಳಿದೆ. ಈ ಕುರಿತು ರಾಜ್ಯ ಬಿಜೆಪಿ ಟ್ವೀಟ್​ ಮಾಡಿ “ಸಂವಿಧಾನದ ಬಗ್ಗೆ ಸಂಸದ ಅನಂತಕುಮಾರ್ ಹೆಗಡೆ ಅವರ ಹೇಳಿಕೆಗಳು ಅವರ ವೈಯಕ್ತಿಕ ಅಭಿಪ್ರಾಯಗಳು. ಮತ್ತು ಪಕ್ಷದ ನಿಲುವನ್ನು ಪ್ರತಿಬಿಂಬಿಸುವುದಿಲ್ಲ. ಮತ್ತು ಈ ಬಗ್ಗೆ ವಿವರಣೆಯನ್ನು ಅವರಿಂದ ಪಡೆದುಕೊಳ್ಳುತ್ತೇವೆ. ರಾಷ್ಟ್ರದ ಸಂವಿಧಾನವನ್ನು ಎತ್ತಿಹಿಡಿಯುವ ನಮ್ಮ ಅಚಲ ಬದ್ಧತೆಯನ್ನು ಬಿಜೆಪಿ ಪುನರುಚ್ಚರಿಸುತ್ತದೆ” ಎಂದು ಪೋಸ್ಟ್ ಮಾಡಿದೆ.

ಅನಂತಕುಮಾರ್​ ಹೆಗಡೆ ಹೇಳಿದ್ದೇನು?

ಕಾಂಗ್ರೆಸ್​ನವರು ಅನಗತ್ಯವಾಗಿ ಹೇರಿದ ವಿಚಾರಗಳನ್ನು ಸಂವಿಧಾನದಿಂದ ತೆಗೆದು ಹಾಕಲು ಬಹುಮತದ ಅಗತ್ಯವಿದೆ. ಲೋಕಸಭೆಯಲ್ಲಿ ಬಹುಮತ ಇದೆ. ಆದರೆ, ರಾಜ್ಯಸಭೆಯಲ್ಲಿ 2/3 ರಷ್ಟು ಇಲ್ಲ. ಹೀಗಾಗಿ ಈ ಬಾರಿ 400ಕ್ಕೂ ಹೆಚ್ಚು ಸ್ಥಾನಗಳಲ್ಲಿ ಗೆಲವು ಸಾಧಿಸಬೇಕು ಎಂದು ಪ್ರಧಾನಿ ಮೋದಿಯವರು ಹೇಳಿದ್ದಾರೆ. ಎರಡೂ ಮನೆಯಲ್ಲಿ ಬಹುಮತ ದೊರೆತರೇ ಮಾತ್ರ ಸಂವಿಧಾನಕ್ಕೆ ತಿದ್ದುಪಡಿ ತರಲು ಸಾಧ್ಯವಾಗುತ್ತದೆ ಎಂದರು.

ಕಾಂಗ್ರೆಸ್‌ನವರು ಸಂವಿಧಾನದ ಮೂಲರೂಪವನ್ನೇ ತಿರುಚಿದ್ದಾರೆ. ಸಂವಿಧಾನದಲ್ಲಿ ಬೇಡದೇ ಇರುವುದನ್ನೆಲ್ಲ ಸೇರಿಸಿದ್ದಾರೆ. ಇಡೀ ಹಿಂದೂ ಸಮಾಜವನ್ನು ದಮನಿಸುವ ರೀತಿ ಕಾನೂನು ತಂದಿದ್ದಾರೆ. ಇದೆಲ್ಲವೂ ಬದಲಾಗಬೇಕಿದ್ದರೆ ಬಹುಮತ ಬೇಕು. ರಾಜ್ಯಸಭೆಯಲ್ಲೂ ನಮಗೆ ಬಹುಮತ ಬೇಕಾಗುತ್ತದೆ. ಎರಡೂ ಕಡೆ 2/3 ರಷ್ಟು ಬಹುಮತ ಇದ್ದರೆ ಕಾಂಗ್ರೆಸ್​ ತಿರುಚಿದ್ದನ್ನು ಸರಿ ಮಾಡಬಹುದು ಎಂದು ತಿಳಿಸಿದರು.

ಇದನ್ನೂ ಓದಿ: ಯಾವ ಕಾರಣಕ್ಕಾಗಿ ಸಂವಿಧಾನವನ್ನು ತಿದ್ದಬೇಕೆಂದು ಬಿಜೆಪಿ ಹೇಳಲಿ, ಇಲ್ಲವೇ ಅನಂತ್ ಕುಮಾರ್ ಹೆಗಡೆಯನ್ನು ಕಿತ್ತುಹಾಕಿ: ಕಾಂಗ್ರೆಸ್​​

ಕಾಂಗ್ರೆಸ್​ ಕಿಡಿ

ಸಂವಿಧಾನ ಬದಲಿಸಲು 400 ಸ್ಥಾನಗಳು ಬೇಕು ಎಂಬ ಬಿಜೆಪಿ ಸಂಸದರ ಹೇಳಿಕೆ ನರೇಂದ್ರ ಮೋದಿ ಮತ್ತು ಅವರ ‘ಸಂಘ ಪರಿವಾರ’ದ ಗುಪ್ತ ಉದ್ದೇಶಗಳ ಬಹಿರಂಗ ಘೋಷಣೆಯಾಗಿದೆ. ಬಾಬಾ ಸಾಹೇಬರ ಸಂವಿಧಾನವನ್ನು ನಾಶ ಮಾಡುವುದೇ ನರೇಂದ್ರ ಮೋದಿ ಮತ್ತು ಬಿಜೆಪಿಯ ಅಂತಿಮ ಗುರಿಯಾಗಿದೆ. ಅವರು ನ್ಯಾಯ, ಸಮಾನತೆ, ನಾಗರಿಕ ಹಕ್ಕುಗಳು ಮತ್ತು ಪ್ರಜಾಪ್ರಭುತ್ವವನ್ನು ದ್ವೇಷಿಸುತ್ತಾರೆ ಎಂದು ಕಾಂಗ್ರೆಸ್​ ಟ್ವೀಟ್​ ಮಾಡಿದೆ.

ಸಮಾಜವನ್ನು ವಿಭಜಿಸುವ ಮೂಲಕ, ಮಾಧ್ಯಮವನ್ನು ಗುಲಾಮರನ್ನಾಗಿ ಮಾಡುವ ಮೂಲಕ, ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಕಾಪಾಡುವ ಸ್ವಾಯತ್ತ ಸಂಸ್ಥೆಗಳನ್ನು ದುರ್ಬಲಗೊಳಿಸುವ ಮೂಲಕ, ವಿರೋಧವನ್ನು ತೊಡೆದುಹಾಕಲು ಸಂಚು ರೂಪಿಸುವ ಮೂಲಕ ಭಾರತದ ಮಹಾನ್ ಪ್ರಜಾಪ್ರಭುತ್ವವನ್ನು ಸಂಕುಚಿತ ಸರ್ವಾಧಿಕಾರವಾಗಿ ಪರಿವರ್ತಿಸಲು ಹೊರಟಿದ್ದಾರೆ.

ಸ್ವಾತಂತ್ರ್ಯ ಸೇನಾನಿಗಳ ಕನಸುಗಳ ಜೊತೆಗಿನ ಈ ಷಡ್ಯಂತ್ರಗಳನ್ನು ನಾವು ಯಶಸ್ವಿಯಾಗಲು ಬಿಡುವುದಿಲ್ಲ ಮತ್ತು ನಮ್ಮ ಕೊನೆಯ ಉಸಿರು ಇರುವವರೆಗೂ ಸಂವಿಧಾನದ ಆಶಯಗಳು ಹಾಗು ಪ್ರಜಾಪ್ರಭುತ್ವದ ಹಕ್ಕುಗಳಿಗಾಗಿ ಹೋರಾಟವನ್ನು ಮುಂದುವರೆಸುತ್ತೇವೆ.

ಸಂವಿಧಾನವನ್ನು ಬದಲಿಸುತ್ತೇವೆ, ಸಂವಿಧಾನವನ್ನು ತಿದ್ದುಪಡಿ ಮಾಡುತ್ತೇವೆ ಎನ್ನುತ್ತಿರುವ ಬಿಜೆಪಿಗೆ ಸಂವಿಧಾನದ ಯಾವ ಭಾಗ, ಯಾವ ಅಂಶ, ಯಾವ ಅನುಚ್ಚೇದ, ಯಾವ ಕಲಂ ಬಗ್ಗೆ ಅಸಹನೆ ಹೊಂದಿದೆ ಎಂದು ಹೇಳಬೇಕು?

ಸಂವಿಧಾನದಲ್ಲಿರುವ

  • ಸ್ವತಂತ್ರದ ಹಕ್ಕಿನ ಬಗ್ಗೆ ಆಕ್ಷೇಪಣೆಯೇ?
  • ಸಮಾತೆ, ಸಮಾನತೆ ಬೇಡವಾಗಿದೆಯೇ?
  • ಶೋಷಣೆಯ ವಿರುದ್ಧದ ಹಕ್ಕು ಇರಬಾರದೇ?
  • ಧಾರ್ಮಿಕ ಸ್ವತಂತ್ರದ ಹಕ್ಕು ಇರಬಾರದೇ?
  • ವಾಕ್ ಹಾಗೂ ಅಭಿವ್ಯಕ್ತಿ ಸ್ವತಂತ್ರ ಬೇಡವೇ?
  • ಶಿಕ್ಷಣದ ಹಕ್ಕು ಅಪರಾಧವೇ?

ಯಾವ ಕಾರಣಕ್ಕಾಗಿ ಸಂವಿಧಾನವನ್ನು ತಿದ್ದಬೇಕು ಎಂಬುದನ್ನು ಬಿಜೆಪಿ ಹೇಳಬೇಕು, ಇಲ್ಲವೇ ಅನಂತಕುಮಾರ್​ ಹೆಗಡೆ ಎಂಬ ಕೀಚಕನನ್ನು ಪಕ್ಷದಿಂದ ಕಿತ್ತುಹಾಕಿ ಆತನ ಪರವಾಗಿ ಕ್ಷಮೆ ಯಾಚಿಸಬೇಕು. ನಾಲ್ಕೂವರೆ ವರ್ಷ ಮಲಗಿದ್ದು, ಚುನಾವಣೆಗಾಗಿ ಎದ್ದು ಬರುವ ಬಿಜೆಪಿ ಸಂಸದ ಅನಂತ್ ಕುಮಾರ್ ಹೆಗಡೆ ಎಂಬ ಕ್ರಿಮಿ ಸಂಸತ್ತಿನಲ್ಲಿ ಕರ್ನಾಟಕದ ಪರ, ತನ್ನ ಕ್ಷೇತ್ರದ ಪರ ಮಾತಾಡಿದ ಇತಿಹಾಸವೇ ಇಲ್ಲ.

ದಲಿತರನ್ನು ಬೊಗಳುವ ನಾಯಿಗಳು ಎಂದು ಅವಮಾನಿಸಿದ್ದ ಈ ಕೋಮುಕ್ರಿಮಿಯನ್ನು ಪಕ್ಷದಲ್ಲಿ ಇಟ್ಟುಕೊಳ್ಳುವ ಮೂಲಕ ಬಿಜೆಪಿ ಪಕ್ಷ ದಲಿತ ವಿರೋಧಿ, ಸಂವಿಧಾನ ವಿರೋಧಿ ಎಂದು ಸಾಬೀತು ಮಾಡಿದೆ. ಸಂವಿಧಾನದ ಅಡಿಯಲ್ಲಿ ನಡೆಯುತ್ತಿರುವ ಈ ದೇಶದಲ್ಲಿ ರಾಜಕೀಯ ಮಾಡುವುದಕ್ಕೆ, ಅಸ್ತಿತ್ವದಲ್ಲಿ ಇರುವುದಕ್ಕೆ ಬಿಜೆಪಿಗೆ ಅರ್ಹತೆ ಇಲ್ಲ. ದಲಿತರ ವಿರುದ್ಧ, ಸಂವಿಧಾನದ ವಿರುದ್ಧ ಸದಾ ಕಿಡಿಕಾರುವ ಬಿಜೆಪಿಯನ್ನು ಈ ರಾಜ್ಯದ ಹಾಗೂ ದೇಶದ ಜನ ತಿರಸ್ಕರಿಸುವುದು ಖಚಿತ ಎಂದು ಆಕ್ರೋಶ ವ್ಯಕ್ತಪಡಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ